3 ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ ಕಾಂಗ್ರೆಸ್ ಸರ್ಕಾರ: ಬಿಜೆಪಿ ವಕ್ತಾರ ಚಂದ್ರಶೇಖರ್

ಕಾರವಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿರುವ ಬೆನ್ನಲ್ಲೇ ಆಡಳಿತದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಆರ್ಥಿಕವಾಗಿ ಸದೃಢವಾಗಿದ್ದ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಸಾಲದ ಸುಳಿಗೆ ಸಿಲುಕಿಸಿದ್ದು, ಇದೇ ಆಡಳಿತ ಇನ್ನೆರಡು ವರ್ಷ ಮುಂದುವರಿದರೆ ಜನಸಾಮಾನ್ಯರ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್. ಚಂದ್ರಶೇಖರ್ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ರಾಜ್ಯದ ಆಡಳಿತ ವ್ಯವಸ್ಥೆ ಎಂಜಿನ್ ಕೆಟ್ಟು, ಟಯರ್ ಪಂಚರ್ ಆಗಿರುವ ಬಸ್ಸಿನಂತಾಗಿದೆ. ಮುಖ್ಯಮಂತ್ರಿ ಬದಲಾದರೂ ಆಡಳಿತ ವ್ಯವಸ್ಥೆಯ ವೈಫಲ್ಯ ಮಾತ್ರ ಬದಲಾಗಿಲ್ಲ. […]

Continue Reading

ಹಾಳದಕಟ್ಟಾ ದರೋಡೆ ಪ್ರಕರಣ ಭೇದಿಸಿದ ಸಿದ್ದಾಪುರ ಪೊಲೀಸರು; ಚಿನ್ನಾಭರಣ ದೋಚಿದ್ದ ಆರೋಪಿಯ ಸೆರೆ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಾಳದಕಟ್ಟಾದಲ್ಲಿ ಇತ್ತೀಚೆಗೆ ನಡೆದಿದ್ದ ಒಂಟಿ ಮಹಿಳೆಯ ಮೇಲಿನ ದರೋಡೆ ಪ್ರಕರಣವನ್ನು ಸಿರಸಿ–ಸಿದ್ದಾಪುರ ಪೊಲೀಸರು ಭೇದಿಸಿದ್ದು, ಕೃತ್ಯ ಎಸಗಿದ್ದ ಆರೋಪಿ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಬಂಧಿತ ಕೊಂಡ್ಲಿ ನಿವಾಸಿ ಹಾಗೂ ಕೂಲಿ ಕಾರ್ಮಿಕ ಮಹೇಶ ಹನುಮಂತ ಮಡಿವಾಳ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕಳವು ಮಾಡಿದ್ದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೂನ್ 22ರಂದು ಸಂಜೆ ಹಾಳದಕಟ್ಟಾದ ನಿವಾಸಿ ಪೂನಂ ಗಣಪತಿ ಶೇಟ್ ಅವರ ಮನೆಗೆ […]

Continue Reading

ಕಾನಸೂರು ವಸತಿ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆಯ ಪ್ರಕರಣ, ಹಿಂದಿ ಶಿಕ್ಷಕ ಆರೆಸ್ಟ್

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ವಸತಿ ಶಾಲೆಯ ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಹಿಂದಿ ಶಿಕ್ಷಕ ಅಬ್ಬು ತಹಲ ಎಂಬುವವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಜೂನ್ 9 ರಂದು ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಮಾಡಿಕೊಂಡ ಬಳಿಕ, ಮೃತ ವಿದ್ಯಾರ್ಥಿ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ದೂರಿನಲ್ಲಿ ಶಿಕ್ಷಕ ಅಬ್ಬು ತಹಲ ಅವರು […]

Continue Reading

ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಂಟನ್ ವಾಸ್ (355), ಶೆಟ್ಟಿ ರಾಹುಲ್ ಉಮೇಶ್(313), ಎನ್. ಚಿರಂತನಾ(312) ಹಾಗೂ ರೋಹಿತ್ ಪೂಜಾರಿ (304) ಗ್ರೂಪ್-01 ಮತ್ತು ಗ್ರೂಪ್-02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಇಂಟರ್ ಮೀಡಿಯಟ್ ಗ್ರೂಪ್-01 ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್(164), ಸಾನಿಯಾ (150), ಪ್ರಸಿದ್ಧ್ ಪೂಜಾರಿ(150), ಮೋನಿಶಾ ಕುಂದರ್(163) ಹಾಗೂ ಶ್ರೇಯಾ ಸುರೇಂದ್ರ ಪೂಜಾರಿ(150) ಉತ್ತೀರ್ಣರಾಗಿರುತ್ತಾರೆ. […]

Continue Reading

ಗ್ಯಾರಂಟಿ ಭ್ರಷ್ಟಾಚಾರ, ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ವಾಗ್ದಾಳಿ

ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಹೆಸರಿನಲ್ಲಿ ಲಕ್ಷಾಂತರ ಅರ್ಹ ಫಲಾನುಭವಿಗಳ ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಕತ್ತರಿ ಹಾಕಿದ್ದು, ಇದರ ಮೂಲಕ ತನ್ನ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಬ್ಯಾಂಕ್ ಖಾತೆಯೇ ಇಲ್ಲದ ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ಪಾವತಿಯಾಗಿರುವುದು, ಒಂದೇ ಬ್ಯಾಂಕ್ ಖಾತೆಗಳಿಗೆ ಹಲವು ಬಾರಿ ಹಣ ವರ್ಗಾವಣೆಯಾಗಿರುವುದು ಹಾಗೂ ಮರಣ ಹೊಂದಿದವರ ಹೆಸರಿಗೂ […]

