ಎಸ್‌ಸಿಡಿಸಿಸಿ ಬ್ಯಾಂಕ್‌ಗೆ 131.14 ಕೋಟಿ ದಾಖಲೆಯ ಲಾಭ, ಶೇ 10.5ರಷ್ಟು ಡಿವಿಡೆಂಡ್: ಡಾ. ರಾಜೇಂದ್ರ ಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) 2025–26ನೇ ಸಾಲಿನಲ್ಲಿ ಸಾರ್ವಕಾಲಿಕ ಗರಿಷ್ಠ ₹131.14 ಕೋಟಿ ಲಾಭ ಗಳಿಸಿದ್ದು, ಸದಸ್ಯ ಸಂಘಗಳಿಗೆ ಶೇ.10.5ರಷ್ಟು ಡಿವಿಡೆಂಡ್ ನೀಡುವುದಾಗಿ ಬ್ಯಾಂಕ್ ಅಧ್ಯಕ್ಷ ‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಘೋಷಿಸಿದರು. ಶನಿವಾರ ಬ್ಯಾಂಕಿನ ಸಭಾಭವನದಲ್ಲಿ ನಡೆದ 112ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಹಕಾರ ತತ್ವದ ಮೂಲ ಆಶಯಗಳಿಗೆ ಧಕ್ಕೆ ಬಾರದಂತೆ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ 112 ವರ್ಷಗಳ ಯಶಸ್ವಿ ಪಯಣ ಪೂರ್ಣಗೊಳಿಸಿ […]

Continue Reading

ಆಹಾರ ಸುರಕ್ಷತೆಗೆ ಜನರನ್ನೇ ಕಾವಲುಗಾರರನ್ನಾಗಿಸಲು ಸರ್ಕಾರದ ಚಿಂತನೆ: ಸಚಿವ ಯು.ಟಿ. ಖಾದರ್

ಮಂಗಳೂರು: ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಆಹಾರ ಸಂಸ್ಥೆಗಳಲ್ಲಿ ನಿಯಮ ಉಲ್ಲಂಘನೆ ತಡೆಯಲು ಅಧಿಕಾರಿಗಳು ಪ್ರತಿಬಾರಿ ದಾಳಿ ನಡೆಸುವುದಕ್ಕಿಂತ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಆಹಾರ ಸುರಕ್ಷತೆ ಕಾಪಾಡುವ ವ್ಯವಸ್ಥೆ ರೂಪಿಸಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್‌ಗಳನ್ನು ರಚಿಸುವ ಚಿಂತನೆ ಇದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್‌ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಾಮಾಜಿಕ ಸೇವೆಯಲ್ಲಿ ಆಸಕ್ತಿ ಹೊಂದಿರುವವರು ಹಾಗೂ 60 ವರ್ಷ ಮೇಲ್ಪಟ್ಟವರನ್ನೂ ಒಳಗೊಂಡಂತೆ ಆಸಕ್ತರನ್ನು ಈ ತಂಡಗಳಿಗೆ ಸೇರಿಸಿಕೊಳ್ಳಲಾಗುವುದು. ಆಹಾರ ಸುರಕ್ಷತೆ, ಆರೋಗ್ಯ ಮತ್ತು […]

Continue Reading

ಉತ್ತರ ಕನ್ನಡ ಜಿಲ್ಲಾ ಗ್ರಾಹಕರ ರಕ್ಷಣಾ ಪರಿಷತ್‌ನ ಪ್ರಥಮ ಸಭೆ

ಕಾರವಾರ: ಉತ್ತರ ಕನ್ನಡ ಜಿಲ್ಲಾ ಗ್ರಾಹಕರ ರಕ್ಷಣಾ ಪರಿಷತ್‌ನ ಪ್ರಥಮ ಸಭೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಗ್ರಾಹಕರ ರಕ್ಷಣಾ ಪರಿಷತ್‌ನ ಉದ್ದೇಶ ಮತ್ತು ಕಾರ್ಯಗಳ ಕುರಿತು ಸದಸ್ಯರಿಗೆ ಮಾಹಿತಿ ನೀಡಲಾಯಿತು. ಗ್ರಾಹಕರ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಗ್ರಾಹಕರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಗ್ರಾಹಕರಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು […]

Continue Reading

ಮಾದಕ ವ್ಯಸನ ಮುಕ್ತ ಶಿಬಿರ ಆಯೋಜನೆಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

