ಎಸ್‌ಐಆರ್‌: ದ.ಕ.ದಲ್ಲಿ 1.50 ಲಕ್ಷ ಮತದಾರರಿಗೆ ನೋಟಿಸ್- ಜಿಲ್ಲಾಧಿಕಾರಿ ದರ್ಶನ್

ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ಭಾಗವಾಗಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16,46,387 ಮತದಾರರ ಹೆಸರುಗಳು ದಾಖಲಾಗಿವೆ. ಕರಡು ಪಟ್ಟಿಯಿಂದ ಹೊರಗುಳಿದಿರುವ 1,50,153 ಮತದಾರರಿಗೆ ಆ.24 ರಿಂದ ಸೆ.23ರೊಳಗೆ ಬಿಎಲ್‌ಒಗಳ ಮೂಲಕ ನೋಟಿಸ್ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಸೋಮವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮ್ಯಾಪಿಂಗ್ ಆಗದಿರುವುದು, ಹೆಸರು ಅಥವಾ ಪೋಷಕರ ಹೆಸರಿನಲ್ಲಿ ಬದಲಾವಣೆ, ವಯಸ್ಸಿನ ಅಂತರ ಸೇರಿದಂತೆ ವಿವಿಧ ಕಾರಣಗಳಿಂದ ಕರಡು ಮತದಾರರ ಪಟ್ಟಿಯಿಂದ […]

Continue Reading

ಈದ್ ಮಿಲಾದ್: ಆಗಸ್ಟ್ 25 ರಂದು ದ.ಕ., ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ

ಮಂಗಳೂರು/ ಉಡುಪಿ: ಈದ್ ಮಿಲಾದ್ ಆಚರಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆ.26 ರ ಬದಲಿಗೆ ಆ.25 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿ ಅವರ ಕೋರಿಕೆ ಮೇರೆಗೆ ಆ.25 ರಂದು ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಜಿಲ್ಲಾಧಿಕಾರಿ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ಕೈಗೊಳ್ಳುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. […]

Continue Reading

ಸಾಂಕ್ರಾಮಿಕ ರೋಗ, ಎಚ್‌1ಎನ್‌1 ತಡೆಗೆ ಆರೋಗ್ಯ ಇಲಾಖೆ ಸನ್ನದ್ಧ, 4,212 ಇನ್‌ಫ್ಲುಯೆಂಜಾ ಪ್ರಕರಣ: ಸಚಿವ ಖಾದರ್

ಬೆಂಗಳೂರು: ರಾಜ್ಯದಲ್ಲಿ ಋತುಮಾನದ ಜ್ವರ ಹಾಗೂ ಎಚ್‌1ಎನ್‌1 ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಚಿಕಿತ್ಸಾ ಸಿದ್ಧತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ರಾಜ್ಯದ ಎಲ್ಲ ಜಿಲ್ಲೆಗಳ ಆರೋಗ್ಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ವಿಡಿಯೊ ಸಂವಾದ ನಡೆಸಿದರು. ಪ್ರಕರಣಗಳ ಸಂಖ್ಯೆ ಹೆಚ್ಚಾದರೂ ಅಥವಾ ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಥವಾಗಿ ನಿಭಾಯಿಸಲು ರಾಜ್ಯದ ಆರೋಗ್ಯ ವ್ಯವಸ್ಥೆ ಸಜ್ಜಾಗಿದೆ. ಅಗತ್ಯ ಮೂಲಸೌಕರ್ಯ, ಔಷಧಗಳು ಹಾಗೂ ವೈದ್ಯಕೀಯ […]

