11ನೇ ರಾಷ್ಟ್ರೀಯ ಆಯುರ್ವೇದ ದಿನ ಉದ್ಘಾಟಿಸಿದ ಮಮತಾ ಗಟ್ಟಿ

ಮಂಗಳೂರು: ಬದಲಾಗುತ್ತಿರುವ ಜೀವನಶೈಲಿ ಹಾಗೂ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ರೋಗ ಬಂದ ಬಳಿಕ ಚಿಕಿತ್ಸೆ ಪಡೆಯುವುದಕ್ಕಿಂತ, ಮುನ್ನೆಚ್ಚರಿಕಾ ಕ್ರಮಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳುವುದಕ್ಕೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ನಗರದ ಕದ್ರಿ ಲಯನ್ಸ್ ಅಶೋಕ ಸೇವಾ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಮತ್ತು ಆಯುಷ್ ಸಂಘಟನೆಗಳ ಸಹಯೋಗದಲ್ಲಿ ನಡೆದ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ […]

Continue Reading

ದ.ಕ ಕಾಂಗ್ರೆಸ್ ಸಾರಥಿ ಪದ್ಮರಾಜ್ ಪೂಜಾರಿ ಪದಗ್ರಹಣಕ್ಕೆ ಜನಾರ್ದನ ಪೂಜಾರಿ ಎಂಟ್ರಿ, ಕಾರ್ಯಕರ್ತರ ಸಂಭ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣಗೊಂಡು ಒಂಬತ್ತು ವರ್ಷ ಕಳೆದರೂ ಅಲ್ಲಿಗೆ ಭೇಟಿ ನೀಡದ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಅವರು ಗುರುವಾರ ನೂತನ ಡಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ತಮ್ಮ ಪಟ್ಟಶಿಷ್ಯ ಪದ್ಮರಾಜ್ ಆರ್. ಪೂಜಾರಿ ಅವರನ್ನು ಆಶೀರ್ವದಿಸಲು ಕಚೇರಿಗೆ ಬಂದಿದ್ದರು. ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಜನಾರ್ದನ ಪೂಜಾರಿ ಅವರ ಉಪಸ್ಥಿತಿ ಪಕ್ಷದ ವಲಯದಲ್ಲಿ ಗಮನ ಸೆಳೆಯಿತು. ವಯೋಸಹಜ ಆರೋಗ್ಯ […]

Continue Reading

ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಉದ್ಘಾಟಿಸಿದ ಶ್ರೀನಿವಾಸ ವಿವಿ ಕುಲಾಧಿಪತಿ ಶ್ರೀನಿವಾಸ ರಾವ್

ಮಂಗಳೂರು: ಸಂಕಷ್ಟದಲ್ಲಿರುವವರಿಗೆ ಸಮಯೋಚಿತವಾಗಿ ನೆರವು ನೀಡುವುದು, ಅವರ ಮಾತುಗಳನ್ನು ತಾಳ್ಮೆಯಿಂದ ಆಲಿಸುವುದು ಹಾಗೂ ಅಗತ್ಯವಿದ್ದಾಗ ಸಮಾಲೋಚನೆ ಪಡೆಯಲು ಪ್ರೋತ್ಸಾಹಿಸುವುದು ಆತ್ಮಹತ್ಯೆ ತಡೆಗಟ್ಟುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎ. ಶ್ರೀನಿವಾಸ ರಾವ್ ಹೇಳಿದರು. ಪಾಂಡೇಶ್ವರದ ಸಿಟಿ ಕ್ಯಾಂಪಸ್‌ನಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ವತಿಯಿಂದ ‘ಲಿಯೋರಾ: ಮೈ ಲೈಟ್’ ಆಶಯದೊಂದಿಗೆ ಬುಧವಾರ ಆಯೋಜಿಸಿದ್ದ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯಲ್ಲಿ ಅವರು ಮಾತನಾಡಿದರು. ‘ಆತ್ಮಹತ್ಯೆ ತಡೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಸಂಕಷ್ಟದಲ್ಲಿರುವವರಿಗೆ ನೆರವಾಗುವುದು ಸಮಾಜದ ಪ್ರಮುಖ […]

