‘ಎರಡು ಹೊತ್ತು ಊಟಕ್ಕೂ ಹಣ ಇರಲಿಲ್ಲ; ಮನೆಯಲ್ಲಿ ಕರೆಂಟ್ ಕೂಡ ಇರಲಿಲ್ಲ’; ಬದುಕಿನ ಹೋರಾಟ ನೆನಪಿಸಿಕೊಂಡು ಭಾವುಕ ಉಪಸಭಾಪತಿ ಮಂಕಾಳ್ ವೈದ್ಯ

ಬೆಂಗಳೂರು: “ನಾನು ಹುಟ್ಟುವಾಗ ನಮ್ಮ ಮನೆಯಲ್ಲಿ ಕರೆಂಟ್ ಕೂಡ ಇರಲಿಲ್ಲ. ಎರಡು ಹೊತ್ತು ಊಟಕ್ಕೂ ಹಣ ಇರುತ್ತಿರಲಿಲ್ಲ. ಪಂಚಾಯಿತಿ ಸದಸ್ಯರೂ ಇಲ್ಲದ ಸಾಮಾನ್ಯ ಕುಟುಂಬದಿಂದ ಬಂದವನು ನಾನು…” ಎಂದು ವಿಧಾನಸಭೆಯಲ್ಲಿ ಉಪಸಭಾಪತಿ ಮಂಕಾಳ್ ವೈದ್ಯ ಅವರು ತಮ್ಮ ಬದುಕಿನ ಕಷ್ಟದ ದಿನಗಳನ್ನು ನೆನಪಿಸಿಕೊಂಡು ಭಾವುಕರಾದರು. ಭಟ್ಕಳದ ಸಾಮಾನ್ಯ ಕುಟುಂಬದಿಂದ ಬಂದು ವಿಧಾನಸಭೆಯ ಉಪಸಭಾಪತಿ ಸ್ಥಾನ ಅಲಂಕರಿಸಿರುವ ತಮ್ಮ ರಾಜಕೀಯ ಹಾಗೂ ವೈಯಕ್ತಿಕ ಬದುಕಿನ ಪಯಣವನ್ನು ಅವರು ಸದನದಲ್ಲಿ ಮೆಲುಕು ಹಾಕಿದರು. ತಮ್ಮ ಬದುಕಿನಲ್ಲಿ ಹೊಟೇಲ್ ಹಾಗೂ ಗಾರ್ಮೆಂಟ್ಸ್‌ನಲ್ಲಿ […]

Continue Reading

ಜೀವ ಉಳಿಸಿದ ಲೇಡಿಗೋಷನ್ ಆಸ್ಪತ್ರೆಯ ‘ಬಹುಶಿಸ್ತೀಯ’ ಚಿಕಿತ್ಸೆ, ನಾಲ್ಕು ಗಂಟೆಗಳ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಯಶಸ್ವಿ,, ತಾಯಿ, ಮಗು ಸೇಫ್

ಮಂಗಳೂರು: ಜೀವ ಮತ್ತು ಮರಣದ ನಡುವೆ ಹೋರಾಡುತ್ತಿದ್ದ 28 ವಾರಗಳ ಗರ್ಭಿಣಿಯೊಬ್ಬರ ಪ್ರಾಣವನ್ನು ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯರ ತಂಡ ಬಹುಶಿಸ್ತೀಯ ಚಿಕಿತ್ಸಾ ವಿಧಾನದ ಮೂಲಕ ಯಶಸ್ವಿಯಾಗಿ ಉಳಿಸಿದೆ. ಗರ್ಭಕೋಶದ ಹಿಂದಿನ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಗಾಯದ ಭಾಗ ಛಿದ್ರಗೊಂಡು ಆಂತರಿಕ ರಕ್ತಸ್ರಾವವಾಗಿದ್ದಲ್ಲದೆ, ಪ್ಲಾಸೆಂಟಾ ಪರ್ಕ್ರೀಟಾ ಎಂಬ ಗಂಭೀರ ತೊಡಕಿನಿಂದಾಗಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದರೂ ತಾಯಿ ಹಾಗೂ ಮಗುವನ್ನು ರಕ್ಷಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಏಳು ತಿಂಗಳ ಗರ್ಭಿಣಿ ಎರಡು ದಿನಗಳ ಹಿಂದೆ […]

