ಮರಣ ನೋಂದಣಿಯಲ್ಲಿ ಸರಿಯಾದ ಆಧಾರ್ ಸಂಖ್ಯೆ ಕಡ್ಡಾಯ, ತಪ್ಪಾದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಮರಣ ನೋಂದಣಿ ವೇಳೆ ಮೃತರ ಸರಿಯಾದ ಆಧಾರ್ ಸಂಖ್ಯೆಯನ್ನು ಪರಿಶೀಲಿಸಿ ದಾಖಲಿಸುವುದು ಕಡ್ಡಾಯವಾಗಿದ್ದು, ತಪ್ಪು ಆಧಾರ್ ಸಂಖ್ಯೆ ನಮೂದಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ  ಅವರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಜನನ-ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮರಣ ಪ್ರಮಾಣಪತ್ರದಲ್ಲಿ ಜೀವಂತ ವ್ಯಕ್ತಿಯ ಆಧಾರ್ ಸಂಖ್ಯೆ ನಮೂದಿಸಿದರೆ, ಆ ವ್ಯಕ್ತಿ ವಿವಿಧ […]

Continue Reading

ಸಾವಿರಾರು ಉದ್ಯೋಗಗಳ ಅವಕಾಶ: ಅ. 7-8ರಂದು ಮೂಡುಬಿದಿರೆಯಲ್ಲಿ ‘ಆಳ್ವಾಸ್ ಪ್ರಗತಿ-2026’: ಪ್ರಸಾದ ಶೆಟ್ಟಿ

ಕಾರವಾರ: ಉದ್ಯೋಗದ ನಿರೀಕ್ಷೆಯಲ್ಲಿ ಇರುವ ಪದವೀಧರರು, ತಾಂತ್ರಿಕ ಶಿಕ್ಷಣ ಪಡೆದವರು ಹಾಗೂ ಅನುಭವಿ ಅಭ್ಯರ್ಥಿಗಳಿಗೆ ಒಂದೇ ವೇದಿಕೆಯಲ್ಲಿ ಸಾವಿರಾರು ಉದ್ಯೋಗಾವಕಾಶಗಳನ್ನು ಕಲ್ಪಿಸುವ ‘ಆಳ್ವಾಸ್ ಪ್ರಗತಿ-2026’ ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. ದೇಶದ ವಿವಿಧ ಕ್ಷೇತ್ರಗಳ 350ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 24 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ […]

Continue Reading

ನಾಲ್ಕನೇ ಬಾರಿ ಸಚಿವರಾಗಿ ಶಿವರಾಜ್ ತಂಗಡಗಿ: ವಿದ್ಯಾರ್ಥಿ ನಾಯಕನಿಂದ ಸಂಪುಟದ ಹಿರಿಯ ಮುಖಂಡ,ನಾಗುವವರೆಗೆ ರಾಜಕೀಯ ಪಯಣ

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಇಳಕಲ್‌ ಸಾಮಾನ್ಯ ಕುಟುಂಬದಿಂದ ರಾಜಕೀಯ ಬದುಕು ಆರಂಭಿಸಿ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿರುವ ಶಿವರಾಜ್ ಎಸ್. ತಂಗಡಗಿ ಅವರು ಮತ್ತೊಮ್ಮೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಅವರು ನಾಲ್ಕನೇ ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರ ರಾಜಕೀಯ ಜೀವನಕ್ಕೆ ಮತ್ತೊಂದು ಮಹತ್ವದ ಮೈಲಿಗಲ್ಲು ಸೇರ್ಪಡೆಯಾಗಿದೆ. 1971ರ ಜೂನ್ 10ರಂದು ಸಂಗಪ್ಪ ತಂಗಡಗಿ ಹಾಗೂ ಹುಲಿಗೆಮ್ಮ ದಂಪತಿಯ ಹಿರಿಯ ಪುತ್ರನಾಗಿ ಜನಿಸಿದ ಶಿವರಾಜ್ ತಂಗಡಗಿ ಅವರು […]

Continue Reading

ರಾಜ್ಯ ಸಚಿವ ಸಂಪುಟ ವಿಸ್ತರಣೆ ಪೂರ್ಣ: 20 ಮಂದಿಗೆ ಸಚಿವ ಸ್ಥಾನ, 13 ಹೊಸ ಮುಖಗಳಿಗೆ ಅವಕಾಶ,  ಹೆಬ್ಬಾಳಕರ್, ಆರ್ವಿಡಿಗೆ ನಿರಾಶೆ

