ಜನವರಿಯಲ್ಲಿ ಆಳ್ವಾಸ್ ನುಡಿಸಿರಿ–ವಿರಾಸತ್: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ ರಾಷ್ಟ್ರಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ಆಳ್ವಾಸ್ ನುಡಿಸಿರಿ–ವಿರಾಸತ್ ಅನ್ನು ಮುಂಬರುವ ವರ್ಷದ ಜನವರಿಯಲ್ಲಿ ಅದ್ದೂರಿಯಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಬಾರಿ ನುಡಿಸಿರಿ ಮತ್ತು ವಿರಾಸತ್ ಉತ್ಸವಗಳನ್ನು ಒಂದೇ ವೇದಿಕೆಯಲ್ಲಿ ನಡೆಸುವ ಮೂಲಕ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟ ಸಂಗಮಕ್ಕೆ ವೇದಿಕೆ ಕಲ್ಪಿಸಲಾಗುತ್ತಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರ ಸ್ವಗೃಹದಲ್ಲಿ ನಡೆದ ಪ್ರಾಥಮಿಕ ಸಮಾಲೋಚನಾ ಸಭೆಯಲ್ಲಿ ಉತ್ಸವದ ರೂಪುರೇಷೆಗಳ ಕುರಿತು ಸುದೀರ್ಘ […]

Continue Reading

ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ, ಯೋಧರ ತ್ಯಾಗದ ಸ್ಮರಣೆ

ಮಂಗಳೂರು: ಶಕ್ತಿನಗರದಲ್ಲಿ ಇರುವ ಶಕ್ತಿ ವಿದ್ಯಾ ಸಂಸ್ಥೆಯ ರೆಸಿಡೆನ್ಶಿಯಲ್ ಶಾಲೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್‌ವನ್ನು ದೇಶಭಕ್ತಿ ಮತ್ತು ಸೈನಿಕರ ತ್ಯಾಗದ ಸ್ಮರಣೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ದೀಪ ಬೆಳಗಿಸಿ, ಕಾರ್ಗಿಲ್ ವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಅವರು ಮಾತನಾಡಿ, ದೇಶದ […]

Continue Reading

ನೀಟ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿಗೆ ಉತ್ತಮ ಸಾಧನೆ

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಫಲಿತಾಂಶದಲ್ಲಿ ಮೂಡುಬಿದಿರೆ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಕಾಲೇಜಿನ ನಿಖಿಲ್ ಎಸ್.ಎಸ್. 720 ಕ್ಕೆ 650 ಅಂಕ ಗಳಿಸಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ತಿಳಿಸಿದ್ದಾರೆ. ನಿಖಿಲ್ ಅವರ ಬಳಿಕ ತನ್ಮಯಿ ಎ. ಕೋಟಿ 647, ಚಿನ್ಮಯಿ ಬೆಳ್ಳೂರು 629, ಹೇಮಾ ಯು. 624, ಶ್ಲೋಕ್ ರಾಘವೇಂದ್ರ ರಾವ್ 615, ಈಶ್ವರ ಪುಂಡಲೀಕಪ್ಪ ಕೊಪ್ಪಲ್ 612 ಹಾಗೂ ಮೋಹಿತ್ ವೈ.ಪಿ. 611 ಅಂಕಗಳನ್ನು […]

Continue Reading

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ, ಜುಲೈ 25ಕ್ಕೆ ರಜೆ ಘೋಷಣೆ: ಡಿಸಿ ದರ್ಶನ್

ಮಂಗಳೂರು:  ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲೆಯ   ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು, ಡಿಪ್ಲೋಮಾ, ಐಟಿಐ ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಿಸಿ  ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.

Continue Reading

ಶ್ರೀನಿವಾಸ ವಿವಿಯಲ್ಲಿ ಎಐ ತಂತ್ರಜ್ಞಾನದ ಸಂಚಲನ: ಸ್ವಯಂಚಾಲಿತ ವಿದ್ಯುತ್ ವಾಹನ, ‘ಶ್ರೀನಿಬೋಟ್’ ರೋಬೋಟ್ ಅನಾವರಣ

ಮಂಗಳೂರು: ಕೃತಕ ಬುದ್ಧಿಮತ್ತೆ ರೋಬೋಟಿಕ್ಸ್ ಹಾಗೂ ಸ್ವಯಂಚಾಲಿತ ತಂತ್ರಜ್ಞಾನ ಕ್ಷೇತ್ರದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಮಹತ್ವದ ಸಾಧನೆ ದಾಖಲಿಸಿದ್ದಾರೆ. ಮುಕ್ಕ ಕ್ಯಾಂಪಸ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಶ್ರೀ ವಾಹನ್’ ಎಐ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ ಹಾಗೂ ಶ್ರೀನಿಬೋಟ್’ ಎಐ ರಿಸೆಪ್ಷನ್ ರೋಬೋಟ್** ಅನ್ನು ಯಶಸ್ವಿಯಾಗಿ ಪ್ರದರ್ಶಿಸಲಾಯಿತು. ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಆರ್ಥಿಕ ನೆರವು ಹಾಗೂ ಅಧ್ಯಾಪಕರ ಮಾರ್ಗದರ್ಶನದಲ್ಲಿ ರೂಪುಗೊಂಡಿರುವ ಈ ಯೋಜನೆಗಳು ಸಂಶೋಧನೆ, ನವೋದ್ಯಮ ಮತ್ತು […]

