ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭರತ್ ಮುಂಡೋಡಿ ಸೂಚನೆ
ಮಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ದೋಷದಿಂದ ಜೀವಂತ ಫಲಾನುಭವಿಗಳನ್ನೇ ಮೃತರೆಂದು ದಾಖಲಿಸುವ ಪ್ರಕರಣಗಳು ವರದಿಯಾಗುತ್ತಿದ್ದು, ಹಲವು ತಿಂಗಳು ಕಳೆದರೂ ಸಮಸ್ಯೆ ಬಗೆಹರಿಯದಿರುವುದನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೃತ ಫಲಾನುಭವಿಗಳ ಮಾಹಿತಿಯನ್ನು ಶಿಶು ಅಭಿವೃದ್ಧಿ […]
Continue Reading