ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ : ಅಲೆಗಳ ವಯ್ಯಾರ ಅಬ್ಬರದಲ್ಲಿ ಸರ್ಫರ್ ಗಳ ತೀವ್ರ ಹಣಾಹಣಿ

ಮಂಗಳೂರು: ಇಲ್ಲಿನ ತಣ್ಣೀರು ಭಾವಿಯಲ್ಲಿ ನಡೆಯುತ್ತಿರುವ 7 ನೇ ಆವೃತ್ತಿಯ ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಸ್ಪರ್ಧೆಯ 2ನೇ ದಿನ ಪುರುಷರ ಓಪನ್ ವಿಭಾಗದ ಸೆಮಿಫೈನಲಿಸ್ಟ್‌ಗಳು ಭರ್ಜರಿ ಪ್ರದರ್ಶನ ನೀಡಿದರು. ಶನಿವಾರ ನಡೆದ ಐದು ವಿಭಾಗಗಳಲ್ಲಿ ಒಟ್ಟು ಆರು ಕ್ವಾರ್ಟರ್‌ಫೈನಲ್ ಹಾಗೂ ಆರು ಸೆಮಿಫೈನಲ್ ಪಂದ್ಯಗಳು ನಡೆದವು. ಪುರುಷರ ಮುಕ್ತ ವಿಭಾಗದ ಕ್ವಾರ್ಟರ್‌ ಫೈನಲ್‌ ನಲ್ಲಿ ಕೇರಳದ ರಮೇಶ್ ಬೂದಿಹಾಳ್ 14.83 ಅಂಕ ಗಳಿಸಿ ಅಗ್ರಸ್ಥಾನ ದಾಖಲಿಸಿದರು. ಶ್ರೀಕಾಂತ್ ಡಿ 13 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, […]

Continue Reading

ಸೇವೆಯಲ್ಲಿ ಇರುವ ಶಿಕ್ಷಕರಿಗೂ ಟಿಇಟಿ ಕಡ್ಡಾಯ, ಮರುಪರಿಶೀಲನಾ ಅರ್ಜಿಗಳ ವಜಾ; 2028 ರ ಅಗಸ್ಟ್‌ 31 ರವರೆಗೆ ಸುಪ್ರೀಂ ಗಡುವು ವಿಸ್ತರಣೆ

ನವದೆಹಲಿ: ಸೇವೆಯಲ್ಲಿ ಇರುವ ಶಿಕ್ಷಕರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕಡ್ಡಾಯ ಎಂಬ ತನ್ನ ಹಿಂದಿನ ತೀರ್ಪ ಅನ್ನು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಎತ್ತಿ ಹಿಡಿದಿದೆ. 2025ರ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ನ್ಯಾಯಾಲಯ, ಟಿಇಟಿ ಅರ್ಹತೆ ಪಡೆಯಲು ಶಿಕ್ಷಕರಿಗೆ 2028 ರ ಅಗಸ್ಟ್‌ 31 ರವರೆಗೆ ಕಾಲಾವಕಾಶ ನೀಡಿದೆ. ಮಕ್ಕಳ ಗುಣಮಟ್ಟದ ಶಿಕ್ಷಣದ ಹಕ್ಕು ಸಂರಕ್ಷಿಸುವ ದೃಷ್ಟಿಯಿಂದ ಟಿಇಟಿ ಅಗತ್ಯವಾಗಿದ್ದು, ನಿಗದಿತ ಅವಧಿಯೊಳಗೆ ಅರ್ಹತೆ ಪಡೆಯದ ಶಿಕ್ಷಕರು ಸೇವೆಯಲ್ಲಿ ಮುಂದುವರಿಯಲು ಅವಕಾಶವಿರುವುದಿಲ್ಲ ಎಂದು […]

