ಉಡುಪಿ: ಖಾಸಗಿ ಬಸ್ ಡಿಕ್ಕಿ, ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸಾವು
ಉಡುಪಿ: ಉಡುಪಿ ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ (37) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ಬಳಿಕ ಅವರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಅಲ್ಲಿಂದ ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ […]
Continue Reading