ಉತ್ತರ ಕನ್ನಡದಲ್ಲಿ ಸೆ.24 ರಂದು ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಿಸಿದ ಡಿಸಿ ಲಕ್ಷ್ಮಿಪ್ರೀಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆ. 24 ರಂದು ಭಾರಿ ಮಳೆ ಜತೆಗೆ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತವು ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು 24 ಗಂಟೆಯೂ ಕಾರ್ಯನಿರ್ವಹಿಸುವಂತೆ […]

Continue Reading

ಬರ ಬಂದಿದೆ, ಬೆಳೆ ಹಾಳಾಗಿದೆ ಎಂದು ಯೋಚನೆ ಮಾಡಬೇಡಿ, ‌ನಾನು, ನಮ್ಮ ಸರ್ಕಾರ ನಿಮ್ಮ ಜತೆಗಿದೆ: ಸಿಎಂ ಶಿವಕುಮಾರ್

ಬಾಗಲಕೋಟೆ: ಮಳೆ ಬಂದು ಎಷ್ಟು ದಿನ ಆಯಿತು? ಯಾವಾಗ ಬಿತ್ತನೆ ಮಾಡಿದ್ದು? ಎಷ್ಟು ಖರ್ಚಾಯಿತು ಎಂದು ಬಾಗಲಕೋಟೆಯ ಹುನಗುಂದದ ರೈತ ನಂದೆಪ್ಪ ಸಂಗಪ್ಪ ಬಾರಕೇರ ಅವರಿಂದ ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿಯೊಂದು ಮಾಹಿತಿಯನ್ನೂ ಪಡೆದರು. ಯುವ ರೈತನ ತಂದೆ- ತಾಯಿಗೆ “ಬರ ಬಂದಿದೆ, ಬೆಳೆ ಹಾಳಾಗಿದೆ ಎಂದು ಯೋಚನೆ ಮಾಡಬೇಡಿ, ‌ನಾನು ಹಾಗೂ ನಮ್ಮ ಸರ್ಕಾರ ನಿಮ್ಮ ಜೊತೆಗಿದೆ” ಎಂದು ದೈರ್ಯ ತುಂಬಿದರು. ಜೊತೆಗೆ “ಗ್ಯಾರಂಟಿ ಯೋಜನೆಗಳು ತಲುಪುತ್ತಿವೆಯೇ? ನಿಮಗೆ” ಎಂದು ಸಿಎಂ ಕೇಳಲು […]

Continue Reading

ಮುಂಡಗೋಡದಲ್ಲಿ ಭತ್ತದ ಬೆಳೆ ಪ್ರದೇಶ ವೀಕ್ಷಿಸಿದ ಸಚಿವ ಲಕ್ಷ್ಮಣ ಸವದಿ, ಅಧಿಕಾರಿಗಳು, ಶಾಸಕರು ಸಾಥ್

ಮುಂಡಗೋಡ: ಸಚಿವ ಲಕ್ಷ್ಮಣ ಸವದಿ ಅವರು ಶುಕ್ರವಾರ ಮುಂಡಗೋಡ ತಾಲೂಕಿನ ಕಾತ್ತೂರು ಗ್ರಾಮದಲ್ಲಿ ಭತ್ತದ ಬೆಳೆ ಪ್ರದೇಶಕ್ಕೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ವೀಕ್ಷಿಸಿದರು. ನಂತರ ಸಚಿವರು ಮುಂಡಗೋಡ ತಾಲೂಕಿನ ಶಿಂಗೇನ ಹಳ್ಳಿಯಲ್ಲಿ ಶುಂಠಿ ಬೆಳೆ ಪ್ರದೇಶ ವೀಕ್ಷಣೆ ಮಾಡಿದರು. ಯಲ್ಲಾಪುರ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್, ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ಟಿ. ನಾಯ್ಕ, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಸೇರಿದಂತೆ ಅಧಿಕಾರಿಗಳು […]

