ಭಾರೀ ಮಳೆ ಮುನ್ಸೂಚನೆ: ದ. ಕ ಜಿಲ್ಲೆಯ ಶಾಲೆ, ಅಂಗನವಾಡಿಗಳಿಗೆ ಅ. 4 ರಂದು ರಜೆ: ಡಿಸಿ ದರ್ಶನ್

ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಶಾಲೆಗಳು, ಅಂಗನವಾಡಿಗಳು ಹಾಗೂ ಕೆಲವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅ. 4ರಂದು ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ. ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ ಮತ್ತು ಉಳ್ಳಾಲ ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಎಲ್ಲಾ ವಸತಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪುತ್ತೂರು ಉಪವಿಭಾಗ ವ್ಯಾಪ್ತಿಯ […]

Continue Reading

ಸಾವಿರಾರು ಉದ್ಯೋಗಗಳ ಅವಕಾಶ: ಅ. 7-8ರಂದು ಮೂಡುಬಿದಿರೆಯಲ್ಲಿ ‘ಆಳ್ವಾಸ್ ಪ್ರಗತಿ-2026’: ಪ್ರಸಾದ ಶೆಟ್ಟಿ

ಕಾರವಾರ: ಉದ್ಯೋಗದ ನಿರೀಕ್ಷೆಯಲ್ಲಿ ಇರುವ ಪದವೀಧರರು, ತಾಂತ್ರಿಕ ಶಿಕ್ಷಣ ಪಡೆದವರು ಹಾಗೂ ಅನುಭವಿ ಅಭ್ಯರ್ಥಿಗಳಿಗೆ ಒಂದೇ ವೇದಿಕೆಯಲ್ಲಿ ಸಾವಿರಾರು ಉದ್ಯೋಗಾವಕಾಶಗಳನ್ನು ಕಲ್ಪಿಸುವ ‘ಆಳ್ವಾಸ್ ಪ್ರಗತಿ-2026’ ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. ದೇಶದ ವಿವಿಧ ಕ್ಷೇತ್ರಗಳ 350ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 24 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ […]

Continue Reading

ಕರ್ನಾಟಕ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ ಕೀ ಉತ್ತರ ಬಿಡುಗಡೆ: ಮಂಗಳೂರು ಐಎಎಸ್ ಸಂಸ್ಥೆಯ ಸಂತೋಷ್ ಕುಮಾರ್

ಮಂಗಳೂರು: ಕರ್ನಾಟಕ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಯ ಲಿಖಿತ ಪರೀಕ್ಷೆ ಭಾನುವಾರ ನಡೆದ ಬೆನ್ನಲ್ಲೇ, ನಗರದ ಮಂಗಳೂರು ಐಎಎಸ್ ಸಂಸ್ಥೆಯು ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಇದರಿಂದ ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು ಪರಿಶೀಲಿಸಿಕೊಂಡು ಸಂಭವನೀಯ ಅಂಕಗಳನ್ನು ಅಂದಾಜಿಸಿಕೊಳ್ಳಲು ಅವಕಾಶ ಸಿಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಪರೀಕ್ಷೆ ಮುಗಿದ ಕೂಡಲೇ ಸಂಸ್ಥೆಯ ವಿಷಯ ತಜ್ಞರು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿ ಉತ್ತರ ಕೀ ಸಿದ್ಧಪಡಿಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪರೀಕ್ಷಾರ್ಥಿಗಳು ಮಂಗಳೂರು ಐಎಎಸ್ ಕ್ಯಾಂಪಸ್‌ಗೆ […]

Continue Reading

ಎಸ್‌ಐಆರ್‌ಗೆ ಸ್ವೀಪ್ ಜಾಗೃತಿ ಟಚ್ ಅಪ್, 40 ಸಾವಿರಕ್ಕೂ ಅಧಿಕ ಜನರು ನೇರ ಭಾಗಿ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ಹಮ್ಮಿಕೊಂಡ ವಿವಿಧ ಜಾಗೃತಿ ಕಾರ್ಯಕ್ರಮಗಳಿಗೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ದೊರೆತಿದ್ದು, 40 ಸಾವಿರಕ್ಕೂ ಅಧಿಕ ಮಂದಿ ನೇರವಾಗಿ ಭಾಗವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಜಿಲ್ಲಾ […]