Continue Reading

ಕೃತಕ ಪನ್ನೀರ್‌ ಸೇರಿದಂತೆ ಎಲ್ಲ ನಕಲಿ ಆಹಾರ ನಿಷೇಧ, ವಾಮ ಮಾರ್ಗಕ್ಕೆ ಬ್ರೇಕ್: ಸಚಿವ ಖಾದರ್

ಮಂಗಳೂರು: ಜನರ ಆರೋಗ್ಯದ ಜತೆಗೆ ಚೆಲ್ಲಾಟವಾಡುವ ಕೃತಕ ಹಾಗೂ ನಕಲಿ ಆಹಾರ ಪದಾರ್ಥಗಳ ಉತ್ಪಾದನೆ, ಬಳಕೆ ಮತ್ತು ಮಾರಾಟಕ್ಕೆ ಕಾನೂನಿನಲ್ಲಿ ಈಗಾಗಲೇ ನಿಷೇಧವಿದೆ. ಪನ್ನೀರ್‌ಗೆ ಸಂಬಂಧಿಸಿದಂತೆ ಜಾರಿಗೊಳಿಸಿರುವ ಕ್ರಮ ಕೇವಲ ಪನ್ನೀರ್‌ಗೆ ಸೀಮಿತವಾಗಿಲ್ಲ. ಆರೋಗ್ಯಕ್ಕೆ ಅಪಾಯ ಉಂಟು ಮಾಡುವ ಎಲ್ಲ ಬಗೆಯ ಕೃತಕ ಆಹಾರ ಪದಾರ್ಥಗಳಿಗೂ ಅನ್ವಯಿಸುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಸಲಿ ಪನ್ನೀರ್‌ ಅನ್ನು ಸಂಪೂರ್ಣವಾಗಿ ಹಾಲಿನಿಂದ ತಯಾರಿಸಲಾಗುತ್ತದೆ. ಆದರೆ, ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಲಾಭ ಗಳಿಸುವ ಉದ್ದೇಶದಿಂದ […]

Continue Reading

ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ 15,539 ಅಭ್ಯರ್ಥಿಗಳು, ಸ್ಥಳದಲ್ಲಿಯೇ 2416 ಮಂದಿಗೆ ಆಫರ್: ವಿವೇಕ್ ಆಳ್ವ

ಮಂಗಳೂರು; ಉದ್ಯೋಗ ಅರಸಿ ಬಂದ ಸಾವಿರಾರು ಅಭ್ಯರ್ಥಿಗಳ ಪೈಕಿ 2,416 ಮಂದಿಗೆ ಸ್ಥಳದಲ್ಲೇ ಉದ್ಯೋಗದ ಆಫರ್ ದೊರೆತಿದ್ದು, ಮತ್ತೊಂದು 6,183 ಮಂದಿ ಮುಂದಿನ ಹಂತದ ನೇಮಕಾತಿ ಪ್ರಕ್ರಿಯೆಗೆ ಆಯ್ಕೆಯಾಗಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆದ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳ ಈ ಬಾರಿ ಗಮನಾರ್ಹ ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 332 ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದು, 15,539 ಅಭ್ಯರ್ಥಿಗಳು ವಿವಿಧ […]

Continue Reading

ಸ್ವಾತಂತ್ರ್ಯ ದೊರಕಿಸುವಲ್ಲಿ ಕಾಂಗ್ರೆಸ್‌ನ ಕೊಡುಗೆ ಅನನ್ಯ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಭಾರತಕ್ಕೆ ಸ್ವಾತಂತ್ರ್ಯ ದೊರಕಿಸುವಲ್ಲಿ ಕಾಂಗ್ರೆಸ್‌ನ ಕೊಡುಗೆ ಅನನ್ಯ ಆಗಿದ್ದು, ಕಾಂಗ್ರೆಸ್‌ ಅನ್ನು ದೇಶದ್ರೋ ಹಿ ಎಂದು ಆರೋಪಿಸುವ ಬಿಜೆಪಿಗೆ ಆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಾಗ್ದಾಳಿ ನಡೆಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಬ್ರಿಟಿಷರ ಆಳ್ವಿಕೆಯಲ್ಲಿದ್ದ ಸಂದರ್ಭದಲ್ಲಿ ಬಿಜೆಪಿ ಎಲ್ಲಿತ್ತು. ವಿಜಯನಗರದಲ್ಲಿ ಸಚಿವ ಜಮೀರ್ ಅಹ್ಮದ್ […]

Continue Reading

ಆಳ್ವಾಸ್ ಪ್ರಗತಿ–2026ಕ್ಕೆ ಚಾಲನೆ: ಮೊದಲ ದಿನ 13 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳ ಹಾಜರಿ

ಮೂಡುಬಿದಿರೆ: ದೇಶದ ಅತಿದೊಡ್ಡ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ–2026’ರ 16ನೇ ಆವೃತ್ತಿಗೆ ಶುಕ್ರವಾರ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆ ದೊರೆಯಿತು. ಮೊದಲ ದಿನವೇ 13,016 ಉದ್ಯೋಗಾಕಾಂಕ್ಷಿಗಳು ಮೇಳಕ್ಕೆ ಆಗಮಿಸಿದ್ದು, 326 ಕಂಪನಿಗಳು ಉದ್ಯೋಗ ನೇಮಕಾತಿಗಾಗಿ ಭಾಗವಹಿಸಿವೆ. ಕಾರ್ಯಕ್ರಮ ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದ ಅಗತ್ಯಗಳಿಗೆ ತಕ್ಕಂತೆ ಯುವಜನರು ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣ […]

