ಸಚಿವ ಸಂಪುಟದಲ್ಲಿ ಎಂಎಲ್ಸಿ ಐವನ್ ಡಿಸೋಜಗೆ ಸಚಿವ ಸ್ಥಾನ ನೀಡುವಂತೆ ಜಾರ್ಜ್ ಫರ್ನಾಂಡಿಸ್ ಆಗ್ರಹ

ಕಾರವಾರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಕ್ಯಾಥೊಲಿಕ್ ಅಸೋಸಿಯೇಶನ್ ಅಧ್ಯಕ್ಷ ಜಾರ್ಜ್ ಫರ್ನಾಂಡಿಸ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು, ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ಐವಾನ್ ಡಿಸೋಜಾ ದೀರ್ಘಕಾಲದಿಂದ ಹೋರಾಟ ನಡೆಸುತ್ತಿದ್ದಾರೆ. ಕಾನೂನು ತಜ್ಞರಾಗಿರುವ ಅವರು ಹಲವು ದಶಕಗಳ ರಾಜಕೀಯ ಅನುಭವ ಹೊಂದಿದ್ದು, ಶಿಕ್ಷಣ, ಆರೋಗ್ಯ, ನಿರುದ್ಯೋಗ ನಿವಾರಣೆ ಸೇರಿದಂತೆ ವಿವಿಧ […]

Continue Reading

ಮಂತ್ರಿ ಆಗುವವರ ಹೆಸರು ಇನ್ನು ಸಸ್ಪೆನ್ಸ್, ಹೈಕಮಾಂಡ್ ಕಸರತ್ತು, ಮುಖಂಡರ ಪೀಕಲಾಟ

ಬೆಂಗಳೂರು: ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸರಕಾರದ ಸಂಪುಟ ರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ ಹಾಗೂ ಉಪ ಮುಖ್ಯಮಂತ್ರಿ ಸ್ಥಾನಗಳ ಕುರಿತು ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿ ಎಲ್ಲವನ್ನು ಅಂತಿಮಗೊಳಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಂಗಾಮಿ ಸಿಎಂ ಸಿದ್ದರಾಮಯ್ಯ ನವದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಆದರೆ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಹೊರಗಡೆ ಇಡಬೇಕು ಎಂಬ ಗೊಂದಲದಲ್ಲಿ ಪಟ್ಟಿ ಫೈನಲ್ ಕೆಲಸಕ್ಕೆ ಹಿನ್ನಡೆ ಆಗುತ್ತಿದೆ. ಬುಧವಾರ ಸಂಜೆ 4 .05 ಗಂಟೆಗೆ ನೂತನ ಮುಖ್ಯಮಂತ್ರಿ […]

Continue Reading

ಜೆಇಇ ಅಡ್ವಾನ್ಸ್ : ಮೂಡುಬಿದಿರೆ ಆಳ್ವಾಸ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ, ಡಾ. ಮೋಹನ್ ಆಳ್ವ ಶ್ಲಾಘನೆ

ಮೂಡುಬಿದಿರೆ: ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಎಂಜಿನಿಯರಿAಗ್ ಶಿಕ್ಷಣದ ಪ್ರವೇಶಕ್ಕಾಗಿ ನಡೆಯುವ ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ 2026 ಪರೀಕ್ಷೆಯ ಫಲಿತಾಂಶದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 17 ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ ಶ್ರೇಷ್ಠ ಸಾಧನೆ ಮೆರೆದು ಗಮನ ಸೆಳೆದಿದ್ದಾರೆ. ಜನರಲ್ ಹಾಗೂ ಕೆಟಗರಿ ವಿಭಾಗದ ಅಖಿಲ ಭಾರತ ಮಟ್ಟದಲ್ಲಿ ಸ್ವಾತಿ ತಲವಾರ್ (1513 ರ‍್ಯಾಂಕ್) ಹರ್ಷವರ್ಧನ್ ಕೆಪಿ(1698 ರ‍್ಯಾಂಕ್), ಮೆಲ್ರೋಯ್ ಕ್ಯಾಸ್ಟಲಿನೋ(1733 ರ‍್ಯಾಂಕ್), ಕೃತಿಕ್ ಬಿ(1795 ರ‍್ಯಾಂಕ್), ನೀಲಾಂಬಿಕ(2223 ರ‍್ಯಾಂಕ್), ಮಾನಸ ಕೆಎಸ್(2935 ರ‍್ಯಾಂಕ್), ಪಿಯೂಷ್ […]

Continue Reading

ಕರಾವಳಿ ಭಾಗದ ಹಿರಿಯ ಶಾಸಕ ಯು.ಟಿ. ಖಾದರ್ ಗೆ ಬಹುತೇಕ ಸಚಿವ ಸ್ಥಾನ ಪಕ್ಕಾ!

