ಕೇಂದ್ರ ಸಚಿವ ಸೋಮಣ್ಣಗೆ ಜೆಡಿಎಸ್ ಅಕ್ಷಿತ್ ಸುವರ್ಣ ನೇತೃತ್ವದ ನಿಯೋಗದಿಂದ ಮನವಿ

ಮಂಗಳೂರು: ಕರಾವಳಿ ಭಾಗದ ಬಹುಕಾಲದ ಪ್ರಮುಖ ರೈಲ್ವೆ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಯುವ ಘಟಕದ ನಿಯೋಗವು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿತು. ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದ ನಿಯೋಗವು ಶನಿವಾರ ಮಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿ ಪ್ರತ್ಯೇಕ “ಮಂಗಳೂರು ರೈಲ್ವೆ ವಿಭಾಗ ರಚನೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತು. ಪ್ರಸ್ತುತ ಮಂಗಳೂರು ಪಾಲಕ್ಕಾಡ್ ರೈಲ್ವೆ ವಿಭಾಗದ […]

Continue Reading

ಸಹ್ಯಾದ್ರಿಯಲ್ಲಿ ಇಂಡಸ್ಟ್ರಿ ಇಂಟಿಗ್ರೇಟೆಡ್ ಸೆಂಟರ್ ಉದ್ಘಾಟನೆ, ಕೌಶಲ್ಯಾಭಿವೃದ್ಧಿಗೆ ಆದ್ಯತೆ: ಸಚಿವ ಡಾ. ಶರಣಪ್ರಕಾಶ್

ಮಂಗಳೂರು: ಪದವೀಧರರಲ್ಲಿ ಹೆಚ್ಚುತ್ತಿರುವ ಕೌಶಲ್ಯ ಅಂತರವನ್ನು ನಿವಾರಿಸಲು ಕೈಗಾರಿಕಾ–ಸಂಯೋಜಿತ ಕೇಂದ್ರಗಳು ಪರಿಣಾಮಕಾರಿಯಾಗಲಿವೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಹೇಳಿದರು. ಉದ್ಯಮ ಮತ್ತು ಶಿಕ್ಷಣ ಕ್ಷೇತ್ರಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ ವಿವಿಧ ಇಂಡಸ್ಟ್ರಿ ಇಂಟಿಗ್ರೇಟೆಡ್ ಸೆಂಟರ್‌ಗಳನ್ನು ಶನಿವಾರ ಅವರು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳನ್ನು ಉದ್ಯಮಕ್ಕೆ ಸಿದ್ಧಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಪಠ್ಯಕ್ರಮ ಪುನರ್‌ರಚನೆಗೆ ಕ್ರಮ ಕೈಗೊಂಡಿದೆ. ಸಹ್ಯಾದ್ರಿ ಕಾಲೇಜು ಹಲವು […]

Continue Reading

ಪಾಲೇಮಾರ್ ಕನ್ವೆನ್ಶನ್ ಸೆಂಟರ್ ಸೇರಿ ನಾಲ್ಕು ಸಭಾಭವನಗಳ ಲೋಕಾರ್ಪಣೆ ಮಾಡಿದ ರಾಜ್ಯಪಾಲ ಅಬ್ದುಲ್ ನಜೀರ್

ಮಂಗಳೂರು: ಬಡತನ ನಿರ್ಮೂಲನೆ ಹಾಗೂ ಸಮಾಜದಲ್ಲಿ ಸಮಾನತೆ ಸ್ಥಾಪನೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ ಎಂದು ಆಂಧ್ರಪ್ರದೇಶ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್ ಹೇಳಿದರು. ನಗರದ ಮೇರಿಹಿಲ್‌ನ ಪಾಲೇಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ಶನಿವಾರ ಲ್ಯಾಂಡ್ ಲಿಂಕ್ಸ್ ಸಂಸ್ಥೆಯಿಂದ ನಿರ್ಮಿಸಲಾದ ಅತ್ಯಾಧುನಿಕ ಸೌಲಭ್ಯಗಳ ನಾಲ್ಕು ಭವ್ಯ ಸಭಾಭವನಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಬಹುಮುಖ ಪ್ರತಿಭೆಯ ವ್ಯಕ್ತಿ. ಕೈಗಾರಿಕೆ, ನಿರ್ಮಾಣ, ಶಿಕ್ಷಣ ಹಾಗೂ ಸಮಾಜಸೇವಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಅವರು ಬಡ ವಿದ್ಯಾರ್ಥಿಗಳ […]

