ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಡಾ. ಅರುಣ್ ಕುಮಾರ್ ಶೆಟ್ಟಿ ನೇಮಕ

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಡಾ. ಅರುಣ್ ಕುಮಾರ್ ಶೆಟ್ಟಿ ಎನ್‌ ಅವರನ್ನು ಮತ್ತೆ ಹೆಚ್ಚುವರಿ ಪ್ರಭಾರದಲ್ಲಿ ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾಗಿರುವ ಡಾ. ಅರುಣ್ ಕುಮಾರ್ ಶೆಟ್ಟಿ ಅವರು ಈ ಹಿಂದೆ ಸುಮಾರು ಒಂದೂವರೆ ವರ್ಷಗಳ ಕಾಲ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹೆಚ್ಚುವರಿ ಪ್ರಭಾರದಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಜೂನ್‌ 2026ರಲ್ಲಿ ರಾಜ್ಯ ಸರ್ಕಾರವು ರಾಜ್ಯ […]

Continue Reading

ಬೆಳ್ತಂಗಡಿ: ಪುಷ್ಯ ಮಳೆಯ ಅಬ್ಬರಕ್ಕೆ ಜನ ತತ್ತರ, ಉಜಿರೆ–ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿ ಮೇಲೆ ಹರಿದ ನೀರು

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಧರ್ಮಸ್ಥಳದಲ್ಲಿ ನೇತ್ರಾವತಿ ಸೇರಿದಂತೆ ಜಿಲ್ಲೆಯ ಬಹುತೇಕ ನದಿಗಳು ಅಪಾಯದ ಮಟ್ಟಕ್ಕೆ ಸಮೀಪಿಸಿ ತುಂಬಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಆವರಿಸಿದೆ. ಮಳೆ ಮುಂದುವರೆದರೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಸ್ಥಳೀಯರು ಆತಂಕದಲ್ಲಿದ್ದಾರೆ. ಬೆಳಗ್ಗಿನಿಂದಲೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಬೆಳ್ತಂಗಡಿ–ಕಿಲ್ಲೂರು ರಸ್ತೆಯ ಪುತ್ರಬೈಲು ಸಮೀಪ […]

Continue Reading

ಮಂಗಳೂರಿನ ಉರ್ವ ಕ್ರೀಡಾಂಗಣದಲ್ಲಿ 39ನೇ ರಾಷ್ಟ್ರೀಯ ಚೆಸ್ ಚಾಂಪಿಯನ್‌ ಷಿಪ್ ಅ. 2ರಿಂದ ಪ್ರಾರಂಭ: ಡಾ. ಅಮರಶ್ರೀ ಶೆಟ್ಟಿ

ಮಂಗಳೂರು: ದೇಶದ ಭವಿಷ್ಯದ ಚೆಸ್ ತಾರೆಗಳನ್ನು ಪರಿಚಯಿಸುವ ಪ್ರತಿಷ್ಠಿತ 39ನೇ ರಾಷ್ಟ್ರೀಯ ಅಂಡರ್-11 ಓಪನ್ ಮತ್ತು ಬಾಲಕಿಯರ ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ ಷಿಪ್-2026 ಅ.2 ರಿಂದ ಮಂಗಳೂರಿನಲ್ಲಿ ಆರಂಭವಾಗಲಿದೆ. ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ (ಡಿಕೆಸಿಎ), ಅಖಿಲ ಭಾರತ ಚೆಸ್ ಫೆಡರೇಷನ್ (ಎಐಸಿಎಫ್) ಹಾಗೂ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ (ಕೆಎಸ್‌ಸಿಎ) ಆಶ್ರಯದಲ್ಲಿ, ನವಮಂಗಳೂರು ಬಂದರು ಪ್ರಾಧಿಕಾರದ ಪ್ರಾಯೋಜಕತ್ವದಲ್ಲಿ ನಡೆವ ಈ ರಾಷ್ಟ್ರೀಯ ಮಟ್ಟದ ಚಾಂಪಿಯನ್‌ ಷಿಪ್ ಅಗಸ್ಟ್‌ 8 ರವರೆಗೆ ನಗರದ ಉರ್ವ ಒಳಾಂಗಣ […]

