ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ತಾಲ್ಲೂಕು ಪಂಚಾಯಿತಿ ಇಒ ಭಾರತಿ ಎನ್

ಕಾರವಾರ: ಮಕ್ಕಳು ಈ ದೇಶದ ಸಂಪತ್ತು. ಮಕ್ಕಳನ್ನು ಕಾಪಾಡುವ ಜವಾಬ್ದಾರಿ ಇಡೀ ಸಮಾಜದ ಮೇಲಿದೆ. ಮಕ್ಕಳನ್ನು ಕಾಪಾಡುವುದು ಅಥವಾ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಎಂದು ಜೋಯಿಡಾ ತಾ.ಪಂ. ಕಾರ್ಯನಿರ್ವಣಾಧಿಕಾರಿ ಭಾರತಿ ಎನ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಘಟಕ ಹಾಗೂ ಸಖಿ ಆಶ್ರಯದಲ್ಲಿ ಜೋಯಿಡಾದ ಮೊರಾರ್ಜಿ ವಸತಿ ಶಾಲೆಯಲ್ಲಿ ಮಕ್ಕಳಿಗಾಗಿ ಆಯೋಜಿಸಲಾದ , ಸಾಮಾಜಿಕ ಪಿಡುಗು ಹಾಗೂ ಪೋಕ್ಸೋ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, […]

Continue Reading

ಯಲ್ಲಾಪುರ: ಭೀಕರ ರಸ್ತೆ ಅಪಘಾತ 7 ಮಂದಿ ಸಾವು, ಡಿಸಿ ಲಕ್ಷ್ಮಿಪ್ರಿಯಾ, ಎಸ್ಪಿ ದೀಪನ್ ಸ್ಥಳಕ್ಕೆ ದೌಡು, ಪರಿಶೀಲನೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಆರತಿಬೈಲ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿರುವುದು ಜಿಲ್ಲೆಯಲ್ಲಿ ಸೂತಕದ ವಾತಾವರಣ ನಿರ್ಮಾಣ ಮಾಡಿದೆ. ಕ್ರೂಸರ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಪ್ರಯಾಣಿಸುವವರಲ್ಲಿ ಭಯ ಹುಟ್ಟಿಸಿದೆ. ಘಟನೆಯಲ್ಲಿ ಮೃತಪಟ್ಟವರು ಧಾರವಾಡದ ಬಸವರಾಜ್ ಕನಕನವರ್ (48), ಧಾರವಾಡ ಜಯನಗರದ ಅಭಿಷೇಕ ಈಶ್ವರ (28) ವರ್ಷ, ಸಾಧನಕೇರಿಯ ಅಕ್ಷಯ (26), ಸಪ್ತಾಪುರದ ಅಭಿಷೇಕ ಮಲ್ಲೇಶ ಮಡಬಾವಿ (26), ಕುರುಬಗಟ್ಟಿಯ ಸಂಜೀವ […]

Continue Reading

ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧ್ಯಕ್ಷತೆಯಲ್ಲಿ ರಸ್ತೆ ಸಾರಿಗೆ ಪ್ರಾಧಿಕಾರ ಸಭೆ, ಹೆಚ್ಚಿದ ನಿರ್ವಹಣಾ ವೆಚ್ಚ, ದರ ಏರಿಕೆಯ ಪಟ್ಟು

ಮಂಗಳೂರು: ಇಂಧನ, ಎಲ್‌ಪಿಜಿ, ಸಿಎನ್‌ಜಿ ಹಾಗೂ ವಾಹನ ನಿರ್ವಹಣಾ ವೆಚ್ಚ ಗಣನೀಯವಾಗಿ ಹೆಚ್ಚಿರುವ ಹಿನ್ನೆಲೆಯಲ್ಲಿ ಆಟೋ ರಿಕ್ಷಾಗಳ ಕನಿಷ್ಠ ಪ್ರಯಾಣ ದರವನ್ನು ಪ್ರಸ್ತುತ ಇರುವ 35ರಿಂದ 50 ಕ್ಕೆ ಹಾಗೂ ಮೊದಲ 1.5 ಕಿಲೋ ಮೀಟರ್ ನಂತರ ಪ್ರತಿ ಕಿಲೋಮೀಟರ್‌ಗೆ ವಿಧಿಸುವ ದರವನ್ನು 15 ರಿಂದ 30 ಕ್ಕೆ ಹೆಚ್ಚಿಸಬೇಕು ಎಂದು ಆಟೋ ಚಾಲಕರು ಮತ್ತು ಮಾಲೀಕರ ಸಂಘಗಳ ಪ್ರತಿನಿಧಿಗಳು ಜಿಲ್ಲಾಡಳಿತವನ್ನು ಗುರುವಾರ ಒತ್ತಾಯಿಸಿದರು. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧ್ಯಕ್ಷತೆಯಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರ (ಆರ್‌ಟಿಎ) […]

