ಸೆ.21ರಂದು ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ, 650 ಹಾಸಿಗೆ ಆಸ್ಪತ್ರೆ; ತುಳು ಭಾಷಿಕರಿಗೆ 54 ಸೀಟು: ಡಾ. ಎಂ. ಮೋಹನ್ ಆಳ್ವ

ಮೂಡುಬಿದಿರೆ: ಕರಾವಳಿಯ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವ ಉದ್ದೇಶದಿಂದ ಮಿಜಾರಿನಲ್ಲಿ ನಿರ್ಮಿಸಲಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್ ಸೆಂಟರ್ (ಆಳ್ವಾಸ್ ಮೆಡಿಕಲ್ ಕಾಲೇಜು) ಸೆಪ್ಟೆಂಬರ್ 21ರಂದು ಲೋಕಾರ್ಪಣೆಯಾಗಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಿಜಾರಿನ ಶ್ರೀಮತಿ ಶೋಭಾ ಮೋಹನ್ ಆಳ್ವ ಆವರಣದಲ್ಲಿ ಸೆ.21ರಂದು ಸಂಜೆ 6 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು,  ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ […]

Continue Reading

ಕರಾವಳಿಗೆ ಅಭಿವೃದ್ಧಿಯ ಹೊಸ ದಿಕ್ಕು, ‘ಮಂಗಳೂರು ಐ’ಯಿಂದ ಮೆಡಿಕಲ್ ಕಾಲೇಜುವರೆಗೆ– 61 ಯೋಜನೆಗಳಿಗೆ ಸಂಪುಟ ಅಸ್ತು: ಡಿಸಿಎಂ ಡಾ. ಪರಮೇಶ್ವರ್

ಮಂಗಳೂರು: ಕರಾವಳಿಯ ಪ್ರವಾಸೋದ್ಯಮ, ಮೀನುಗಾರಿಕೆ, ಬಂದರು, ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯ ಕ್ಷೇತ್ರಗಳಿಗೆ ಹೊಸ ವೇಗ ನೀಡುವ ಹಲವು ಮಹತ್ವದ ಯೋಜನೆಗಳಿಗೆ ರಾಜ್ಯ ಸರ್ಕಾರ ಶುಕ್ರವಾರ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಸುಮಾರು 200 ಮೀಟರ್ ಎತ್ತರದ ‘ಮಂಗಳೂರು ಐ’ ನಿರ್ಮಾಣ, 343 ಕಿ.ಮೀ. ಕರಾವಳಿ ದೋಣಿ ಸೇವೆ, ಮೀನುಗಾರಿಕಾ ವಿಶ್ವವಿದ್ಯಾಲಯ, ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಮಂಗಳೂರು ಮಹಾನಗರ ಪಾಲಿಕೆಗೆ ₹400 ಕೋಟಿ ವಿಶೇಷ ಅನುದಾನ ಸೇರಿದಂತೆ ಒಟ್ಟು […]

Continue Reading

ತುಳು 2ನೇ ಹೆಚ್ಚುವರಿ ಆಡಳಿತ ಭಾಷೆ:ಸಿಎಂ ಡಿಕೆಶಿ ಘೋಷಣೆ, ಕರಾವಳಿಗೆ 32,611 ಕೋಟಿ ಯೋಜನೆ; ಮಂಗಳೂರು ಜಿಲ್ಲೆ ಮರುನಾಮಕರಣ ಜನಾಭಿಪ್ರಾಯದ ಹೆಗಲಿಗೆ, ಸಂಪುಟ ನಿರ್ಣಯ

ಮಂಗಳೂರು: ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಇದರೊಂದಿಗೆ ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್, ಮೀನುಗಾರಿಕೆ ಮತ್ತು ನೀಲಿ ಆರ್ಥಿಕತೆ ವಿಶ್ವವಿದ್ಯಾಲಯ ಸೇರಿದಂತೆ ಒಟ್ಟು ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ದೊರೆತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ […]

Continue Reading

ಉತ್ತರ ಕನ್ನಡದ ಅಭಿವೃದ್ಧಿಗೆ ಭರಪೂರ ಕೊಡುಗೆ: ವಿಮಾನ ನಿಲ್ದಾಣ, ಬಂದರು, ಪ್ರವಾಸೋದ್ಯಮಕ್ಕೆ ಸಚಿವ ಸಂಪುಟ ಸಭೆ ಅಸ್ತು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ದೊರೆತಿದೆ. ವಿಮಾನ ನಿಲ್ದಾಣ ವಿಸ್ತರಣೆ, ನೂತನ ಬಂದರು, ದ್ವೀಪಗಳ ಪ್ರವಾಸೋದ್ಯಮ ಅಭಿವೃದ್ಧಿ, ಶಿಕ್ಷಣ, ಮೀನುಗಾರಿಕೆ ಹಾಗೂ ಬುಡಕಟ್ಟು ಸಮುದಾಯಗಳ ಉದ್ಯೋಗಾವಕಾಶಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ವಿಮಾನ ನಿಲ್ದಾಣದ ರನ್‌ವೇಯನ್ನು 3,250 ಮೀಟರ್‌ಗೆ ವಿಸ್ತರಿಸಿ, ಎ-320 ಮಾದರಿಯ ವಿಮಾನಗಳ ಸಂಚಾರಕ್ಕೆ ಅನುಕೂಲ […]