Continue Reading

20 ಕೇಂದ್ರಗಳಲ್ಲಿ ಪೊಲೀಸ್ ಕಾನ್ ಸ್ಟೆಬಲ್ ಪರೀಕ್ಷೆ, ಸಿಸಿಟಿವಿ, ವೆಬ್‌ಕಾಸ್ಟಿಂಗ್‌, ಎಐ ತಂತ್ರಜ್ಞಾನ ಬಳಕೆ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಪೊಲೀಸ್ ಸಿವಿಲ್ ಕಾನ್ ಸ್ಟೆಬಲ್ ನೇರ ನೇಮಕಾತಿ ಪರೀಕ್ಷೆ ಸಂಪೂರ್ಣ ಪಾರದರ್ಶಕ ಹಾಗೂ ಅಕ್ರಮ ಮುಕ್ತವಾಗಿ ನಡೆಸಲು ಎಲ್ಲ ಅಧಿಕಾರಿಗಳು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರದ 15 ಹಾಗೂ ಅಂಕೋಲಾದ 5 ಸೇರಿ ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 6,475 ಅಭ್ಯರ್ಥಿಗಳು ಹಾಜರಾಗಲಿದ್ದಾರೆ ಎಂದರು. ಎಲ್ಲಾ […]

Continue Reading

ಶಾಲೆ–ಕಾಲೇಜುಗಳ ಬಳಿ ಜಂಕ್ ಫುಡ್‌ಗೆ ಬ್ರೇಕ್: ಇಲಾಖೆಯ ಅಧಿಕೃತ ಆದೇಶ

ಬೆಂಗಳೂರು: ವಿದ್ಯಾರ್ಥಿಗಳಿಗೆ ಸುರಕ್ಷಿತ, ಗುಣಮಟ್ಟಯುತ ಹಾಗೂ ಆರೋಗ್ಯಕರ ಆಹಾರ ಲಭ್ಯ ಆಗುವಂತೆ ಮಾಡಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯೂ ಶಾಲೆ–ಕಾಲೇಜುಗಳ ಆವರಣ ಹಾಗೂ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್‌ ಮತ್ತು ಅನಾರೋಗ್ಯಕರ ಆಹಾರ ಮಾರಾಟ ಮಾಡದಂತೆ ಅಧಿಕೃತ ಆದೇಶ ಹೊರಡಿಸಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮಾರ್ಗಸೂಚಿಯಂತೆ ಈ ಕ್ರಮ ಜುಲೈ 21 ರಿಂದ ಜಾರಿಗೆ ಬಂದಿದೆ ಎಂದು ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಜುಲೈ ತಿಂಗಳಲ್ಲಿ ರಾಜ್ಯದ […]

Continue Reading

ಗ್ರಾಮೀಣ ಉದ್ಯೋಗ ವಂಚಿತರಿಗೆ ವರದಾನ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ, ಅ. 7, 8 ಮೇಳ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ

ಮಂಗಳೂರು: ಉದ್ಯೋಗಾಕಾಂಕ್ಷಿ ಯುವಕರಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ದೊರಕಿಸಲು ಹಾಗೂ ಉದ್ಯಮ ಸಂಸ್ಥೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ–2026’ ಬೃಹತ್ ಉದ್ಯೋಗ ಮೇಳವು ಅ. 7 ಮತ್ತು 8 ರಂದು ಮೂಡುಬಿದಿರೆ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. 2007 ರಲ್ಲಿ ಆರಂಭಗೊಂಡ ಈ ಉದ್ಯೋಗ ಮೇಳವು ದೇಶದ ಅತಿದೊಡ್ಡ ಉದ್ಯೋಗ ಮೇಳಗಳಲ್ಲಿ ಒಂದಾಗಿ ಬೆಳೆದಿದ್ದು, ಸಾವಿರಾರು ಅಭ್ಯರ್ಥಿಗಳಿಗೆ ಉದ್ಯೋಗದ ಕನಸು ನನಸಾಗಿಸುವ ವೇದಿಕೆ ಆಗಿದೆ […]

