ದ. ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್: ಶಾಲೆ- ಪಿಯು ಕಾಲೇಜುಗಳಿಗೆ 3 ರಂದು ರಜೆ: ಡಿಸಿ ದರ್ಶನ್ 

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 3 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ […]

Continue Reading

ಕಾರವಾರದಲ್ಲಿ ಭಾರಿ ಮಳೆ, ಜುಲೈ 2 ರಂದು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನಿಂದಾಗಿ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ಗುರುವಾರ(ಜುಲೈ 2) ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿಕೂಲ ಹವಾಮಾನ ಮತ್ತು ನಿರಂತರ ಮಳೆಯ ಕಾರಣ ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆ ಆಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಜುಲೈ […]

Continue Reading

ದ.ಕ ಜಿಲ್ಲೆಗೆ ರೆಡ್ ಅಲರ್ಟ್‌, ಜುಲೈ 2 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ದರ್ಶನ್ ಆದೇಶ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜುಲೈ 2 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ದರ್ಶನ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ನದಿ, ಕೆರೆ ಹಾಗೂ […]

Continue Reading

ಮಂಗಳೂರು: ಮನೆ ಮೇಲೆ ಕುಸಿದು ಬಿದ್ದ ತಡೆಗೋಡೆ, ಮೂರು ಮಂದಿ ಸಾವು, ಸಚಿವ ಖಾದರ್ ದೆಹಲಿ ಪ್ರವಾಸ ರದ್ದು, ಅಧಿಕಾರಿಗಳು ಸ್ಥಳಕ್ಕೆ ದೌಡು

ಮಂಗಳೂರು: ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಸುರಿದ ಮಳೆಗೆ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆಯೊಂದು ಕುಸಿದು ಬಿದ್ದು ಪರಿಣಾಮ ಮಹಿಳೆ ಸೇರಿದಂತೆ ಮೂರು ಮಂದಿ ದುರಂತ ಸಾವು ಕಂಡಿರುವ ಘಟನೆ ನಡೆದಿದೆ. ಹೆಂಚಿನ ಚಾವಣಿಯ ಮನೆ ಕುಸಿದ ಪರಿಣಾಮ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಸಾವು ಕಂಡಿದ್ದಾರೆ. ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಒಟ್ಟು ಆರು ಮಂದಿ ಇದ್ದರು ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು […]

Continue Reading

ಉ. ಕ ಜಿಲ್ಲೆಗೆ ಆರೆಂಜ್ ಅಲರ್ಟ್, ಜುಲೈ 2 ರವರೆಗೆ ಭಾರೀ ಮಳೆ ಸಾಧ್ಯತೆ ಎಚ್ಚರ ವಹಿಸಿ: ಡಿಸಿ ಲಕ್ಷ್ಮೀಪ್ರಿಯಾ

ಕಾರವಾರ: ಭಾರತೀಯ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಗೆ ಜೂನ್ 30, ಮಧ್ಯಾಹ್ನ 1 ಗಂಟೆಯಿಂದ ಜುಲೈ 2ರ ಬೆಳಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಜತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಹಾಗೂ ಮೀನುಗಾರರು ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮುಂಗಾರು ಪೂರ್ವ ಸಿದ್ಧತೆಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಪಕವಾಗಿ […]

Continue Reading