Continue Reading

ಅತಿವೃಷ್ಠಿ ಹಾನಿಗೆ ತಕ್ಷಣ ಪರಿಹಾರ; ಸಚಿವರ ಸಭೆಯಲ್ಲಿ ಕ್ಷೇತ್ರದ ಸಮಸ್ಯೆಗಳ ಪ್ರಸ್ತಾಪ

ಸಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿ ಪರಿಸ್ಥಿತಿಯ ಪರಿಶೀಲನೆಗಾಗಿ ಶಿರಸಿಯ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು, ಬನವಾಸಿ ಸೇರಿದಂತೆ ತಮ್ಮ ಕ್ಷೇತ್ರದಲ್ಲಿ ಅತಿವೃಷ್ಠಿಯಿಂದ ಉಂಟಾಗಿರುವ ಹಾನಿಯ ಕುರಿತು ಸಚಿವರ ಗಮನ ಸೆಳೆದರು. ಕೃಷಿ ಬೆಳೆಗಳು, ರಸ್ತೆ, ಸೇತುವೆಗಳು ಹಾಗೂ ಸಾರ್ವಜನಿಕ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿಯಾಗಿದ್ದು, ಸಂತ್ರಸ್ತರಿಗೆ ತಕ್ಷಣ ಪರಿಹಾರ ವಿತರಿಸುವುದರ ಜೊತೆಗೆ ಹಾನಿಗೊಳಗಾದ ಕಾಮಗಾರಿಗಳ ದುರಸ್ತಿಯನ್ನು ತುರ್ತಾಗಿ ಕೈಗೊಳ್ಳುವಂತೆ […]

Continue Reading

ಕರಾವಳಿಯಲ್ಲಿ ಫಿಶಿಂಗ್ ಗೆ ದೋಣಿಗಳು, ಮೀನುಗಾರರಲಿ ಹೆಚ್ಚಿದ ಉತ್ಸಾಹ! ದಕ್ಕೆಯಲ್ಲಿ ಬಿರುಸಿನ ಚಟುವಟಿಕೆ

ಮಂಗಳೂರು: ಎರಡು ತಿಂಗಳ ಕಾಲ ಕರಾವಳಿಯ ಮೀನುಗಾರಿಕಾ ದಕ್ಕೆಗಳಲ್ಲಿ ನಿಶ್ಚಲವಾಗಿ ನಿಂತಿದ್ದ ಯಾಂತ್ರೀಕೃತ ಬೋಟ್‌ಗಳು ಮತ್ತೆ ಸಮುದ್ರದತ್ತ ಮುಖ ಮಾಡುವ ಕ್ಷಣ ಬಂದಿದ್ದರೂ, ಹವಾಮಾನ ಇಲಾಖೆಯ ಎಚ್ಚರಿಕೆ ಮೀನುಗಾರರ ಉತ್ಸಾಹಕ್ಕೆ ತಣ್ಣೀರೆರಚಿದೆ. 61 ದಿನಗಳ ಟ್ರಾಲಿಂಗ್ ನಿಷೇಧ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಆಗಸ್ಟ್‌ ನಿಂದ ಆಳ ಸಮುದ್ರ ಮೀನುಗಾರಿಕೆ ಪುನರಾರಂಭಗೊಳ್ಳಬೇಕಿದ್ದರೂ, ಪ್ರತಿಕೂಲ ಹವಾಮಾನದಿಂದಾಗಿ ಬೋಟ್‌ಗಳು ಸಮುದ್ರಕ್ಕಿಳಿಯದ ಸಾಧ್ಯತೆ ಎದುರಾಗಿದೆ. ಮಂಗಳೂರು ಬಂದರಿನಲ್ಲಿ ಕಳೆದ ನಾಲ್ಕು ದಿನಗಳಿಂದಲೇ ಬಿರುಸಿನ ಸಿದ್ಧತೆಗಳು ನಡೆದಿವೆ. ಎರಡು ತಿಂಗಳ ವಿರಾಮದ ಬಳಿಕ ಮೀನುಗಾರರು, […]