ಕಾರವಾರ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಬಳಲುತ್ತಿರುವವರನ್ನು ವ್ಯಸನದಿಂದ ಮುಕ್ತಗೊಳಿಸಲು ವಿಶೇಷ ಶಿಬಿರಗಳನ್ನು ಆಯೋಜಿಸಿ ಚಿಕಿತ್ಸೆ ನೀಡುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್‌ಕಾರ್ಡ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾದಕ ವಸ್ತು ಸೇವನೆ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿ ಬಿಡುಗಡೆಯಾದವರು ಮತ್ತೆ ವ್ಯಸನಕ್ಕೆ ಒಳಗಾಗದಂತೆ ಅರಿವು ಮೂಡಿಸಬೇಕು. ಅವರಿಗಾಗಿ ವ್ಯಸನ ಮುಕ್ತ ಶಿಬಿರಗಳನ್ನು ಆಯೋಜಿಸಿ ಅಗತ್ಯ ಚಿಕಿತ್ಸೆ ನೀಡಬೇಕು. ಈ ಕಾರ್ಯದಲ್ಲಿ ವಿವಿಧ ಸಂಘ ಸಂಸ್ಥೆಗಳು […]

Continue Reading

ಮಳೆ ರಜೆ ಸರಿದೂಗಿಸಲು ಸೆ. 2 ನೇ ಶನಿವಾರದಿಂದ ಹೆಚ್ಚುವರಿ ಬೋಧನಾ ಅವಧಿ: ಶಿಕ್ಷಣ ಇಲಾಖೆ ಆದೇಶ

ಮಂಗಳೂರು: ದ. ಕ ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲೆಗಳಿಗೆ ಘೋಷಿಸಿದ್ದ ಮಳೆ ರಜೆಗಳಿಂದ ಉಂಟಾಗಿರುವ ಬೋಧನಾ ಅವಧಿಯ ಕೊರತೆಯನ್ನು ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯು ಅಧಿಕೃತ ಆದೇಶ ಹಾಗೂ ತಿದ್ದುಪಡಿ ಜ್ಞಾಪನ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಬಂಟ್ವಾಳ ಹಾಗೂ ಮೂಡುಬಿದಿರೆ: ಒಟ್ಟು 8 ಪೂರ್ಣ ದಿನಗಳು ಹಾಗೂ 1 ಅರ್ಧ ದಿನದ ರಜೆ ಘೋಷಿಸಲಾಗಿತ್ತು. […]

Continue Reading

ವಂದೇ ಮಾತರಂಗೆ ಅಡ್ಡಿ, ಕಾಂಗ್ರೆಸ್ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ: ಶಾಸಕ ಕಾಮತ್

ಮಂಗಳೂರು: ‘ವಂದೇ ಮಾತರಂ’ನ ಎರಡು ಚರಣಗಳನ್ನು ಮಾತ್ರ ಹಾಡುತ್ತೇವೆ, ಪೂರ್ಣ ಗೀತೆಯನ್ನು ಹಾಡುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಸಂಸತ್ತು ಅಂಗೀಕರಿಸಿರುವ ಕಾನೂನನ್ನು ವಿರೋಧಿಸುತ್ತಿದೆ. ಕೇವಲ ಓಲೈಕೆ ರಾಜಕಾರಣಕ್ಕಾಗಿ ಕೈಗೊಳ್ಳುತ್ತಿರುವ ಇಂತಹ ನಿಲುವು ಕಾಂಗ್ರೆಸ್‌ನ ದೇಶವಿರೋಧಿ ಮನಸ್ಥಿತಿ ಹಾಗೂ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ. ವಂದೇ ಮಾತರಂ ಕೇವಲ ನಾಲ್ಕು ಸಾಲುಗಳ ಹಾಡಲ್ಲ. ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ಹೋರಾಡುವ ಸಂದರ್ಭದಲ್ಲಿ ಮೊಳಗಿಸಿದ ಪವಿತ್ರ ಮಂತ್ರವಾಗಿದೆ. ಬ್ರಿಟಿಷರ […]

