ಮಂಗಳೂರು, ಗೋವಾದ ಕೊಂಕಣಿ ಕವಯತ್ರಿಯರು ಚಾರೊಳಿ ರಾಷ್ಟ್ರೀಯ ಸನ್ಮಾನಕ್ಕೆ ಆಯ್ಕೆ: ರೇಮಂಡ್ ಡಿಕುನಾ ತಾಕೊಡೆ

ಮಂಗಳೂರು: ಇಲ್ಲಿ ನಡೆವ ಕೊಂಕಣಿ 5ನೇ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಖ್ಯಾತ ಹಿರಿಯ ಕವಯತ್ರಿಯರಾದ ಮಂಗಳೂರಿನ ಅರುಂಧತಿ ವಿ. ರಾವ್ ಮತ್ತು ಗೋವಾದ ಆನ್ನಿ ದೆ ಕೊಲ್ವಾಲೆ ಆಯ್ಕೆ ಆಗಿದ್ದಾರೆ ಎಂದು ಸಮ್ಮೇಳನದ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದೇ 19 ರಂದು ಒಂದು ದಿನದ ಕೊಂಕಣಿ 5ನೇ ಚಾರೊಳಿ ಸಾಹಿತ್ಯ ಸಮ್ಮೇಳನಕ್ಕೆ ನವದೆಹಲಿ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕಾರವಾರ, ಕೇರಳ ಮತ್ತು ದುಬೈ ಕವಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕವಿ […]

Continue Reading

ಹೊರ ಜಿಲ್ಲೆಗಳಿಂದ ರೋಗಿಗಳ ಶಿಫಾರಸು ಮಾಡುವಾಗ ಹೆಲ್ಪ್ ಡೆಸ್ಕ್ ಸಂಪರ್ಕಿಸಿ, ನಂತರ ಪರದಾಟ ಬೇಡ, ದ.ಕ. ಜಿಲ್ಲೆಯ ರೋಗಿಗಳಿಗೂ ವೆನ್ಲಾಕ್ ಆಸ್ಪತ್ರೆ ಸೌಲಭ್ಯ ಸಿಗಲಿ: ಅಧೀಕ್ಷಕ ಡಾ. ಶಿವಪ್ರಕಾಶ್

ಮಂಗಳೂರು: ರಾಜ್ಯದ ಹೊರ ಜಿಲ್ಲೆಗಳಿಂದ ತುರ್ತು ಚಿಕಿತ್ಸೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳನ್ನು ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಐಸಿಯು ಹಾಸಿಗೆ ಕೊರತೆ ಕಾಡುತ್ತಿದೆ. ಪರಿಣಾಮ ಒತ್ತಡ ಹೆಚ್ಚಿದ್ದು, ರೋಗಿಗಳನ್ನು ಶಿಫಾರಸು ಮಾಡುವ ಮೊದಲು ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯತೆ ಪರಿಶೀಲಿಸುವ ವ್ಯವಸ್ಥೆ ಕಡ್ಡಾಯಗೊಳಿಸಬೇಕು. ಇದಕ್ಕಾಗಿ ಸಹಾಯವಾಣಿ ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆಗಳ ರೋಗಿಗಳನ್ನು ಏಕಾಏಕಿ ಕರೆತರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಾಕಷ್ಟು ಅರ್ಹ ಬಡ ರೋಗಿಗಳಿಗೆ ವೆನ್ಲಾಕ್ ಆಸ್ಪತ್ರೆಯ ಲಾಭ ಸಿಗದೇ ಇರುವಂತಹ ಸ್ಥಿತಿ ನಿರ್ಮಾಣ ಆಗಿದೆ […]

Continue Reading

ಮಂಗಳೂರಿನಲ್ಲಿ ಅಗಸ್ಟ್ 2 ರಿಂದ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ ಷಿಪ್ ಹಬ್ಬ: ಡಾ. ಅಮರಶ್ರೀ ಅಮರನಾಥ ಶೆಟ್ಟಿ

ಮಂಗಳೂರು: ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ವತಿಯಿಂದ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ ಷಿಪ್- ಅ. 2 ರಿಂದ 8 ರವರೆಗೆ ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಚೆಸ್ ಅಸೋಸಿಯೇಷನ್ ಅಧ್ಯಕ್ಷೆ ಡಾ. ಅಮರಶ್ರೀ ಅಮರನಾಥ ಶೆಟ್ಟಿ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ದೇಶದ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 600 ಕ್ಕೂ ಹೆಚ್ಚು ಮಂದಿ ಆಟಗಾರರು, ತರಬೇತುದಾರರು ಮತ್ತು ಪೋಷಕರು ಭಾಗವಹಿಸುವ ನಿರೀಕ್ಷೆ ಇದ್ದು, […]

