ನನ್ನನ್ನು ನಾಡಿನ ದೊರೆ ಎನ್ನಬೇಡಿ, “ಪ್ರಜಾಸೇವಕ” ಎನ್ನಿ: ಸಿಎಂ ಶಿವಕುಮಾರ್

ಕೂಡ್ಲಿಗಿ: “ಸರ್ಕಾರದ ಯಶಸ್ಸು ಜಾಹಿರಾತಿನಲ್ಲಿ ಇರುವುದಿಲ್ಲ. ಜನರ ಮುಖದಲ್ಲಿ ನಗು ಮೂಡಿದೆ ಎಂಬುದೇ ಯಶಸ್ಸಿನ ಮಾನದಂಡ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಜಾಸೇವೆ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು. “ಜನ ಸೇವೆಯೇ ಜನಾರ್ಧನ ಸೇವೆ ಎಂದು ಭಾವಿಸಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮ ಸೇವೆ ಮಾಡಲು 136 ಸೀಟು ನೀಡಿ ರಾಜ್ಯವನ್ನು ಹೊಸ ದಿಕ್ಕಿನಲ್ಲಿ ಮುನ್ನಡೆಸಲು ಅವಕಾಶ ಕೊಟ್ಟಿದ್ದೀರಿ. ಇದು ಕೇವಲ […]

Continue Reading

ಇಂದಿರಾಗಾಂಧಿ ಹೆಸರಿನ ಶಾಲೆ ಮುಚ್ಚಲು ಅವಕಾಶ ನೀಡಲ್ಲ, ಶಿಕ್ಷಕಿಯರಿಗೆ ಸಿಎಂ‌ ಶಿವಕುಮಾರ್ ಅಭಯ

ಕೂಡ್ಲಿಗಿ: “ಇಂದಿರಾಗಾಂಧಿ ಅವರ ಹೆಸರಿರುವ ಶಾಲೆ ಮುಚ್ಚಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದಾಗ ಮನವಿ ನೀಡಲು ಬಂದಿದ್ದ ಶಿಕ್ಷಕಿಯರು ಮುಖ್ಯಮಂತ್ರಿಯವರ ಕೈ ಹಿಡಿದು ಭಾವುಕರಾದರು. ಕೂಡ್ಲಿಗಿಯಲ್ಲಿ ಶನಿವಾರ ನಡೆದ ಪ್ರಜಾಸೇವೆ ಅಭಿಯಾನದ ಮೊದಲ ಕಾರ್ಯಕ್ರಮ ಭಾವುಕ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಶಾಲೆಯ ಶಿಕ್ಷಕಿಯರಾದ ಶಾಂತಾ, ಜಗನ್ಮಾಥೆ, ಭಾರತಿ, ವೆಂಕಟೇಶ್ ಅವರುಗಳು ಸಿಎಂಗೆ ಮನವಿ ನೀಡಿ, “ಸಿಎಂ‌ ಸಾರ್ ಹಗರಿಬೊಮ್ಮನಹಳ್ಳಿ, ರಾಮನಗರದಲ್ಲಿ ಇಂದಿರಾಗಾಂಧಿ ಅವರ ಹೆಸರಿನಲ್ಲಿ ನಡೆಯುತ್ತಿರುವ ಏಕೈಕ ಅನುದಾನಿತ […]

Continue Reading

ರಾಜ್ಯ ವ್ಯಾಪಿ ಸಿಹಿತಿಂಡಿ ತಯಾರಿಕಾ ಘಟಕ ತಪಾಸಣೆ, ಎರಡು ಸಿಹಿತಿಂಡಿ ತಯಾರಿಕಾ ಘಟಕ ಬಂದ್: ಸಚಿವ ಖಾದರ್

ಮಂಗಳೂರು: ಸಿಹಿತಿಂಡಿ ತಯಾರಿಕಾ ಘಟಕಗಳಲ್ಲಿ ಸ್ವಚ್ಛತೆ, ಗುಣಮಟ್ಟ ಮತ್ತು ಆಹಾರದ ಶುದ್ಧತೆ ಕಾಪಾಡುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರ. ಇತ್ತೀಚೆಗೆ ಆಹಾರ ಮತ್ತು ಸುರಕ್ಷತಾ ಇಲಾಖೆ ನಡೆಸಿದ ತಪಾಸಣೆಯಲ್ಲಿ ಎರಡು ಸಿಹಿತಿಂಡಿ ತಯಾರಿಕಾ ಘಟಕಗಳನ್ನು ಮುಚ್ಚಲಾಗಿದ್ದು, ಉಳಿದ ಘಟಕಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಿಸ್‌ಗೆ ಉತ್ತರ ಬಂದ ಬಳಿಕ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಸಿಹಿತಿಂಡಿ ತಯಾರಿಕಾ ಘಟಕಗಳ ಮೇಲಿನ ತಪಾಸಣೆ […]

