ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಎಷ್ಟು ಮಂದಿ ಬಾಂಗ್ಲಾದೇಶಿ ವಲಸಿಗರನ್ನು ಹೊರಹಾಕಿದ್ದೀರಿ: ಐವನ್ ಡಿಸೋಜ

ಮಂಗಳೂರು: ಬಾಂಗ್ಲಾದೇಶಿ ವಲಸಿಗರ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿರುವ ಬಿಜೆಪಿ, ಕೇಂದ್ರ ಹಾಗೂ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೊದಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಬಾಂಗ್ಲಾದೇಶಿ ವಲಸಿಗರನ್ನು ಹೊರಹಾಕುವುದಾಗಿ ಬಿಜೆಪಿ ಹೇಳಿತ್ತು. ಆದರೆ ಅಧಿಕಾರಕ್ಕೆ ಬಂದ ಎರಡು ತಿಂಗಳಾದರೂ ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಬಿಹಾರ, ಒಡಿಶಾ, ಅಸ್ಸಾಂ ಸೇರಿದಂತೆ ಬಿಜೆಪಿ […]

Continue Reading

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ, ಮತದಾರರು, ಬಿಎಲ್ ಒಗಳಿಗೆ ಸಂಕಷ್ಟ: ಎಸ್ ಡಿಪಿಐ ಆರೋಪ

ಮಂಗಳೂರು: ಕೇಂದ್ರ ಚುನಾವಣಾ ಆಯೋಗ ಜಾರಿಗೊಳಿಸಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳಿದ್ದು, ಇದರಿಂದ ಮತದಾರರು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲ ಘಟಕದ ಅಧ್ಯಕ್ಷ ಅಶ್ರಫ್ ಅಡ್ಡೂರು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ಎಸ್‌ಐಆರ್ ಪ್ರಕ್ರಿಯೆಯನ್ನು ಮೊದಲಿಗೆ ಬಿಹಾರದಲ್ಲಿ ಜಾರಿಗೆ ತರಲಾಗಿದ್ದು, ಅಲ್ಲಿ ಉಂಟಾದ ಗೊಂದಲಗಳ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿತ್ತು. ನಂತರ ಕರ್ನಾಟಕ ಸೇರಿದಂತೆ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಈ ಪ್ರಕ್ರಿಯೆ […]

Continue Reading

ಪಡೀಲ್‌ಗೆ ಪಂಚಗಂಗಾ ಎಕ್ಸ್‌ಪ್ರೆಸ್ ನಿಲುಗಡೆಗೆ ಒತ್ತಾಯ, ರೈಲ್ವೆ ಅಧಿಕಾರಿಗಳ ಶೀಘ್ರವೇ ಭೇಟಿ: ಪಿ.ವಿ. ಮೋಹನ್

ಮಂಗಳೂರು: ನಗರದ ಪಡೀಲ್ ರೈಲು ನಿಲ್ದಾಣ ಹಲವು ವರ್ಷಗಳಿಂದ ಅಭಿವೃದ್ಧಿ ಮತ್ತು ಅಗತ್ಯ ರೈಲು ನಿಲುಗಡೆಯಿಂದ ವಂಚಿತವಾಗಿದ್ದು, ಸಾವಿರಾರು ಜನರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾರವಾರ–ಬೆಂಗಳೂರು ಪಂಚಗಂಗಾ ಸೂಪರ್ ಎಕ್ಸ್‌ಪ್ರೆಸ್‌ಗೆ ಪಡೀಲ್‌ನಲ್ಲಿ ನಿಲುಗಡೆ ಕಲ್ಪಿಸಿ, ಸ್ಥಳೀಯರ ಬಹುಕಾಲದ ಬೇಡಿಕೆಯನ್ನು ಈಡೇರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಪಿ.ವಿ. ಮೋಹನ್ ಆಗ್ರಹಿಸಿದರು. ಪಡೀಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಅಹವಾಲು ಆಲಿಸಿ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಮಂಗಳೂರು ರೈಲು ಸಂಪರ್ಕಕ್ಕೆ 120 […]

Continue Reading

ತಲಪಾಡಿ: ಶಾರದಾ ವಿದ್ಯಾನಿಕೇತನ ಕಾಲೇಜಿನಲ್ಲಿ ವನಮಹೋತ್ಸವ

ತಲಪಾಡಿ: ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಜೀವನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವ ಉದ್ದೇಶದಿಂದ ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಕಾಲೇಜಿನ ವಿದ್ಯಾರ್ಥಿ ಸೇವಾ ಸಂಘ ಹಾಗೂ ಮಂಗಳೂರು ರೋಟರಿ ಸಂಸ್ಥೆಯ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ವಿನಾಯಕ ಬಿ.ಜಿ. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ರೋಟರಿ ಸಂಸ್ಥೆಯ ಅಧ್ಯಕ್ಷ ಡೈಡನ್ ಡಿಸಿಲ್ವ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕಾಲೇಜಿನ […]

Continue Reading

ಮಂಗಳೂರಿನಲ್ಲಿ ನಾಗರಿಕ ಸೇವಾ ಪರೀಕ್ಷೆಗಳ ತರಬೇತಿ ಕೇಂದ್ರ ಉದ್ಘಾಟಿಸಿದ ಡಾ. ಹೆನ್ರಿ ಡಿಸೋಜ

ಮಂಗಳೂರು: ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಆರಂಭಿಸಲಾದ ಹೊಸ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ನಗರದ ಸಂದೇಶ ಪ್ರತಿಷ್ಠಾನದ ಆವರಣದಲ್ಲಿ ನಡೆಯಿತು. ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಹಾಗೂ ಸಂದೇಶ ಪ್ರತಿಷ್ಠಾನದ ಅಧ್ಯಕ್ಷ ಡಾ. ಹೆನ್ರಿ ಡಿಸೋಜ ಅವರು ಉದ್ಘಾಟನೆ ನೆರವೇರಿಸಿದರು. ಬಳಿಕ ರಾಮಕೃಷ್ಣ ಮಠದ ಸ್ವಾಮಿ ಯುಗಾನಂದ ದೀಪ ಬೆಳಗಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಹೆನ್ರಿ ಡಿಸೋಜ ಅವರು, ನಾವು ಎಲ್ಲಿ ಹುಟ್ಟಿದ್ದೇವೆ ಎಂಬುದು ಮುಖ್ಯವಲ್ಲ. ಜೀವನದಲ್ಲಿ ಯಾವ […]

Continue Reading

ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆಗೆ ಆದ್ಯತೆ ನೀಡಿ: ಶಾಸಕ ಡಾ. ಭರತ್ ಶೆಟ್ಟಿ ಒತ್ತಾಯ

ಮಂಗಳೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಮತದಾರರ ಪಟ್ಟಿಯ ಪರಿಷ್ಕರಣೆಯ ಜೊತೆಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆ ಕಾರ್ಯಕ್ಕೂ ಆದ್ಯತೆ ನೀಡಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಬಾಂಗ್ಲಾದೇಶದ ನಾಗರಿಕರು ಅಕ್ರಮವಾಗಿ ದೇಶ ಪ್ರವೇಶಿಸಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮುಕ್ಕ ಹಾಗೂ ಕೋಡಿಕಲ್ ಪ್ರದೇಶಗಳಲ್ಲಿ ಈಗಾಗಲೇ 16 ಮಂದಿ ಅಕ್ರಮ ವಲಸಿಗರನ್ನು ಪೊಲೀಸರು […]

Continue Reading

ಅದಾನಿ ರಿವಾರ್ಡ್ಸ್‌ಗೆ 10 ತಿಂಗಳಲ್ಲಿ 50 ಲಕ್ಷ ಸದಸ್ಯರು, ಪ್ರಯಾಣಿಕರಿಗೆ ಇನ್ನಷ್ಟು ಸೌಲಭ್ಯಗಳ ಭರವಸೆ: ಅದಾನಿ ಸಂಸ್ಥೆ

ಮಂಗಳೂರು: ಅದಾನಿ ವಿಮಾನ ನಿಲ್ದಾಣ ಹೋಲ್ಡಿಂಗ್ಸ್ ಲಿಮಿಟೆಡ್‌ನ ಗ್ರಾಹಕ ಸೇವಾ ಅನ್ವಯಿಕೆ ‘ಅದಾನಿ ಒನ್’ ಮೂಲಕ ಪರಿಚಯಿಸಲಾದ ವಿಮಾನ ನಿಲ್ದಾಣ ಗ್ರಾಹಕ ಪ್ರೋತ್ಸಾಹ ಯೋಜನೆ ‘ಅದಾನಿ ರಿವಾರ್ಡ್ಸ್’ ಆರಂಭಗೊಂಡು ಕೇವಲ 10 ತಿಂಗಳಲ್ಲಿ 50 ಲಕ್ಷ ಸದಸ್ಯರನ್ನು ಹೊಂದುವ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಏಳು ರಾಜ್ಯಗಳಲ್ಲಿರುವ ಅದಾನಿ ಸಂಸ್ಥೆ ನಿರ್ವಹಿಸುತ್ತಿರುವ ಎಂಟು ವಿಮಾನ ನಿಲ್ದಾಣಗಳಲ್ಲಿ ಈ ಯೋಜನೆ ಲಭ್ಯವಿದೆ. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿನ ಖರೀದಿ, ಉಪಾಹಾರ ಸೇವೆ ಹಾಗೂ ಇತರ […]