Continue Reading

ದೇಶದ ಮೊದಲ ಐಬಿಎಂ ಎಐ ಲ್ಯಾಬ್‌ಗೆ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚಾಲನೆ

ಮೂಡುಬಿದಿರೆ: ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ತಾಂತ್ರಿಕ ಅನುಭವ ಕಲ್ಪಿಸುವ ಮಹತ್ವದ ಹೆಜ್ಜೆಯಾಗಿ, ಐಬಿಎಂ ಸಾಫ್ಟ್‌ವೇರ್ ಲ್ಯಾಬ್ಸ್ ಸಹಯೋಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಎಐಇಟಿ)ಯಲ್ಲಿ ದೇಶದ ಮೊದಲ ಐಬಿಎಂ ಎಐ ಲ್ಯಾಬ್‌ಗೆ ಬುಧವಾರ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನಗಳ ನೇರ ಪ್ರಾಯೋಗಿಕ ಅನುಭವ ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾದ ಈ ಲ್ಯಾಬ್‌ನಲ್ಲಿ ಐಬಿಎಂ ವಾಟ್ಸನ್‌ಎಕ್ಸ್.ಎಐ, ವಾಟ್ಸನ್‌ಎಕ್ಸ್ ಆರ್ಕೆಸ್ಟ್ರೇಟ್ ಸೇರಿದಂತೆ ಎಐ ಆಧಾರಿತ […]

Continue Reading

ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್

ಮಂಗಳೂರು: ಕೋಣಾಜೆಯ ಪಿ.ಎ. ಪ್ರಥಮ ದರ್ಜೆ ಕಾಲೇಜು ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಓರಿಯಂಟೇಶನ್ ಕಾರ್ಯಕ್ರಮ ಪೇಸ್ ನಾಲೆಡ್ಜ್ ಸಿಟಿಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ರಮೀಝ್ ಎಂ.ಕೆ. ಮಾತನಾಡಿ, ಕಾಲೇಜು ಜೀವನವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ವದ ಹಂತವಾಗಿದ್ದು, ಲಭ್ಯವಿರುವ ಎಲ್ಲ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ವ್ಯಕ್ತಿತ್ವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಎ. ಪ್ರಥಮ […]

Continue Reading

ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರತಿಭಟನೆ ವೇಳೆ ಪೊಲೀಸರು ತಮ್ಮನ್ನು ವಶಕ್ಕೆ ಪಡೆಯುವಾಗ ಕೆಲ ಸಿಬ್ಬಂದಿಯೇ “ಈ ಸರ್ಕಾರವನ್ನು ಕಿತ್ತೊಗೆಯಿರಿ” ಎಂದು ಕಿವಿಯಲ್ಲಿ ಪಿಸುಗುಟ್ಟಿದ್ದರು ಎಂದು ಅವರು ನವದೆಹಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಬಲಪ್ರಯೋಗವನ್ನು ಖಂಡಿಸಿದರು. ಪ್ರಶ್ನೆಪತ್ರಿಕೆ ಸೋರಿಕೆಗಳಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ […]

Continue Reading

ಕೆಪಿಸಿಸಿ ಕಚೇರಿ ಪ್ರತಿಭಟನೆ ವೇಳೆ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ; ಬಿಜೆಪಿ ದೂರು

ಬೆಂಗಳೂರು: ಕೆಪಿಸಿಸಿ ಕಚೇರಿಗೆ ಬಿಜೆಪಿ ಮುತ್ತಿಗೆ ವೇಳೆ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆಯಲಾದ ಘಟನೆಗೆ ಸಂಬಂಧಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ. ಪ್ರತಿಭಟನೆ ವೇಳೆ ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದ್ದು, ಕೆಲವರ ಮೇಲೆ ಡೊಣ್ಣೆ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ವೇಳೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್, “ಕಾಂಗ್ರೆಸ್ ಕಚೇರಿಯಲ್ಲಿ […]

Continue Reading

ಪಾಟ್ನಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ; ಪೊಲೀಸರ ಜಲಫಿರಂಗಿ, ಲಾಠಿ ಪ್ರಹಾರ

ಪಾಟ್ನಾ: ದಿಲ್ಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲವಾಗಿ ಪಾಟ್ನಾದಲ್ಲಿ ಎಐಎಸ್‌ಎ ನೇತೃತ್ವದಲ್ಲಿ ರಾಜಭವನ ಚಲೋ ಜಾಥಾ ನಡೆಯಿತು. ಜೆಪಿ ಗೋಲಂಬರ್‌ನಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಜಲಫಿರಂಗಿ, ಅಶ್ರುವಾಯು ಹಾಗೂ ಲಾಠಿ ಪ್ರಹಾರ ನಡೆಸಿದ ಪರಿಣಾಮ ಘರ್ಷಣೆ ಉಂಟಾಯಿತು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರ ಮತ್ತು ಶಿಕ್ಷಣದ ವಾಣಿಜ್ಯೀಕರಣವನ್ನು ಖಂಡಿಸಿದ ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದರು. ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ವಿರೋಧಿಸಿ ಈ […]

Continue Reading