Continue Reading

ಬೆಳಗಾವಿ ಜಿ.ಪಂ ಸಿಇಒ ರಾಹುಲ್ ಶಿಂಧೆಗೆ ರಾಜ್ಯಮಟ್ಟದ ಹೊಸ ಜವಾಬ್ದಾರಿ, ಪಂಚಾಯತ್ ರಾಜ್ ಆಯುಕ್ತಾಲಯದ ವಿಶೇಷ ಅಧಿಕಾರಿಯಾಗಿ ನೇಮಕ

ಬೆಂಗಳೂರು: ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ರಾಹುಲ್ ಶಿಂಧೆ ಅವರ ಆಡಳಿತಾತ್ಮಕ ಕಾರ್ಯವ್ಯಾಪ್ತಿ ಇದೀಗ ರಾಜ್ಯ ಮಟ್ಟಕ್ಕೆ ವಿಸ್ತರಣೆ ಆಗಿದೆ. ಹಾಲಿ ಹುದ್ದೆಯ ಜತೆಗೆ ಪಂಚಾಯತ್ ರಾಜ್ ಆಯುಕ್ತಾಲಯದ ವಿಶೇಷ ಅಧಿಕಾರಿಯಾಗಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಅಗಸ್ಟ್ 27 ರಂದು ಹೊರಡಿಸಿರುವ ಆದೇಶದಂತೆ ರಾಹುಲ್ ಶಿಂಧೆ ಅವರು ಪಂಚಾಯತ್ ರಾಜ್ ಆಯುಕ್ತಾಲಯದ ವಿಶೇಷ ಅಧಿಕಾರಿಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ರಾಜ್ಯದ ಅತಿ ದೊಡ್ಡ ಜಿಲ್ಲೆಗಳಲ್ಲೊಂದಾದ ಬೆಳಗಾವಿಯಲ್ಲಿ ಆಡಳಿತಾತ್ಮಕ ಅನುಭವ ಹೊಂದಿರುವ ಹಿನ್ನೆಲೆಯಲ್ಲಿ ಅವರಿಗೆ […]

Continue Reading

ಪಶ್ಚಿಮ ವಲಯದ ಸಾರಥ್ಯ ಆರ್. ಚೇತನ್ ಹೆಗಲಿಗೆ, ಬ್ಯಾಟನ್ ಹಸ್ತಾಂತರ, ಅಧಿಕಾರ ಸ್ವೀಕಾರ

ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಮಹಾ ನಿರೀಕ್ಷಕರಾಗಿ ಐಪಿಎಸ್ ಅಧಿಕಾರಿ ಆರ್. ಚೇತನ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಅಮಿತ್ ಸಿಂಗ್ ಅವರು, ಸಾಂಪ್ರದಾಯಿಕವಾಗಿ ಪೊಲೀಸ್ ಇಲಾಖೆಯ ಬ್ಯಾಟನ್ ಅನ್ನು ಹಸ್ತಾಂತರಿಸುವ ಮೂಲಕ ಆರ್. ಚೇತನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ನೂತನ ಪೊಲೀಸ್ ಮಹಾನಿರೀಕ್ಷಕ ಆರ್. ಚೇತನ್ ಅವರು ಅಧಿಕಾರ ವಹಿಸಿಕೊಂಡು ಪಶ್ಚಿಮ ವಲಯದ ಪೊಲೀಸ್ ಆಡಳಿತದ ಜವಾಬ್ದಾರಿಯನ್ನು […]

Continue Reading

ಬೆಳಗಾವಿ: ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ, ಮನೆಗಳಲ್ಲಿ ತಪಾಸಣೆ

ಬೆಳಗಾವಿ: ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಉತ್ತರ ವಲಯ ಪೊಲೀಸರು ಭಾನುವಾರ ಮುಂಜಾನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐದು ಜಿಲ್ಲೆಗಳ 1,041 ರೌಡಿಶೀಟರ್‌ಗಳ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ರೌಡಿಶೀಟರ್‌ಗಳ ಮನೆಗಳನ್ನು ಪರಿಶೀಲಿಸಿ, ಅವರ ಇತ್ತೀಚಿನ ಚಟುವಟಿಕೆಗಳು ಹಾಗೂ ಸಂಪರ್ಕಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ ಎಂದು ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ ತಿಳಿಸಿದ್ದಾರೆ. ಜಿಲ್ಲಾವಾರು […]

