ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ: ತಡೆಗೆ ಸುಪ್ರೀಂ ನಿರಾಕರಣೆ, ಮತ್ತೇ ಹಿನ್ನಡೆ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ, ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡೀಪಾರು ಆದೇಶ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಪರಾಧ ಹಿನ್ನೆಲೆಯುಳ್ಳ ಕಾರಣಕ್ಕೆ ಮತ್ತು ನಿರಂತರವಾಗಿ ಸಮಾಜದ ಸ್ವಾಸ್ಥಕ್ಕೆ ಧಕ್ಕೆ ತರುವ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಗಡೀಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್ […]

Continue Reading

40 ನೇ ವಯಸ್ಸಿನಲ್ಲಿ ಈಜು ಕಲಿತು, ಇಂಗ್ಲಿಷ್ ಚಾನೆಲ್ ಈಜಿದ ಮೊದಲ ಮಂಗಳೂರಿಗನಾಗಿರುವದು ನನಗೆ ಹೆಮ್ಮೆ: ಡಾ. ಗುರುಪ್ರಸಾದ್

ಮಂಗಳೂರು: ಪುತ್ರನಿಗೆ ಈಜು ಕಲಿಸುವ ಉದ್ದೇಶದಿಂದ 40ನೇ ವಯಸ್ಸಿನಲ್ಲಿ ಈಜು ಕಲಿತಿದ್ದೇ ತನ್ನ ಬದುಕಿನ ಮಹತ್ವದ ತಿರುವಾಯಿತು. ನಿರಂತರ ಅಭ್ಯಾಸ ಮತ್ತು ಆತ್ಮವಿಶ್ವಾಸದಿಂದ ಇಂಗ್ಲಿಷ್ ಚಾನೆಲ್ ರಿಲೇ ಈಜು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಯಿತು ಎಂದು ಕಣಚೂರು ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ. ಗುರುಪ್ರಸಾದ್ ಹೇಳಿದರು. ನಗರದ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 3ರಂದು ಭಾರತದಿಂದ ಆರು ಸದಸ್ಯರ ತಂಡ ಇಂಗ್ಲೆಂಡ್‌ನಿಂದ ಫ್ರಾನ್ಸ್‌ವರೆಗೆ ಇಂಗ್ಲಿಷ್ ಚಾನೆಲ್ ರಿಲೇ ಈಜನ್ನು 13 ಗಂಟೆ 5 ನಿಮಿಷಗಳಲ್ಲಿ […]

Continue Reading

ಜೆಇಇ, ಸಿಇಟಿ ಪರೀಕ್ಷೆಯಲ್ಲಿ ಅನೀಶ್ ನಾಯ್ಕ್‌ ಸಾಧನೆ, ಅರ್ಜುನ ವಿಜ್ಞಾನ ಪಿಯು ಕಾಲೇಜು, ಬಾಲ ಮಂದಿರ ಶಾಲೆಯಿಂದ ಸನ್ಮಾನ

ಕಾರವಾರ: ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸುವ ಜೆಇಇ ಹಾಗೂ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ಅತ್ಯುತ್ತಮ ರ್ಯಾಂಕ್ ಗಳಿಸಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿ ಅನೀಶ್ ನಾಯ್ಕ್ ಅವರನ್ನು ಧಾರವಾಡ ಅರ್ಜುನ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ, ಕಾರವಾರ ಬಾಲ ಮಂದಿರ ಪ್ರೌಢಶಾಲೆ ಆಶ್ರಯದಲ್ಲಿ ಸನ್ಮಾನಿಸಲಾಯಿತು. ಅನೀಶ್ ನಾಯ್ಕ್ ದ್ವಿತೀಯ ಪಿಯುಸಿಯಲ್ಲಿ ಶೇ 96 ಅಂಕ ಗಳಿಸಿದ್ದು, ಜೆಇಇ ಮೇನ್ಸ್‌ನಲ್ಲಿ 99.56 ಪರ್ಸೆಂಟೈಲ್, ಜೆಇಇ ಅಡ್ವಾನ್ಸ್‌ನಲ್ಲಿ 5,809ನೇ ರ‍್ಯಾಂಕ್ ಹಾಗೂ ಕರ್ನಾಟಕ ಸಿಇಟಿಯಲ್ಲಿ 892ನೇ ರ‍್ಯಾಂಕ್ […]

Continue Reading

ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಜತೆ ತುಂಬೆ ಗ್ರೂಪ್ ಮಹತ್ವದ ಒಪ್ಪಂದ, ಯುಎಇಯಲ್ಲಿ ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ ಶಿಕ್ಷಣ

