3 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಮಂಗಳೂರು ಸಿಸಿಬಿ ಪೊಲೀಸರಿಂದ ಖೆಡ್ಡಾ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (ಎನ್‌ಸಿಐಬಿ) ಅಧಿಕಾರಿ ಎಂದು ಸುಳ್ಳು ಪರಿಚಯಿಸಿಕೊಂಡು ವಂಚನೆ ಹಾಗೂ ಸುಲಿಗೆ ನಡೆಸಿದ ಪ್ರಕರಣದಲ್ಲಿ ಬಂಧಿತನಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64) ಬಂಧಿತ ಆರೋಪಿ. ಆರೋಪಿಯು ತನ್ನದೇ ತಂಡ ರಚಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸುತ್ತಿದ್ದ. ಹಣಕಾಸು ವಿವಾದ, ಬ್ಯಾಂಕ್ […]

Continue Reading

ಭೂತನಾಳ ಕೆರೆಯಲ್ಲಿ ತಾಯಿ, ಐವರು ಮಕ್ಕಳ ಶವ ಪತ್ತೆ

ವಿಜಯಪುರ: ಆ.24 ರಿಂದ ನಾಪತ್ತೆ ಆಗಿದ್ದ ತಾಯಿ ಹಾಗೂ ಐದು ಮಂದಿ ಮಕ್ಕಳ ಮೃತದೇಹಗಳು ನಗರದ ಹೊರವಲಯದ ಭೂತನಾಳ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆ ಆಗಿವೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ವಿಜಯಪುರ ತಾಲ್ಲೂಕಿನ ತೊರವಿ ಗ್ರಾಮದ ಮಲಕಾರಿ ಭೀಮರಾಯ ಜಾಲಗೇರಿ ಅವರ ಪತ್ನಿ ಶೋಭಾ ಜಾಲಗೇರಿ (45), ಮಕ್ಕಳಾದ ವಿದ್ಯಾ (16), ಸುವರ್ಣ (14), ಗೌಡೇಶ್ (10), ಸಾನಿಕಾ (7) ಹಾಗೂ ವಿಕಾಸ […]

Continue Reading

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ. ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. […]

Continue Reading

ಗ್ರಾ.ಪಂ, ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ, ಆರೋಪಿಗಳು ಪರಾರಿ,ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡು

ಪಡುಬಿದ್ರೆ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ (55) ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿ ಎಂಬಲ್ಲಿ ನಡೆದಿದೆ. ಮುದರಂಗಡಿ ಗ್ರಾಮದ ಪಿಲಾರು ನಿವಾಸಿ ಡೇವಿಡ್ ಡಿಸೋಜ, ಮುದರಂಗಡಿಯಲ್ಲಿರುವ ಕಚೇರಿಯಿಂದ ಹತ್ತಿರ ಮುದರಂಗಡಿ ಸಂತ್ ಫ್ರಾನ್ಸಿಸ್ ಜೆವಿಯರ್ ಚರ್ಚ್‌ನ ಎದುರು ನಿಲ್ಲಿಸಿದ್ದ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿ ಆಗಿದ್ದಾರೆ. ಗಂಭೀರ ಗಾಯಗೊಂಡಿದ್ದ […]

Continue Reading

ಉಡುಪಿ: ಖಾಸಗಿ ಬಸ್‌ ಡಿಕ್ಕಿ, ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸಾವು

ಉಡುಪಿ: ಉಡುಪಿ ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್  (37) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ಬಳಿಕ ಅವರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಅಲ್ಲಿಂದ ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ […]