Continue Reading

ಕಲಬುರಗಿ: ಸಶಸ್ತ್ರ ಮೀಸಲು ಪೊಲೀಸ್​​ ಪಡೆಯ ಪೊಲೀಸ್​​ ಕಾನ್ ಸ್ಟೆಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕಲಬುರಗಿ: ನಗರದ ಜಗತ್​ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಸಶಸ್ತ್ರ ಮೀಸಲು ಪೊಲೀಸ್​​ ಪಡೆಯ ಪೊಲೀಸ್​​ ಕಾನ್ ಸ್ಟೆಬಲ್ ಸೇವಾ ರೈಫಲ್‌ನಿಂದಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ಶಿವಕುಮಾರ ನರಿಬೋಳ (32) ಮೃತ ಕಾನ್ ಸ್ಟೆಬಲ್ ಎಂದು ಗುರುತಿಸಲಾಗಿದೆ. ಜಗತ್ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ, ಪೊಲೀಸ್ ವಾಹನದಲ್ಲಿ ಕುಳಿತಿದ್ದ ವೇಳೆ ತಮ್ಮ ಬಳಿಯಿದ್ದ ಸರ್ಕಾರಿ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಘಟನಾ […]

Continue Reading

ಯಲ್ಲಾಪುರ: ಭೀಕರ ಅಪಘಾತ, ಕ್ರೂಸರ್, ಲಾರಿ ನಡುವೆ ಮುಖಾಮುಖಿ ಡಿಕ್ಕಿ 6 ಮಂದಿ ಸಾವು, ಮೂರು ಮಂದಿಗೆ ಗಾಯ

ಯಲ್ಲಾಫುರ: ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ 6 ಜನ ಮೃತಪಟ್ಟಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಅರ್ತಿಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಗುರುವಾರ ನಸುಕಿನ ವೇಳೆ ಸಂಭವಿಸಿದೆ. ಧಾರವಾಡ ಮೂಲದ ಬಸವರಾಜ, ಆಭಿಷೇಕ, ಅಕ್ಷಯ, ಅಭಿಷೇಕ, ಸಂಜೀವ್, ಮಂಜುನಾಥ ಮತ್ತು ಇನ್ನೊಬ್ಬ ವ್ಯಕ್ತಿ ಮೃತಪಟ್ಟಿದ್ದು ಶಿವರಾಜ, ಚೆನ್ನ ಬಸು, ಸಚಿನ್ ಎಂಬುವವರು ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದಿಂದ ಗೋಕರ್ಣಕ್ಕೆ ತೆರಳುತ್ತಿದ್ದ […]

Continue Reading

ಮಂಗಳೂರು: ಮನೆ ಮೇಲೆ ಕುಸಿದು ಬಿದ್ದ ತಡೆಗೋಡೆ, ಮೂರು ಮಂದಿ ಸಾವು, ಸಚಿವ ಖಾದರ್ ದೆಹಲಿ ಪ್ರವಾಸ ರದ್ದು, ಅಧಿಕಾರಿಗಳು ಸ್ಥಳಕ್ಕೆ ದೌಡು

ಮಂಗಳೂರು: ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಸುರಿದ ಮಳೆಗೆ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆಯೊಂದು ಕುಸಿದು ಬಿದ್ದು ಪರಿಣಾಮ ಮಹಿಳೆ ಸೇರಿದಂತೆ ಮೂರು ಮಂದಿ ದುರಂತ ಸಾವು ಕಂಡಿರುವ ಘಟನೆ ನಡೆದಿದೆ. ಹೆಂಚಿನ ಚಾವಣಿಯ ಮನೆ ಕುಸಿದ ಪರಿಣಾಮ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಸಾವು ಕಂಡಿದ್ದಾರೆ. ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಒಟ್ಟು ಆರು ಮಂದಿ ಇದ್ದರು ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು […]

Continue Reading

ತುಮಕೂರು ನಾಡಬಾಂಬ್ ಸ್ಫೋಟ ಪ್ರಕರಣ: ನಾಲ್ಕು ಮಂದಿ ವಶಕ್ಕೆ ಪಡೆದ ಅಂಕೋಲಾ ಪೊಲೀಸರು, ಜಿಲ್ಲೆಯಲ್ಲಿ  ನಾಡಬಾಂಬ್ ಸ್ಪೋಟದ ಕಿಡಿ

