ಉಪ್ಪಿನಂಗಡಿ ಬಳಿ ನಕಲಿ ನೋಟು ಜಾಲ, ಏಳು ಮಂದಿ ಬಂಧಿಸಿದ ಪೊಲೀಸರು

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಭಾರಿ ಪ್ರಮಾಣದಲ್ಲಿ ನಕಲಿ 500 ಮುಖಬೆಲೆಯ ನೋಟುಗಳನ್ನು ತಯಾರಿಸುತ್ತಿದ್ದ ಸಂಘಟಿತ ಜಾಲವನ್ನು ಪುತ್ತೂರು ಪೊಲೀಸರು ಭೇದಿಸಿದ್ದು, ಘಟನೆಗೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಿ ನಕಲಿ ನೋಟುಗಳು, ಮುದ್ರಣ ಯಂತ್ರಗಳು ಹಾಗೂ ಇತರ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸರು ಕಣಿಯೂರು ಗ್ರಾಮದ ಅಡೆಂಜ ಪ್ರದೇಶದಲ್ಲಿ ಇರುವ ಬಾಡಿಗೆ ಕಟ್ಟಡದ ಮೇಲೆ ದಾಳಿ ನಡೆಸಿದರು. ಈ ವೇಳೆ […]

Continue Reading

ಹಿಂದುಳಿದ ವರ್ಗಗಳ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೈಜ ಬದ್ಧತೆ ಇಲ್ಲ: ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕೇಶವ ಪ್ರಸಾದ್, ಕಿಶೋರ್ ಕುಮಾರ್ ಪುತ್ತೂರು ಸರಕಾರದ ವಿರುದ್ಧ ಕಿಡಿ

ಮಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ ಕನಿಷ್ಠ ಎರಡು–ಮೂರು ದಿನಗಳ ಕಾಲ ಸಮಗ್ರ ಚರ್ಚೆಗೆ ಒಳಪಡಿಸಬೇಕು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯರಾದ ಕೇಶವ ಪ್ರಸಾದ್ ಹಾಗೂ ಕಿಶೋರ್ ಕುಮಾರ್ ಪುತ್ತೂರು ಅವರು ಗುರುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ಹಿಂದುಳಿದ ವರ್ಗಗಳ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೈಜ ಬದ್ಧತೆ ಇಲ್ಲದೆ, ಕೇವಲ ಮತಬ್ಯಾಂಕ್ ರಾಜಕಾರಣ ನಡೆಸುತ್ತಿದೆ. ಹಿಂದುಳಿದ ವರ್ಗಗಳ ಕಲ್ಯಾಣದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರಗಳು […]

Continue Reading

ಕನ್ನಡ, ಸಂಸ್ಕೃತ ಇಲಾಖೆಯಿಂದ ಕಲಾವಿದರಿಗೆ ಗುರುತಿನ ಚೀಟಿ ವಿತರಣೆ

ಕಾರವಾರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲೆಯ ನೈಜ ಕಲಾವಿದರಿಗೆ ಗುರುತಿನ ಚೀಟಿ ಪಡೆಯುವ ಕುರಿತಂತೆ 16 ಜೂನ್ 2024 ರಿಂದ 24 ಜೂನ್ 2024 ರೊಳಗೆ ಅರ್ಜಿ ನಮೂನೆಯಲ್ಲಿ ಸಲ್ಲಿಸಿರುವ ಕಲಾವಿದರಿಗೆ ಗುರುತಿನ ಚೀಟಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ಗುರುವಾರ ವಿತರಿಸಿದರು. ಜಿ.ಪಂ. ಸಿಇಒ ಡಾ.ದಿಲೀಷ್ ಶಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ್ ಹಾಗೂ ಕಲಾವಿದರು ಇದ್ದರು.

Continue Reading

ಸರಕಾರದ ವಿವಿಧ ಯೋಜನೆಗಳ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಿ: ಡಿಸಿ ಕೆ. ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ.ಜಾತಿ ಮತ್ತು ಪಂಗಡದವರಿಗೆ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಮಂಜೂರು ಮಾಡುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮಗಳಿಂದ ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ […]

Continue Reading

ಪೌರ ಕಾರ್ಮಿಕರಿಗೆ ಎಲ್ಲ ಸೌಲಭ್ಯಗಳು ಸಮಯಕ್ಕೆ ದೊರೆಯಲಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಸರ್ಕಾರದಿಂದ ಕಲ್ಪಿಸಲಾಗುವ ಸೌಲಭ್ಯಗಳಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ನಿಗದಿತ ದಿನಾಂಕದೊಳಗೆ ವೇತನ ಪಾವತಿಯಾಗಬೇಕು. ಜೊತೆಗೆ ಇಎಸ್‌ಐ ಹಾಗೂ ಇಪಿಎಫ್‌ ಹಣವನ್ನು ನಿಯಮಾನುಸಾರವೇ ಕಡಿತಗೊಳಿಸಲಾಗುತ್ತಿದೆ ಎಂಬುದನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು […]

Continue Reading

ಉ. ಕ ಜಿಲ್ಲೆಯಲ್ಲಿ 7,68,545 ಎನ್ಯುಮರೇಷನ್ ಫಾರ್ಮ್ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್ ಗಳನ್ನು ವಿತರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 7,68,545 ಫಾರ್ಮ್ ಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 14575 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 2994 ಶಾಶ್ವತ ವಲಸೆ […]