Continue Reading

ಬೀಳಗಿ: ಪತ್ನಿ ನೇಣಿಗೆ ಶರಣಾಗುತ್ತಿದ್ದರೂ ವಿಡಿಯೊ ಮಾಡಿದ ಪತಿ: ಕೊಲೆ ಶಂಕೆ, ಆರೋಪಿ ವಶಕ್ಕೆ

ಬೀಳಗಿ: ಪತ್ನಿ ನೇಣಿಗೆ ಶರಣಾಗಿ ಉಸಿರುಗಟ್ಟಿ ಸಾವನ್ನಪ್ಪುತ್ತಿದ್ದ ವೇಳೆ ರಕ್ಷಿಸುವ ಬದಲು ವಿಡಿಯೋ ಚಿತ್ರೀಕರಿಸಿದ ಆರೋಪ ಪತಿಯ ವಿರುದ್ಧ ಕೇಳಿಬಂದಿದ್ದು, ಈ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆ ಭಾಗ್ಯಶ್ರೀ (23) ಎಂದು ಗುರುತಿಸಲಾಗಿದೆ. 6 ವರ್ಷಗಳ ಹಿಂದೆ ಭಾಗ್ಯಶ್ರೀ ಮತ್ತು ಪ್ರವೀಣ್ ಮದುವೆ ಆಗಿದ್ದರು. ದಂಪತಿಗೆ ಮಗು ಇತ್ತು. ಪತ್ನಿ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಾಗಿ ದಂಪತಿ ನಡುವೆ ಆಗಾಗ್ಗೆ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಘಟನೆ ನಡೆದ […]

Continue Reading

ಸುರತ್ಕಲ್: ಅಣ್ಣನಿಂದಲೇ ತಮ್ಮನ ಕೊಲೆ, ಪೊಲೀಸ್ ವಶಕ್ಕೆ, ಹಿರಿಯ ಅಧಿಕಾರಿಗಳ ದೌಡು

ಸುರತ್ಕಲ್: ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಕೊಲೆ ಮಾಡಿರುವ ಘಟನೆ ಚೊಕ್ಕಬೆಟ್ಟು ಮಠದ ಭಾನುವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿ ಆಗಿದೆ. ಕೊಲೆಯಾದ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿ ಹಾಗೂ ಚೊಕ್ಕಬೆಟ್ಟು ಮಠದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಈತನ ಅಣ್ಣ ಸೋಮನಾಥ್ (21) ಕೊಲೆ ಮಾಡಿರುವ ಆರೋಪಿ ಎನ್ನಲಾಗಿದ್ದು, ಆತನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. […]

Continue Reading

ಕೊಡಚಾದ್ರಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಕೊಡಚಾದ್ರಿಗೆ ಪ್ರವಾಸಕ್ಕೆ ಎಂದು ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ನಡೆದಿದೆ. ಮೃತ ಯುವ ಬೆಂಗಳೂರಿನ ಶ್ರೀಕಾಂತ್ (28) ಎಂದು ತಿಳಿದು ಬಂದಿದೆ. ಶ್ರೀಕಾಂತ್ ತನ್ನ ಸ್ನೇಹಿತರ ಜತೆಗೆ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದು, ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆಯಲ್ಲಿರುವ ಸ್ನೇಹಿತರ ಮನೆಯಲ್ಲಿ ತಂಗಿದ್ದರು. ಶನಿವಾರ ಕೊಡಚಾದ್ರಿ ಶಿಖರ ವೀಕ್ಷಣೆಗೆ ತೆರಳಲು ಯೋಜನೆ ರೂಪಿಸಿದ್ದರು ಎಂದು ತಿಳಿದು ಬಂದಿದೆ.

Continue Reading

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.20 ಕೋಟಿ ಮೌಲ್ಯದ ಎಂಡಿಎಂಎ ವಶ, ಬಾಗಲಕೋಟೆಯಲ್ಲಿ ಇಬ್ಬರ ಬಂಧನ

ಮಂಗಳೂರು: ಮಂಗಳೂರು, ಬೆಂಗಳೂರು ಹಾಗೂ ನೆರೆಯ ಕೇರಳ ರಾಜ್ಯಕ್ಕೆ ಪೂರೈಕೆಯಾಗಬೇಕಿದ್ದ 5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬಂಧನ ಮಾಡಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದರು. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನದ ಭಾಗವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧನ […]

Continue Reading

ಬಂಟ್ವಾಳ ಬಸ್‌ ನಿಲ್ದಾಣದಲ್ಲಿ ಯುವತಿ ಅಟ್ಟಾಡಿಸಿ ಹತ್ಯೆ; ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಸಾವು, ಆರೋಪಿ ಪತ್ತೆಗೆ ಶೋಧ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಗುರುವಾರ ಯುವತಿಯೊಬ್ಬರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಮೃತಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಮಾತನಾಡಿ, ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ ಎನ್ನುವ ಮಾಹಿತಿ […]

Continue Reading