ದ.ಕ ಜಿಲ್ಲೆಯ ಶಾಲೆಗಳಿಗೆ ಜುಲೈ 8 ರಂದು ರಜೆ ಘೋಷಣೆ: ಡಿಸಿ ದರ್ಶನ್ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಗಾಳಿ ಹಾಗೂ ಮಳೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 8 ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಅವರು ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆ ವ್ಯಾಪಕ ಮಳೆ ಆಗುವ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿ ( ಪಿಯು)ಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಎಸ್ಐಆರ್ ಅಂಗವಾಗಿ ಪಂಜಿನ ಮೆರವಣಿಗೆ: ಪೌರಾಯುಕ್ತ ಜಗದೀಶ್ ಚಾಲನೆ

ಕಾರವಾರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಸ್ವೀಪ್ ಸಮಿತಿ ಉತ್ತರ ಕನ್ನಡ ಹಾಗೂ ನಗರಸಭೆ ಕಾರವಾರದ ವತಿಯಿಂದ, ನಗರಸಭೆ ಆವರಣದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಪಂಜಿನ ಮೆರವಣಿಗೆ ಕಾರ್ಯಕ್ರಮವನ್ನು ಕಾರವಾರ ನಗರಸಭೆಯ ಪೌರಾಯುಕ್ತ ಜಗದೀಶ್ ಹುಲಗಜ್ಜಿ ಚಾಲನೆ ನೀಡಿದರು. ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಇದ್ದರು. ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ನಗರಸಭೆ ಆವರಣದಿಂದ ನಗರದ ಪ್ರಮುಖ […]

Continue Reading

ಭಾರಿ ಮಳೆ, ಗಾಳಿ ಭೀತಿ: ಉ. ಕ ಜಿಲ್ಲೆಯ 16 ಹೆದ್ದಾರಿ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿ ಡಿಸಿ ಲಕ್ಷ್ಮಿಪ್ರಿಯಾ ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಹಾಗೂ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಭೂ ಕುಸಿತ ಹಾಗೂ ರಸ್ತೆ ಅಪಘಾತಗಳ ಅಪಾಯ ಹೆಚ್ಚುವ ಸಾಧ್ಯತೆ ಇರುವ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ 16 ಸೂಕ್ಷ್ಮ ಪ್ರದೇಶಗಳಲ್ಲಿ ಜುಲೈ 6 ರಿಂದ ಮಳೆಗಾಲ ಅಂತ್ಯ ಆಗುವವರಿಗೆ ಎಲ್ಲ ರೀತಿಯ ವಾಹನಗಳ ನಿಲುಗಡೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. ಎಲ್ಲೆಲ್ಲಿ ನಿಷೇಧ: ಕಾರವಾರ ತಾಲೂಕಿನ ಲಂಡನ್ ಬ್ರಿಡ್ಜ್‌ನಿಂದ ಬಿನಾಗಾ ಸುರಂಗದವರೆಗೆ 750 ಮೀಟರ್, ಅಗಾರ್‌ನ ಸಂಕುಬಾಗ […]

Continue Reading

ಉ. ಕದಲ್ಲಿ ಭಾರೀ ಗಾಳಿ, ಮಳೆ, 5 ತಾಲೂಕಿನ ಶಾಲೆಗಳಿಗೆ ಜುಲೈ 7 ರಂದು ರಜೆ: ಡಿಸಿ ಲಕ್ಷ್ಮಿಪ್ರಿಯಾ ಆದೇಶ

ಕಾರವಾರ: ಭಾರತೀಯ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಎಲ್ಲ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜುಲೈ 7 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ. ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಆದೇಶ ಹೊರಡಿಸಲಾಗಿದೆ. ಜಿಲ್ಲೆಯ ಉಳಿದ ತಾಲೂಕುಗಳಿಗೆ ಈ ರಜೆ ಅನ್ವಯಿಸುವುದಿಲ್ಲ. […]

Continue Reading

ಉ.ಕ ಜಿಲ್ಲೆಯಲ್ಲಿ ದತ್ತು ಮಕ್ಕಳ ಪ್ರಕ್ರಿಯೆ; ಮೂರು ಮಕ್ಕಳಿಗೆ ಸ್ವದೇಶಿ, ಒಂದು ಮಗುವಿಗೆ ವಿದೇಶಿ ದತ್ತು ಪ್ರಕ್ರಿಯೆ ಭಾಗ್ಯ

ಕಾರವಾರ: ಅನಾಥ, ತ್ಯಜಿಸಲ್ಪಟ್ಟ ಹಾಗೂ ಪಾಲಕರ ಆರೈಕೆಯಿಂದ ವಂಚಿತ ಮಕ್ಕಳಿಗೆ ಶಾಶ್ವತ ಕುಟುಂಬ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ದತ್ತು ಪ್ರಕ್ರಿಯೆಗೆ ಹೆಚ್ಚಿನ ಚುರುಕು ನೀಡಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ಎನ್. ತಿಳಿಸಿದ್ದಾರೆ. ದತ್ತು ಪ್ರಕ್ರಿಯೆಯನ್ನು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ–2015 ಹಾಗೂ ದತ್ತು ನಿಯಮಾವಳಿ–2022ರ ಪ್ರಕಾರ ನಡೆಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಮಕ್ಕಳ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಸ್ವದೇಶಿ ದತ್ತು ಪ್ರಕ್ರಿಯೆಯಲ್ಲಿ ಭಾರತೀಯ ನಾಗರಿಕರು ದೇಶದೊಳಗಿನ ಮಕ್ಕಳನ್ನು […]