ಮಂಗಳೂರು: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ (ಲಾಂಗ್‌ಜೆವಿಟಿ ಮೆಡಿಸಿನ್) ಕ್ಷೇತ್ರದಲ್ಲಿ ವ್ಯವಸ್ಥಿತ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆರಂಭಿಸಲು ತುಂಬೇ ಗ್ರೂಪ್ ಹಾಗೂ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಆಫ್ ಲಾಂಗ್‌ಜೆವಿಟಿ ಸಾಯಿನ್ಸ್ (ಜಿಸಿಎಲ್‌ಎಸ್) ಮಹತ್ವದ ತಿಳಿವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿವೆ. ಈ ಒಪ್ಪಂದದಡಿ ಗಲ್ಫ್ ಮೆಡಿಕಲ್ ವಿಶ್ವವಿದ್ಯಾಲಯದ ಅಡಿಯಲ್ಲಿ ‘ತುಂಬೆ ಇನ್‌ಸ್ಟಿಟ್ಯೂಟ್ ಆಫ್ ಲಾಂಗ್‌ಜೆವಿಟಿ ಮೆಡಿಸಿನ್’ಸ್ಥಾಪನೆ ಆಗಲಿದ್ದು, ದೀರ್ಘಾಯುಷ್ಯ ವೈದ್ಯಕೀಯ, ಆರೋಗ್ಯಕರ ವಯೋವೃದ್ಧತೆ, ತಡೆಗಟ್ಟುವ ಆರೋಗ್ಯ ಸೇವೆ ಹಾಗೂ ನಿಖರ ಆರೋಗ್ಯ ಕ್ಷೇತ್ರಗಳಲ್ಲಿ […]

Continue Reading

ಮುಂಡಗೋಡ: ಲಾರಿ, ಕೆಎಸ್ ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ, 30ಕ್ಕೂ ಹೆಚ್ಚು ಮಂದಿಗೆ ಗಾಯ, ಐದು ಮಂದಿ ಹುಬ್ಬಳ್ಳಿ ಕಿಮ್ಸ್ ಗೆ ದಾಖಲು

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾವಲಕೊಪ್ಪ ಗ್ರಾಮದ ಶರೀಫಜ್ಜನ ದೇವಸ್ಥಾನದ ಸಮೀಪ ಕೆಸ್ ಆರ್ ಟಿಸಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಐದು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಹಾನಗಲ್ಲನಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಬಸ್‌ಗೆ, ಮುಂಡಗೋಡಿನಿಂದ ಸಿರಸಿ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ […]

Continue Reading

ಸಹ್ಯಾದ್ರಿಯಲ್ಲಿ ‘ವಿಸ್ತಾರಾ–2026: ನವೋದ್ಯಮಗಳಿಗೆ ಮಾರ್ಗದರ್ಶನ, ಹೂಡಿಕೆ, ಸಹಯೋಗಕ್ಕೆ ವೇದಿಕೆ

ಮಂಗಳೂರು: ಶೈನ್ ಫೌಂಡೇಷನ್ ಕರ್ನಾಟಕ ಆಕ್ಸಿಲರೇಷನ್ ನೆಟ್‌ವರ್ಕ್ (ಕೆಎಎನ್) ಉಪಕ್ರಮದಡಿ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕ್ಯಾಂಪಸ್‌ನಲ್ಲಿ 2 ದಿನಗಳ ಕಾಲ ಆಯೋಜಿಸಿದ್ದ ವಿಸ್ತಾರಾ–2026 ಮುಕ್ತ ಸಂವಾದ ಮತ್ತು ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಎರಡು ದಿನಗಳ ಕಾರ್ಯಕ್ರಮದಲ್ಲಿ 55 ಕ್ಕೂ ಹೆಚ್ಚು ನವೋದ್ಯಮ ಸಂಸ್ಥಾಪಕರು, ಉದ್ಯಮಿಗಳು, ವಿದ್ಯಾರ್ಥಿಗಳು, ಪರಿಸರ ವ್ಯವಸ್ಥೆಯ ಪ್ರತಿನಿಧಿಗಳು ಹಾಗೂ ನಾವೀನ್ಯಕಾರರು ಭಾಗವಹಿಸಿ ಉದ್ಯಮಶೀಲತೆ, ಹೂಡಿಕೆ, ಸಹಯೋಗ ಮತ್ತು ವ್ಯವಹಾರ ಬೆಳವಣಿಗೆಯ ಕುರಿತು ಚರ್ಚಿಸಿದರು. ಕಾರ್ಯಕ್ರಮವನ್ನು ಸಿಎಸ್ ಮನು ಫ್ರಾನ್ಸಿಸ್, ರೋಹಿತ್ […]

Continue Reading

20 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡು ಹಾಡಿದ ಸ್ವರದೇವತೆ ಎಸ್ ಜಾನಕಿ

