ಎನ್‌ಎಂಡಿಸಿ ಜತೆಗೆ ಕೆಐಓಸಿಎಲ್ ವಿಲೀನಕ್ಕೆ ಕೇಂದ್ರ ಸಚಿವ ಎಚ್ಡಿಕೆಗೆ ಶಾಸಕ ಡಾ. ಭರತ್ ಶೆಟ್ಟಿ ಮನವಿ

ಮಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದ (ಎನ್‌ಎಂಡಿಸಿ) ಜತೆ ವಿಲೀನಗೊಳಿಸಬೇಕು. ಕುದುರೆಮುಖ ಸಂಸ್ಥೆಯ ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಬಂಡವಾಳ ಹೂಡಿಕೆ ಮತ್ತು […]

Continue Reading

ಡಿಕೆಶಿಯತ್ತ ವಾಲಿದ ಕಾಂಗ್ರೆಸ್ ಶಾಸಕರು? ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ರಾಜಕೀಯ ಲೆಕ್ಕಾಚಾರ ಜೋರು, ಖಾದರ್ ಗೆ ಡಿಸಿಎಂ ಸ್ಥಾನ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತೀವ್ರವಾಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಹಲವರು ಇದೀಗ ಡಿ.ಕೆ. ಶಿವಕುಮಾರ್ ಬಣದತ್ತ ಮುಖ ಮಾಡುತ್ತಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಜೋರಾಗಿವೆ. ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಿದ್ದರಾಮಯ್ಯ ಪರವಾಗಿ ಕೆಲ ಹಿರಿಯ ಶಾಸಕರು ಹಾಗೂ ಸಚಿವರು ಮಾತ್ರ ಉಳಿದಿದ್ದು, ಡಿ.ಕೆ. ಶಿವಕುಮಾರ್ ಪರವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಡಿಕೆ ಶಿವಕುಮಾರ್ […]

Continue Reading

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಚರ್ಚೆಗೆ ದೇಶಪಾಂಡೆ ಹೇಳಿಕೆ ಹೊಸ ಟ್ವಿಸ್ಟ್, ವೇಗ ಪಡೆದ ರಾಜಕೀಯ ಚಟುವಟಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕುರಿತ ರಾಜಕೀಯ ಚರ್ಚೆಗಳು ತಾರಕಕ್ಕೇರುತ್ತಿರುವ ನಡುವೆಯೇ, ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ದೇಶಪಾಂಡೆ, ನವದೆಹಲಿಯಿಂದ ಹಿಂದಿರುಗುವಾಗಲೇ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿಕೊಂಡು ಬಂದಿದ್ದಾರೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಅವರು ನಮ್ಮೊಂದಿಗೆ ಮಾತನಾಡುವ ವೇಳೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು. […]

Continue Reading

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಚಿವ ಈಶ್ವರ್ ಖಂಡ್ರೆ ಹೇಳಿಕೆ: ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗೆ ಚೆಕ್ ಪೋಸ್ಟ್ ಸ್ಥಾಪನೆಗೆ ಆದೇಶ

 ಕುಕ್ಕೆ ಸುಬ್ರಹ್ಮಣ್ಯ : ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಅವರ ಪರಮಾಧಿಕಾರ ಆಗಿದೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಸಭಾ ಚುನಾವಣೆ ಕುರಿತು ವರಿಷ್ಠರ ಜತೆಗೆ ಚರ್ಚಿಸಲು ನವದೆಹಲಿಗೆ ತೆರಳಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರಲು ಇರುವ ನಾಲ್ಕೂ ಪ್ರವೇಶ ರಸ್ತೆಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗೆ ಚೆಕ್ ಪೋಸ್ಟ್ ಸ್ಥಾಪಿಸಲು ಆದೇಶ ನೀಡಲಾಗಿದೆ. ರಸ್ತೆಯ ಬದಿ ಪ್ಲಾಸ್ಟಿಕ್ ಬಾಟಲಿ, ತಟ್ಟೆ ಇತ್ಯಾದಿ ತ್ಯಾಜ್ಯಗಳು ಬಿದ್ದಿರುವುದನ್ನು ನೋಡಿದೆ. ಕೂಡಲೇ […]