Continue Reading

ಮಂಗಳೂರಿನಲ್ಲಿ ಅಗಸ್ಟ್ 2 ರಿಂದ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ ಷಿಪ್ ಹಬ್ಬ: ಡಾ. ಅಮರಶ್ರೀ ಅಮರನಾಥ ಶೆಟ್ಟಿ

ಮಂಗಳೂರು: ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ವತಿಯಿಂದ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ ಷಿಪ್- ಅ. 2 ರಿಂದ 8 ರವರೆಗೆ ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಚೆಸ್ ಅಸೋಸಿಯೇಷನ್ ಅಧ್ಯಕ್ಷೆ ಡಾ. ಅಮರಶ್ರೀ ಅಮರನಾಥ ಶೆಟ್ಟಿ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ದೇಶದ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 600 ಕ್ಕೂ ಹೆಚ್ಚು ಮಂದಿ ಆಟಗಾರರು, ತರಬೇತುದಾರರು ಮತ್ತು ಪೋಷಕರು ಭಾಗವಹಿಸುವ ನಿರೀಕ್ಷೆ ಇದ್ದು, […]

Continue Reading

ಕುದ್ರೋಳಿ, ಅಳಕೆ, ಡೊಂಗರಕೇರಿಯಲ್ಲಿ ಕಾಮಾಲೆ, ಡೆಂಗೆ ಪ್ರಕರಣ ಪತ್ತೆ, ಆತಂಕ ಬೇಡ: ಡಿಎಚ್ ಒ ಡಾ. ತಿಮ್ಮಯ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಮಾಲೆ (ಜಾಂಡಿಸ್) ಹಾಗೂ ಡೆಂಗೆ ಪ್ರಕರಣಗಳು ನಿಧಾನವಾಗಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕ ಪಡುವ ಬದಲು ವೈಯಕ್ತಿಕ ಸ್ವಚ್ಛತೆ, ಸುರಕ್ಷಿತ ಕುಡಿವ ನೀರಿನ ಬಳಕೆ ಹಾಗೂ ಸೊಳ್ಳೆ ನಿಯಂತ್ರಣ ಕ್ರಮಗಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಡಿಎಚ್ ಒ ಡಾ. ಎಚ್.ಆರ್. ತಿಮ್ಮಯ್ಯ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಂಗಳೂರಿನ ಕುದ್ರೋಳಿ, ಅಳಕೆ ಹಾಗೂ ಡೊಂಗರಕೇರಿ ಪ್ರದೇಶಗಳಲ್ಲಿ ಜೂನ್ 23 ರಿಂದ ಇದೂವರೆಗೆ 19 ಕಾಮಾಲೆ ರೋಗದ ಪ್ರಕರಣಗಳು […]

Continue Reading

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕುರಿತು ಹರಿದಾಡುತ್ತಿರುವ ಆರೋಪಗಳು ಸುಳ್ಳು: ಜಿಲ್ಲಾ ಸರ್ಜನ್ ಡಾ. ಅಶೋಕ್ ಸ್ಪಷ್ಟನೆ

ಉಡುಪಿ: ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಿಂದ ದಾಖಲಾತಿ ಅಥವಾ ರಶೀದಿ ಇಲ್ಲದೆ ರಕ್ತ ವಿತರಿಸಲಾಗುತ್ತಿದೆ ಎಂಬ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಆಧಾರರಹಿತವಾಗಿದ್ದು, ರಕ್ತ ವಿತರಣೆಯ ಎಲ್ಲ ಪ್ರಕ್ರಿಯೆಗಳೂ ಸರ್ಕಾರದ ಮಾರ್ಗಸೂಚಿ ಮತ್ತು ಕಾನೂನು ನಿಯಮಾವಳಿಗಳ ಪ್ರಕಾರವೇ ನಡೆಯುತ್ತಿವೆ ಎಂದು ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರು ಸ್ಪಷ್ಟನೆ ನೀಡಿದ್ದಾರೆ. ಜುಲೈ 7 ರಂದು  ಜಾಲತಾಣಗಳಲ್ಲಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಿಂದ ಒಂದೇ ಬಾರಿ 15 ಯುನಿಟ್ ರಕ್ತವನ್ನು ಖಾಸಗಿ ಆಸ್ಪತ್ರೆಗೆ ಯಾವುದೇ ದಾಖಲಾತಿ ಇಲ್ಲದೆ […]

Continue Reading

ಎಂಎಸ್‌ಎಂಇಗಳ ಬೆಳವಣಿಗೆಗೆ ಬ್ಯಾಂಕಿಂಗ್ ಬೆಂಬಲ ಅಗತ್ಯ: ಸಿಎ ಎಸ್.ಎಸ್. ನಾಯಕ್

ಮಂಗಳೂರು: ಅಂತರರಾಷ್ಟ್ರೀಯ ಎಂಎಸ್‌ಎಂಇ ದಿನದ ಅಂಗವಾಗಿ ಮಂಗಳೂರಿನ ಎಸ್‌ಡಿಎಂ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಹಯೋಗದಲ್ಲಿ “ಎಂಎಸ್‌ಎಂಇ ಮತ್ತು ಬ್ಯಾಂಕಿಂಗ್ ವ್ಯವಸ್ಥೆ: ಭಾರತೀಯ ಆರ್ಥಿಕತೆಯ ಸಬಲೀಕರಣ” ವಿಷಯದ ಕುರಿತು ವಿಚಾರ ಸಂಕಿರಣ ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ […]

