ಮಂಗಳೂರಿಗೆ ಅಮ್ಮನ ಆಗಮನ: ಮೇ 28, 29 ರಂದು ಬ್ರಹ್ಮಸ್ಥಾನ ಮಹೋತ್ಸವ, ಭಕ್ತರ ಸಂಭ್ರಮ

ಮಂಗಳೂರು: ಮಾತಾ ಅಮೃತಾನಂದಮಯಿ ದೇವಿ ಅವರು ಕರ್ನಾಟಕ–ಕೇರಳ ಯಾತ್ರೆಯ ಅಂಗವಾಗಿ ಮಂಗಳೂರಿಗೆ ಮಂಗಳವಾರ ಆಗಮಿಸಿದ್ದಾರೆ. ಮೇ 28 ಮತ್ತು 29 ರಂದು ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆವ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಅಮ್ಮ ಭಾಗವಹಿಸಲಿದ್ದಾರೆ. ಏಳು ವರ್ಷಗಳ ಬಳಿಕ ಅಮ್ಮ ಮಂಗಳೂರಿಗೆ ಭೇಟಿ ನೀಡಿದ್ದು, ಮಾತಾ ಅಮೃತಾನಂದಮಯಿ ಮಠದಲ್ಲಿ ಭಕ್ತರು ಹಾಗೂ ಆಶ್ರಮದ ಪ್ರತಿನಿಧಿಗಳು ವೇದಘೋಷ ಮತ್ತು ಸಾಂಪ್ರದಾಯಿಕ ವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಿದರು. ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ಮುಖ್ಯಸ್ಥ ಸ್ವಾಮಿನಿ ಮಂಗಳಾಮೃತ ಪ್ರಾಣ […]

Continue Reading

ಎನ್‌ಎಂಡಿಸಿ ಜತೆಗೆ ಕೆಐಓಸಿಎಲ್ ವಿಲೀನಕ್ಕೆ ಕೇಂದ್ರ ಸಚಿವ ಎಚ್ಡಿಕೆಗೆ ಶಾಸಕ ಡಾ. ಭರತ್ ಶೆಟ್ಟಿ ಮನವಿ

ಮಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದ (ಎನ್‌ಎಂಡಿಸಿ) ಜತೆ ವಿಲೀನಗೊಳಿಸಬೇಕು. ಕುದುರೆಮುಖ ಸಂಸ್ಥೆಯ ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಬಂಡವಾಳ ಹೂಡಿಕೆ ಮತ್ತು […]

Continue Reading

ಡಿಕೆಶಿಯತ್ತ ವಾಲಿದ ಕಾಂಗ್ರೆಸ್ ಶಾಸಕರು? ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ರಾಜಕೀಯ ಲೆಕ್ಕಾಚಾರ ಜೋರು, ಖಾದರ್ ಗೆ ಡಿಸಿಎಂ ಸ್ಥಾನ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತೀವ್ರವಾಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಹಲವರು ಇದೀಗ ಡಿ.ಕೆ. ಶಿವಕುಮಾರ್ ಬಣದತ್ತ ಮುಖ ಮಾಡುತ್ತಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಜೋರಾಗಿವೆ. ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಿದ್ದರಾಮಯ್ಯ ಪರವಾಗಿ ಕೆಲ ಹಿರಿಯ ಶಾಸಕರು ಹಾಗೂ ಸಚಿವರು ಮಾತ್ರ ಉಳಿದಿದ್ದು, ಡಿ.ಕೆ. ಶಿವಕುಮಾರ್ ಪರವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಡಿಕೆ ಶಿವಕುಮಾರ್ […]

Continue Reading

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಚರ್ಚೆಗೆ ದೇಶಪಾಂಡೆ ಹೇಳಿಕೆ ಹೊಸ ಟ್ವಿಸ್ಟ್, ವೇಗ ಪಡೆದ ರಾಜಕೀಯ ಚಟುವಟಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕುರಿತ ರಾಜಕೀಯ ಚರ್ಚೆಗಳು ತಾರಕಕ್ಕೇರುತ್ತಿರುವ ನಡುವೆಯೇ, ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ದೇಶಪಾಂಡೆ, ನವದೆಹಲಿಯಿಂದ ಹಿಂದಿರುಗುವಾಗಲೇ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿಕೊಂಡು ಬಂದಿದ್ದಾರೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಅವರು ನಮ್ಮೊಂದಿಗೆ ಮಾತನಾಡುವ ವೇಳೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು. […]

Continue Reading

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಚಿವ ಈಶ್ವರ್ ಖಂಡ್ರೆ ಹೇಳಿಕೆ: ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗೆ ಚೆಕ್ ಪೋಸ್ಟ್ ಸ್ಥಾಪನೆಗೆ ಆದೇಶ