ಬೆಂಗಳೂರು:  ಹಲವು ದಿನಗಳ ರಾಜಕೀಯ ಚರ್ಚೆ, ಲೆಕ್ಕಾಚಾರ ಮತ್ತು ತೀವ್ರ ನಿರೀಕ್ಷೆಗೆ ತೆರೆ ಬಿದ್ದಿದ್ದು, ರಾಜ್ಯ ಸರ್ಕಾರದ ಸಚಿವ ಸಂಪುಟವನ್ನು ಸೋಮವಾರ ವಿಸ್ತರಿಸಲಾಗಿದೆ. ಒಟ್ಟು 20 ಮಂದಿ ಶಾಸಕರು ಸಚಿವರಾಗಿ ಆಯ್ಕೆಯಾಗಿದ್ದು, ಅವರ ಅಧಿಕೃತ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಪೈಕಿ 13 ಮಂದಿ ಮೊದಲ ಬಾರಿಗೆ ಸಚಿವ ಸಂಪುಟ ಪ್ರವೇಶಿಸಿದ್ದು, ಒಬ್ಬ ಮಹಿಳಾ ಶಾಸಕರಿಗೆ ಅವಕಾಶ ಕಲ್ಪಿಸಲಾಗಿದೆ. ನೂತನ ಸಚಿವರು ಸೋಮವಾರ ಸಂಜೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಚಿವ […]

Continue Reading

ಉತ್ತರ ಕನ್ನಡಕ್ಕೆ ಮತ್ತೆ ಸಚಿವ ಸ್ಥಾನ: ಮಂಕಾಳ್ ಎಸ್. ವೈದ್ಯ ಸಂಪುಟಕ್ಕೆ ಸೇರ್ಪಡೆ

ಬೆಂಗಳೂರು:  ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ್ ಎಸ್. ವೈದ್ಯ ಅವರಿಗೆ ಸಚಿವ ಸ್ಥಾನ ದೊರೆತಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಹೊಸ ಚೈತನ್ಯ ಮೂಡಿದೆ. ಸಚಿವ ಸಂಪುಟದಲ್ಲಿ ಉತ್ತರ ಕನ್ನಡಕ್ಕೆ ಮತ್ತೆ ಪ್ರಾತಿನಿಧ್ಯ ಸಿಕ್ಕಿರುವುದು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ. ಮಂಕಾಳ್ ಎಸ್. ವೈದ್ಯ ಅವರು ಕಾಂಗ್ರೆಸ್‌ನ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ನಾಯಕರಾಗಿದ್ದು, ಪಕ್ಷದ ನಾಯಕತ್ವದ ವಿಶ್ವಾಸ ಗಳಿಸಿರುವ ಮುಖಂಡರಲ್ಲಿ ಒಬ್ಬರಾಗಿದ್ದಾರೆ. ಕ್ಷೇತ್ರದ ಜನರೊಂದಿಗೆ […]

Continue Reading

‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ ಇಂದು: ಜಗದೀಶ್ ಅಂಚನ್

ಮಂಗಳೂರು: ಸಹಕಾರವನ್ನು ಜೀವನದ ಧೈಯವನ್ನಾಗಿ, ಜನಸೇವೆಯನ್ನು ಜೀವನದ ಪರಮ ಗುರಿಯನ್ನಾಗಿ. ತ್ಯಾಗವನ್ನು ಬದುಕಿನ ಮಾರ್ಗವನ್ನಾಗಿ ಸ್ವೀಕರಿಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಏಳಿಗೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು, ಸಹಕಾರದ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡ ಮಹಾನ್ ಚೇತನ, ಸಹಕಾರ ರಂಗದ ಪಿತಾಮಹ ‘” ಮೊಳಹಳ್ಳಿ ಶಿವರಾವ್” ಅಗ್ರಗಣ್ಯರು. ಕೀರ್ತಿಶೇಷ ಮೊಳಹಳ್ಳಿ ಶಿವರಾವ್ ಅವರ ಬದುಕು ಹಾಗೂ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಸಾರ್ಥಕ ಸಮಾಜಮುಖಿ ಸೇವೆಯು ಸದಾ […]