Continue Reading

ಉಡುಪಿ ಜಿಲ್ಲೆಯಲ್ಲಿ ಮಳೆ, ಶಾಲೆಗಳಿಗೆ 4 ರಂದು ರಜೆ ಘೋಷಣೆ: ಡಿಸಿ ಸ್ವರೂಪ್

ಉಡುಪಿ: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಆಗುತ್ತಿದ್ದು, ಹವಾಮಾನ ಇಲಾಖೆಯ ಎಲ್ಲೊ ಆಲರ್ಟ್ ಮುನ್ಸೂಚನೆಯಂತೆ ಮುಂಜಾಗೃತ ಕ್ರಮವಾಗಿ ಅ. 4 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಭಾರೀ ಮಳೆ ಮುನ್ಸೂಚನೆ: ದ. ಕ ಜಿಲ್ಲೆಯ ಶಾಲೆ, ಅಂಗನವಾಡಿಗಳಿಗೆ ಅ. 4 ರಂದು ರಜೆ: ಡಿಸಿ ದರ್ಶನ್

ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಶಾಲೆಗಳು, ಅಂಗನವಾಡಿಗಳು ಹಾಗೂ ಕೆಲವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅ. 4ರಂದು ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ. ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ ಮತ್ತು ಉಳ್ಳಾಲ ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಎಲ್ಲಾ ವಸತಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪುತ್ತೂರು ಉಪವಿಭಾಗ ವ್ಯಾಪ್ತಿಯ […]

Continue Reading

ರಾಜ್ಯದಲ್ಲಿ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ ಮತ್ತು ಮಲೆನಾಡಿಗೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವೆಡೆ ಮುಂದಿನ ಏಳು ದಿನಗಳ ಕಾಲ ವ್ಯಾಪಕ ಮಳೆ ಆಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಈ ಕುರಿತು ಮುನ್ಸೂಚನೆ ನೀಡಿದ್ದು, ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರೊಂದಿಗೆ ಕರಾವಳಿ ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ […]

Continue Reading

ದ.ಕ ಜಿಲ್ಲೆಯಲ್ಲಿ ಅಬ್ಬರದ ಮಳೆ, ಅ. 3 ರಂದು ಶಾಲೆಗಳಿಗೆ ರಜೆ: ಡಿಸಿ ದರ್ಶನ

ಮಂಗಳೂರು: ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಮಳೆಯ ತೀವ್ರತೆ ಹಿನ್ನೆಲೆಯಲ್ಲಿ ಜಿಲ್ಲೆಯ ಮಂಗಳೂರು, ಉಳ್ಳಾಲ, ಮೂಡುಬಿದಿರೆ, ಬಂಟ್ವಾಳ, ಮೂಲ್ಕಿ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದ್ದು, ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಅ. 3 ರಂದು ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಆದೇಶದಲ್ಲಿ ತಿಳಿಸಿದ್ದಾರೆ.

Continue Reading

ಮಳೆಯ ಅಬ್ಬರ, ದಾಂಡೇಲಿ, ಜೋಯಿಡಾ ತಾಲ್ಲೂಕಿನ ಶಾಲೆಗಳಿಗೆ ಅ.3 ರಂದು ರಜೆ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಗಾಳಿ ಮುಂದುವರೆದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ದಾಂಡೇಲಿ ಮತ್ತು ಜೊಯಿಡಾ ತಾಲೂಕುಗಳ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಅ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಉಳಿದ ತಾಲ್ಲೂಕಿನ ಶಾಲೆಗಳು ಎಂದಿನಂತೆ ನಡೆಯಲಿದ್ದು, ಮಳೆ ಹೆಚ್ಚಾಗಿರುವ ತಾಲ್ಲೂಕಿನಲ್ಲಿ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಿದ್ದಾರೆ.

Continue Reading