Continue Reading

ಸೆಮಿಕಂಡಕ್ಟರ್ ಶಿಕ್ಷಣಕ್ಕೆ ಮಂಗಳೂರಿನ ಸಹ್ಯಾದ್ರಿ ಕಾಲೇಜು–ಅನ್ಮಯ ಟೆಕ್ನಾಲಜೀಸ್ ಒಪ್ಪಂದ

ಮಂಗಳೂರು: ಸೆಮಿಕಂಡಕ್ಟರ್‌ ಕೇಂದ್ರಿತ ತಾಂತ್ರಿಕ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್‌ (ಎಸ್‌ಸಿಇಎಂ)ನ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗವು ಅನ್ಮಯ ಟೆಕ್ನಾಲಜೀಸ್ ಸಂಸ್ಥೆಯೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದೆ. ಎಫ್ ಪಿಜಿಎ -ಸ್ಥಳೀಯ ಮತ್ತು ಎಂಬೆಡೆಡ್ ಹಾರ್ಡ್‌ವೇರ್ ಪರಿಹಾರಗಳಲ್ಲಿ ಪರಿಣತಿ ಹೊಂದಿರುವ ಅನ್ಮಯ ಟೆಕ್ನಾಲಜೀಸ್ ಜತೆಗೆ ಮಾಡಿಕೊಂಡಿರುವ ಈ ಸಹಭಾಗಿತ್ವವು ವಿದ್ಯಾರ್ಥಿಗಳಿಗೆ ಸೆಮಿಕಂಡಕ್ಟರ್ ತಂತ್ರಜ್ಞಾನ, ವಿಎಲ್ ಎಸ್ ಐ ವಿನ್ಯಾಸ, ಎಫ್ ಪಿಜಿಎ ಅಭಿವೃದ್ಧಿ, ಎಂಬೆಡೆಡ್ ಸಿಸ್ಟಮ್‌, […]

Continue Reading

ಮೂಳೆ ಇಂಪ್ಲಾಂಟ್‌ಗೆ ಎನ್‌ಐಟಿಕೆ ಸಂಶೋಧಕರಿಂದ ಹೊಸ ಲೇಪನ ತಂತ್ರಜ್ಞಾನ, ಮೇಕ್ ಇನ್ ಇಂಡಿಯಾ ಪೇಟೆಂಟ್ ಮಾನ್ಯತೆ ಗರಿ

ಸುರತ್ಕಲ್: ಇಲ್ಲಿನ ಸುರತ್ಕಲ್‌ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿಕೆ) ಸಂಶೋಧಕರು ಮೂಳೆ ಇಂಪ್ಲಾಂಟ್‌ಗಳಿಗಾಗಿ ಜೈವಿಕ ಸಕ್ರಿಯ, ಬಾಳಿಕೆ ಬರುವ ಹಾಗೂ ಆಂಟಿಮೈಕ್ರೊಬಿಯಲ್ ಗುಣ ಲಕ್ಷಣ ಹೊಂದಿರುವ ಸುಧಾರಿತ ಲೇಪನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಸೊಂಟ ಹಾಗೂ ಮೊಣಕಾಲು ಕೀಲು ಬದಲಿ ಮಾಡುವಲ್ಲಿ ಬಳಸಬಹುದಾದ ಈ ತಂತ್ರಜ್ಞಾನಕ್ಕೆ ಪೇಟೆಂಟ್ ದೊರೆತಿದ್ದು, ಸ್ಥಳೀಯ ಬಯೋಮೆಡಿಕಲ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಎಂದು ಪರಿಗಣಿಸಲಾಗಿದೆ. ಇಂಪ್ಲಾಂಟ್‌ಗೆ ಸಂಬಂಧಿಸಿದ ಸೋಂಕು, ಇಂಪ್ಲಾಂಟ್ ಸಡಿಲಗೊಳ್ಳುವಿಕೆ ಹಾಗೂ ದೀರ್ಘಕಾಲೀನ ಕಾರ್ಯಕ್ಷಮತೆಯ ಸವಾಲುಗಳನ್ನು ಮನಗಂಡು ಸಂಶೋಧನಾ ತಂಡ ಈ […]