Continue Reading

ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ಪ್ರಶಸ್ತಿ

ಮಂಗಳೂರು: ಸೂಟರ್‌ಪೇಟೆ ನಿವಾಸಿ ಹಾಗೂ ನಾಡಿನ ಹೆಸರಾಂತ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಅವರು ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಬೆಳ್ಳಿ ಹಬ್ಬದ ಅಂಗವಾಗಿ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕನ್ನಡ ನಾಡಿಗೆ ಅವರು ಸಲ್ಲಿಸಿರುವ ಸುದೀರ್ಘ ಕ್ರೀಡಾ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಸೇವೆಯನ್ನು ಗುರುತಿಸಿ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಕಳೆದ 32 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಅಂಚನ್ ಅವರು ಜಿಲ್ಲೆ, ರಾಜ್ಯ ಹಾಗೂ […]

Continue Reading

ಭೂತನಾಳ ಕೆರೆಯಲ್ಲಿ ತಾಯಿ, ಐವರು ಮಕ್ಕಳ ಶವ ಪತ್ತೆ

ವಿಜಯಪುರ: ಆ.24 ರಿಂದ ನಾಪತ್ತೆ ಆಗಿದ್ದ ತಾಯಿ ಹಾಗೂ ಐದು ಮಂದಿ ಮಕ್ಕಳ ಮೃತದೇಹಗಳು ನಗರದ ಹೊರವಲಯದ ಭೂತನಾಳ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆ ಆಗಿವೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ವಿಜಯಪುರ ತಾಲ್ಲೂಕಿನ ತೊರವಿ ಗ್ರಾಮದ ಮಲಕಾರಿ ಭೀಮರಾಯ ಜಾಲಗೇರಿ ಅವರ ಪತ್ನಿ ಶೋಭಾ ಜಾಲಗೇರಿ (45), ಮಕ್ಕಳಾದ ವಿದ್ಯಾ (16), ಸುವರ್ಣ (14), ಗೌಡೇಶ್ (10), ಸಾನಿಕಾ (7) ಹಾಗೂ ವಿಕಾಸ […]

Continue Reading

76 ವರ್ಷದ ಜೋಸೆಫ್ ನಾಪತ್ತೆ; ಪತ್ತೆಗೆ ಕುಟುಂಬದ ಮನವಿ

ಹೊಳೆನರಸೀಪುರ: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಅಡಿಕೆಕೆರೆ, ಹೊಸೂರು ನಿವಾಸಿ 76 ವರ್ಷದ ಜೋಸೆಫ್ ಅವರು ಜುಲೈ 28 ರಿಂದ ನಾಪತ್ತೆ ಆಗಿದ್ದಾರೆ. ಜೋಸೆಫ್ ಅವರು ಡಿಮೆನ್ಶಿಯಾ ಸಮಸ್ಯೆಯಿಂದ ಬಳಲುತ್ತಿದ್ದು, 2026 ರ ಜುಲೈ 28 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಕಾಣೆ ಆಗಿದ್ದಾರೆ. ಅಂದಿನಿಂದ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ. ಜೋಸೆಫ್ ಅವರ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ಸಮೀಪದ ಪೊಲೀಸ್ ಠಾಣೆ ಅಥವಾ ಕುಟುಂಬದವರಿಗೆ ತಿಳಿಸುವಂತೆ ಮನವಿ […]

Continue Reading

ಸಾಂಕ್ರಾಮಿಕ ರೋಗ, ಎಚ್‌1ಎನ್‌1 ತಡೆಗೆ ಆರೋಗ್ಯ ಇಲಾಖೆ ಸನ್ನದ್ಧ, 4,212 ಇನ್‌ಫ್ಲುಯೆಂಜಾ ಪ್ರಕರಣ: ಸಚಿವ ಖಾದರ್

ಬೆಂಗಳೂರು: ರಾಜ್ಯದಲ್ಲಿ ಋತುಮಾನದ ಜ್ವರ ಹಾಗೂ ಎಚ್‌1ಎನ್‌1 ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಚಿಕಿತ್ಸಾ ಸಿದ್ಧತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ರಾಜ್ಯದ ಎಲ್ಲ ಜಿಲ್ಲೆಗಳ ಆರೋಗ್ಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ವಿಡಿಯೊ ಸಂವಾದ ನಡೆಸಿದರು. ಪ್ರಕರಣಗಳ ಸಂಖ್ಯೆ ಹೆಚ್ಚಾದರೂ ಅಥವಾ ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಥವಾಗಿ ನಿಭಾಯಿಸಲು ರಾಜ್ಯದ ಆರೋಗ್ಯ ವ್ಯವಸ್ಥೆ ಸಜ್ಜಾಗಿದೆ. ಅಗತ್ಯ ಮೂಲಸೌಕರ್ಯ, ಔಷಧಗಳು ಹಾಗೂ ವೈದ್ಯಕೀಯ […]

Continue Reading