ಉಪ್ಪಿನಂಗಡಿಯಲ್ಲಿ ನೇತ್ರಾವತಿ-ಕುಮಾರಧಾರ ಮೈದುಂಬಿ ಹರಿವು: ಪ್ರವಾಹ ಭೀತಿ, ತಗ್ಗು ಪ್ರದೇಶದ ನಿವಾಸಿಗಳ ಸ್ಥಳಾಂತರ

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿಗಳಾದ ನೇತ್ರಾವತಿ ಮತ್ತು ಕುಮಾರಧಾರ ನದಿ ಪಾತ್ರಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಉಪ್ಪಿನಂಗಡಿಯಲ್ಲಿ ಎರಡೂ ನದಿಗಳು ಶುಕ್ರವಾರ ತಡರಾತ್ರಿಯಿಂದ ಮೈದುಂಬಿ ಹರಿಯುತ್ತಿದ್ದು, ಪ್ರವಾಹದ ಭೀತಿ ಆವರಿಸಿದೆ. ಶನಿವಾರ ಬೆಳಗ್ಗೆ ನೇತ್ರಾವತಿ ನದಿಯ ನೀರಿನ ಮಟ್ಟ ಸಮುದ್ರ ಮಟ್ಟದಿಂದ 28 ಮೀಟರ್ ಎತ್ತರದಲ್ಲಿತ್ತು. ಬೆಳಿಗ್ಗೆ ಸ್ವಲ್ಪ ಇಳಿಕೆಯಾಗಿದ್ದ ನೀರಿನ ಮಟ್ಟ ಮಧ್ಯಾಹ್ನದಿಂದ ಮತ್ತೆ ಏರಿಕೆಯಾಗಿದ್ದು, ರಾತ್ರಿ 7.30ರ ವೇಳೆಗೆ 30 ಮೀಟರ್ ತಲುಪಿದೆ. ಇಲ್ಲಿ ನಿಗದಿಪಡಿಸಿರುವ ಅಪಾಯದ ಮಟ್ಟ 30.05 ಮೀಟರ್ ಆಗಿದ್ದು, […]

Continue Reading

ಬೆಳ್ತಂಗಡಿ: ಪುಷ್ಯ ಮಳೆಯ ಅಬ್ಬರಕ್ಕೆ ಜನ ತತ್ತರ, ಉಜಿರೆ–ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿ ಮೇಲೆ ಹರಿದ ನೀರು

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಧರ್ಮಸ್ಥಳದಲ್ಲಿ ನೇತ್ರಾವತಿ ಸೇರಿದಂತೆ ಜಿಲ್ಲೆಯ ಬಹುತೇಕ ನದಿಗಳು ಅಪಾಯದ ಮಟ್ಟಕ್ಕೆ ಸಮೀಪಿಸಿ ತುಂಬಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಆವರಿಸಿದೆ. ಮಳೆ ಮುಂದುವರೆದರೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಸ್ಥಳೀಯರು ಆತಂಕದಲ್ಲಿದ್ದಾರೆ. ಬೆಳಗ್ಗಿನಿಂದಲೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಬೆಳ್ತಂಗಡಿ–ಕಿಲ್ಲೂರು ರಸ್ತೆಯ ಪುತ್ರಬೈಲು ಸಮೀಪ […]

Continue Reading

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ: ಜುಲೈ 25 ರಂದು ಶಾಲೆಗಳಿಗೆ ರಜೆ ಘೋಷಣೆ: ಸ್ವರೂಪ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ   ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು, ಡಿಪ್ಲೊಮೊ, ಐಟಿಐ ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಿಸಿ  ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.  

Continue Reading

ಉ.ಕ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ, 24 ರಂದು ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ: ಡಿಸಿ ಲಕ್ಷ್ಮಿಪ್ರೀಯಾ

ಕಾರವಾರ: ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜು.24 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

Continue Reading

ದ.ಕ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ, 24 ರಂದು ರಜೆ ಘೋಷಣೆ: ಡಿಸಿ ದರ್ಶನ್

ಮಂಗಳೂರು: ಹವಾಮಾನ ಇಲಾಖೆ ವ್ಯಾಪಕ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 24 ರಂದು ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.  