Continue Reading

ಎಸ್‌ಐಆರ್‌ಗೆ ಸ್ವೀಪ್ ಜಾಗೃತಿ ಟಚ್ ಅಪ್, 40 ಸಾವಿರಕ್ಕೂ ಅಧಿಕ ಜನರು ನೇರ ಭಾಗಿ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ಹಮ್ಮಿಕೊಂಡ ವಿವಿಧ ಜಾಗೃತಿ ಕಾರ್ಯಕ್ರಮಗಳಿಗೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ದೊರೆತಿದ್ದು, 40 ಸಾವಿರಕ್ಕೂ ಅಧಿಕ ಮಂದಿ ನೇರವಾಗಿ ಭಾಗವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಜಿಲ್ಲಾ […]

Continue Reading

20 ಕೇಂದ್ರಗಳಲ್ಲಿ ಪೊಲೀಸ್ ಕಾನ್ ಸ್ಟೆಬಲ್ ಪರೀಕ್ಷೆ, ಸಿಸಿಟಿವಿ, ವೆಬ್‌ಕಾಸ್ಟಿಂಗ್‌, ಎಐ ತಂತ್ರಜ್ಞಾನ ಬಳಕೆ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಪೊಲೀಸ್ ಸಿವಿಲ್ ಕಾನ್ ಸ್ಟೆಬಲ್ ನೇರ ನೇಮಕಾತಿ ಪರೀಕ್ಷೆ ಸಂಪೂರ್ಣ ಪಾರದರ್ಶಕ ಹಾಗೂ ಅಕ್ರಮ ಮುಕ್ತವಾಗಿ ನಡೆಸಲು ಎಲ್ಲ ಅಧಿಕಾರಿಗಳು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರದ 15 ಹಾಗೂ ಅಂಕೋಲಾದ 5 ಸೇರಿ ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 6,475 ಅಭ್ಯರ್ಥಿಗಳು ಹಾಜರಾಗಲಿದ್ದಾರೆ ಎಂದರು. ಎಲ್ಲಾ […]

Continue Reading

ಮಹಿಳೆಯರಿಗೆ ಸ್ವಯಂ ರಕ್ಷಣೆ ತರಬೇತಿ ಅಗತ್ಯ, ಮತದಾರರ ಹಕ್ಕು ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಕರೆ

ಕಾರವಾರ: ಮಹಿಳೆಯರು ಸಮಾಜದಲ್ಲಿ ಧೈರ್ಯದಿಂದ ಹಾಗೂ ಆತ್ಮವಿಶ್ವಾಸದಿಂದ ಬದುಕಲು ಸ್ವಯಂ ರಕ್ಷಣೆ ತರಬೇತಿ ಅತ್ಯಗತ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಹೇಳಿದರು. ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಅರಣ್ಯ ಇಲಾಖೆಯ ವನಸಿರಿ ಭವನದಲ್ಲಿ ಸರ್ಕಾರಿ ಇಲಾಖೆಗಳ ಮಹಿಳಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ಆಯೋಜಿಸಿದ್ದ ಸ್ವಯಂ ರಕ್ಷಣೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮತದಾನವು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು, ಎಸ್‌ಐಆರ್ ಪ್ರಕ್ರಿಯೆಯ ಮೂಲಕ […]