Continue Reading

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, ಆರು ಮಂದಿ ಮೀನುಗಾರರ ರಕ್ಷಣೆ

ಮಂಗಳೂರು: ಮೀನುಗಾರಿಕೆಗೆ ತೆರಳುತ್ತಿದ್ದ ಟ್ರಾಲರ್ ಬೋಟ್‌ವೊಂದು ಅರಬ್ಬಿ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಸಂಜೆ ಮಂಗಳೂರಿನ ಹಳೆ ಬಂದರಿನ ಸಮೀಪ ನಡೆದಿದೆ. ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರ ಬೋಟ್‌ಗಳ ಮೀನುಗಾರರು ತಕ್ಷಣ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬಂಟ್ವಾಳ ತಾಲೂಕಿನ ಇಬ್ರಾಹಿಂ ಖಲೀಲ್ ಮೂಸಾ ಅವರಿಗೆ ಸೇರಿದ ‘ಅಯಾನ್’ ಹೆಸರಿನ ಟ್ರಾಲರ್ ಬೋಟ್‌ (ನೋಂದಣಿ ಸಂಖ್ಯೆ: IND-KA-01-MM-3992) ಮಂಗಳೂರು ಹಳೆ ಬಂದರಿನಿಂದ ದಡದ ಸಮೀಪದ ಮೀನುಗಾರಿಕೆಗೆ ತೆರಳುತ್ತಿತ್ತು. ಅಳಿವೆಬಾಗಿಲು ದಾಟಿದ ಕೆಲವೇ ಕ್ಷಣಗಳಲ್ಲಿ ಸಮುದ್ರದಲ್ಲಿ […]

Continue Reading

ಬಂಟ್ಸ್ ಹಾಸ್ಟೆಲ್‌ನಲ್ಲಿ ಸೆ.14 ರಿಂದ ಗಣೇಶೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಬಂಟ್ಸ್ ಹಾಸ್ಟೆಲ್‌ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಸೆ.14 ರಿಂದ 16 ರವರೆಗೆ ನಡೆಯಲಿರುವ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಶ್ರೀಮತಿ ಗೀತಾ ಎಸ್.ಎಂ. ಶೆಟ್ಟಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ್ ಶೇಣವ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಸನಾತನ ಧರ್ಮ ಅತ್ಯಂತ ಶ್ರೇಷ್ಠವಾದುದು. ಈ […]

Continue Reading

ಮಂಗಳೂರಿನಲ್ಲಿ ಎಂಎಸ್‌ಎಂಇ, ಸ್ಟಾರ್ಟ್‌ಅಪ್ ಕಾನ್‌ಕ್ಲೇವ್ ಉದ್ಘಾಟಿಸಿ ಸಂಸದ ಕೋಟ

ಮಂಗಳೂರು: ಶಿಕ್ಷಣದ ಬಳಿಕ ಉದ್ಯೋಗಕ್ಕಾಗಿ ಸರ್ಕಾರವನ್ನು ಅವಲಂಬಿಸುವ ಬದಲು ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು (ಎಂಎಸ್‌ಎಂಇ) ಸ್ಥಾಪಿಸಿ ಸ್ವಾವಲಂಬಿಗಳಾಗಬೇಕು. ಆ ಮೂಲಕ ದೇಶದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನಗರದ ರೆಡ್‌ಕ್ರಾಸ್ ಪ್ರೇರಣಾ ಹಾಲ್‌ನಲ್ಲಿ ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ (ಎಂಪಿಸಿ) ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಆಯೋಜಿಸಿದ್ದ ಎಂಪಿಸಿ–ರೋಟರಿ ಕೋಸ್ಟಲ್ ಎಂಎಸ್‌ಎಂಇ ಮತ್ತು ಸ್ಟಾರ್ಟ್‌ಅಪ್ ಕಾನ್‌ಕ್ಲೇವ್–2026 ಉದ್ಘಾಟಿಸಿ ಅವರು ಮಾತನಾಡಿದರು. ‘ಕೇಂದ್ರ ಅಥವಾ ರಾಜ್ಯ ಸರ್ಕಾರ […]