Continue Reading

ದ.ಕ ಜಿಲ್ಲೆಯಲ್ಲಿ ಭಾರಿ ಮಳೆ, ಜುಲೈ 23 ರಂದು ಶಾಲೆಗಳಿಗೆ ಡಿಸಿ ದರ್ಶನ್ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿಮುನ್ನೆಚ್ಚರಿಕೆಯಾಗಿ ಜುಲೈ 23 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ವಸತಿ ಶಾಲೆಗಳು, ಪದವಿಪೂರ್ವ, ಪದವಿಪೂರ್ವ ವಸತಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ದರ್ಶನ್ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಡಳಿತದ ಆದೇಶ ಉಲ್ಲಂಘನೆ ಮಾಡಿ ಶಾಲೆ ನಡೆಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Continue Reading

ಬಂಟ್ವಾಳ ಬಸ್ ದುರಂತ: ಮೃತ ಬಾಲಕಿಯ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಿ, ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ: ಸಚಿವ ಖಾದರ್ ಸೂಚನೆ

ಬಂಟ್ವಾಳ: ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಮರವೊಂದು ಬಿದ್ದು ಬಾಲಕಿ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ದುರ್ಘಟನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಚಿಕಾಗೋ ಪ್ರವಾಸದಲ್ಲಿರುವ ಸಚಿವರು ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಜಿಲ್ಲಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಕ್ಷಣ ಪರಿಹಾರ ಒದಗಿಸುವಂತೆ […]

Continue Reading

ನೀರಿನ ಕೊರತೆ ತಪ್ಪಿಸಲು ಕೃಷಿ ಹೊಂಡಗಳ ನಿರ್ಮಾಣ, ಬಾವಿ, ಬೋರ್‌ವೆಲ್ ಗೆ ಅಂತರ್ಜಲ ಮರುಪೂರಣ ವ್ಯವಸ್ಥೆ ಕಲ್ಪಿಸಿ: ಸುಷ್ಮಾ ಗೋಡಬೋಲೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ರೈತರಿಗೆ ಕಡಿಮೆ ಅವಧಿಯಲ್ಲಿ ಇಳುವರಿ ನೀಡುವ ಬೆಳೆಗಳನ್ನು ಬೆಳೆಯಲು ಉತ್ತೇಜಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಅವರು ನಿರ್ದೇಶನ ನೀಡಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪೂರ್ವ ತಯಾರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ.24 ರಷ್ಟು ಮಳೆಯ ಕೊರತೆಯಿರುವುದರಿಂದ ರೈತರು ಹೆಚ್ಚು […]

Continue Reading

ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ: ಜುಲೈ 18ರಂದು ಶಾಲೆಗಳಿಗೆ ರಜೆ: ಡಿಸಿ ದರ್ಶನ್

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಂಭವಿರುವುದರಿಂದ ಜಿಲ್ಲಾಡಳಿತ ‘ಆರೆಂಜ್ ಅಲರ್ಟ್’ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಜುಲೈ 18 ರಂದು (ಶನಿವಾರ) ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಉಲ್ಲಂಘಿಸುವ ಶಾಲಾ-ಕಾಲೇಜುಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕಾನೂನು ಕ್ರಮ […]

Continue Reading

ಭಾರಿ ಮಳೆ: ಅಂಕೋಲಾ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಣೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನಾದ್ಯಂತ ಭಾರಿ ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಂಕೋಲಾ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಅಂಕೋಲಾ ತಹಶೀಲ್ದಾರ್ ಅವರು ಮಾಹಿತಿ ನೀಡಿದ್ದು, ಪ್ರತಿಕೂಲ ಹವಾಮಾನ ಮತ್ತು ಮಳೆಯ ತೀವ್ರತೆಯನ್ನು ಪರಿಗಣಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪೋಷಕರು ಹಾಗೂ ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸಿ, ಅಗತ್ಯವಿಲ್ಲದಿದ್ದರೆ ಹೊರಗಡೆ ಸಂಚರಿಸದಂತೆ ಆಡಳಿತ ಮನವಿ […]

Continue Reading