Continue Reading

ಬಂಟ್ವಾಳ ಬಸ್‌ ನಿಲ್ದಾಣದಲ್ಲಿ ಯುವತಿ ಅಟ್ಟಾಡಿಸಿ ಹತ್ಯೆ; ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಸಾವು, ಆರೋಪಿ ಪತ್ತೆಗೆ ಶೋಧ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಗುರುವಾರ ಯುವತಿಯೊಬ್ಬರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಮೃತಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಮಾತನಾಡಿ, ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ ಎನ್ನುವ ಮಾಹಿತಿ […]

Continue Reading

64 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ, ದೇಶದ ಗಮನ ಸೆಳೆದ ಗುರುಪುರ ಸ್ಮಾರ್ಟ್ ಸೇತುವೆ

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆ ಅಡಿ ಗುರುಪುರ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸುಲ್ತಾನ್ ಬತ್ತೇರಿ–ತಣ್ಣೀರುಬಾವಿ ಸಂಪರ್ಕ ಸೇತುವೆ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಸೇತುವೆ ನಿರ್ಮಾಣದ ಬಳಿಕ ಮಂಗಳೂರಿನ ಜನರಿಗೆ ತಣ್ಣೀರುಬಾವಿ ಕಡಲತೀರಕ್ಕೆ ತ್ವರಿತ ಸಂಪರ್ಕ ಕಲ್ಪಿಸುವ ಜತೆಗೆ, ತಣ್ಣೀರುಬಾವಿ–ಬೆಂಗ್ರೆ ನಿವಾಸಿಗಳ ಮಂಗಳೂರು ನಗರಕ್ಕೆ ಸಂಚರಿಸುವ ಪ್ರಯಾಣ ಸನಿಹ ಆಗಲಿದೆ. ಬೋ ಸ್ಟ್ರಿಂಗ್ ವಿನ್ಯಾಸದ ಸೇತುವೆ ನಡುವೆ ಯಾವುದೇ ಆಧಾರ ಸ್ತಂಭಗಳಿಲ್ಲದೆ 100 ಮೀಟರ್ ಉದ್ದದ ಏಕವಿಸ್ತಾರದ ವಿನ್ಯಾಸ ನಿರ್ಮಾಣ ಮಾಡಲಾಗಿದೆ. ಇಂತಹ ವಿನ್ಯಾಸದಿಂದಲಾಗಿಯೇ ಬೋ […]

Continue Reading

ರಾಮಮಂದಿರ ಹುಂಡಿ ಕಳವು ಪ್ರಕರಣ, ಭಕ್ತರ ನಂಬಿಕೆಗೆ ಆಘಾತ: ವಿನಯ್ ಕುಮಾರ್ ಸೊರಕೆ

ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣವು ಕೋಟ್ಯಂತರ ರಾಮಭಕ್ತರ ನಂಬಿಕೆಗೆ ಧಕ್ಕೆ ತಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ನಾಯಕರು ಉತ್ತರ ನೀಡಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಆಗ್ರಹಿಸಿದರು. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಕರಣದ ಕುರಿತು ತನಿಖಾ ಸಂಸ್ಥೆಗಳಾದ ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ […]

Continue Reading

ಎನ್ಯುಮರೇಶನ್ ಅರ್ಜಿ ವಿಳಂಬ ಮಾಡದೇ ವಾಪಸ್ ಮಾಡಿ: ಡಿ.ಸಿ ದರ್ಶನ್ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 18,03,766 ಮತದಾರರ ಪೈಕಿ 17,86,112 ಅಂದರೆ ಶೇ 99.02 ಮತದಾರರಿಗೆ ಎನ್ಯುಮರೇಶನ್ ಫಾರ್ಮ್‍ಗಳನ್ನು ತಲುಪಿಸಲಾಗಿದೆ. ಜುಲೈ 29 ಎನ್ಯುಮರೇಶನ್ ಫಾರ್ಮ್‍ಗಳ ಡಿಜಿಟೈಸೇಷನ್‍ಗೆ ಕೊನೆಯ ದಿನ ಆಗಿರುವುದರಿಂದ ಮತದಾರರು ಆದಷ್ಟು ಬೇಗ ಎನ್ಯುಮರೇಶನ್ ಫಾರ್ಮ್‍ಗಳನ್ನು ಭರ್ತಿ ಮಾಡಿ ಬಿ.ಎಲ್.ಒಗಳು ಮನೆಗೆ ಬಂದಾಗ ವಿಳಂಬ ಮಾಡದೇ ನೀಡಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ತಿಳಿಸಿದ್ದಾರೆ. ಬಿ.ಎಲ್.ಒ ಗಳು ಮತದಾರರಿಂದ ಸ್ವೀಕೃತವಾಗುವ ಎನ್ಯುಮರೇಶನ್ ಫಾರ್ಮ್‍ಗಳನ್ನು ಬಿ.ಎಲ್.ಒ ಆ್ಯಪ್‍ನಲ್ಲಿ ಡಿಜಿಟೈಸೇಶನ್ ಮಾಡಲು ಕನಿಷ್ಠ 2 ರಿಂದ 4 ನಿಮಿಷಗಳ […]

Continue Reading