ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ತಾಲ್ಲೂಕು ಪಂಚಾಯಿತಿ ಇಒ ಭಾರತಿ ಎನ್

ಕಾರವಾರ: ಮಕ್ಕಳು ಈ ದೇಶದ ಸಂಪತ್ತು. ಮಕ್ಕಳನ್ನು ಕಾಪಾಡುವ ಜವಾಬ್ದಾರಿ ಇಡೀ ಸಮಾಜದ ಮೇಲಿದೆ. ಮಕ್ಕಳನ್ನು ಕಾಪಾಡುವುದು ಅಥವಾ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಎಂದು ಜೋಯಿಡಾ ತಾ.ಪಂ. ಕಾರ್ಯನಿರ್ವಣಾಧಿಕಾರಿ ಭಾರತಿ ಎನ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಘಟಕ ಹಾಗೂ ಸಖಿ ಆಶ್ರಯದಲ್ಲಿ ಜೋಯಿಡಾದ ಮೊರಾರ್ಜಿ ವಸತಿ ಶಾಲೆಯಲ್ಲಿ ಮಕ್ಕಳಿಗಾಗಿ ಆಯೋಜಿಸಲಾದ , ಸಾಮಾಜಿಕ ಪಿಡುಗು ಹಾಗೂ ಪೋಕ್ಸೋ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, […]

Continue Reading

ಕುದ್ರೋಳಿ, ಅಳಕೆ, ಡೊಂಗರಕೇರಿಯಲ್ಲಿ ಕಾಮಾಲೆ, ಡೆಂಗೆ ಪ್ರಕರಣ ಪತ್ತೆ, ಆತಂಕ ಬೇಡ: ಡಿಎಚ್ ಒ ಡಾ. ತಿಮ್ಮಯ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಮಾಲೆ (ಜಾಂಡಿಸ್) ಹಾಗೂ ಡೆಂಗೆ ಪ್ರಕರಣಗಳು ನಿಧಾನವಾಗಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕ ಪಡುವ ಬದಲು ವೈಯಕ್ತಿಕ ಸ್ವಚ್ಛತೆ, ಸುರಕ್ಷಿತ ಕುಡಿವ ನೀರಿನ ಬಳಕೆ ಹಾಗೂ ಸೊಳ್ಳೆ ನಿಯಂತ್ರಣ ಕ್ರಮಗಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಡಿಎಚ್ ಒ ಡಾ. ಎಚ್.ಆರ್. ತಿಮ್ಮಯ್ಯ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಂಗಳೂರಿನ ಕುದ್ರೋಳಿ, ಅಳಕೆ ಹಾಗೂ ಡೊಂಗರಕೇರಿ ಪ್ರದೇಶಗಳಲ್ಲಿ ಜೂನ್ 23 ರಿಂದ ಇದೂವರೆಗೆ 19 ಕಾಮಾಲೆ ರೋಗದ ಪ್ರಕರಣಗಳು […]

Continue Reading

ನೀಟ್ ಅಕ್ರಮ, ಸಿಡಿದ ಎನ್‌ಎಸ್‌ಯುಐ, ಪ್ರಧಾನಿ ವಿರುದ್ಧ ಸಹಿ ಸಂಗ್ರಹ ಅಭಿಯಾನ: ಸುಹಾನ್ ಆಳ್ವ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕ ಜಿಲ್ಲೆಯಾದ್ಯಂತ ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ. ಸಂಗ್ರಹವಾಗುವ ಪೋಸ್ಟ್‌ಕಾರ್ಡ್‌ಗಳನ್ನು ಪ್ರಧಾನ ಮಂತ್ರಿಗೆ ಕಳುಹಿಸಲಾಗುವುದು ಎಂದು ಎನ್‌ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ಸುಹಾನ್ ಆಳ್ವ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಕಾಲೇಜುಗಳಲ್ಲಿ ಸಹಿ ಸಂಗ್ರಹ ನಡೆಯಲಿದ್ದು, ನೀಟ್ ಅಕ್ರಮದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ […]

