ಸಚಿವ ಸಂಪುಟದಲ್ಲಿ ಎಂಎಲ್ಸಿ ಐವನ್ ಡಿಸೋಜಗೆ ಸಚಿವ ಸ್ಥಾನ ನೀಡುವಂತೆ ಜಾರ್ಜ್ ಫರ್ನಾಂಡಿಸ್ ಆಗ್ರಹ

ಕಾರವಾರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಕ್ಯಾಥೊಲಿಕ್ ಅಸೋಸಿಯೇಶನ್ ಅಧ್ಯಕ್ಷ ಜಾರ್ಜ್ ಫರ್ನಾಂಡಿಸ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು, ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ಐವಾನ್ ಡಿಸೋಜಾ ದೀರ್ಘಕಾಲದಿಂದ ಹೋರಾಟ ನಡೆಸುತ್ತಿದ್ದಾರೆ. ಕಾನೂನು ತಜ್ಞರಾಗಿರುವ ಅವರು ಹಲವು ದಶಕಗಳ ರಾಜಕೀಯ ಅನುಭವ ಹೊಂದಿದ್ದು, ಶಿಕ್ಷಣ, ಆರೋಗ್ಯ, ನಿರುದ್ಯೋಗ ನಿವಾರಣೆ ಸೇರಿದಂತೆ ವಿವಿಧ […]

Continue Reading

ಜೆಇಇ ಅಡ್ವಾನ್ಸ್ : ಮೂಡುಬಿದಿರೆ ಆಳ್ವಾಸ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ, ಡಾ. ಮೋಹನ್ ಆಳ್ವ ಶ್ಲಾಘನೆ

ಮೂಡುಬಿದಿರೆ: ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಎಂಜಿನಿಯರಿAಗ್ ಶಿಕ್ಷಣದ ಪ್ರವೇಶಕ್ಕಾಗಿ ನಡೆಯುವ ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ 2026 ಪರೀಕ್ಷೆಯ ಫಲಿತಾಂಶದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 17 ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ ಶ್ರೇಷ್ಠ ಸಾಧನೆ ಮೆರೆದು ಗಮನ ಸೆಳೆದಿದ್ದಾರೆ. ಜನರಲ್ ಹಾಗೂ ಕೆಟಗರಿ ವಿಭಾಗದ ಅಖಿಲ ಭಾರತ ಮಟ್ಟದಲ್ಲಿ ಸ್ವಾತಿ ತಲವಾರ್ (1513 ರ‍್ಯಾಂಕ್) ಹರ್ಷವರ್ಧನ್ ಕೆಪಿ(1698 ರ‍್ಯಾಂಕ್), ಮೆಲ್ರೋಯ್ ಕ್ಯಾಸ್ಟಲಿನೋ(1733 ರ‍್ಯಾಂಕ್), ಕೃತಿಕ್ ಬಿ(1795 ರ‍್ಯಾಂಕ್), ನೀಲಾಂಬಿಕ(2223 ರ‍್ಯಾಂಕ್), ಮಾನಸ ಕೆಎಸ್(2935 ರ‍್ಯಾಂಕ್), ಪಿಯೂಷ್ […]

Continue Reading

ಕರಾವಳಿ ಭಾಗದ ಹಿರಿಯ ಶಾಸಕ ಯು.ಟಿ. ಖಾದರ್ ಗೆ ಬಹುತೇಕ ಸಚಿವ ಸ್ಥಾನ ಪಕ್ಕಾ!

ಮಂಗಳೂರು: ಹಾಲಿ ಸ್ಪೀಕರ್ ಆಗಿರುವ ಯು.ಟಿ. ಖಾದರ್ ಅವರಿಗೆ ಬಹುತೇಕ ಸಚಿವ ಸ್ಥಾನ ಫಿಕ್ಸ್ ಆಗಿದೆ ಎಂದು ಹೇಳಾಗುತ್ತಿದ್ದು, ಬುಧವಾರ ಬೆಳಿಗ್ಗೆ ಅವರು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಮಂತ್ರಿ ಆಗುವ ಎಲ್ಲ ಸಾಧ್ಯತೆ ಇವೆ ಎಂದು ಅವರು ಆಪ್ತ ಮೂಲಗಳು ತಿಳಿಸಿವೆ. ಯು.ಟಿ. ಖಾದರ್ ಅವರು ಸಿದ್ದರಾಮಯ್ಯ ಅವರ ಸರಕಾರದ ಅವಧಿಯ ವೇಳೆಯೇ ಮಂತ್ರಿ ಆಗಬೇಕು ಎಂಬ ಪ್ರಯತ್ನ ನಡೆಸಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಅವರಿಗೆ ಸ್ಪೀಕರ್ ಸ್ಥಾನ ಅಲಂಕರಿಸಬೇಕಾಯಿತು. […]