Continue Reading

ವೈದ್ಯರ ದಿನ, ಲೇಡಿಗೋಷನ್ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರಿಗೆ ಸನ್ಮಾನ, ಸೇವೆ ಸ್ಮರಿಸಿದ ಡಾ. ದುರ್ಗಾಪ್ರಸಾದ್

ಮಂಗಳೂರು: ವೈದ್ಯರ ದಿನಾಚರಣೆಯ ಅಂಗವಾಗಿ ನಗರದ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಸರ್ಕಾರಿ ಲೇಡಿಗೋಷನ್ ಆಸ್ಪತ್ರೆ ಹಾಗೂ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಕಳೆದ ಏಳು ದಶಕಗಳಿಂದ ತಾಯಿ ಮತ್ತು ಮಗುವಿನ ಆರೋಗ್ಯ ಸೇವೆ ನೀಡುತ್ತಿರುವ ಹಿನ್ನೆಲೆಯಲ್ಲಿ ಎರಡೂ ಸಂಸ್ಥೆಗಳ ವೈದ್ಯರ ಸೇವೆಯನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ಹಿರಿಯ ವೈದ್ಯರಾದ ಡಾ. ಆರ್.ಎಲ್. ಕಾಮತ್, ಡಾ. ಎಸ್.ಆರ್. ನಾಯಕ್, ಡಾ. ಅಶ್ಫಾಕ್, ಡಾ. ಸುರೇಶ್ ಶೆಟ್ಟಿ, ಡಾ. ಶ್ರದ್ಧಾ ಶೆಟ್ಟಿ, ಡಾ. ಪ್ರಿಯಾ […]

Continue Reading

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ: ತಡೆಗೆ ಸುಪ್ರೀಂ ನಿರಾಕರಣೆ, ಮತ್ತೇ ಹಿನ್ನಡೆ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ, ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡೀಪಾರು ಆದೇಶ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಪರಾಧ ಹಿನ್ನೆಲೆಯುಳ್ಳ ಕಾರಣಕ್ಕೆ ಮತ್ತು ನಿರಂತರವಾಗಿ ಸಮಾಜದ ಸ್ವಾಸ್ಥಕ್ಕೆ ಧಕ್ಕೆ ತರುವ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಗಡೀಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್ […]

Continue Reading

40 ನೇ ವಯಸ್ಸಿನಲ್ಲಿ ಈಜು ಕಲಿತು, ಇಂಗ್ಲಿಷ್ ಚಾನೆಲ್ ಈಜಿದ ಮೊದಲ ಮಂಗಳೂರಿಗನಾಗಿರುವದು ನನಗೆ ಹೆಮ್ಮೆ: ಡಾ. ಗುರುಪ್ರಸಾದ್

ಮಂಗಳೂರು: ಪುತ್ರನಿಗೆ ಈಜು ಕಲಿಸುವ ಉದ್ದೇಶದಿಂದ 40ನೇ ವಯಸ್ಸಿನಲ್ಲಿ ಈಜು ಕಲಿತಿದ್ದೇ ತನ್ನ ಬದುಕಿನ ಮಹತ್ವದ ತಿರುವಾಯಿತು. ನಿರಂತರ ಅಭ್ಯಾಸ ಮತ್ತು ಆತ್ಮವಿಶ್ವಾಸದಿಂದ ಇಂಗ್ಲಿಷ್ ಚಾನೆಲ್ ರಿಲೇ ಈಜು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಯಿತು ಎಂದು ಕಣಚೂರು ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ. ಗುರುಪ್ರಸಾದ್ ಹೇಳಿದರು. ನಗರದ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 3ರಂದು ಭಾರತದಿಂದ ಆರು ಸದಸ್ಯರ ತಂಡ ಇಂಗ್ಲೆಂಡ್‌ನಿಂದ ಫ್ರಾನ್ಸ್‌ವರೆಗೆ ಇಂಗ್ಲಿಷ್ ಚಾನೆಲ್ ರಿಲೇ ಈಜನ್ನು 13 ಗಂಟೆ 5 ನಿಮಿಷಗಳಲ್ಲಿ […]

Continue Reading