Continue Reading

ಧರ್ಮಶಾಲಾ: ಐಪಿಎಲ್ ಟೂರ್ನಿಯಲ್ಲಿ ದಾಖಲೆ ಬರೆದ ಆರ್ ಸಿಬಿ, ಫೈನಲ್ ಗೆ ಲಗ್ಗೆ, ಗುಜರಾತ್ ಹೀನಾಯ ಸೋಲು

ಧರ್ಮಶಾಲಾ: ಐಪಿಎಲ್–2026ರ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಬ್ಬರದ ಬ್ಯಾಟಿಂಗ್, ಸಂಘಟಿತ ಆಟಕ್ಕೆ ಅಕ್ರಮಣಕಾರಿ ಬೌಲಿಂಗ್ ದಾಳಿಗೆ ಗುಜರಾತ್ ಟೈಟಾನ್ಸ್ ತಂಡವು ಹೀನಾಯ ಸೋಲು ಕಂಡಿದೆ. ಆರ್ ಸಿಬಿ ತಂಡ ಸತತ ಎರಡನೇ ಬಾರಿ ಫೈನಲ್‌ ಗೆ ಲಗ್ಗೆ ಇಟ್ಟಿದೆ. ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯಲ್ಲಿ 255 ರನ್ ಗಳ ಬೃಹತ್ ಮೊತ್ತದ ದಾಖಲಿಸಿದ ಆರ್ ಸಿಬಿ ತಂಡದ ಬ್ಯಾಟಿಂಗ್ ಮುಂದೆ ಗುಜರಾತ ಟೈಟನ್ಸ ಬ್ಯಾಟಿಂಗ್ ಹಾಗೂ ಬೌಲರ್ ಗಳು ತತ್ತರಿಸಿದರು. 19.3 […]

Continue Reading

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ನಿರ್ಧಾರ? ರಾಜ್ಯ ಸಭೆ ಆಫರ್ ನೀಡಿದ ರಾಹುಲ್

ನವದೆಹಲಿ: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕೊನೆಗೂ ತಿರುವು ಪಡೆದುಕೊಂಡಿದೆ. ನವದೆಹಲಿಯಲ್ಲಿ ನಡೆದ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್​​​ ನಿವಾಸದಲ್ಲಿದ್ದ ಆಪ್ತ ಸಚಿವರು, ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದಾರೆ. ಈ ವೇಳೆ ಸಿಎಂ ಸ್ಥಾನಕ್ಕೆ […]

Continue Reading

ಮೇ 28 ಸಿಎಂ ಸಿದ್ದರಾಮಯ್ಯ ರಾಜೀನಾಮೆ? ನವದೆಹಲಿಯಿಂದ ಎಂ ಗೌಪ್ಯ ಲಕೋಟೆ ಬರುವ ನಿರೀಕ್ಷೆ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದ್ದು, ನವದೆಹಲಿಯಲ್ಲಿ ನಡೆದ ಸರಣಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ನಾಯಕತ್ವ ಬದಲಾವಣೆ ಪ್ರಸ್ತಾಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಆಫರ್ ನೀಡುವ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ರಾಹುಲ್ ಗಾಂಧಿ ಮಾತನ್ನು ತಮ್ಮ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಈ ವಾರದಲ್ಲೇ ಹೊಸ ಸಿಎಂ ಅಧಿಕಾರಕ್ಕೆ […]

Continue Reading

ಮಳೆಗಾಲ – ವಿಪತ್ತು ನಿರ್ವಹಣೆಗೆ ಅಗ್ನಿಶಾಮಕ ದಳ, ಎಸ್.ಡಿ.ಆರ್.ಎಫ್ ತಂಡ ಸನ್ನದ ಇರಲಿ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ಮಂಗಳೂರು: ಭಾರಿ ಮಳೆ ಪ್ರವಾಹದಿಂದಾಗಿ ರಸ್ತೆಹಾನಿ, ಗುಡ್ಡ ಕುಸಿತ, ಮನೆ ಕುಸಿತದಂತಹ ಅಹಿತಕರ ಘಟನೆಗಳು ಸಂಭವಿಸುತ್ತಿದ್ದು, ಮೂಲ ಸೌಕರ್ಯಗಳಿಗೆ ಹಾನಿ ಆಗುವ ಸಾಧ್ಯತೆ ಇರುವುದರಿಂದ, ಮಳೆಗಾಲದಲ್ಲಿ ಯಾವುದೇ ರೀತಿಯ ಅವಘಡ ನಡೆಯದಂತೆ ಇಲಾಖೆಗಳು ಸನ್ನದ್ಧರಾಗಿರಬೇಕು. ಕಳೆದ ಬಾರಿ ಹೆಚ್ಚಿನ ಪ್ರವಾಹ ಬಂದಿರುವ ಪ್ರದೇಶಗಳಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರ ಮಹಾ ನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ನಡೆದ ಮುಂಗಾರು ಪೂರ್ವ ಸಿದ್ಧತೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ […]