Continue Reading

ಶಾಸಕ ಯಶ್ ಪಾಲ್ ಸುವರ್ಣ ಹೇಳಿಕೆ, ತಕ್ಷಣವೇ ಹಿಂಪಡೆಯಬೇಕು: ಮಮತಾ ಗಟ್ಟಿ ಆಗ್ರಹ

ಮಂಗಳೂರು: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ನೀಡಿರುವ ಹೇಳಿಕೆ ರಾಜಕೀಯ ಸಂಸ್ಕೃತಿಗೆ ಧಕ್ಕೆ ತರುವಂತಿದ್ದು, ಅದನ್ನು ತಕ್ಷಣವೇ ಹಿಂಪಡೆದು ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ವ್ಯಕ್ತಿಯ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಆರೋಪಗಳನ್ನು ಮಾಡುವುದು ಅತ್ಯಂತ ಖಂಡನೀಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಜನಪ್ರತಿನಿಧಿಗಳು ವೈಯಕ್ತಿಕ ನಿಂದನೆಗಳಲ್ಲಿ […]

Continue Reading

500 ಕ್ಕೂ ಅಧಿಕ ಅಂಕ ಪಡೆದ ನೀಟ್ ಸಾಧಕರಿಗೆ ಎಕ್ಸಲೆಂಟ್ ಕಾಲೇಜಿನಲ್ಲಿ ಸನ್ಮಾನ

ಮೂಡುಬಿದಿರೆ: ನೀಟ್ ಪರೀಕ್ಷೆಯಲ್ಲಿ 500 ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನ ರಾಜ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರು ಮಾತನಾಡಿ, ವಿದ್ಯಾರ್ಥಿಯ ಸಾಮರ್ಥ್ಯವನ್ನು ಕೇವಲ ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ ನಿರ್ಧರಿಸಲು ಸಾಧ್ಯವಿಲ್ಲ. ಸೂಕ್ತ ಮಾರ್ಗದರ್ಶನ, ಶಿಸ್ತುಬದ್ಧ ಶಿಕ್ಷಣ ವ್ಯವಸ್ಥೆ ಹಾಗೂ ನಿರಂತರ ಪ್ರೋತ್ಸಾಹ ದೊರೆತರೆ ಸಾಮಾನ್ಯ ವಿದ್ಯಾರ್ಥಿಯೂ ರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಬಹುದು ಎಂದರು. ಸಂಸ್ಥೆಯ […]

Continue Reading

ಕ್ರಿಮ್ಸ್‌ಗೆ 200 ಎಂಬಿಬಿಎಸ್ ಸೀಟುಗಳ ಅನುಮೋದನೆ: 2026-27 ರಿಂದ ಹೆಚ್ಚುವರಿ ಪ್ರವೇಶ, ಹೊಸ ಆರೋಗ್ಯ ವಿಜ್ಞಾನ ಕೋರ್ಸ್‌

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್)ಗೆ ಮಹತ್ವದ ಉತ್ತೇಜನ ದೊರೆತಿದ್ದು, 2026-27ನೇ ಶೈಕ್ಷಣಿಕ ವರ್ಷದಿಂದ ಒಟ್ಟು 200 ಎಂಬಿಬಿಎಸ್ ಸೀಟುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ), ನವದೆಹಲಿಯಿಂದ ಅನುಮೋದನೆ ಲಭಿಸಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕಿ ಡಾ. ಪೂರ್ಣಿಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗೆ ಕ್ರಿಮ್ಸ್‌ಗೆ 150 ಎಂಬಿಬಿಎಸ್ ಸೀಟುಗಳಿಗೆ ಮಾತ್ರ ಅನುಮತಿ ಇದ್ದು, ಇದೀಗ ಹೆಚ್ಚುವರಿ 50 ಸೀಟುಗಳನ್ನು ಮಂಜೂರು ಮಾಡಲಾಗಿದೆ. ಇದರಿಂದ ಮುಂದಿನ […]

Continue Reading