ಉಮರ್ ಖಾಲಿದ್ ‘ದೇಶಭಕ್ತ’ ಎಂಬ ಕಾಂಗ್ರೆಸ್ ಹೇಳಿಕೆ ವಿರುದ್ಧ ಶಾಸಕ ಭರತ್ ಶೆಟ್ಟಿ ಆಕ್ರೋಶ

ಮಂಗಳೂರು: ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಉಮರ್ ಖಾಲಿದ್ ಅವರನ್ನು ‘ದೇಶಭಕ್ತ’ ಎಂದು ಬಣ್ಣಿಸಿರುವುದು ಖಂಡನೀಯ ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬದ್ಧ ಆರೋಪಗಳನ್ನು ಎದುರಿಸುತ್ತಿರುವ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧನದಲ್ಲಿರುವ ವ್ಯಕ್ತಿಯನ್ನು ‘ದೇಶಭಕ್ತ’ ಎಂದು ಕರೆಯುವುದು ಕಾಂಗ್ರೆಸ್‌ನ ತುಷ್ಟೀಕರಣ […]

Continue Reading

ಸಂಪುಟ ಸಭೆಗೆ ಮಂಗಳೂರು ಸಿಂಗಾರ: ನಗರದೆಲ್ಲೆಡೆ ಸ್ವಾಗತದ ಕಳೆ, ಬ್ಯಾನರ್ ಗಳ ಅಬ್ಬರ

ಮಂಗಳೂರು: ಕರಾವಳಿಯ ಬಹುದಿನಗಳ ಬೇಡಿಕೆಗಳು, ಅಭಿವೃದ್ಧಿಯ ಪ್ರಸ್ತಾವಗಳು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜಾಗಿದೆ. ಸೆ.18ರಂದು ಪಡೀಲ್‌ನ ಜಿಲ್ಲಾ ಕಚೇರಿಗಳ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ನಡೆಯಲಿರುವ ಸಭೆಯತ್ತ ಕರಾವಳಿಯ ಮೂರು ಜಿಲ್ಲೆಗಳ ಜನರ ಗಮನ ನೆಟ್ಟಿದೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ, ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿ, ಮೀನುಗಾರರ ಸಮಸ್ಯೆಗಳು, ಕೈಗಾರಿಕಾ ವಿಸ್ತರಣೆ ಸೇರಿದಂತೆ ಹಲವು […]

Continue Reading

ಮಂಗಳೂರಿನಲ್ಲಿ ಸಂಪುಟ, ಸ್ವಾಗತಿಸುತ್ತೇವೆ,ತುಳುನಾಡಿನಲ್ಲಿ ಸಂಭ್ರಮ: ಸಂಸದ ಚೌಟ

ಮಂಗಳೂರು: ಸೆ.18 ರಂದು ಮಂಗಳೂರಿನಲ್ಲಿ ನಡೆವ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಆಶಾದಾಯಕ ಬೆಳವಣಿಗೆ ಆಗಿದ್ದು, ಇದನ್ನು ಎಲ್ಲರೂ ಸ್ವಾಗತಿಸುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ, ಕರಾವಳಿ ಸಂಪರ್ಕ, ಆರ್ಥಿಕ ಪ್ರಗತಿ ಹಾಗೂ ಪ್ರವಾಸೋದ್ಯಮಕ್ಕೆ ವೇಗ ನೀಡುವಂತೆ 15 ಪ್ರಮುಖ ಬೇಡಿಕೆಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಡೇರಿಸುವ ಭರವಸೆ ಇದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕರ್ನಾಟಕ ರಾಜ್ಯ ಮೆರಿಟೈಮ್ ಮಂಡಳಿ ಹಾಗೂ ವಿಶೇಷ ಕರಾವಳಿ ಪ್ರವಾಸೋದ್ಯಮ […]