Continue Reading

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ನಮ್ಮ ಮೂಡುಬಿದಿರೆ, ನೇತಾಜಿ ಬ್ರಿಗೇಡ್, ಜೆಸಿಐ, ಮೂಡುಬಿದಿರೆ ಬಂಟರ ಮಹಿಳಾ ಸಂಘದ ಸದಸ್ಯರು ಭಾನುವಾರ ವಿದ್ಯಾಗಿರಿ-ಹನ್ಡೇಲು ಹಾಗೂ ವಿದ್ಯಾಗಿರಿ-ಪುತ್ತಿಗೆ ಪರಿಸರದ 5.5 ಕಿಮೀ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಸ್ವಚ್ಛ ಸಂಕಲ್ಪ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನ ಅಧ್ಯಕ್ಷ ಅಶೋಕ ಅಡ್ಯಂತಾಯ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿ, ಸ್ವಚ್ಛತೆ ಎನ್ನುವುದು ಆರೋಗ್ಯಕರ ಸಮಾಜದ ಅಡಿಪಾಯ. ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಹೌದು. ಇದೇ ಉದ್ದೇಶವನ್ನು ಮನಗಂಡು ಮೂಡುಬಿದಿರೆಯಲ್ಲಿ […]

Continue Reading

ಮಂಗಳೂರಿನಲ್ಲಿ ಶೀಘ್ರವೇ ಮೆಗಾ ಜಾಬ್ ಫೇರ್: ಕೌಶಲ್ಯಾಭಿವೃದ್ಧಿ , ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಮಂಗಳೂರು: ಕರಾವಳಿ ಕರ್ನಾಟಕದ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ಶೀಘ್ರದಲ್ಲೇ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದರು. ನಗರದ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ) ನೂತನ ಕಟ್ಟಡ ಉದ್ಘಾಟಿಸಿ ಶನಿವಾರ ಮಾತನಾಡಿದ ಅವರು, ಕರಾವಳಿ ಭಾಗದ ಮೂರು ಜಿಲ್ಲೆಗಳ ಯುವಕರನ್ನು ಕೇಂದ್ರೀಕರಿಸಿ ಉದ್ಯೋಗ ಮೇಳ ನಡೆಸಲಾಗುವುದು. ರಾಜ್ಯದ ವಿವಿಧೆಡೆ ನಡೆದ ಉದ್ಯೋಗ ಮೇಳಗಳಿಂದ ಇದುವರೆಗೆ 30 ಸಾವಿರಕ್ಕೂ ಅಧಿಕ […]

Continue Reading

ಸಹ್ಯಾದ್ರಿಯಲ್ಲಿ ಇಂಡಸ್ಟ್ರಿ ಇಂಟಿಗ್ರೇಟೆಡ್ ಸೆಂಟರ್ ಉದ್ಘಾಟನೆ, ಕೌಶಲ್ಯಾಭಿವೃದ್ಧಿಗೆ ಆದ್ಯತೆ: ಸಚಿವ ಡಾ. ಶರಣಪ್ರಕಾಶ್

ಮಂಗಳೂರು: ಪದವೀಧರರಲ್ಲಿ ಹೆಚ್ಚುತ್ತಿರುವ ಕೌಶಲ್ಯ ಅಂತರವನ್ನು ನಿವಾರಿಸಲು ಕೈಗಾರಿಕಾ–ಸಂಯೋಜಿತ ಕೇಂದ್ರಗಳು ಪರಿಣಾಮಕಾರಿಯಾಗಲಿವೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಹೇಳಿದರು. ಉದ್ಯಮ ಮತ್ತು ಶಿಕ್ಷಣ ಕ್ಷೇತ್ರಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ ವಿವಿಧ ಇಂಡಸ್ಟ್ರಿ ಇಂಟಿಗ್ರೇಟೆಡ್ ಸೆಂಟರ್‌ಗಳನ್ನು ಶನಿವಾರ ಅವರು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳನ್ನು ಉದ್ಯಮಕ್ಕೆ ಸಿದ್ಧಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಪಠ್ಯಕ್ರಮ ಪುನರ್‌ರಚನೆಗೆ ಕ್ರಮ ಕೈಗೊಂಡಿದೆ. ಸಹ್ಯಾದ್ರಿ ಕಾಲೇಜು ಹಲವು […]