Continue Reading

ಕೌಶಲಾಭಿವೃದ್ಧಿ, ಪ್ರಾಯೋಗಿಕ ಕೌಶಲಕ್ಕೆ ಹೆಚ್ಚು ಆದ್ಯತೆ ನೀಡಬೇಕು: ಸಚಿವ ಡಾ. ಎಂ.ಸಿ. ಸುಧಾಕರ್

ಮಂಗಳೂರು: ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಕೇವಲ ಸೈದ್ಧಾಂತಿಕ ಕಲಿಕೆಗೆ ಸೀಮಿತವಾಗದೆ, ಕೌಶಲಾಭಿವೃದ್ಧಿ ಹಾಗೂ ಪ್ರಾಯೋಗಿಕ ಅನುಭವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು. ನಗರದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ನಲ್ಲಿ ಶುಕ್ರವಾರ ಆಯೋಜಿಸಿದ್ದ ಅತ್ಯಾಧುನಿಕ ಎಐ (ಕೃತಕ ಬುದ್ಧಿಮತ್ತೆ) ಮತ್ತು ರೊಬಾಟಿಕ್ಸ್ ಲ್ಯಾಬ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಂಫಸಿಸ್ ಫೌಂಡೇಷನ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಹಾಗೂ ನ್ಯಾಸ್‌ಕಾಮ್ ಫೌಂಡೇಷನ್ ಸಹಯೋಗದಲ್ಲಿ ಈ […]

Continue Reading

ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿನ ಪಯಣದ ಸವಿನೆನಪು, 4 ಅತ್ಯಾಧುನಿಕ ಶೈಲಿಯ ಸಭಾ ಭವನಗಳ ಲೋಕಾರ್ಪಣೆ 23 ಕ್ಕೆ: ಕೃಷ್ಣ ಜೆ. ಪಾಲೇಮಾರ್

ಮಂಗಳೂರು: ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಪಯಣದ ಸವಿನೆನಪಿಗಾಗಿ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡಲಾಗಿರುವ ನಾಲ್ಕು ಅತ್ಯಾಧುನಿಕ ಶೈಲಿಯ ಹಾಗೂ ಸೌಲಭ್ಯ ಹೊಂದಿರುವ ಸಭಾಭವನಗಳು ಇದೇ 23 ರಂದು ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾ. ಎಸ್. ಅಬ್ದುಲ್ ನಜೀರ್‌ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಲ್ಯಾಂಡ್ ಲಿಂಕ್ಸ್ ಗ್ರೂಪ್ ಸಂಸ್ಥೆಯ ಅಧ್ಯಕ್ಷ ಕೃಷ್ಣ ಜೆ ಪಾಲೇಮಾರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅತ್ಯಾಧುನಿಕ ಸೌಲಭ್ಯಗಳು, ಐಷಾರಾಮಿ ವಿನ್ಯಾಸ ಹಾಗೂ […]

Continue Reading

ಆಳ್ವಾಸ್ ಗೆ ಥ್ರೋಬಾಲ್ ನಲ್ಲಿ 21 ನೇ ಬಾರಿಯೂ ಚಾಂಪಿಯನ್ ಪಟ್ಟ

ಮೂಡುಬಿದಿರೆ: ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ಥ್ರೋಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು ಅದ್ಭುತ ಪ್ರದರ್ಶನ ನೀಡಿ, 21ನೇ ಬಾರಿಯೂ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡು, ಪೂರ್ಣಪ್ರಜ್ಞಾ ರೋಲಿಂಗ್ ಟ್ರೋಫಿ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಕ್ವಾರ್ಟರ್ ಫೈನಲ್ ಮಡಂತ್ಯಾರ್‌ ಸೇಕ್ರೆಡ್ ಹಾರ್ಟ್ ಕಾಲೇಜಿನ ತಂಡವನ್ನು ಆಳ್ವಾಸ್ ತಂಡ 25 -10 ಹಾಗೂ 25-12 ಅಂಕಗಳ ನೇರ ಸೆಟ್‌ನಲ್ಲಿ ಮಣಿಸಿತು. ಸೆಮಿಫೈನಲ್‌ನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ವಿರುದ್ಧ 25-18 ಹಾಗೂ 25-12 ಅಂಕಗಳ ಅಂತರದಲ್ಲಿ […]