Continue Reading

ವಲಸೆ ತಡೆಗೆ ಕರಾವಳಿ–ಮಲೆನಾಡಿನಲ್ಲಿ ಹೊಸ ಅವಕಾಶ: ಸಿಎಂ ಡಿ.ಕೆ.ಶಿವಕುಮಾರ್

ಮಂಗಳೂರು: ಕರಾವಳಿ–ಮಲೆನಾಡಿನ ದಶಕಗಳ ಬೇಡಿಕೆಗಳಿಗೆ ಸ್ಪಂದಿಸುವುದರ ಜೊತೆಗೆ, ಈ ಭಾಗದ ಮಾನವ ಸಂಪತ್ತು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸರ್ಕಾರ ಹೊಸ ಅಭಿವೃದ್ಧಿಯ ರೂಪುರೇಷೆ ಸಿದ್ಧಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗವು 340 ಕಿ.ಮೀ ಉದ್ದದ ತೀರವನ್ನು ಹೊಂದಿದೆ. ಈ ಸಂಪತ್ತನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿಗೆ ಹೊಸ ದಿಕ್ಕು ನೀಡಬೇಕಿದೆ. ಕರಾವಳಿ ಹಾಗೂ ಮಲೆನಾಡಿನಿಂದ ಜನರು ವಲಸೆ ಹೋಗದಂತೆ ಸ್ಥಳೀಯವಾಗಿಯೇ ಉದ್ಯೋಗ ಮತ್ತು […]

Continue Reading

ರಾಷ್ಟ್ರೀಯ ಲೋಕ ಅದಾಲತ್‌ ಸೆ.19ಕ್ಕೆ, ರಾಜೀ ಸಂಧಾನದ ಮೂಲಕ ಶೀಘ್ರ ಇತ್ಯರ್ಥ: ನ್ಯಾಯಾಧೀಶ ಬಸವರಾಜ

ಮಂಗಳೂರು: ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸುವ ರಾಷ್ಟ್ರೀಯ ಲೋಕ ಅದಾಲತ್‌ ಸೆ.19ರಂದು ಜಿಲ್ಲೆಯ ವಿವಿಧ ನ್ಯಾಯಾಲಯಗಳ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ನ್ಯಾಯಾಧೀಶ ಬಸವರಾಜ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣದಲ್ಲಿ ಮಧ್ಯಾಹ್ನ 2.30ರಿಂದ ಲೋಕ ಅದಾಲತ್‌ […]

Continue Reading

ಚುನಾವಣೆಯೇ ಬಿಜೆಪಿ ಅಜೆಂಡಾ ಆಗಿದ್ದರೆ, ಅಭಿವೃದ್ಧಿಯೇ ಕಾಂಗ್ರೆಸ್‌ ಅಜೆಂಡಾ : ಮಾಜಿ ಸಚಿವ ರಮಾನಾಥ ರೈ

ಮಂಗಳೂರು: ಚುನಾವಣೆಯೇ ಬಿಜೆಪಿಯ ಅಜೆಂಡಾ ಆಗಿದ್ದರೆ, ಕಾಂಗ್ರೆಸ್‌ನ ಅಜೆಂಡಾ ಅಭಿವೃದ್ಧಿ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ಲಕ್ಷ್ಯಕ್ಕೆ ಒಳಗಾದ ಹಾಗೂ ತಳವರ್ಗದ ಜನರ, ಅದರಲ್ಲೂ ಕೊರಗ ಸಮುದಾಯದ ಅಭಿವೃದ್ಧಿಗೆ ಪೂರಕವಾದ ಕ್ರಮಗಳಿಗೆ ಸೆ.18 ದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಆದ್ಯತೆ ದೊರೆಯಲಿದೆ ಎಂದರು. ‘ದುರ್ಬಲರು ಮತ್ತು ಬಡವರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರಗಳು ಒತ್ತು ನೀಡಿರುವುದು ಇತಿಹಾಸ. ಮೂಲನಿವಾಸಿ ಕೊರಗರು ತೀರಾ […]

Continue Reading

ಅಧಿಕಾರಕ್ಕಾಗಿ ತನಿಖಾ ಸಂಸ್ಥೆಗಳ ದುರ್ಬಳಕೆ, ತುಳು ಭಾಷೆ ನಮ್ಮ ಅಸ್ಮಿತೆಯ ಪ್ರತೀಕ: ಮಾಜಿ ಎಂಎಲ್ಸಿ ಹರೀಶ್ ಕುಮಾರ್