Continue Reading

ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿ ಚಿಂತನಾ ಸಭೆ: ಕುಪ್ಮಾ ರಾಜ್ಯಾಧ್ಯಕ್ಷ ಡಾ. ಮೋಹನ್ ಆಳ್ವ

ಮಂಗಳೂರು: ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಕರ್ನಾಟಕ ಅನುದಾನರಹಿತ ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಸಂಘದ (ಕುಪ್ಮಾ) ರಾಜ್ಯಾಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕುಪ್ಮಾ ಸಮಿತಿಯ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ‘ಚಿಂತನಾ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದೊಂದಿಗೆ ಸಂಘರ್ಷದ ಮಾರ್ಗವನ್ನು ಬಯಸುವುದಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಹಕಾರದ ಮನೋಭಾವದಿಂದ ಸಮಸ್ಯೆಗಳನ್ನು ಪರಿಹರಿಸಬೇಕು. ಸಾರಿಗೆ, ಅರಣ್ಯ, […]

Continue Reading

ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಟಿ.ಎಂ. ಶಹೀದ್

ಮಂಗಳೂರು: ನಾಡಪ್ರಭು ಕೆಂಪೇಗೌಡರ ಅಭಿವೃದ್ಧಿ ಪರಿಕಲ್ಪನೆ, ಜನಸಾಮಾನ್ಯರ ಕಲ್ಯಾಣದ ಬದ್ಧತೆ ಹಾಗೂ ದೂರದೃಷ್ಟಿಯ ಆಡಳಿತ ಇಂದಿನ ಆಡಳಿತಗಾರರಿಗೆ ಅನುಕರಣೀಯ ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಒಕ್ಕಲಿಗ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಬಲ್ಮಠದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು […]

Continue Reading

ವಿದ್ವತ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮಕ್ಕೆ ಡಿವೈಎಸ್ಪಿ ರೋಹಿಣಿ ಚಾಲನೆ

ಬೆಳ್ತಂಗಡಿ: ಮಾದಕ ದ್ರವ್ಯ ವ್ಯಸನವು ವ್ಯಕ್ತಿಯ ಭವಿಷ್ಯವನ್ನಷ್ಟೇ ಅಲ್ಲ, ಕುಟುಂಬ ಮತ್ತು ಸಮಾಜವನ್ನೂ ಸಂಕಷ್ಟಕ್ಕೆ ತಳ್ಳುತ್ತದೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಮಾದಕ ವ್ಯಸನಕ್ಕೆ ಒಳಗಾಗಬಾರದು. ಸ್ನೇಹಿತರು ವ್ಯಸನಕ್ಕೆ ಬಲಿಯಾಗುತ್ತಿರುವುದು ಕಂಡುಬಂದರೆ ಮುಚ್ಚಿಡದೆ ಶಿಕ್ಷಕರು, ಪ್ರಾಂಶುಪಾಲರು ಅಥವಾ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ಅವರನ್ನು ರಕ್ಷಿಸುವ ಪ್ರಯತ್ನ ಮಾಡಬೇಕು ಎಂದು ಬೆಳ್ತಂಗಡಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಕರೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಬೆಳ್ತಂಗಡಿ ಉಪ ವಿಭಾಗ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ […]

Continue Reading

ನಾಟೆಕಲ್ ಬಸ್ ದುರಂತ, ಸಚಿವ ಖಾದರ್ ಸಂತಾಪ, ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸಲು ಪಿ.ಎ. ಕಾಲೇಜು ಆಡಳಿತಕ್ಕೆ ಸೂಚನೆ

ಮಂಗಳೂರು: ಉಳ್ಳಾಲ ತಾಲೂಕಿನ ನಾಟೆಕಲ್ ಸಮೀಪ ಪಿ.ಎ. ಕಾಲೇಜಿನ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ ಹಲವರು ಗಾಯಗೊಂಡ ಘಟನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಪಿ.ಎ. ಕಾಲೇಜಿನ ಆಡಳಿತ ಮಂಡಳಿಯೇ ಭರಿಸಬೇಕು ಎಂದು ಸಚಿವರು ಸೂಚಿಸಿದ್ದು, ಇದಕ್ಕೆ ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು. ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಬಸ್ […]

Continue Reading

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವ್ಯಾಪಕ ಭ್ರಷ್ಟಾಚಾರ, ಪಕ್ಷ ಸಂಘಟನೆಗೆ ರಾಜ್ಯದಾದ್ಯಂತ ಪ್ರವಾಸ: ವಿಜಯೇಂದ್ರ

ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆಯ ಅಡ್ಡಮತದಾನ ಪ್ರಕರಣದ ಕುರಿತು ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಳ್ಳಿಹಾಕಿದ್ದು, ಈ ಬೆಳವಣಿಗೆಯೊಂದಿಗೆ ತಮ್ಮ ಯಾವುದೇ ಸಂಬಂಧ ಇಲ್ಲ. ಪಕ್ಷದ ವಿರುದ್ಧ ನಡೆದುಕೊಳ್ಳುವ ಅಥವಾ ದ್ರೋಹ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಧರ್ಮಸ್ಥಳಕ್ಕೆ ಆಗಮಿಸುವ ಮೊದಲು ನಾಲ್ಕು ದಿನಗಳ ಕಾಲ ನವದೆಹಲಿಯಲ್ಲಿ ಬಿಜೆಪಿ […]

Continue Reading