ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿಗೆ ವಿಳಂಬ ಬೇಡ: ಅಧಿಕಾರಿಗಳಿಗೆ ಶಾಸಕ ಕಾಮತ್ ಚಾಟಿ

ಮಂಗಳೂರು: ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ದಲಿತೋದ್ದಾರಕ ಕುದ್ಮುಲ್ ರಂಗರಾವ್ ಅವರ ಸಮಾಧಿ ಹಾಗೂ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಅನಗತ್ಯವಾಗಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಶೀಘ್ರ ಸಮಸ್ಯೆ ಬಗೆಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂಬಂಧ ಸೋಮವಾರ ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, 2022ರ ಬಿಜೆಪಿ ಸರ್ಕಾರದ ಅವಧಿಯಲ್ಲೇ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ-1ರಡಿ 3 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿತ್ತು. […]

Continue Reading

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 86 ಮಕ್ಕಳು ಕಾಣೆಯಾದ ಪ್ರಕರಣ ದಾಖಲು: ಜಿಲ್ಲಾಧಿಕಾರಿ ದರ್ಶನ್

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 86 ಮಕ್ಕಳು ಕಾಣೆಯಾದ ಪ್ರಕರಣಗಳು ದಾಖಲಾಗಿದ್ದು, ಅವರಲ್ಲಿ 79 ಮಕ್ಕಳು ಪತ್ತೆಯಾಗಿದ್ದಾರೆ. ಉಳಿದ ಪ್ರಕರಣಗಳನ್ನೂ ಆದ್ಯತೆಯ ಮೇರೆಗೆ ತನಿಖೆ ನಡೆಸಿ […]

Continue Reading

ಪಲ್ಸ್ ಪೊಲಿಯೋ ಸಿದ್ದತೆ ಮಾಡಿಕೊಳ್ಳಲು ಕಮಿಷನರ್ ರವಿಚಂದ್ರ ನಾಯಕ್ ಸೂಚನೆ

ಮಂಗಳೂರು: ಇದೇ 28 ರಂದು ನಡೆವ ರಾಷ್ಟ್ರೀಯ ಪಲ್ಸ್ ಪೊಲಿಯೋ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಪಾಲಿಕೆ ಕಮಿಷನರ್ ರವಿಚಂದ್ರ ನಾಯಕ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರ ಪಾಲಿಕೆ ಮಂಗಳಾ ಸಭಾಂಗಣದಲ್ಲಿ ಸೋಮವಾರ ನಡೆದ ನಗರ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ,0 ರಿಂದ 5 ವರ್ಷದೊಳಗಿನ ಯಾವುದೇ ಮಗುವೂ ಲಸಿಕೆಯಿಂದ ವಂಚಿತರಾಗಬಾರದು. ಮುಂಜಾಗೃತಾ ಕ್ರಮವಾಗಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು. ಕಾರ್ಮಿಕರ ಮಕ್ಕಳಿಗೂ ಲಸಿಕೆ […]

Continue Reading

ಸಹ್ಯಾದ್ರಿ ಕಾಲೇಜು–ಕ್ರಿಸ್ತು ಜಯಂತಿ ವಿವಿ ನಡುವೆ ಶೈಕ್ಷಣಿಕ ಸಹಕಾರ ಒಪ್ಪಂದಕ್ಕೆ ಸಹಿ

ಮಂಗಳೂರು: ಇಲ್ಲಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಬೆಂಗಳೂರಿನ ಕ್ರಿಸ್ತು ಜಯಂತಿ ಡೀಮ್ಡ್ ಟು ಬಿ ವಿವಿ ನಡುವೆ ಶೈಕ್ಷಣಿಕ ಸಹಕಾರ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆದ ಸಮಾರಂಭದಲ್ಲಿ ಒಪ್ಪಂದ ಕಾರ್ಯಕ್ರಮ ನೆರವೇರಿತು. ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಕುಲಪತಿ ರೆವ್. ಡಾ. ಅಗಸ್ಟಿನ್ ಜಾರ್ಜ್ ಸಿ.ಎಂ.ಐ ಹಾಗೂ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ರೆವ್. ಫಾ. ಜೋಶಿ ಮ್ಯಾಥ್ಯೂ ಸಿ.ಎಂ.ಐ ಇದ್ದರು. ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಸಂಸ್ಥಾಪಕ ಡಾ. ಮಂಜುನಾಥ […]