ಬೆಂಗಳೂರು: ಗಾನ ಕೋಗಿಲೆ ಎಸ್. ಜಾನಕಿ ಅವರು ಕನ್ನಡದ ಜತೆಗೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಕ್ಕೂ ಅಧಿಕ ಹಾಡುಗಳನ್ನ ಹಾಡಿರುವ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಕೇವಲ ಗಾಯಕಿಯಷ್ಟೇ ಅಲ್ಲ, ಭಾರತೀಯ ಚಿತ್ರ ಸಂಗೀತದ ದೈತ್ಯ ಶಕ್ತಿ, ಹಾಡು ನಿಲ್ಲಿಸಿದ್ದು ಕೋಟ್ಯಂತರ ಅಭಿಮಾನಿಗಳಲ್ಲಿ ಇನ್ನು ನೆನಪು ಮಾತ್ರ. ಡಾ. ರಾಜ್‌ಕುಮಾರ್ ಮತ್ತು ಎಸ್. ಜಾನಕಿ ಅವರ ಜೋಡಿ ಹಾಡುಗಳು ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಟ್ರೆಂಡ್ ಸೃಷ್ಟಿ ಮಾಡಿತ್ತು. ಎಸ್. ಪಿ. […]

Continue Reading

ಎಸ್.ಐ.ಆರ್. ಕಪ್ ಕ್ರಿಕೆಟ್ ಪಂದ್ಯ: ಸಿಇಒ ಡಾ. ದಿಲೀಷ್ ಶಶಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ, ಜಾಗೃತಿಗೆ ಬೌಂಡರಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಎಮ್ಯನರೇಷನ್ ಫಾರಂ ಗಳನ್ನು ವಿತರಿಸಿದ್ದು, ಸಾರ್ವಜನಿಕರು ಅವುಗಳನ್ನು ಭರ್ತಿ ಮಾಡಿ ಕಡ್ಡಾಯವಾಗಿ ಹಿಂದಿರುಗಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ ಹೇಳಿದರು. ಶನಿವಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕಕರಣೆ (ಎಸ್‌ಆಯ್‌ಆರ್) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಎಸ್.ಐ.ಆರ್. ಕಪ್ ಕ್ರಿಕೆಟ್ […]

Continue Reading

ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಹೆಚ್ಚುವರಿ ಮೀಸಲಾತಿ, ಕೇಂದ್ರದಿಂದ ಅನ್ಯಾಯ: ಮಾಜಿ ಸಂಸದ ಉಗ್ರಪ್ಪ

ಮಂಗಳೂರು: ರಾಮ ಮಂದಿರದ ಹೆಸರಿನಲ್ಲಿ ಸಂಗ್ರಹಿಸಲಾದ ಹಣದ ದುರ್ಬಳಕೆ ಆರೋಪಗಳ ಕುರಿತು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಥವಾ ಹಾಲಿ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಬೇಕು. ರಾಜ್ಯದಲ್ಲಿ ಎಸ್ಸಿ, ಎಸ್ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ತಿದ್ದುಪಡಿಯನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಿದ್ದರೂ, ಅದನ್ನು ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರಿಸದಿರುವುದರಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ಸಾವಿರಾರು ಅಭ್ಯರ್ಥಿಗಳಿಗೆ ಅನ್ಯಾಯ ಆಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ವಿ.ಎಸ್. […]

Continue Reading

ಮಂಗಳೂರು, ಗೋವಾದ ಕೊಂಕಣಿ ಕವಯತ್ರಿಯರು ಚಾರೊಳಿ ರಾಷ್ಟ್ರೀಯ ಸನ್ಮಾನಕ್ಕೆ ಆಯ್ಕೆ: ರೇಮಂಡ್ ಡಿಕುನಾ ತಾಕೊಡೆ

ಮಂಗಳೂರು: ಇಲ್ಲಿ ನಡೆವ ಕೊಂಕಣಿ 5ನೇ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಖ್ಯಾತ ಹಿರಿಯ ಕವಯತ್ರಿಯರಾದ ಮಂಗಳೂರಿನ ಅರುಂಧತಿ ವಿ. ರಾವ್ ಮತ್ತು ಗೋವಾದ ಆನ್ನಿ ದೆ ಕೊಲ್ವಾಲೆ ಆಯ್ಕೆ ಆಗಿದ್ದಾರೆ ಎಂದು ಸಮ್ಮೇಳನದ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದೇ 19 ರಂದು ಒಂದು ದಿನದ ಕೊಂಕಣಿ 5ನೇ ಚಾರೊಳಿ ಸಾಹಿತ್ಯ ಸಮ್ಮೇಳನಕ್ಕೆ ನವದೆಹಲಿ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕಾರವಾರ, ಕೇರಳ ಮತ್ತು ದುಬೈ ಕವಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕವಿ […]

Continue Reading