Continue Reading

ವೈದ್ಯಕೀಯ ಪ್ರವೇಶ: ಎಕ್ಸ್‌ಪರ್ಟ್‌ ಕಾಲೇಜಿನ 852 ವಿದ್ಯಾರ್ಥಿಗಳ ದಾಖಲೆಯ ಸಾಧನೆ

ಮಂಗಳೂರು: ನೀಟ್–ಯುಜಿ 2026ರ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪಿಯು ಕಾಲೇಜಿನ 852 ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು ಪಡೆದಿದ್ದಾರೆ. ಇವರಲ್ಲಿ 763 ವಿದ್ಯಾರ್ಥಿಗಳು ಎಂಬಿಬಿಎಸ್ ಹಾಗೂ 89 ವಿದ್ಯಾರ್ಥಿಗಳು ಬಿಡಿಎಸ್ ಪ್ರವೇಶ ಪಡೆದಿದ್ದಾರೆ ಎಂದು ಸಂಸ್ಥೆ ತಿಳಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹಾಗೂ ವೈದ್ಯಕೀಯ ಸಮಾಲೋಚನಾ ಸಮಿತಿ (ಎಂಸಿಸಿ) ಪ್ರಕಟಿಸಿರುವ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶದಲ್ಲಿ ಈ ಸಾಧನೆ ದಾಖಲಾಗಿದೆ. ದೇಶದ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಗಳಾದ ಏಮ್ಸ್, […]

Continue Reading

ರಾಷ್ಟ್ರಪ್ರಶಸ್ತಿ ವಿಜೇತ ತುಳುನಾಡಿನ ಕಲಾವಿದರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ

ಮಂಗಳೂರು: 72ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪಡೆದ ತುಳುನಾಡಿನ ಕಲಾವಿದರು ಹಾಗೂ ಸಾಹಿತಿಗೆ ಬುಧವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ ದೊರೆಯಿತು. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ರಂಗಭೂಮಿ ಕಲಾವಿದೆ ರೂಪಶ್ರೀ ವರ್ಕಾಡಿ, ಬಾಲನಟ ಆತೀಶ್ ಎಸ್. ಶೆಟ್ಟಿ, ‘ಮಿಥ್ಯಾ’ ಚಿತ್ರದ ಬರಹಗಾರ ಹಾಗೂ ನಿರ್ದೇಶಕ ಸುಮಂತ್ ಭಟ್ ಮತ್ತು ಸಿನಿಮಾಧಾರಿತ ಉತ್ತಮ ಪುಸ್ತಕ ವಿಭಾಗದಲ್ಲಿ ಪ್ರಶಸ್ತಿ ಪಡೆದ ಕುಂದಾಪುರ ಮೂಲದ ಡಾ. ಪ್ರದೀಪ್ ಕೆಂಚನೂರು ಅವರು ಬುಧವಾರ ಮಧ್ಯಾಹ್ನ ವಿಮಾನ ನಿಲ್ದಾಣಕ್ಕೆ ಬಂದಿಳಿದರು. […]

Continue Reading

GMU welcomes students from 115 nationalities, first veterinary batch

Ajman, UAE: Gulf Medical University (GMU) welcomed its latest cohort at its White Coat Ceremony 2026 on Wednesday, marking the institution’s student representation from 115 nationalities since its establishment. The ceremony was held at Thumbay Grounds, with Thumbay Group Founder and President Dr Thumbay Moideen as chief guest and GMU Chancellor Prof Manda Venkatramana presiding. […]