Continue Reading

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಅಗಸ್ಟ್ 7, 8ಕ್ಕೆ, ಗ್ರಾಮೀಣ ಮಟ್ಟದ ಪ್ರತಿಭೆಗಳಿಗೆ ಉದ್ಯೋಗ ಒದಗಿಸುವ ವೇದಿಕೆ: ಡಾ. ಮೋಹನ್ ಆಳ್ವ

ಮಂಗಳೂರು: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. ಈ ಬಾರಿ 300ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ಅಭ್ಯರ್ಥಿಗಳಿಗೆ ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಶನಿವಾರ ಸುದ್ದಿಗೋಷ್ಟಿಯಲ್ಲಿ […]

Continue Reading

ಕಡಬ: ಪತಿ, ಪತ್ನಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ಅನಾಥವಾದ ಮಗು, ಸ್ಥಳಕ್ಕೆ ಪೊಲೀಸರ ದೌಡು

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಆಲಂಕಾರು ಕಜೆ ಎಂಬಲ್ಲಿ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ದಂಪತಿ ಎರಡು ವರ್ಷದ ಹೆಣ್ಣು ಮಗು ಮನೆಯಲ್ಲಿ ಅನಾಥ ಸ್ಥಿತಿಯಲ್ಲಿ ಪತ್ತೆ ಆಗಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಪತ್ನಿ ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಮೃತರನ್ನು ಬಜಗೋಳಿ ದಿನೇಶ್ ಹಾಗೂ ಪತ್ನಿ ಸಂಗೀತಾ ಎಂದು ಗುರುತಿಸಲಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗುವಿನ […]

Continue Reading

ಕಾರವಾರದತ್ತ ವಂದೇ ಭಾರತ್‌ ವೇಗ; ಕರಾವಳಿ ಸಂಸದರ ಒಗ್ಗಟ್ಟಿನ ಪ್ರಯತ್ನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

ಕಾರವಾರ: ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲನ್ನು ಕಾರವಾರದವರೆಗೆ ವಿಸ್ತರಿಸಲು ಕರಾವಳಿಯ ಎಲ್ಲ ಸಂಸದರು ಒಗ್ಗಟ್ಟಿನಿಂದ ಪ್ರಯತ್ನಿಸುತ್ತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಕುಮಟಾ ರೈಲು ನಿಲ್ದಾಣದಲ್ಲಿ ನೂತನ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ ಹಾಗೂ ಕುಮಟಾ–ಕಾಚೇಗುಡ ವಿಸ್ತರಿತ ರೈಲು ಸೇವೆಗೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು. ಕುಮಟಾ, ಗೋಕರ್ಣ, ಭಟ್ಕಳ ಮತ್ತು ಮುರುಡೇಶ್ವರ ರೈಲು ನಿಲ್ದಾಣಗಳಲ್ಲಿ ಒಟ್ಟು ಸುಮಾರು ₹10 ಕೋಟಿ ವೆಚ್ಚದ ವಿವಿಧ ಸಾರ್ವಜನಿಕ ಉಪಯೋಗದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಾಗಿದೆ ಎಂದು ಅವರು […]

Continue Reading

ನೋಂದಣಿ ಅವಧಿ ಮುಗಿದ ವಾಹನ ಬಳಕೆ ಆರೋಪ: ಕಾರವಾರ ಜೈಲರ್ ವಾಹನ ವಶಕ್ಕೆ, ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲು

ಕಾರವಾರ: ನೋಂದಣಿ ಅವಧಿ ಮುಗಿದಿದ್ದರೂ ಸರ್ಕಾರಿ ವಾಹನವನ್ನು ಬಳಸಿದ ಆರೋಪದ ಹಿನ್ನೆಲೆಯಲ್ಲಿ ಕಾರವಾರ ಕಾರಾಗೃಹದ ಸೂಪರಿಂಟೆಂಡೆಂಟ್ ಹೇಮಾವತಿ ಅವರ ವಾಹನವನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿರುವ ಘಟನೆ ನಡೆದಿದೆ. ಈ ಸಂಬಂಧ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಮಾಧವ ನಾಯಕ್ ಅವರು ಸಂಚಾರ ನಿಯಮ ಉಲ್ಲಂಘನೆ ಕುರಿತು ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕಾಜುಬಾಗ್ ಸರ್ಕಲ್ ಬಳಿ ಕಾರಾಗೃಹ ಸೂಪರಿಂಟೆಂಡೆಂಟ್ ಅವರ ವಾಹನವನ್ನು ತಡೆದು […]

Continue Reading

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಗೆ ಮುರಳಿ ಹೊಸಮಜಲು ಪುನರಾಯ್ಕೆ

ಮಂಗಳೂರು: ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆ ನಗರದ ಕೆಪಿಟಿ ಸಮೀಪದ ಎಸ್‌ ಕ್ಯೂಬ್‌ ಸೆಂಟರ್‌ ಸಭಾಂಗಣದಲ್ಲಿ ನಡೆಯಿತು. ಸಭೆಯ ಬಳಿಕ ನಡೆದ ಚುನಾವಣೆಯಲ್ಲಿ 2026-28ನೇ ಅವಧಿಗೆ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ವಿ.ಎಂ. ಸತೀಶನ್‌, ಖಜಾಂಚಿಯಾಗಿ ಅಜಯಕುಮಾರ್‌, ಉಪಾಧ್ಯಕ್ಷರಾಗಿ ವಾಸಂತಿ ನಾಯರ್‌, ಜತೆ ಕಾರ್ಯದರ್ಶಿಯಾಗಿ ಮಂಜು ಅಜಿತ್‌ ಹಾಗೂ ಜತೆ ಖಜಾಂಚಿಯಾಗಿ ರವೀಂದ್ರನಾಥ್‌ ಆಯ್ಕೆಯಾದರು. ಬೋರ್ಡ್‌ ಸದಸ್ಯರಾಗಿ ವಿಜಯಕುಮಾರ್‌, ಎಂ.ವಿ. ರಾಜನ್‌ ಮತ್ತು ಎ.ಎಸ್. ಮೋಹನ್‌ ಆಯ್ಕೆಯಾಗಿದ್ದಾರೆ. ಸಮಿತಿಯ ಸದಸ್ಯರಾಗಿ […]

Continue Reading

ದ.ಕ. ಜಿಲ್ಲೆಯಲ್ಲಿ12 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ, ಬಿಗಿ ಭದ್ರತೆ: ಹೆಚ್ಚುವರಿ ಜಿಲ್ಲಾಧಿಕಾರಿ ರಾಜು

ಮಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಜೂನ್ 21 ರಂದು ರಾಷ್ಟ್ರಾದ್ಯಂತ ನಡೆಯಲಿರುವ ನೀಟ್ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. ಜಿಲ್ಲೆಯ 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲವೂ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿವೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ. ಅವರು ಮಾತನಾಡಿ, ಪರೀಕ್ಷೆಯನ್ನು ನಕಲು ಮುಕ್ತ, ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಪ್ರತಿ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರು ಇರಲಿದ್ದಾರೆ. ಎನ್‌ಟಿಎ ವತಿಯಿಂದ ಪರೀಕ್ಷಾ […]

Continue Reading