Continue Reading

ರಾಷ್ಟ್ರ ಮಟ್ಟಕ್ಕೆ ಮಂಗಳೂರಿನ ವೀವನ್ ಈಜು ಪಟುಗಳು, 18 ಪದಕಗಳ ಸಾಧನೆ

ಮಂಗಳೂರು: ಕರ್ನಾಟಕ ರಾಜ್ಯ ಈಜು ಸಂಸ್ಥೆ ಹಾಗೂ ವೀ ವನ್ ಅಕ್ವಾ ಸೆಂಟರ್ ಆಶ್ರಯದಲ್ಲಿ ಮಂಗಳೂರಿನ ಎಮ್ಮೆಕೆರೆ ಅಂತರ ರಾಷ್ಟ್ರೀಯ ಈಜುಕೊಳದಲ್ಲಿ ನಡೆದ ಎನ್‌ಆರ್‌ಜೆ ರಾಜ್ಯ ಸಬ್ ಜೂನಿಯರ್ ಈಜು ಸ್ಪರ್ಧೆಯಲ್ಲಿ ವೀ ವನ್ ಅಕ್ವಾ ಸೆಂಟರ್‌ ಈಜುಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಒಟ್ಟು 18 ಪದಕಗಳನ್ನು ಗೆದ್ದು ಗಮನ ಸೆಳೆದಿದ್ದಾರೆ. ಮೂರು ಮಂದಿ ಈಜುಪಟುಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶ್ವಿತಿ ದಿವಾಕರ್, ಅಲಿಟಾ ಡಿಸೋಜಾ ಹಾಗೂ ಸಿದ್ಧಿ ಶೆಟ್ಟಿ ಅವರು ಆಗಸ್ಟ್ 6ರಿಂದ 9ರವರೆಗೆ ಜೈಪುರದಲ್ಲಿ […]

Continue Reading

ಜನನ-ಮರಣ ಪ್ರಮಾಣಪತ್ರ ಅರ್ಜಿ ಸ್ವೀಕಾರ ಬಂದ್ ಎಂಬ ನಾಮಪಲಕ, ಪಾಲಿಕೆ ವಿರುದ್ಧ ಶಾಸಕ ವೇವ್ಯಾಸ್ ಕಾಮತ್ ಕೆಂಡಾಮಂಡಲ

ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಎಸ್‌ಐಆರ್ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿರುವ ನೆಪದಲ್ಲಿ ಜುಲೈ 29 ರವರೆಗೆ ಜನನ ಮತ್ತು ಮರಣ ನೋಂದಣಿ ಅರ್ಜಿಗಳ ಸ್ವೀಕಾರ ಸ್ಥಗಿತಗೊಳಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು. ಜನರ ಅಗತ್ಯ ಸೇವೆಗಳನ್ನು ಸ್ಥಗಿತಗೊಳಿಸಿರುವ ಮಹಾನಗರ ಪಾಲಿಕೆ ಆಡಳಿತ ಕೂಡಲೇ ಈ ನಿರ್ಧಾರ ಹಿಂಪಡೆದು ಅರ್ಜಿ ಸ್ವೀಕಾರ ಹಾಗೂ ಪ್ರಮಾಣ ಪತ್ರ ವಿತರಣೆಯನ್ನು ಸುಗಮಗೊಳಿಸಬೇಕು. ಆಡಳಿತಾಧಿಕಾರಿ ಮೂಲಕ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಇನ್ನು ಒಂದು ತಿಂಗಳು […]

Continue Reading

ಎಸ್‌ಐಆರ್ ನಲ್ಲಿಯೂ ಬಿಜೆಪಿ ರಾಜಕೀಯ, ಪ್ರಕ್ರಿಯೆ ಪಕ್ಷಾತೀತವಾಗಿ ನಡೆಯಲಿ: ಮಾಜಿ ಸಚಿವ ರಮಾನಾಥ ರೈ

ಮಂಗಳೂರು: ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಪಾರದರ್ಶಕ ಹಾಗೂ ಪಕ್ಷಾತೀತವಾಗಿ ನಡೆಯಬೇಕು. ಯಾವುದೇ ಅರ್ಹ ಮತದಾರನ ಹೆಸರು ಪಟ್ಟಿಯಿಂದ ಕೈ ಬಿಡದಂತೆ ಚುನಾವಣಾ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲ ಹಕ್ಕು. ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಟ್ಟರೆ ಅದು ಅವರ ಪ್ರಜಾಸತ್ತಾತ್ಮಕ ಹಕ್ಕು ಕಸಿದಂತೆ. ಆದ್ದರಿಂದ ಎಸ್‌ಐಆರ್ ಪ್ರಕ್ರಿಯೆ ಯಾವುದೇ […]

Continue Reading