ಮಂಗಳೂರು: ಹಾಲಿ ಸ್ಪೀಕರ್ ಆಗಿರುವ ಯು.ಟಿ. ಖಾದರ್ ಅವರಿಗೆ ಬಹುತೇಕ ಸಚಿವ ಸ್ಥಾನ ಫಿಕ್ಸ್ ಆಗಿದೆ ಎಂದು ಹೇಳಾಗುತ್ತಿದ್ದು, ಬುಧವಾರ ಬೆಳಿಗ್ಗೆ ಅವರು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಮಂತ್ರಿ ಆಗುವ ಎಲ್ಲ ಸಾಧ್ಯತೆ ಇವೆ ಎಂದು ಅವರು ಆಪ್ತ ಮೂಲಗಳು ತಿಳಿಸಿವೆ. ಯು.ಟಿ. ಖಾದರ್ ಅವರು ಸಿದ್ದರಾಮಯ್ಯ ಅವರ ಸರಕಾರದ ಅವಧಿಯ ವೇಳೆಯೇ ಮಂತ್ರಿ ಆಗಬೇಕು ಎಂಬ ಪ್ರಯತ್ನ ನಡೆಸಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಅವರಿಗೆ ಸ್ಪೀಕರ್ ಸ್ಥಾನ ಅಲಂಕರಿಸಬೇಕಾಯಿತು. […]

Continue Reading

ಉಡುಪಿ ತಾಯಿ–ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ, 8 ಕೆ.ಜಿ. ಗರ್ಭಕೋಶದ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: ಜಿಲ್ಲಾ ಸರ್ಜನ್ ಡಾ. ಅಶೋಕ್

ಉಡುಪಿ: ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 44 ವರ್ಷದ ಮಹಿಳೆಯ ಗರ್ಭಕೋಶದಲ್ಲಿದ್ದ ಬರೋಬ್ಬರಿ 8 ಕೆ.ಜಿ. ತೂಕದ ಫೈಬ್ರಾಯ್ಡ್ ಗಡ್ಡೆಯನ್ನು ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದು, ಇದೊಂದು ಸಾಧನೆಯೇ ಸರಿ ಎಂದು ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರು ತಿಳಿಸಿದರು. ಮಹಿಳೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಸಮಸ್ಯೆ ನಿವಾರಣೆಯಾಗದ ಹಿನ್ನೆಲೆಯಲ್ಲಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಆಗಮಿಸಿದ್ದರು. ವೈದ್ಯರು ಪರೀಕ್ಷಿಸಿದಾಗ ಅವರ […]

Continue Reading

ವಿಧಾನ ಮಂಡಲಕ್ಕೆ ಡಿಜಿಟಲೀಕರಣದ ಸ್ಪರ್ಶ,130 ಕೋಟಿ ವೆಚ್ಚದಲ್ಲಿ 6 ತಿಂಗಳಲ್ಲಿ ಕಾಗದರಹಿತ ಕಾರ್ಯಶೈಲಿ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ರಾಜ್ಯ ವಿಧಾನಮಂಡಲದ ಕಾರ್ಯವೈಖರಿಯಲ್ಲಿ ಮಹತ್ವದ ಬದಲಾವಣೆಗೆ ವೇದಿಕೆ ಸಿದ್ಧವಾಗಿದ್ದು, ಮುಂದಿನ ಆರು ತಿಂಗಳೊಳಗೆ ವಿಧಾನಸಭೆ ಹಾಗೂ ವಿಧಾನಪರಿಷತ್ ಸಂಪೂರ್ಣ ಕಾಗದರಹಿತ ವ್ಯವಸ್ಥೆಗೆ ಪರಿವರ್ತನೆ ಆಗಲಿವೆ ಎಂದು ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಧಿವೇಶನದ ವೇಳೆ ಸದಸ್ಯರಿಗೆ ಮುದ್ರಿತ ಕಡತಗಳು, ಪ್ರಶ್ನೋತ್ತರ ಪಟ್ಟಿ, ಕಾರ್ಯಸೂಚಿ ಹಾಗೂ ವಿಧೇಯಕಗಳ ಪ್ರತಿಗಳನ್ನು ವಿತರಿಸುವ ಬದಲು, ಇನ್‌ ಬಿಲ್ಟ್ ಅಪ್ಲಿಕೇಶನ್ ಹೊಂದಿರುವ ಐಪ್ಯಾಡ್‌ಗಳ ಮೂಲಕವೇ ಎಲ್ಲ ಮಾಹಿತಿ ಒದಗಿಸಲಾಗುವುದು. ಈ ಮೂಲಕ ಕೋಟ್ಯಂತರ ರೂಪಾಯಿ ಮುದ್ರಣ ವೆಚ್ಚ […]

Continue Reading

ಕಾರವಾರ ಭಝಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಕ್ಕಳಿಗೆ ಅದ್ದೂರಿ ಸ್ವಾಗತ; ಶಾಲಾ ಪ್ರಾರಂಭೋತ್ಸವ ಸಂಭ್ರಮ