Continue Reading

ಉಡುಪಿ ತಾಯಿ–ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ, 8 ಕೆ.ಜಿ. ಗರ್ಭಕೋಶದ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: ಜಿಲ್ಲಾ ಸರ್ಜನ್ ಡಾ. ಅಶೋಕ್

ಉಡುಪಿ: ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 44 ವರ್ಷದ ಮಹಿಳೆಯ ಗರ್ಭಕೋಶದಲ್ಲಿದ್ದ ಬರೋಬ್ಬರಿ 8 ಕೆ.ಜಿ. ತೂಕದ ಫೈಬ್ರಾಯ್ಡ್ ಗಡ್ಡೆಯನ್ನು ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದು, ಇದೊಂದು ಸಾಧನೆಯೇ ಸರಿ ಎಂದು ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರು ತಿಳಿಸಿದರು. ಮಹಿಳೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಸಮಸ್ಯೆ ನಿವಾರಣೆಯಾಗದ ಹಿನ್ನೆಲೆಯಲ್ಲಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಆಗಮಿಸಿದ್ದರು. ವೈದ್ಯರು ಪರೀಕ್ಷಿಸಿದಾಗ ಅವರ […]

Continue Reading

ರಥಬೀದಿ ಕಾಲೇಜು ವಿದ್ಯಾರ್ಥಿಗಳಿಂದ ಬೀದಿ ನಾಟಕ; ಸಾರ್ವಜನಿಕರಲ್ಲಿ ಜಾಗೃತಿಯ ಹೆಜ್ಜೆ

ಮಂಗಳೂರು: ತೃತೀಯ ಲಿಂಗೀಯರ ಬದುಕಿನ ವಾಸ್ತವತೆ, ಅವರು ಸಮಾಜದಲ್ಲಿ ಎದುರಿಸುವ ತಾರತಮ್ಯ ಹಾಗೂ ಸಮಾನ ಹಕ್ಕುಗಳ ಅಗತ್ಯತೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಲಾಲ್‌ಬಾಗ್ ಆವರಣದಲ್ಲಿ ಪ್ರದರ್ಶಿಸಲಾದ ಬೀದಿ ನಾಟಕ ಸಾರ್ವಜನಿಕರ ಗಮನ ಸೆಳೆಯಿತು. ಡಾ. ಪಿ. ದಯಾನಂದ ಪೈ–ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಪಠ್ಯೇತರ ಚಟುವಟಿಕೆಯ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಾಟಕದಲ್ಲಿ ತೃತೀಯ ಲಿಂಗೀಯರು ಬಾಲ್ಯದಿಂದಲೇ ಅನುಭವಿಸುವ […]

Continue Reading

ಎಕ್ಸ್ ಪರ್ಟ್ ಪಿಯು ಕಾಲೇಜು: ಜೆಇಇ ಅಡ್ವಾನ್ಸ್ಡ್‌ನಲ್ಲಿ ವಿದ್ಯಾರ್ಥಿಗಳ ಸಾಧನೆಯ ಗರಿ

ಮಂಗಳೂರು: ದೇಶದ ಪ್ರತಿಷ್ಠಿತ ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆಗಳ (ಐಐಟಿ) ಪ್ರವೇಶಕ್ಕಾಗಿ ನಡೆದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಜನರಲ್ ಮೆರಿಟ್ ವಿಭಾಗದಲ್ಲಿ ಸುಹಾಸ್ ಬಸನಗೌಡ ಬಾಲನಗೌಡ್ರ 2,593ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅರಳೆ ವಿರೂಪಾಕ್ಷಿ 7,885 ನೇ ರ‍್ಯಾಂಕ್, ನಿಖಿಲ್ ಭೂಷಣ್ ಶ್ರೀನಿವಾಸ್ 9,150ನೇ ರ‍್ಯಾಂಕ್ ಹಾಗೂ ಪ್ರಖ್ಯಾತ್ ತಿರುಪತಿರಡ್ಡಿ ನೀಲಣ್ಣವರ್ 9,806 ನೇ ರ‍್ಯಾಂಕ್ ಗಳಿಸಿದ್ದಾರೆ. ಕ್ಯಾಟಗರಿ ವಿಭಾಗದಲ್ಲಿ […]

Continue Reading

ಶಾರದಾ ಪಿಯು ಕಾಲೇಜಿನಲ್ಲಿ ಮಾರ್ಗದರ್ಶನ ಕಾರ್ಯಕ್ರಮ, ಮೌಲ್ಯ ಶಿಕ್ಷಣದ ಪಾಠ ಮಾಡಿದ ಡಾ. ಎಂ.ಬಿ. ಪುರಾಣಿಕ್