ಮಂಗಳೂರು: ಕರಾವಳಿಗರಿಗೆ ತುಳು ಭಾಷೆ ಕೇವಲ ಭಾವನಾತ್ಮಕ ವಿಷಯವಲ್ಲ; ಅದು ಅಸ್ಮಿತೆಯ ಪ್ರತೀಕ. ತುಳು ಭಾಷೆಗೆ ಸೂಕ್ತ ಮಾನ್ಯತೆ ದೊರೆಯಬೇಕು ಎಂಬುದು ಕರಾವಳಿಗರ ಆಶಯವಾಗಿದ್ದು, ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬೇಡಿಕೆ ಈಡೇರುವ ನಿರೀಕ್ಷೆಯಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ನಿಕಟಪೂರ್ವ ಅಧ್ಯಕ್ಷ ಹರೀಶ್ ಕುಮಾರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 100 ದಿನಗಳನ್ನು ಪೂರೈಸಿದ್ದು, ಜನರ ನಾಡಿಮಿಡಿತ ಅರಿತು ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. […]

Continue Reading

ಮಂಗಳೂರಿನಲ್ಲಿ ಸಂಪುಟ ಸಭೆ: ಸೆ.17 ರಿಂದ ಸಂಚಾರ ಬದಲಾವಣೆ

ಮಂಗಳೂರು: ನಗರದಲ್ಲಿ ಸೆ.18ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಸಚಿವರು ಆಗಮಿಸಲಿದ್ದು, ಸೆ.17ರ ಸಂಜೆದಿಂದ ಸೆ.19ರ ಬೆಳಿಗ್ಗೆವರೆಗೆ ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸೂಚಿಸಿದ್ದಾರೆ. ಸೆ.18 ರಂದು ಪಡೀಲ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಪಾಲ್ಗೊಂಡ ಬಳಿಕ ಮುಖ್ಯಮಂತ್ರಿ ಹಾಗೂ […]

Continue Reading

ವಿಶ್ವ ಹೃದಯ ದಿನದಂದು ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ₹1,499ಕ್ಕೆ ಹೃದಯ ತಪಾಸಣೆ: ವಿಜಯ್ ಚಂದ್ರ

ಮಂಗಳೂರು: ವಿಶ್ವ ಹೃದಯ ದಿನದ ಅಂಗವಾಗಿ ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ವತಿಯಿಂದ ಹೃದಯ ತಪಾಸಣಾ ಪ್ಯಾಕೇಜ್‌ನ್ನು ₹1,499ರ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ಸೆಪ್ಟೆಂಬರ್ 30, 2026ರವರೆಗೆ ಈ ಕೊಡುಗೆ ಲಭ್ಯ ಇರಲಿದೆ ಎಂದು ಇಂಡಿಯಾನಾ ಹಾಸ್ಪಿಟಲ್ ಮತ್ತು ಹಾರ್ಟ್ ಇನ್‌ಸ್ಟಿಟ್ಯೂಟ್ ಲಿಮಿಟೆಡ್ ನ ಗ್ರೂಪ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇ. ವಿಜಯ್ ಚಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯವಾಗಿ 3,000 ದರದ ಈ ತಪಾಸಣಾ ಪ್ಯಾಕೇಜ್‌ನಲ್ಲಿ ಹೃದಯದ ಸಮಗ್ರ ತಪಾಸಣೆಗೆ ಅಗತ್ಯವಿರುವ ವಿವಿಧ ಪರೀಕ್ಷೆಗಳು ಮತ್ತು ವೈದ್ಯಕೀಯ […]

Continue Reading

ಸಚಿವ ಸಂಪುಟ ಸಭೆ ಹಿನ್ನೆಲೆ,ಡ್ರೋನ್ ಹಾರಾಟಕ್ಕೆ ನಿರ್ಬಂಧ:ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಸಂಪುಟ ದರ್ಜೆಯ ಸಚಿವರ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮಂಗಳೂರಿನ ಕೆಲವು ಪ್ರದೇಶಗಳಲ್ಲಿ ಡ್ರೋನ್ ಹಾರಾಟ ಹಾಗೂ ಕಾರ್ಯಾಚರಣೆಯನ್ನು ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 17ರ ಸಂಜೆ 4 ಗಂಟೆಯಿಂದ ಸೆಪ್ಟೆಂಬರ್ 19ರ ಬೆಳಿಗ್ಗೆ 10 ಗಂಟೆಯವರೆಗೆ ಮೇರಿಹಿಲ್ ಹೆಲಿಪ್ಯಾಡ್, ಮುಖ್ಯಮಂತ್ರಿ ವಾಸ್ತವ್ಯ ಹೂಡುವ ಹೋಟೆಲ್ ತಾಜ್ ವಿವಾಂತ ಹಾಗೂ ಪಡೀಲ್‌ನಲ್ಲಿರುವ ದಕ್ಷಿಣ ಕನ್ನಡ […]

Continue Reading