Continue Reading

ಪುತ್ತೂರಿನಲ್ಲಿ ತಾಲಿಬಾನ್ ಸಂಸ್ಕೃತಿಯ ಹೋರಾಟಗಳು ಹೆಚ್ಚುತ್ತಿವೆ: ನಳಿನ್ ಕುಮಾರ್ ಕಟೀಲ್

ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಹಲ್ಲೆಗೊಳಗಾದವರ ವಿರುದ್ಧವೇ ಗಂಭೀರ ಪ್ರಕರಣ ದಾಖಲಿಸಿರುವುದು ಖಂಡನೀಯ. ಹಲ್ಲೆ ಮಾಡಿದವರ ವಿರುದ್ಧವೂ ಕೂಡಲೇ ಪ್ರಕರಣ ದಾಖಲಿಸಬೇಕು. ಇಲ್ಲವಾದಲ್ಲಿ ಬಿಜೆಪಿ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದರು. ಪುತ್ತೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಸಣ್ಣ ವಿಚಾರವನ್ನು ಮುಂದಿಟ್ಟುಕೊಂಡು ಅಂಗಡಿಗೆ ನುಗ್ಗಿ ಮಹಿಳೆಯರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಇಂತಹ ಘಟನೆಗಳನ್ನು ಕಾನೂನು ಮತ್ತು ಪೊಲೀಸ್ ಇಲಾಖೆಯ ಮೂಲಕ ಬಗೆಹರಿಸಬಹುದಿತ್ತು. ಆದರೆ ಏಕಾಏಕಿ ಅಂಗಡಿಗೆ ನುಗ್ಗಿ […]

Continue Reading

ಕರಾವಳಿ, ಮಲೆನಾಡು ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ: ಸಂಸದ ಕ್ಯಾ. ಚೌಟ

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ ಕೊಳೆರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ ಮತ್ತು ಸಮಗ್ರ ರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ತಿಳಿಸಿದ್ದಾರೆ ಎಂದು ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಅಡಿಕೆ ರೋಗಗಳ ಸಮಸ್ಯೆ ಕುರಿತು ಪ್ರಸ್ತಾಪಿಸಿದ್ದ ವಿಷಯಕ್ಕೆ […]

Continue Reading

ವಿದ್ಯಾರ್ಥಿ–ಶಿಕ್ಷಕ–ಪಾಲಕರ ಸಮನ್ವಯದಿಂದ ಉತ್ತಮ ಫಲಿತಾಂಶ: ಮೋಹನ್ ಆಳ್ವ

ಮೂಡುಬಿದಿರೆ: ಸಂಗೀತದಲ್ಲಿ ಶ್ರುತಿ ತಪ್ಪಿದರೆ ಸುಮಧುರ ಗಾಯನವೂ ಅಪಸ್ವರವಾಗುತ್ತದೆ. ಅದೇ ರೀತಿ ವಿದ್ಯಾರ್ಥಿ ಜೀವನಕ್ಕೂ ಸರಿಯಾದ ಶ್ರುತಿ, ಲಯ ಮತ್ತು ದಿಕ್ಕು ಅಗತ್ಯ. ಜ್ಞಾನ, ಶಿಸ್ತು, ಮೌಲ್ಯ ಹಾಗೂ ಗುರಿಯೊಂದಿಗೆ ವಿದ್ಯಾರ್ಥಿಗಳ ಬದುಕನ್ನು ಶ್ರುತಿಬದ್ಧಗೊಳಿಸುವುದೇ ನಿಜವಾದ ಶಿಕ್ಷಣ. ಈ ಕಾರ್ಯದಲ್ಲಿ ಶಿಕ್ಷಣ ಸಂಸ್ಥೆಯ ಜತೆಗೆ ಪಾಲಕರ ಪಾತ್ರವೂ ಅತ್ಯಂತ ಮಹತ್ವದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್‌ನ ಕೃಷಿಸಿರಿ ವೇದಿಕೆಯಲ್ಲಿ ಶನಿವಾರ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿಜ್ಞಾನ […]

Continue Reading