Continue Reading

ಕ್ಯೂಆರ್ ಕೋಡ್ ಮೂಲಕ ದೂರು, ಮಂಗಳೂರಿನ ಫಳ್ನೀರ್ ಎಂಎಫ್‌ಸಿ ರೆಸ್ಟೋರೆಂಟ್‌ಗೆ ದಾಳಿ

ಮಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ವತಿಯಿಂದ ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಸ್ವೀಕರಿಸಿ, ಪರಿಶೀಲಿಸಲು ಹೊಸದಾಗಿ ಪರಿಚಯಿಸಲಾಗಿರುವ ಕ್ಯೂಆರ್ ಕೋಡ್ ವ್ಯವಸ್ಥೆಯ ಮೂಲಕ ಬಂದಿರುವ ದೂರಿನ ಆಧಾರದ ಮೇಲೆ ಪರಿಶೀಲನಾ ಕಾರ್ಯಾಚರಣೆ ನಡೆಸಲಾಯಿತು. ಈ ಹಿನ್ನೆಲೆಯಲ್ಲಿ ಮಂಗಳೂರಿನ ಫಳ್ನೀರ್ ರಸ್ತೆಯಲ್ಲಿರುವ ಎಂಎಫ್‌ಸಿ ರೆಸ್ಟೋರೆಂಟ್ ವಿರುದ್ಧ ಕ್ಯೂಆರ್ ಕೋಡ್ ಮೂಲಕ ಬಂದಿರುವ ದೂರಿನ ಮೇರೆಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ರೆಸ್ಟೋರೆಂಟ್‌ನ ಆಹಾರ ತಯಾರಿಕಾ ಸ್ಥಳ, ಆಹಾರ ಪದಾರ್ಥಗಳ […]

Continue Reading

ಪತ್ರಕರ್ತನ ಮೇಲೆ ಹಲ್ಲೆ: ಕುಂದಾಪುರ ಸರ್ಕಾರಿ ವೈದ್ಯ ಅಮಾನತು, ಕಮಿಷನರ್ ಆದೇಶ

ಉಡುಪಿ: ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಮಿಷನರ್ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸುವ ಮೂಲಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರು ಸರ್ಕಾರಿ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ […]

Continue Reading

ಅಪಘಾತ ರಹಿತ ಸಂಚಾರಕ್ಕೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್

ಕಾರವಾರ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರ್ವಜನಿಕರು ಹಾಗೂ ವಾಹನಗಳ ಸುರಕ್ಷಿತ, ಅಪಘಾತರಹಿತ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಬೇಕು. ಪೊಲೀಸ್ ಇಲಾಖೆ ಸೂಚಿಸುವ ಮುನ್ನೆಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರವಾರದ ಕಾಳಿ ಸೇತುವೆ ಮೇಲೆ ದ್ವಿಚಕ್ರ ವಾಹನಗಳು ಸಂಚರಿಸುವಾಗ ಬಲವಾದ ಗಾಳಿಯಿಂದ ಚಾಲನೆಗೆ ಅಡಚಣೆಯಾಗುತ್ತಿರುವ ಕುರಿತು […]

Continue Reading

ದೊಡ್ಡ ಸಾಮ್ರಾಜ್ಯಕ್ಕೆ ಅಧಿಪತಿ ಡಾ.ತುಂಬೆ ಮೊಯ್ದೀನ್…ತುಂಬೆ ಗ್ರಾಮದಿಂದ ಆರಂಭದ ಪಯಣದ ಹಾದಿ

ಮಂಗಳೂರು: ಸಣ್ಣ ಉದ್ಯಮ ಕನಸಿನೊಂದಿಗೆ ಆರಂಭವಾದ ಪ್ರಯತ್ನವನ್ನು ನಿರಂತರ ಪರಿಶ್ರಮ, ದೂರದೃಷ್ಟಿ ಹಾಗೂ ಸಾಮಾಜಿಕ ಬದ್ಧತೆಯೊಂದಿಗೆ ಬೆಳೆಸಿದ ತುಂಬೆ ಗ್ರೂಪ್‌, ಹಲವು ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಸಂಸ್ಥೆಯ ಮುಂದಿನ ಬೆಳವಣಿಗೆಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತುಂಬೆ ಗ್ರೂಪ್‌ ಸಂಸ್ಥಾಪಕ ಡಾ.ತುಂಬೆ ಮೊಯ್ದೀನ್ ಅವರು ಪತ್ರಿಕಾಗೋಷ್ಠಿಯಲ್ಲಿ ಮನಬಿಚ್ಚಿ ಮಾತನಾಡಿದರು. ಮಂಗಳೂರಿನ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಯುವಕನಾಗಿ ಉದ್ಯಮ ಕ್ಷೇತ್ರದ ಕನಸು ಕಂಡಿದ್ದೆ. ಮೂರು ದಶಕಗಳ ಹಿಂದೆ ಗಲ್ಫ್‌ಗೆ ತೆರಳಿ ತಮ್ಮ ಉದ್ಯಮ […]

Continue Reading