Continue Reading

ಬೋಳೂರಿನಲ್ಲಿ ಸ್ನಾನಗೃಹ ಸಹಿತ 10 ಶೌಚಾಲಯ ಉದ್ಘಾಟಸಿದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ಮಾತಾ ಅಮೃತಾನಂದಮಯಿ ಅವರು ಸಮಾಜಕ್ಕೆ ಧಾರ್ಮಿಕ ಮಾರ್ಗದರ್ಶನ ಮಾತ್ರವಲ್ಲದೆ ಸಂಸ್ಕೃತಿ, ಶಿಕ್ಷಣ ಮತ್ತು ಜನಪರ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಸಲ್ಲಿಸುತ್ತಿರುವ ಸೇವೆ ಅತ್ಯುತ್ತಮ, ಮಾದರಿ ಆಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಹೇಳಿದರು. ಮೇ 28 ಹಾಗೂ 29 ರಂದು ಅಮ್ಮನವರ ಮಂಗಳೂರು ಭೇಟಿಯ ಸಂದರ್ಭದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಬೋಳೂರಿನಲ್ಲಿ ನಿರ್ಮಿಸಲಾದ 10 ಸ್ನಾನಗೃಹ ಮತ್ತು ಶೌಚಾಲಯಗಳನ್ನು ಉದ್ಘಾಟಿಸಿ ಅವರು ಮಾತಾಡಿದರು. ಮಂಗಳೂರಿನ ಅಮ್ಮನವರ ಆಶ್ರಮಕ್ಕೆ ಹಾಗೂ ದೇವಸ್ಥಾನಕ್ಕೆ ಮತ್ತು […]

Continue Reading

ವಿಟ್ಲದಲ್ಲಿ ಜಿಲ್ಲಾ ಮಟ್ಟದ ರೇಷ್ಮೆ ಕೃಷಿ ಮೇಳ ಉದ್ಘಾಟಿಸಿದ ಸಚಿವ ವೆಂಕಟೇಶ್

ವಿಟ್ಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೇಷ್ಮೆ ಕೃಷಿ ಹೆಚ್ಚಿಸಲು ವಿಶೇಷ ಆದ್ಯತೆ ನೀಡಲಾಗುವುದು ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರು ಹೇಳಿದರು. ಬುಧವಾರ ರೇಷ್ಮೆ ಇಲಾಖೆ ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ವತಿಯಿಂದ ವಿಟ್ಲದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರೇಷ್ಮೆ ಕೃಷಿ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. 30 ವರ್ಷಗಳ ಹಿಂದಿನವರೆಗೂ ಕರಾವಳಿ ಜಿಲ್ಲೆಗಳಲ್ಲಿ ರೇಷ್ಮೆ ಕೃಷಿ ವ್ಯಾಪಕವಾಗಿ ಬೆಳೆಯಲಾಗುತ್ತಿತ್ತು. ಪ್ರಸ್ತುತ ಈ ಭಾಗದಲ್ಲಿ ಅಡಿಕೆ ಬೆಳೆ ಕಡಿಮೆಯಾಗುತ್ತಿರುವುದರಿಂದ ಪರ್ಯಾಯವಾಗಿ […]

Continue Reading

15 ಸಾವಿರ ಶಿಕ್ಷಕರ ನೇಮಕಕ್ಕೆ ಆರ್ಥಿಕ ಇಲಾಖೆಗೆ ಕೂಡಲೇ ಪ್ರಸ್ತಾವ ಸಲ್ಲಿಸಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜೂನ್ 1ರಂದು ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುವುದು, ಕರ್ನಾಟಕ ಪಬ್ಲಿಕ್ ಸ್ಕೂಲ್, ಶಿಕ್ಷಕರ ನೇಮಕಾತಿ, ಪರೀಕ್ಷಾ ಫಲಿತಾಂಶ ಸುಧಾರಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಜತೆಗೆ ಚರ್ಚೆ ನಡೆಸಿ ಮಾತನಾಡಿದ ಅವರು, ಒಂದು ಕೆಪಿಎಸ್ ಶಾಲೆಯಲ್ಲಿ […]

Continue Reading

60 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ: ಜಂಟಿ ನಿರ್ದೇಶಕಿ ದರ್ಶನಾ ಕೆ.ಟಿ 

ಮಂಗಳೂರು:  ಜೂನ್ 1  ರಿಂದ ಜುಲೈ 31 ರವರೆಗೆ ಮೀನುಗಾರಿಕೆಗೆ ನಿಷೇಧವನ್ನು ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದು, ಈ ವೇಳೆಯಲ್ಲಿ ಮೀನುಗಾರಿಕೆಗೆ ತೆರಳದಂತೆ  ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ದರ್ಶನಾ ಕೆ.ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಜಿಲ್ಲೆಯ ಟೆರಿಟೋರಿಯಲ್ ವಾಟರ್ಸ್ ಭಾಗದಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಮೀನುಗಾರಿಕೆಗೆ ನೀಷೆಧ ಹಾಕಲಾಗಿದೆ. 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು  […]

Continue Reading