ಕಾರವಾರ: ನಗರದ ಭಝಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಪಾಲಕ–ಪೋಷಕರ ಸಭೆಯನ್ನು ಸಂಭ್ರಮದಿಂದ ಆಯೋಜಿಸಲಾಯಿತು. ಶಾಲೆಗೆ ಹೊಸದಾಗಿ ಸೇರ್ಪಡೆಯಾದ ಮಕ್ಕಳಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಶಿಕ್ಷಕಿ ಶೀಲಾ ಪಿ. ಬಂಟ್ ಅವರು, ಉತ್ತಮ ಕಲಿಕೆ–ಉಜ್ವಲ ಭವಿಷ್ಯ ಎಂಬ ಶಿಕ್ಷಣ ಇಲಾಖೆಯ ಧ್ಯೇಯವನ್ನು ಸಾಕಾರಗೊಳಿಸಲು ಪಾಲಕರು ಮತ್ತು ಶಿಕ್ಷಕರು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದರು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಾಲೆ ಹಾಗೂ ಪೋಷಕರ ಸಹಭಾಗಿತ್ವ ಮಹತ್ವದ್ದಾಗಿದೆ. ಶಾಲೆಗೆ ಸಂಬಂಧಿಸಿದ ಯಾವುದೇ […]

Continue Reading

ಅಮದಳ್ಳಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌, ಜಿಲ್ಲಾ ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಸಿಇಒ ಡಾ. ದಿಲೀಷ್ ಶಶಿ ಅದ್ದೂರಿ ಚಾಲನೆ

ಕಾರವಾರ: ಜಿಲ್ಲೆಯ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಶಾಲೆಗಳು ಮಕ್ಕಳ ಕಲಿಕೆಗೆ ಪೂರಕವಾದ ಸ್ನೇಹಪರ ವಾತಾವರಣ ನಿರ್ಮಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಹೇಳಿದರು. ಅಮದಳ್ಳಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣವು ಕೇವಲ ಅಕ್ಷರಜ್ಞಾನಕ್ಕೆ ಸೀಮಿತವಲ್ಲ, ಅದು ಮಕ್ಕಳ ಬದುಕು ರೂಪಿಸುವ ಶಕ್ತಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪ್ರತಿಯೊಂದು ಹಳ್ಳಿಯ ಕೊನೆಯ ಮಗುವಿಗೂ ಉನ್ನತ […]

Continue Reading

ಎಕ್ಸ್ ಪರ್ಟ್ ಪಿಯು ಕಾಲೇಜು: ಜೆಇಇ ಅಡ್ವಾನ್ಸ್ಡ್‌ನಲ್ಲಿ ವಿದ್ಯಾರ್ಥಿಗಳ ಸಾಧನೆಯ ಗರಿ

ಮಂಗಳೂರು: ದೇಶದ ಪ್ರತಿಷ್ಠಿತ ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆಗಳ (ಐಐಟಿ) ಪ್ರವೇಶಕ್ಕಾಗಿ ನಡೆದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಜನರಲ್ ಮೆರಿಟ್ ವಿಭಾಗದಲ್ಲಿ ಸುಹಾಸ್ ಬಸನಗೌಡ ಬಾಲನಗೌಡ್ರ 2,593ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅರಳೆ ವಿರೂಪಾಕ್ಷಿ 7,885 ನೇ ರ‍್ಯಾಂಕ್, ನಿಖಿಲ್ ಭೂಷಣ್ ಶ್ರೀನಿವಾಸ್ 9,150ನೇ ರ‍್ಯಾಂಕ್ ಹಾಗೂ ಪ್ರಖ್ಯಾತ್ ತಿರುಪತಿರಡ್ಡಿ ನೀಲಣ್ಣವರ್ 9,806 ನೇ ರ‍್ಯಾಂಕ್ ಗಳಿಸಿದ್ದಾರೆ. ಕ್ಯಾಟಗರಿ ವಿಭಾಗದಲ್ಲಿ […]

Continue Reading

ಶಾರದಾ ಪಿಯು ಕಾಲೇಜಿನಲ್ಲಿ ಮಾರ್ಗದರ್ಶನ ಕಾರ್ಯಕ್ರಮ, ಮೌಲ್ಯ ಶಿಕ್ಷಣದ ಪಾಠ ಮಾಡಿದ ಡಾ. ಎಂ.ಬಿ. ಪುರಾಣಿಕ್

ತಲಪಾಡಿ: ಶಾರದಾ ವಿದ್ಯಾನಿಕೇತನ ಪಿ.ಯು. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಆಯೋಜಿಸಿದ್ದ ಮಾರ್ಗದರ್ಶನ ಕಾರ್ಯಕ್ರಮ ಕಾಲೇಜಿನ ಭೂ ವರಾಹ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾರದಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗಾಗಿ ಕಠಿಣ ಪರಿಶ್ರಮ ಮತ್ತು ದೃಢ ಸಂಕಲ್ಪದೊಂದಿಗೆ ಅಧ್ಯಯನ ನಡೆಸಬೇಕು. ಸಂಸ್ಥೆ ಒದಗಿಸುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕೆಂದು ಕರೆ ನೀಡಿದರು. ನಿರ್ದೇಶಕ ಸಮೀರ್ ಪುರಾಣಿಕ್ […]

Continue Reading