Continue Reading

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ನಮ್ಮ ಮೂಡುಬಿದಿರೆ, ನೇತಾಜಿ ಬ್ರಿಗೇಡ್, ಜೆಸಿಐ, ಮೂಡುಬಿದಿರೆ ಬಂಟರ ಮಹಿಳಾ ಸಂಘದ ಸದಸ್ಯರು ಭಾನುವಾರ ವಿದ್ಯಾಗಿರಿ-ಹನ್ಡೇಲು ಹಾಗೂ ವಿದ್ಯಾಗಿರಿ-ಪುತ್ತಿಗೆ ಪರಿಸರದ 5.5 ಕಿಮೀ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಸ್ವಚ್ಛ ಸಂಕಲ್ಪ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನ ಅಧ್ಯಕ್ಷ ಅಶೋಕ ಅಡ್ಯಂತಾಯ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿ, ಸ್ವಚ್ಛತೆ ಎನ್ನುವುದು ಆರೋಗ್ಯಕರ ಸಮಾಜದ ಅಡಿಪಾಯ. ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಹೌದು. ಇದೇ ಉದ್ದೇಶವನ್ನು ಮನಗಂಡು ಮೂಡುಬಿದಿರೆಯಲ್ಲಿ […]

Continue Reading

ಉಡುಪಿ-ಕಾಸರಗೋಡು ವಿದ್ಯುತ್ ಯೋಜನೆಗೆ ಜಮೀನು ನೀಡಿದ ರೈತರಿಗೆ ಸನ್ಮಾನ

ಬಂಟ್ವಾಳ: ದೇಶದ ಪ್ರಗತಿ ಹಾಗೂ ವಿದ್ಯುತ್ ಸ್ವಾವಲಂಬನೆಗೆ ಅತ್ಯಂತ ಮಹತ್ವದ್ದಾಗಿರುವ ‘ಉಡುಪಿ-ಕಾಸರಗೋಡು ವಿದ್ಯುತ್ ಪ್ರಸರಣ ಲೈನ್’ ಯೋಜನೆಗೆ ಬಂಟ್ವಾಳ ತಾಲೂಕಿನಾದ್ಯಂತ ಸಾರ್ವಜನಿಕರು ಹಾಗೂ ರೈತರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಬಂಟ್ವಾಳದ ರೈತರ ಮತ್ತು ನಾಗರಿಕರು ಯೋಜನೆಗೆ ಬೇಕಾದ ಭೂಮಿ ನೀಡಿದ್ದು, ಅವರ ದೇಶಪ್ರೇಮ ಹಾಗೂ ಉದಾರ ಮನೋಭಾವ ತಿಳಿಸುತ್ತದೆ ಎಂದು ಯುಕೆಟಿಎಲ್ ಸಂಸ್ಥೆ ತಿಳಿಸಿದೆ. ಸ್ವಂತ ಭೂಮಿ ಬಿಟ್ಟುಕೊಟ್ಟು ಸಹಕರಿಸಿದ ತಾಲೂಕಿನ ವಿವಿಧ ಗ್ರಾಮಗಳ ಭೂಮಾಲೀಕರು ಹಾಗೂ ರೈತರನ್ನು ಯುಕೆಟಿಎಲ್ ಕಂಪೆನಿ ವ್ಯವಸ್ಥಾಪಕ ಆಗ್ನೆಸ್ ಗೋನ್ಸಾಲ್ವಿಸ್ ಅವರು […]

Continue Reading