Continue Reading

ಬಡ ಮತ್ತು ನಿವೇಶನ ರಹಿತ ಕುಟುಂಬಗಳಿಗೆ ಸೂರು ಕಲ್ಪಿಸುವ ಉದ್ದೇಶ: ಸಚಿವ ಮುನಿಯಪ್ಪ

ಮಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಬಡ ಮತ್ತು ನಿವೇಶನ ರಹಿತ ಕುಟುಂಬಗಳಿಗೆ ಸೂರು ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ಹಂಚಿಕೆ ಮಾಡುವ ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಿವೇಶನದ ಜತೆಗೆ ಬಡವರ ಬದುಕಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದಕ್ಕೂ ಸರ್ಕಾರ ಆದ್ಯತೆ ನೀಡಿದೆ. ಭೂ ಒಡೆತನ ಯೋಜನೆಯಡಿ ಭೂಮಿಯಿಲ್ಲದ ಪರಿಶಿಷ್ಟರಿಗೆ ಭೂಮಿ ಒದಗಿಸುವ ಪ್ರಕ್ರಿಯೆ ಮುಂದುವರೆದಿದ್ದು, ನಿರಾಶ್ರಿತರಿಗೆ […]

Continue Reading

ಸಂಪುಟ ಸಭೆಗೆ ಮಂಗಳೂರು ಸಿಂಗಾರ: ನಗರದೆಲ್ಲೆಡೆ ಸ್ವಾಗತದ ಕಳೆ, ಬ್ಯಾನರ್ ಗಳ ಅಬ್ಬರ

ಮಂಗಳೂರು: ಕರಾವಳಿಯ ಬಹುದಿನಗಳ ಬೇಡಿಕೆಗಳು, ಅಭಿವೃದ್ಧಿಯ ಪ್ರಸ್ತಾವಗಳು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜಾಗಿದೆ. ಸೆ.18ರಂದು ಪಡೀಲ್‌ನ ಜಿಲ್ಲಾ ಕಚೇರಿಗಳ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ನಡೆಯಲಿರುವ ಸಭೆಯತ್ತ ಕರಾವಳಿಯ ಮೂರು ಜಿಲ್ಲೆಗಳ ಜನರ ಗಮನ ನೆಟ್ಟಿದೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ, ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿ, ಮೀನುಗಾರರ ಸಮಸ್ಯೆಗಳು, ಕೈಗಾರಿಕಾ ವಿಸ್ತರಣೆ ಸೇರಿದಂತೆ ಹಲವು […]

Continue Reading

ವಲಸೆ ತಡೆಗೆ ಕರಾವಳಿ–ಮಲೆನಾಡಿನಲ್ಲಿ ಹೊಸ ಅವಕಾಶ: ಸಿಎಂ ಡಿ.ಕೆ.ಶಿವಕುಮಾರ್

ಮಂಗಳೂರು: ಕರಾವಳಿ–ಮಲೆನಾಡಿನ ದಶಕಗಳ ಬೇಡಿಕೆಗಳಿಗೆ ಸ್ಪಂದಿಸುವುದರ ಜೊತೆಗೆ, ಈ ಭಾಗದ ಮಾನವ ಸಂಪತ್ತು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸರ್ಕಾರ ಹೊಸ ಅಭಿವೃದ್ಧಿಯ ರೂಪುರೇಷೆ ಸಿದ್ಧಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗವು 340 ಕಿ.ಮೀ ಉದ್ದದ ತೀರವನ್ನು ಹೊಂದಿದೆ. ಈ ಸಂಪತ್ತನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿಗೆ ಹೊಸ ದಿಕ್ಕು ನೀಡಬೇಕಿದೆ. ಕರಾವಳಿ ಹಾಗೂ ಮಲೆನಾಡಿನಿಂದ ಜನರು ವಲಸೆ ಹೋಗದಂತೆ ಸ್ಥಳೀಯವಾಗಿಯೇ ಉದ್ಯೋಗ ಮತ್ತು […]