 ಕುಕ್ಕೆ ಸುಬ್ರಹ್ಮಣ್ಯ : ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಅವರ ಪರಮಾಧಿಕಾರ ಆಗಿದೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಸಭಾ ಚುನಾವಣೆ ಕುರಿತು ವರಿಷ್ಠರ ಜತೆಗೆ ಚರ್ಚಿಸಲು ನವದೆಹಲಿಗೆ ತೆರಳಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರಲು ಇರುವ ನಾಲ್ಕೂ ಪ್ರವೇಶ ರಸ್ತೆಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗೆ ಚೆಕ್ ಪೋಸ್ಟ್ ಸ್ಥಾಪಿಸಲು ಆದೇಶ ನೀಡಲಾಗಿದೆ. ರಸ್ತೆಯ ಬದಿ ಪ್ಲಾಸ್ಟಿಕ್ ಬಾಟಲಿ, ತಟ್ಟೆ ಇತ್ಯಾದಿ ತ್ಯಾಜ್ಯಗಳು ಬಿದ್ದಿರುವುದನ್ನು ನೋಡಿದೆ. ಕೂಡಲೇ […]

Continue Reading

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ನಿರ್ಧಾರ? ರಾಜ್ಯ ಸಭೆ ಆಫರ್ ನೀಡಿದ ರಾಹುಲ್

ನವದೆಹಲಿ: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕೊನೆಗೂ ತಿರುವು ಪಡೆದುಕೊಂಡಿದೆ. ನವದೆಹಲಿಯಲ್ಲಿ ನಡೆದ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್​​​ ನಿವಾಸದಲ್ಲಿದ್ದ ಆಪ್ತ ಸಚಿವರು, ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿ ಚರ್ಚಿಸಿದ್ದಾರೆ. ಈ ವೇಳೆ ಸಿಎಂ ಸ್ಥಾನಕ್ಕೆ […]

Continue Reading

ಮೇ 28 ಸಿಎಂ ಸಿದ್ದರಾಮಯ್ಯ ರಾಜೀನಾಮೆ? ನವದೆಹಲಿಯಿಂದ ಎಂ ಗೌಪ್ಯ ಲಕೋಟೆ ಬರುವ ನಿರೀಕ್ಷೆ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದ್ದು, ನವದೆಹಲಿಯಲ್ಲಿ ನಡೆದ ಸರಣಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ನಾಯಕತ್ವ ಬದಲಾವಣೆ ಪ್ರಸ್ತಾಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಆಫರ್ ನೀಡುವ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ರಾಹುಲ್ ಗಾಂಧಿ ಮಾತನ್ನು ತಮ್ಮ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಈ ವಾರದಲ್ಲೇ ಹೊಸ ಸಿಎಂ ಅಧಿಕಾರಕ್ಕೆ […]

Continue Reading

ರಾಜಧಾನಿಯಲ್ಲಿ ಸಿಎನ್‌ಜಿ ಬೆಲೆ ಏರಿಕೆ, ಕೆ.ಜಿಗೆ 2 ರೂಪಾಯಿಗೆ ಏರಿಕೆ, 4ನೇ ಬಾರಿ ಹೆಚ್ಚಳ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸಿಎನ್‌ಜಿ ಬೆಲೆಯನ್ನು ಕೆ.ಜಿಗೆ 2 ರೂಪಾಯಿ ಏರಿಸಿದ್ದು, ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ನಾಲ್ಕನೇ ಬಾರಿ ಹೆಚ್ಚಳ ಆಗಿದೆ. ಸಿಎನ್‌ಜಿಗೆ ಈಗ ಪ್ರತಿ ಕೆ.ಜಿಗೆ 83.09 ರೂ. ಇದೆ. ಮೇ 15 ರ ನಂತರ ಒಟ್ಟಾರೆ ಪ್ರತಿ ಕೆಜಿಗೆ 4 ರೂಪಾಯಿ ಬೆಲೆ ಏರಿಕೆ ಆಗಿದೆ. ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ದೇಶದಲ್ಲಿ ಇಂಧನ ಬೆಲೆಗಳು ಮತ್ತೆ ಏರುಗತಿಯಲ್ಲಿ ಸಾಗುತ್ತಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕ್ರಮವಾಗಿ 2.61 ರೂ ಮತ್ತು 2.71 ರೂಪಾಯಿಗಳಷ್ಟು […]

Continue Reading

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಲಿ : ಡಾ. ನಾಗಲಕ್ಷ್ಮಿ ಚೌಧರಿ

ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಹೇಳಿದರು. ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರಕ್ಷಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ […]

Continue Reading

ಉಡುಪಿ ಸರಕಾರಿ ತಾಯಿ, ಮಕ್ಕಳ ಆಸ್ಪತ್ರೆಗೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ, ರೋಗಿಗಳ ಆರೋಗ್ಯ ವಿಚಾರಣೆ

ಉಡುಪಿ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಗರ್ಭೀಣಿ, ಬಾಣಂತಿ ರೋಗಿಗಳ ಕುಶಲೋಪರಿ ವಿಚಾರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅನುರಾಧ ಬಿ ಹಾದಿಮನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ […]

Continue Reading