Continue Reading

ಕೌಶಲಾಭಿವೃದ್ಧಿ, ಪ್ರಾಯೋಗಿಕ ಕೌಶಲಕ್ಕೆ ಹೆಚ್ಚು ಆದ್ಯತೆ ನೀಡಬೇಕು: ಸಚಿವ ಡಾ. ಎಂ.ಸಿ. ಸುಧಾಕರ್

ಮಂಗಳೂರು: ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಕೇವಲ ಸೈದ್ಧಾಂತಿಕ ಕಲಿಕೆಗೆ ಸೀಮಿತವಾಗದೆ, ಕೌಶಲಾಭಿವೃದ್ಧಿ ಹಾಗೂ ಪ್ರಾಯೋಗಿಕ ಅನುಭವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು. ನಗರದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ನಲ್ಲಿ ಶುಕ್ರವಾರ ಆಯೋಜಿಸಿದ್ದ ಅತ್ಯಾಧುನಿಕ ಎಐ (ಕೃತಕ ಬುದ್ಧಿಮತ್ತೆ) ಮತ್ತು ರೊಬಾಟಿಕ್ಸ್ ಲ್ಯಾಬ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಂಫಸಿಸ್ ಫೌಂಡೇಷನ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಹಾಗೂ ನ್ಯಾಸ್‌ಕಾಮ್ ಫೌಂಡೇಷನ್ ಸಹಯೋಗದಲ್ಲಿ ಈ […]

Continue Reading

15 ಸಾವಿರ ಶಿಕ್ಷಕರ ನೇಮಕಕ್ಕೆ ಆರ್ಥಿಕ ಇಲಾಖೆಗೆ ಕೂಡಲೇ ಪ್ರಸ್ತಾವ ಸಲ್ಲಿಸಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜೂನ್ 1ರಂದು ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುವುದು, ಕರ್ನಾಟಕ ಪಬ್ಲಿಕ್ ಸ್ಕೂಲ್, ಶಿಕ್ಷಕರ ನೇಮಕಾತಿ, ಪರೀಕ್ಷಾ ಫಲಿತಾಂಶ ಸುಧಾರಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಜತೆಗೆ ಚರ್ಚೆ ನಡೆಸಿ ಮಾತನಾಡಿದ ಅವರು, ಒಂದು ಕೆಪಿಎಸ್ ಶಾಲೆಯಲ್ಲಿ […]

Continue Reading

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕೇಂದ್ರದ ವೈಫಲ್ಯ, ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಚೆಲ್ಲಾಟ: ರಮಾನಾಥ ರೈ ಆಕ್ರೋಶ

ಮಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವೈಫಲ್ಯವನ್ನು ಕೇಂದ್ರ ಸರಕಾರ ಹೊರಬೇಕಾಗಿದೆ. ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವಲ್ಲಿ ವಿಫಲವಾಗಿರುವ ಕೇಂದ್ರದ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. 2020 ರಿಂದಲೂ ಹಲವು ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕಂಡಿರುವ ಬಗ್ಗೆ ಸುದ್ದಿ ಆಗಿತ್ತು. ಈ ವೇಳೆ ಈ ರೀತಿ ಆಗದಂತೆ ಕ್ರಮ ತೆಗೆದುಕೊಳ್ಳುವುದಾಗಿ ಅಗತ್ಯ ತನಿಖೆ ನಡೆಸುವ ಬಗ್ಗೆ ಕೇಂದ್ರ ಸರಕಾರ […]

Continue Reading