Continue Reading

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ನಟ ಅನಂತ್ ನಾಗ್ ಆಯ್ಕೆ:ಸೆ.22 ರಂದು ರಾಷ್ಟ್ರಪತಿಗಳಿಂದ ಪ್ರದಾನ

ಬೆಂಗಳೂರು: ಐದು ದಶಕಗಳಿಗೂ ಹೆಚ್ಚು ಕಾಲ ಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನಗೆದ್ದ ಹಿರಿಯ ನಟ ಅನಂತ್ ನಾಗ್ ಅವರಿಗೆ ದೇಶದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದುಬಂದಿದೆ. ಭಾರತೀಯ ಚಿತ್ರರಂಗಕ್ಕೆ ನೀಡಿರುವ ಸುದೀರ್ಘ ಕೊಡುಗೆಯನ್ನು ಪರಿಗಣಿಸಿ 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಅವರನ್ನು ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ 22ರಂದು ಗುಜರಾತ್‌ನ ಏಕತಾ ನಗರ, ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ […]

Continue Reading

ದಾವಣಗೆರೆ ಪೂರ್ವ ವಲಯಕ್ಕೆ ಖಡಕ್ ಐಪಿಎಸ್ ಅಧಿಕಾರಿ ಎನ್. ಸತೀಶ್ ಕುಮಾರ್ ನೂತನ ಐಜಿಪಿಯಾಗಿ ಅಧಿಕಾರ ಸ್ವೀಕಾರ

ಬೆಂಗಳೂರು: ಗಣೇಶೋತ್ಸವ ಸೇರಿದಂತೆ ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ದಾವಣಗೆರೆ ಪೂರ್ವ ವಲಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವುದರ ಜತೆಗೆ, ಹೆಚ್ಚುತ್ತಿರುವ ಸೈಬರ್ ಅಪರಾಧ ಮತ್ತು ಆನ್‌ಲೈನ್ ವಂಚನೆಗಳ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕ ಎನ್. ಸತೀಶ್ ಕುಮಾರ್ ಅವರು ಹೇಳಿದರು. ದಾವಣಗೆರೆ ಪೂರ್ವ ವಲಯದ ನೂತನ ಐಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಲಯದ ಭದ್ರತಾ ವ್ಯವಸ್ಥೆ […]

Continue Reading

Giridhar Salian: ಜಾವಲಿನ್‌ ಹಿಡಿದು ಗೆಲುವಿನೆಡೆಗೆ ಗಿರಿಧರ್ ಸಾಲಿಯಾನ್, ಇಂದು ವಿಶ್ವ ವೇದಿಕೆಯಲ್ಲಿ ಪದಕಗಳ ಬೇಟೆ

ಮಂಗಳೂರು: ಕ್ರೀಡಾಂಗಣದಲ್ಲಿ ಓಡಿ, ಜಿಗಿದು ಗೆಲ್ಲಬೇಕೆಂಬ ಕನಸು ಕಂಡಿದ್ದ ಗಿರಿಧರ್ ಸಾಲಿಯಾನ್ ಅವರ ಬದುಕಿನಲ್ಲಿ ಒಂದು ಗಾಯ ಎಲ್ಲವನ್ನೂ ಬದಲಿಸಿತ್ತು. ಕಬಡ್ಡಿ ಆಡುವ ವೇಳೆ ಸಂಭವಿಸಿದ ಅಪಘಾತದಲ್ಲಿ ಕಾಲಿನ ಒಂದಲ್ಲ, ಮೂರು ಮೂಳೆಗಳು ಮುರಿದವು. ಕ್ರೀಡೆಯಿಂದ ದೂರ ಉಳಿಯಬೇಕೆಂಬ ವೈದ್ಯರ ಸಲಹೆ ಅವರ ಮುಂದಿನ ಹಾದಿಯನ್ನು ಕತ್ತಲೆಯಾಗಿಸಿತ್ತು. ಆದರೆ, ಕ್ರೀಡಾಪಟುವಿನ ಮನಸ್ಸಿನಲ್ಲಿದ್ದ ಗೆಲ್ಲುವ ಹಂಬಲ ಮಾತ್ರ ಮುರಿಯಲಿಲ್ಲ. ಉದ್ದ ಜಿಗಿತ ಮತ್ತು ಎತ್ತರ ಜಿಗಿತದಲ್ಲಿ ಶಾಲಾ ದಿನಗಳಿಂದಲೇ ಸಾಧನೆ ಮಾಡುತ್ತಿದ್ದ ಗಿರಿಧರ್, ಗಾಯದ ಬಳಿಕ ಜಿಗಿತದ ಕ್ರೀಡೆಗಳಿಂದ […]

Continue Reading