ಕಾರವಾರ: ತುಮಕೂರು ಸಮೀಪದಲ್ಲಿ ಕಾರಿನಲ್ಲಿ ನಾಡಬಾಂಬ್ ಸ್ಫೋಟಗೊಂಡು ಅಂಕೋಲಾ ಮೂಲದ ನಾಗೇಂದ್ರ ಗೌಡ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸರು ನಾಲ್ಕು ಮಂದಿಯನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದು, ನಾಡಬಾಂಬ್ ತಯಾರಿಕೆ ಮತ್ತು ಪೂರೈಕೆ ಜಾಲದ ಬಗ್ಗೆ ಮಹತ್ವದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೀಗ ನಾಡಬಾಂಬ್ ಪ್ರಕರಣವೂ ಇಡಿ ಜಿಲ್ಲೆಯಲ್ಲಿಯೇ ಸಂಚಲನಕ್ಕೆ ಕಾರಣ ಆಗಿದೆ. ಪೊಲೀಸ್ ಮೂಲಗಳ ಪ್ರಕಾರ, ವಶಕ್ಕೆ ಪಡೆದಿರುವ ನಾಲ್ಕು […]

Continue Reading

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಅಗಸ್ಟ್ 7, 8ಕ್ಕೆ, ಗ್ರಾಮೀಣ ಮಟ್ಟದ ಪ್ರತಿಭೆಗಳಿಗೆ ಉದ್ಯೋಗ ಒದಗಿಸುವ ವೇದಿಕೆ: ಡಾ. ಮೋಹನ್ ಆಳ್ವ

ಮಂಗಳೂರು: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. ಈ ಬಾರಿ 300ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ಅಭ್ಯರ್ಥಿಗಳಿಗೆ ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಶನಿವಾರ ಸುದ್ದಿಗೋಷ್ಟಿಯಲ್ಲಿ […]

Continue Reading

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ; ಮೊದಲ ಜೆಂಡರ್ ಅಫರ್ಮಿಂಗ್ ಯಶಸ್ವಿ ಶಸ್ತ್ರಚಿಕಿತ್ಸೆ, ವೈದ್ಯರ ಸಾಧನೆ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಟ್ರಾನ್ಸ್ಜೆಂಡರ್ ಮಹಿಳೆಗೆ ಮೊದಲ ಬಾರಿಗೆ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಈಚೆಗೆ ನಡೆದ ಈ ಶಸ್ತ್ರಚಿಕಿತ್ಸೆ ನಂತರ ರೋಗಿ ವೈದ್ಯಕೀಯ ತಂಡದ ಆರೈಕೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಹಾಗೂ ಮೂತ್ರಶಾಸ್ತ್ರ ವಿಭಾಗಗಳ ಸಂಯುಕ್ತ ತಂಡವು ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಎರಡೂ ವಿಭಾಗಗಳ ನಿಕಟ ಸಮನ್ವಯದಲ್ಲಿ ಹಲವು ಗಂಟೆಗಳ ಕಾಲ ಕಾರ್ಯ ನಡೆದಿದೆ. ಪ್ಲಾಸ್ಟಿಕ್ ಸರ್ಜರಿ ವಿಭಾಗವು ಇದಕ್ಕೂ ಮುನ್ನ ಮುಖದ ಸ್ತ್ರೀಕರಣ ಮತ್ತು […]

Continue Reading

ಶಾಲೆ ಅನುಮತಿ ನವೀಕರಣಕ್ಕೆ ಲಂಚ: ಶಿಕ್ಷಣ ಇಲಾಖೆಯ ಎಫ್‌ಡಿಸಿ ಲೋಕಾಯುಕ್ತ ಬಲೆಗೆ

ರಾಯಚೂರು: ಖಾಸಗಿ ಶಾಲೆಯ ಅನುಮತಿ ನವೀಕರಣಕ್ಕೆ ಲಂಚ ಬೇಡಿಕೆ ಇಟ್ಟಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಸಿ)ಯನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ. ಬಂಧಿತನನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಫ್‌ಡಿಸಿ ಮಹಾಬಲೇಶ್ವರ ಎಸ್ ಎಂದು ಗುರುತಿಸಲಾಗಿದೆ. ರಾಂಪುರದ ಸಿದ್ಧಪ್ಪ ಅವರಿಗೆ ಸೇರಿದ ವಿದ್ಯಾಜ್ಯೋತಿ ಶಾಲೆಯ ಅನುಮತಿ ನವೀಕರಣ ಪ್ರಕ್ರಿಯೆ ಪೂರ್ಣಗೊಳಿಸಲು ಆರೋಪಿಯು 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಲಂಚ ನೀಡಲು ಇಚ್ಛಿಸದ ಸಿದ್ಧಪ್ಪ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಅದರಂತೆ […]

Continue Reading