Continue Reading

ಕಾರು ತೆರವು ವಿಚಾರ: ವಿಧಾನಸೌಧದಲ್ಲಿ ಡಿಸಿಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ವಿಧಾನಸಭೆ ಕಲಾಪ ಮುಗಿಸಿ ಹೊರಬಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರನ್ನು ವಿಧಾನಸೌಧದ ಪಶ್ಚಿಮ ದ್ವಾರದಿಂದ ಪಾರ್ಕಿಂಗ್ ಸ್ಥಳಕ್ಕೆ ಸ್ಥಳಾಂತರಿಸಿದ್ದ ವಿಚಾರ ಸೋಮವಾರ ಕೆಲಕಾಲ ಬಿಗುವಿನ ವಾತಾವರಣಕ್ಕೆ ಕಾರಣವಾಯಿತು. ಕಾರು ಕಾಣದೆ ಕಾಯಬೇಕಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ, ವಿಧಾನಸೌಧದ ಭದ್ರತಾ ಉಸ್ತುವಾರಿ ಡಿಸಿಪಿ ಯೋಗೇಶ್ ಅವರನ್ನು ಸ್ಥಳದಲ್ಲೇ ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸಭೆ ಕಲಾಪ ಮುಗಿದ ಬಳಿಕ ಸಿದ್ದರಾಮಯ್ಯ ಅವರು ಕೆಂಗಲ್ ಹನುಮಂತಯ್ಯ ಗೇಟ್ ಎಂದೇ ಕರೆಯಲಾಗುವ ವಿಧಾನಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೂಲಕ ಹೊರಬಂದರು. ಆದರೆ […]

Continue Reading

ಕಸ್ತೂರಿ ರಂಗನ್ ವರದಿ; ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರ ನೇಮಕ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್‌ ನಲ್ಲಿ ರಾಜ್ಯದ ಸ್ಪಷ್ಟ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರನ್ನು ನೇಮಿಸಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಂಗಳವಾರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಸಿಎಂ ಮಂಗಳವಾರ ಉತ್ತರಿಸಿದರು. ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು ಕಸ್ತೂರಿ ರಂಗನ್ ವರದಿ ಜಾರಿ ಹಿನ್ನೆಯಲ್ಲಿ ಕೇಂದ್ರ […]

Continue Reading

ಅಪಘಾತದಲ್ಲಿ ಗಾಯಗೊಂಡ ರಮಾನಾಥ ರೈ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಗೆ ಗಣ್ಯರ ಭೇಟಿ

ಮಂಗಳೂರು: ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈ ಅವರು, ದೇವರ ದಯೆ ಹಾಗೂ ಜನರ ಪ್ರಾರ್ಥನೆಯಿಂದ ಆರೋಗ್ಯವಾಗಿದ್ದೇನೆ ಎಂದು ಆಸ್ಪತ್ರೆಯಿಂದಲೇ ತಿಳಿಸಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸೋಮವಾರ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ರಮಾನಾಥ ರೈ ಹಾಗೂ ಅಪಘಾತದಲ್ಲಿ ಗಾಯಗೊಂಡಿರುವ ಅವರ ಆಪ್ತ ಸಹಾಯಕ ಡೆಂಜಿಲ್ ಮತ್ತು ಕಾರು […]

Continue Reading

ಕಸ್ತೂರಿರಂಗನ್ ವರದಿ ವಿಚಾರ: ವಿಧಾನಸಭೆಯಲ್ಲಿ ರಾಜಕೀಯ ಕಾವು; ಸರ್ವಪಕ್ಷ ನಿಯೋಗಕ್ಕೆ ಡಿಕೆಶಿ ಪ್ರಸ್ತಾಪ

ಬೆಂಗಳೂರು: ಕಸ್ತೂರಿರಂಗನ್ ವರದಿ ಜಾರಿ ವಿಚಾರ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನವೇ ಪ್ರಮುಖ ಚರ್ಚೆಗೆ ಕಾರಣವಾಯಿತು. ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶದ ರೈತರು, ಜನಸಾಮಾನ್ಯರು ಮತ್ತು ಪರಿಸರದ ಮೇಲೆ ವರದಿಯಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಸುದೀರ್ಘ ಚರ್ಚೆ ನಡೆಸಿದರು. ವರದಿ ವಿಚಾರದಲ್ಲಿ ರಾಜಕೀಯ ಬೇಡ: ಡಿಕೆಶಿ ಚರ್ಚೆ ಆರಂಭಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಸ್ತೂರಿರಂಗನ್ ವರದಿ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು. ಮಲೆನಾಡು ಹಾಗೂ ಪಶ್ಚಿಮ […]

Continue Reading