Continue Reading

ಕಾರವಾರ: ಭಾರೀ ಗಾಳಿಗೆ ಬೃಹತ್‌ ಮರ ಉರುಳಿ ಎಪಿಪಿ ಕಚೇರಿಗೆ ಹಾನಿ

ಕಾರವಾರ: ನಗರದಲ್ಲಿ ಭಾನುವಾರ ಬೀಸಿದ ಭಾರೀ ಗಾಳಿಗೆ ಬೃಹತ್‌ ಮರವೊಂದು ಉರುಳಿ ಬಿದ್ದ ಪರಿಣಾಮ ನಗರಸಭೆ ಪಕ್ಕದಲ್ಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರ ಕಚೇರಿಗೆ ತೀವ್ರ ಹಾನಿ ಉಂಟಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ಸಂಬಂಧಿಸಿದ ಸಹಾಯಕ ಸರ್ಕಾರಿ ಅಭಿಯೋಜಕರ ಕಚೇರಿ ಮೇಲೆ ಮರ ಬಿದ್ದ ಪರಿಣಾಮ ಕಟ್ಟಡಕ್ಕೆ ಭಾರೀ ಹಾನಿ ಆಗಿದೆ. ಕಚೇರಿಯಲ್ಲಿದ್ದ ದಾಖಲೆಗಳು ಹಾಗೂ ಇತರ ಸಾಮಗ್ರಿಗಳಿಗೂ ಹಾನಿ ಆಗಿರುವ ಸಾಧ್ಯತೆ […]

Continue Reading

ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಹಾದಿಯಲ್ಲಿ ಡಾ. ರಾಜೇಂದ್ರಕುಮಾರ್, ಅರ್ಥಪೂರ್ಣ ಪ್ರತಿಭಾ ಪುರಸ್ಕಾರ

ಮಂಗಳೂರು: ಶಿಕ್ಷಣದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ಅವರ ಸಾಧನೆಗೆ ಮನ್ನಣೆ ನೀಡುವುದಷ್ಟೇ ಅಲ್ಲ, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ಆಗುತ್ತದೆ. ಪ್ರತಿಭಾವಂತರು ಸಮಾಜ ಸೇವೆ ಹಾಗೂ ರಾಷ್ಟ್ರ ನಿರ್ಮಾಣದ ಹೊಣೆಗಾರಿಕೆಯನ್ನು ಮನಗಂಡು ಮುಂದುವರೆಯಬೇಕು ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೇಳಿದರು. ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಇನ್ನಷ್ಟು ಎತ್ತರಕ್ಕೆ […]

Continue Reading

ಸಮಗ್ರ ಒಳಚರಂಡಿ ಯೋಜನೆ, ಡಿಪಿಆರ್ ಸಿದ್ದಪಡಿಸಲು ಪ್ರಕ್ರಿಯೆ ಆರಂಭ: ಐವನ್ ಡಿಸೋಜ

ಮಂಗಳೂರು: ಸ್ಮಾರ್ಟ್ ಸಿಟಿ ಮಂಗಳೂರಿನಲ್ಲಿ ಹದಗೆಟ್ಟಿರುವ ಒಳಚರಂಡಿ ವ್ಯವಸ್ಥೆಯನ್ನು ಸುಧಾರಿಸಲು ಸಮಗ್ರ ಒಳಚರಂಡಿ ಯೋಜನೆಗೆ ಕಾಲಮಿತಿಯ ಕಾರ್ಯಯೋಜನೆ ರೂಪಿಸಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಸಾರ್ವಜನಿಕ ಉದ್ಯಮಗಳ ಸಮಿತಿಯು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರನ್ನೊಳಗೊಂಡ ಸಮಿತಿಯು ಮಂಗಳೂರಿನಲ್ಲಿ ನಡೆಸಿದ ಸ್ಥಳ ಪರಿಶೀಲನೆಯ ಆಧಾರದಲ್ಲಿ ಈ ಶಿಫಾರಸು ಮಾಡಿದೆ. ಯೋಜನೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚಕರ ನೇಮಕದ […]

Continue Reading

ಉ. ಕದಲ್ಲಿ ಜು. 9 ರವರೆಗೆ ಆರೆಂಜ್ ಅಲರ್ಟ್, ಭಾರಿ ಗಾಳಿ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜುಲೈ 5 ರಂದು ಮಧ್ಯಾಹ್ನ 1 ಗಂಟೆಯಿಂದ ಜುಲೈ 9 ರ ಬೆಳಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. […]

Continue Reading

ಬಾಲಕಿಗೆ ಲೈಂಗಿಕ ಕಿರುಕುಳ, ಪೋಕ್ಸೊ ಪ್ರಕರಣದಲ್ಲಿ ಮಂಕಿ ಪಿಎಸ್ಐ ಅಭಿನಂದನ್ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಪೋಕ್ಸೊ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಅಭಿನಂದನ್ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲಗಳ ಪ್ರಕಾರ, ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ […]

Continue Reading