Continue Reading

ಉ. ಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು, 11.18 ಲಕ್ಷ ಎನ್ಯುಮರೇಷನ್ ಫಾರ್ಮ್‌ಗಳ ಗಣಕೀಕರಣ ಪೂರ್ಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆ ವೇಗವಾಗಿ ಸಾಗುತ್ತಿದ್ದು, ಇದುವರೆಗೆ 11,18,862 ಎನ್ಯುಮರೇಷನ್ ಫಾರ್ಮ್‌ಗಳ ಗಣಕೀಕರಣ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರು ಇದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಕಾರ್ಯವೂ ಬಹುತೇಕ ಪೂರ್ಣಗೊಂಡಿದ್ದು, ದಾಖಲೆಗಳ ಪರಿಶೀಲನೆ ಮತ್ತು ಗಣಕೀಕರಣ ಕಾರ್ಯ ಸಮರ್ಪಕವಾಗಿ ನಡೆಯುತ್ತಿದೆ. ಮನೆ ಮನೆ ಸಮೀಕ್ಷೆ ವೇಳೆ ಸ್ಥಳಾಂತರ, ಮರಣ […]

Continue Reading

ದ. ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ,  ಎಲ್ಲ ಶಾಲೆ- ಕಾಲೇಜುಗಳಿಗೆ ಅ. 1 ರಂದು ರಜೆ: ಡಿಸಿ ದರ್ಶನ್ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಅ. 1 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಯಲ್ಲಿ ಇನ್ನಷ್ಟು ಭಾರೀ ಮಳೆಯಾಗುವ ಸಾಧ್ಯತೆ ಇದೆ […]

Continue Reading

ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ: ಅ. 4ರಂದು ಪ್ರಶಸ್ತಿ ಪ್ರದಾನ

ಮಂಗಳೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಹೊಸ ದಿಗಂತ ಪತ್ರಿಕೆಯ ಮಂಗಳೂರು ಆವೃತ್ತಿಯ ಪ್ರಧಾನ ವರದಿಗಾರ ಸುರೇಶ್ ಡಿ. ಪಳ್ಳಿ ಅವರನ್ನು ಪ್ರತಿಷ್ಠಿತ ‘ನಾರದ ಪುರಸ್ಕಾರ’ಕ್ಕೆ ಆಯ್ಕೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಮಹರ್ಷಿ ನಾರದರ ಸಂಸ್ಮರಣಾರ್ಥ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಅ. 4 ರಂದು ಸಂಜೆ 4 ಗಂಟೆಗೆ ಕಾರಣಗಿರಿಯ ಸಿದ್ಧಿವಿನಾಯಕ ಸಭಾಭವನದಲ್ಲಿ ನಡೆಯಲಿದೆ. […]

Continue Reading

ಶಾಲೆ–ಕಾಲೇಜುಗಳ ಬಳಿ ಜಂಕ್ ಫುಡ್‌ಗೆ ಬ್ರೇಕ್: ಇಲಾಖೆಯ ಅಧಿಕೃತ ಆದೇಶ

ಬೆಂಗಳೂರು: ವಿದ್ಯಾರ್ಥಿಗಳಿಗೆ ಸುರಕ್ಷಿತ, ಗುಣಮಟ್ಟಯುತ ಹಾಗೂ ಆರೋಗ್ಯಕರ ಆಹಾರ ಲಭ್ಯ ಆಗುವಂತೆ ಮಾಡಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯೂ ಶಾಲೆ–ಕಾಲೇಜುಗಳ ಆವರಣ ಹಾಗೂ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್‌ ಮತ್ತು ಅನಾರೋಗ್ಯಕರ ಆಹಾರ ಮಾರಾಟ ಮಾಡದಂತೆ ಅಧಿಕೃತ ಆದೇಶ ಹೊರಡಿಸಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮಾರ್ಗಸೂಚಿಯಂತೆ ಈ ಕ್ರಮ ಜುಲೈ 21 ರಿಂದ ಜಾರಿಗೆ ಬಂದಿದೆ ಎಂದು ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಜುಲೈ ತಿಂಗಳಲ್ಲಿ ರಾಜ್ಯದ […]

Continue Reading