Continue Reading

ದ.ಕ ಜಿಲ್ಲೆಯ ಶಾಲೆಗಳಿಗೆ ಜುಲೈ 8 ರಂದು ರಜೆ ಘೋಷಣೆ: ಡಿಸಿ ದರ್ಶನ್ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಗಾಳಿ ಹಾಗೂ ಮಳೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 8 ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಅವರು ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆ ವ್ಯಾಪಕ ಮಳೆ ಆಗುವ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿ ( ಪಿಯು)ಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಉ. ಕದಲ್ಲಿ ಭಾರೀ ಗಾಳಿ, ಮಳೆ, 5 ತಾಲೂಕಿನ ಶಾಲೆಗಳಿಗೆ ಜುಲೈ 7 ರಂದು ರಜೆ: ಡಿಸಿ ಲಕ್ಷ್ಮಿಪ್ರಿಯಾ ಆದೇಶ

ಕಾರವಾರ: ಭಾರತೀಯ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಎಲ್ಲ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜುಲೈ 7 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಆದೇಶ ಹೊರಡಿಸಲಾಗಿದೆ. ಜಿಲ್ಲೆಯ ಉಳಿದ ತಾಲೂಕುಗಳಿಗೆ ಈ ರಜೆ ಅನ್ವಯಿಸುವುದಿಲ್ಲ. […]

Continue Reading

ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಹಾದಿಯಲ್ಲಿ ಡಾ. ರಾಜೇಂದ್ರಕುಮಾರ್, ಅರ್ಥಪೂರ್ಣ ಪ್ರತಿಭಾ ಪುರಸ್ಕಾರ

ಮಂಗಳೂರು: ಶಿಕ್ಷಣದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ಅವರ ಸಾಧನೆಗೆ ಮನ್ನಣೆ ನೀಡುವುದಷ್ಟೇ ಅಲ್ಲ, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ಆಗುತ್ತದೆ. ಪ್ರತಿಭಾವಂತರು ಸಮಾಜ ಸೇವೆ ಹಾಗೂ ರಾಷ್ಟ್ರ ನಿರ್ಮಾಣದ ಹೊಣೆಗಾರಿಕೆಯನ್ನು ಮನಗಂಡು ಮುಂದುವರೆಯಬೇಕು ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೇಳಿದರು. ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಇನ್ನಷ್ಟು ಎತ್ತರಕ್ಕೆ […]

Continue Reading

ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ: ಡಿಸಿ ದರ್ಶನ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದಿನಂತೆ ಜುಲೈ 4 ರಂದು ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳ ತರಗತಿಗಳು ನಡೆಯಲಿದ್ದು, ಜಿಲ್ಲಾಡಳಿತವು ಶಾಲೆಗಳಿಗೆ ಯಾವುದೇ ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಧಿಕಾರಿ ದರ್ಶನ್ ತಿಳಿಸಿದ್ದಾರೆ. ದ.ಕ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಶಾಲಾ ತರಗತಿಗಳು ನಡೆಯಲಿದ್ದು, ವಿದ್ಯಾರ್ಥಿಗಳು ಪಾಠ ಪ್ರವಚನಗಳಿಗೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.

Continue Reading

ದ. ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್: ಶಾಲೆ- ಪಿಯು ಕಾಲೇಜುಗಳಿಗೆ 3 ರಂದು ರಜೆ: ಡಿಸಿ ದರ್ಶನ್ 

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 3 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ […]

Continue Reading

ಕಾರವಾರದಲ್ಲಿ ಭಾರಿ ಮಳೆ, ಜುಲೈ 2 ರಂದು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನಿಂದಾಗಿ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ಗುರುವಾರ(ಜುಲೈ 2) ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿಕೂಲ ಹವಾಮಾನ ಮತ್ತು ನಿರಂತರ ಮಳೆಯ ಕಾರಣ ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆ ಆಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಜುಲೈ […]

Continue Reading

ದ.ಕ ಜಿಲ್ಲೆಗೆ ರೆಡ್ ಅಲರ್ಟ್‌, ಜುಲೈ 2 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ದರ್ಶನ್ ಆದೇಶ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜುಲೈ 2 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ದರ್ಶನ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ನದಿ, ಕೆರೆ ಹಾಗೂ […]

Continue Reading