ತಲಪಾಡಿ: ಶಾರದಾ ವಿದ್ಯಾನಿಕೇತನ ಪಿ.ಯು. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಆಯೋಜಿಸಿದ್ದ ಮಾರ್ಗದರ್ಶನ ಕಾರ್ಯಕ್ರಮ ಕಾಲೇಜಿನ ಭೂ ವರಾಹ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾರದಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗಾಗಿ ಕಠಿಣ ಪರಿಶ್ರಮ ಮತ್ತು ದೃಢ ಸಂಕಲ್ಪದೊಂದಿಗೆ ಅಧ್ಯಯನ ನಡೆಸಬೇಕು. ಸಂಸ್ಥೆ ಒದಗಿಸುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕೆಂದು ಕರೆ ನೀಡಿದರು. ನಿರ್ದೇಶಕ ಸಮೀರ್ ಪುರಾಣಿಕ್ […]

Continue Reading

ಮುಂಗಾರು ಎದುರಿಸಲು ಸಜ್ಜು, 115 ಕಡೆಗೆ ಕಾಳಜಿ ಕೇಂದ್ರ, ತುರ್ತು ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್‌ , ಎಸ್‌ಡಿಆರ್‌ಎಫ್‌ ತಂಡ: ಜಿಲ್ಲಾಧಿಕಾರಿ ದರ್ಶನ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ಎದುರಿಸಲು ಜಿಲ್ಲಾಡಳಿತ ಸಮರೋಪಾದಿಯಲ್ಲಿ ಸಿದ್ಧತೆ ನಡೆಸಿದೆ. ಜಿಲ್ಲೆಯ 92 ಭೂಕುಸಿತ ಸಂಭವನೀಯ ಪ್ರದೇಶಗಳನ್ನು ಗುರುತಿಸಲಾಗಿದ್ದು, ತುರ್ತು ರಕ್ಷಣಾ ಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಡಿ 91 ಶಾಲಾ ಕಟ್ಟಡಗಳು ಹಾಗೂ 137 ಅಂಗನವಾಡಿ ಕೇಂದ್ರಗಳ ದುರಸ್ತಿಗೆ ಅನುಮೋದನೆ ನೀಡಲಾಗಿದೆ. ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಮೂಲಕ […]

Continue Reading

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ, ಜೂನ್ 1 ರಿಂದಲೇ ಎಫೆಕ್ಟ್, ತಿಂಡಿ ಬೆಲೆ ಏರಿಕೆ ಸಾಧ್ಯತೆ!

ಬೆಂಗಳೂರು: ಇಂಧನ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಮತ್ತೆ ಜನರಿಗೆ ಬೆಲೆ ಏರಿಕೆ ಬಿಸಿ ಮುಟ್ಟಲಿದೆ. 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 ರೂಪಾಯಿಗಳು ಹೆಚ್ಚಳ ಆಗಿದೆ. ಪರಿಷ್ಕೃತ ದರ ಜೂನ್ 1 ರಿಂದಲೇ ಅಸ್ತಿತ್ವಕ್ಕೆ ಬಂದಿದೆ. ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂಪಾಯಿಗೆ ಏರಿಕೆ ಆಗಿದೆ. ಹೋಟೆಲ್, ರೆಸ್ಟೋರೆಂಟ್ ಮತ್ತು ಉದ್ಯಮಗಳಿಗೆ ಈ ದರ ಏರಿಕೆ ಇನ್ನಷ್ಟು ಆರ್ಥಿಕ ಹೊರೆಯಾಗಿ ಪರಿಣಮಿಸಲಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ […]

Continue Reading

ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ಗೆ ತೆರೆ: ಸರ್ಫಿಂಗ್ ಓಪನ್‌ನಲ್ಲಿ ಕಮಲಿ ಮೂರ್ತಿಗೆ ಡಬಲ್ ಕಿರೀಟ

ಮಂಗಳೂರು: ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಅಂತಿಮ ದಿನ ತಮಿಳುನಾಡಿನ ಯುವ ಸರ್ಫರ್ ಕಮಲಿ ಮೂರ್ತಿ ಮಹಿಳೆಯರ ಓಪನ್ ಹಾಗೂ 18 ವರ್ಷ ವಯೋಮಿತಿಯೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಡಬಲ್ ಸಾಧನೆ ಮಾಡಿದ್ದಾರೆ. ಪುರುಷರ ಓಪನ್ ವಿಭಾಗದಲ್ಲಿ ತಮಿಳುನಾಡಿನ ಕಿಶೋರ್ ಕುಮಾರ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, 18 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಥ್ವೀಪ್ ಪೂಜಾರ್ ಗೆದ್ದು ಕರ್ನಾಟಕಕ್ಕೆ ಟೂರ್ನಿಯ ಏಕೈಕ ಪ್ರಶಸ್ತಿ ತಂದುಕೊಟ್ಟರು. 14 ವರ್ಷದೊಳಗಿನ (ಗ್ರೋಮ್ಸ್) ವಿಭಾಗದಲ್ಲಿ ಹರೀಶ್ ಪಿ ಮತ್ತು ಧಮಯಂತಿ […]

Continue Reading