Continue Reading

ರಾಜ್ಯದಲ್ಲಿ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ ಮತ್ತು ಮಲೆನಾಡಿಗೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವೆಡೆ ಮುಂದಿನ ಏಳು ದಿನಗಳ ಕಾಲ ವ್ಯಾಪಕ ಮಳೆ ಆಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಈ ಕುರಿತು ಮುನ್ಸೂಚನೆ ನೀಡಿದ್ದು, ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರೊಂದಿಗೆ ಕರಾವಳಿ ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ […]

Continue Reading

ಮಳೆಯ ಅಬ್ಬರ, ದಾಂಡೇಲಿ, ಜೋಯಿಡಾ ತಾಲ್ಲೂಕಿನ ಶಾಲೆಗಳಿಗೆ ಅ.3 ರಂದು ರಜೆ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಗಾಳಿ ಮುಂದುವರೆದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ದಾಂಡೇಲಿ ಮತ್ತು ಜೊಯಿಡಾ ತಾಲೂಕುಗಳ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಅ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಉಳಿದ ತಾಲ್ಲೂಕಿನ ಶಾಲೆಗಳು ಎಂದಿನಂತೆ ನಡೆಯಲಿದ್ದು, ಮಳೆ ಹೆಚ್ಚಾಗಿರುವ ತಾಲ್ಲೂಕಿನಲ್ಲಿ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಿದ್ದಾರೆ.

Continue Reading

ಕರ್ನಾಟಕ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ ಕೀ ಉತ್ತರ ಬಿಡುಗಡೆ: ಮಂಗಳೂರು ಐಎಎಸ್ ಸಂಸ್ಥೆಯ ಸಂತೋಷ್ ಕುಮಾರ್

ಮಂಗಳೂರು: ಕರ್ನಾಟಕ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಯ ಲಿಖಿತ ಪರೀಕ್ಷೆ ಭಾನುವಾರ ನಡೆದ ಬೆನ್ನಲ್ಲೇ, ನಗರದ ಮಂಗಳೂರು ಐಎಎಸ್ ಸಂಸ್ಥೆಯು ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಇದರಿಂದ ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು ಪರಿಶೀಲಿಸಿಕೊಂಡು ಸಂಭವನೀಯ ಅಂಕಗಳನ್ನು ಅಂದಾಜಿಸಿಕೊಳ್ಳಲು ಅವಕಾಶ ಸಿಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಪರೀಕ್ಷೆ ಮುಗಿದ ಕೂಡಲೇ ಸಂಸ್ಥೆಯ ವಿಷಯ ತಜ್ಞರು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿ ಉತ್ತರ ಕೀ ಸಿದ್ಧಪಡಿಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪರೀಕ್ಷಾರ್ಥಿಗಳು ಮಂಗಳೂರು ಐಎಎಸ್ ಕ್ಯಾಂಪಸ್‌ಗೆ […]

Continue Reading

ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ: ಪ್ರಧಾನಿಗೆ ಸಿಎಂ ಡಿಕೆಶಿ ಮನವಿ

ಮೈಸೂರು: ಭಾರತ ಪ್ರಗತಿ ಸಾಧಿಸಬೇಕಾದರೆ, ಕರ್ನಾಟಕದೊಂದಿಗೆ ಪ್ರಗತಿ ಸಾಧಿಸಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಒಟ್ಟಾಗಿ ಕೆಲಸ ಮಾಡೋಣ, ಕರ್ನಾಟಕ್ಕೆ ನೆರವು ನೀಡುವಾಗ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು. ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ವಿವೇಕ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಶನಿವಾರ ಮಾತನಾಡಿದರು. “ವಿವೇಕಾನಂದರ ತ್ಯಾಗ ನಮಗೆ ಸ್ಫೂರ್ತಿಯಾಗಬೇಕಿದೆ. ಅವರ ಶಕ್ತಿಯನ್ನು ನಾವು ಅಳವಡಿಸಿಕೊಳ್ಳಬೇಕಿದೆ. ಈ ಕಾರ್ಯಕ್ರಮ ಯುವ ಕ್ರಾಂತಿಯ ಐತಿಹಾಸಿಕ […]

Continue Reading