Continue Reading

ಬೀದರ್ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಸುರೇಖಾ

ಬೀದರ್‌: ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿ ಆಗಿ ಸುರೇಖಾ ಅವರನ್ನು ನೇಮಕ ಮಾಡಿ ಸರ್ಕಾರದ ಅಧಿನ ಕಾರ್ಯದರ್ಶಿ‌ ಕೇಶವಪ್ರಸಾದ್ ಕೆ.ಎಚ್‌ ಅವರು ಆದೇಶ ಹೊರಡಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯ ಉಪ ಕಾರ್ಯದರ್ಶಿಯಾಗಿದ್ದ ಸುರೇಖಾ ಅವರನ್ನು ಬೀದರ್‌ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೀದರ್‌ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಆಗಿದ್ದ ಶಿವಾನಂದ್‌ ಕರಾಳೆ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರ ಆಪ್ತ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. […]

Continue Reading

ಪ್ರಶ್ನೆ ಪತ್ರಿಕೆ ಸೋರಿಕೆ, ಕೆಇಎ, ಕೆಪಿಎಸ್‌ಸಿ ನೇಮಕಾರಿ ಪರೀಕ್ಷಾ ಅಕ್ರಮ ಸಿಬಿಐ ತನಿಖೆಗೆ ನೀಡಿ: ಶಾಸಕ ಭರತ್ ಶೆಟ್ಟಿ

ಮಂಗಳೂರು: ರಾಜ್ಯದಲ್ಲಿ ನಡೆದಿರುವ ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಪರೀಕ್ಷೆಗಳಲ್ಲಿನ ಗೊಂದಲಗಳ ಕುರಿತು ಸಮಗ್ರ ತನಿಖೆ ನಡೆಸಲು ಕೆಇಎ, ಕೆಪಿಎಸ್‌ಸಿ ಸೇರಿದಂತೆ ಎಲ್ಲ ಇಲಾಖೆಗಳ ಪರೀಕ್ಷಾ ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ರಾಜ್ಯ ಸರ್ಕಾರ ಪರೀಕ್ಷಾ ಅಕ್ರಮಗಳ ವಿಚಾರದಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದೆ. ಕೇಂದ್ರದಲ್ಲಿ ನೀಟ್ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಲೋಪ ಕಂಡು ಬಂದರೆ ಪ್ರಧಾನಿ ನರೇಂದ್ರ […]

Continue Reading

ಅನ್ಸಾರಿ ವಿರುದ್ಧ ಸಚಿವ ಶಿವರಾಜ ತಂಗಡಗಿ ವಾಗ್ದಾಳಿ, ಚುನಾವಣೆಯಲ್ಲಿ ಸೋಲು– ಗೆಲುವು ಒಬ್ಬರಿಂದ ನಿರ್ಧಾರ ಆಗಲ್ಲ

ಕೊಪ್ಪಳ: ಮಸೀದಿಯಲ್ಲಿ ಹೇಳಿದರೆ ಯಾರನ್ನಾದರೂ ಸೋಲಿಸಬಹುದಿತ್ತು ಎನ್ನುವ ಅನ್ಸಾರಿ ಅವರು, ಅದೇ ರೀತಿ ಹೇಳಿ ತಾವೇ ಗೆಲ್ಲಬಹುದಿತ್ತಲ್ಲ ಹಾಗಿದ್ದರೆ ಯಾಕೆ ಸೋತರು? ಎಂದು ಸಚಿವ ಶಿವರಾಜ ತಂಗಡಗಿ ಅವರು ತಿರುಗೇಟು ನೀಡಿದರು. ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಪರಿಶೀಲನೆಯ ಬಳಿಕ ಬುಧವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಚುನಾವಣೆಗಳಲ್ಲಿ ಸೋಲು-ಗೆಲುವು ಒಬ್ಬಿಬ್ಬರು ವ್ಯಕ್ತಿಗಳಿಂದ ನಿರ್ಧಾರವಾಗುವುದಿಲ್ಲ. ಕ್ಷೇತ್ರದ ಮತದಾರರ ತೀರ್ಮಾನವೇ ಅಂತಿಮವಾಗಿದ್ದು, ಅನ್ಸಾರಿ ಅವರು ತಮ್ಮ ಸೋಲಿಗೆ ಇತರರನ್ನು ಹೊಣೆ ಮಾಡುವುದು ಸರಿಯಲ್ಲ ಎಂದು ಹೇಳಿದರು. “ಅನ್ಸಾರಿ ಅವರು ಸಚಿವರಾಗಿ […]

Continue Reading

ಮಧ್ಯಾಹ್ನದ ಊಟದ ಬಳಿಕ 42 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ; ಇಬ್ಬರ ಸ್ಥಿತಿ ಗಂಭೀರ

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ ಗ್ರಾಮದ ವಾಲ್ಮೀಕಿ ಅನುದಾನಿತ ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಬಳಿಕ 42 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬುಧವಾರ ನಡೆದಿದೆ. ವಾಂತಿ ಹಾಗೂ ಹೊಟ್ಟೆನೋವಿನ ಲಕ್ಷಣ ಕಾಣಿಸಿಕೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಅನ್ನ ಹಾಗೂ ಬಜ್ಜಿ ಸೇವಿಸಿದ ಬಳಿಕ ಹಲವು ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆನೋವು ಸೇರಿದಂತೆ ಅಸ್ವಸ್ಥತೆಯ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲರನ್ನು ತಕ್ಷಣ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. […]

Continue Reading