ನೋಂದಣಿ ಅವಧಿ ಮುಗಿದ ವಾಹನ ಬಳಕೆ ಆರೋಪ: ಕಾರವಾರ ಜೈಲರ್ ವಾಹನ ವಶಕ್ಕೆ, ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲು

ಕಾರವಾರ: ನೋಂದಣಿ ಅವಧಿ ಮುಗಿದಿದ್ದರೂ ಸರ್ಕಾರಿ ವಾಹನವನ್ನು ಬಳಸಿದ ಆರೋಪದ ಹಿನ್ನೆಲೆಯಲ್ಲಿ ಕಾರವಾರ ಕಾರಾಗೃಹದ ಸೂಪರಿಂಟೆಂಡೆಂಟ್ ಹೇಮಾವತಿ ಅವರ ವಾಹನವನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿರುವ ಘಟನೆ ನಡೆದಿದೆ. ಈ ಸಂಬಂಧ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಮಾಧವ ನಾಯಕ್ ಅವರು ಸಂಚಾರ ನಿಯಮ ಉಲ್ಲಂಘನೆ ಕುರಿತು ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕಾಜುಬಾಗ್ ಸರ್ಕಲ್ ಬಳಿ ಕಾರಾಗೃಹ ಸೂಪರಿಂಟೆಂಡೆಂಟ್ ಅವರ ವಾಹನವನ್ನು ತಡೆದು […]

Continue Reading

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಗೆ ಮುರಳಿ ಹೊಸಮಜಲು ಪುನರಾಯ್ಕೆ

ಮಂಗಳೂರು: ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆ ನಗರದ ಕೆಪಿಟಿ ಸಮೀಪದ ಎಸ್‌ ಕ್ಯೂಬ್‌ ಸೆಂಟರ್‌ ಸಭಾಂಗಣದಲ್ಲಿ ನಡೆಯಿತು. ಸಭೆಯ ಬಳಿಕ ನಡೆದ ಚುನಾವಣೆಯಲ್ಲಿ 2026-28ನೇ ಅವಧಿಗೆ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ವಿ.ಎಂ. ಸತೀಶನ್‌, ಖಜಾಂಚಿಯಾಗಿ ಅಜಯಕುಮಾರ್‌, ಉಪಾಧ್ಯಕ್ಷರಾಗಿ ವಾಸಂತಿ ನಾಯರ್‌, ಜತೆ ಕಾರ್ಯದರ್ಶಿಯಾಗಿ ಮಂಜು ಅಜಿತ್‌ ಹಾಗೂ ಜತೆ ಖಜಾಂಚಿಯಾಗಿ ರವೀಂದ್ರನಾಥ್‌ ಆಯ್ಕೆಯಾದರು. ಬೋರ್ಡ್‌ ಸದಸ್ಯರಾಗಿ ವಿಜಯಕುಮಾರ್‌, ಎಂ.ವಿ. ರಾಜನ್‌ ಮತ್ತು ಎ.ಎಸ್. ಮೋಹನ್‌ ಆಯ್ಕೆಯಾಗಿದ್ದಾರೆ. ಸಮಿತಿಯ ಸದಸ್ಯರಾಗಿ […]

Continue Reading

ದ.ಕ. ಜಿಲ್ಲೆಯಲ್ಲಿ12 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ, ಬಿಗಿ ಭದ್ರತೆ: ಹೆಚ್ಚುವರಿ ಜಿಲ್ಲಾಧಿಕಾರಿ ರಾಜು

ಮಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಜೂನ್ 21 ರಂದು ರಾಷ್ಟ್ರಾದ್ಯಂತ ನಡೆಯಲಿರುವ ನೀಟ್ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. ಜಿಲ್ಲೆಯ 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲವೂ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿವೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ. ಅವರು ಮಾತನಾಡಿ, ಪರೀಕ್ಷೆಯನ್ನು ನಕಲು ಮುಕ್ತ, ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಪ್ರತಿ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರು ಇರಲಿದ್ದಾರೆ. ಎನ್‌ಟಿಎ ವತಿಯಿಂದ ಪರೀಕ್ಷಾ […]

Continue Reading

ಮೂಡುಬಿದಿರೆ ಆಳ್ವಾಸ್‌ನ 8 ಮಂದಿ ಸಿಎ ಅಂತಿಮ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆ, ದೀಪಕ್‌ಗೆ 28 ನೇ ರ‍್ಯಾಂಕ್

ಮೂಡುಬಿದಿರೆ : ಮೇ 2026 ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ದೀಪಕ್ ಹೆಗ್ಡೆ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್‌ಗಳಿಸುವ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಇವರ ಜತೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಒಟ್ಟು 8 ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅಮೋಘ ಸಾಧನೆ ಮೆರೆದಿದ್ದಾರೆ. ಸಿಎ ಅಂತಿಮ ಪರೀಕ್ಷೆಯಲ್ಲಿ ದೀಪಕ್ ಹೆಗ್ಡೆ, ನಿತೇಶ್ ಕಾಮತ್, ವೀಕ್ಷಾ ಶೆಟ್ಟಿ, ನಾಗರಾಜ ಮಂಜಿತ್ತಾಯ, ಪ್ರಣವ್ ಎಸ್ ಭಟ್, ವೈಷ್ಣವಿ ಜವಾರ್ ಅಕ್ಷಯ ಬಿಎಸ್, ಸುದೀಪ್ […]

Continue Reading

ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟಿಸಿದ ಅನಿಲ್ ಲೋಬೊ

ಮಂಗಳೂರು: ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶದಿಂದ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳು, ಶಿಕ್ಷಣ ಸಂಸ್ಥೆಯ ಸಂಚಾಲಕರು ಹಾಗೂ ಪ್ರಾಂಶುಪಾಲರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಅಭ್ಯಾಸದ ಜತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಇಂದಿನ […]

Continue Reading

ವಿಶ್ವ ಯೋಗ ದಿನ, ಕಾರಿಂಜೇಶ್ವರ ಬೆಟ್ಟದಲ್ಲಿ ಯೋಗ ವಿದ್ ಯೋಧ ಕಾರ್ಯಕ್ರಮ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣ ಕಾರಿಂಜೇಶ್ವರ ಬೆಟ್ಟದಲ್ಲಿ ‘ಯೋಗ ವಿದ್ ಯೋಧ’ ಬೃಹತ್ ಯೋಗಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂನ್ 21ರಂದು 3 ಗಂಟೆಗೆ ಮಹಾತೋಭಾರ ಕಾರಿಂಜೇಶ್ವರ ದೇವಸ್ಥಾನದ ಆವರಣದಲ್ಲಿ 3ನೇ ಆವೃತ್ತಿಯ ಯೋಗ ವಿದ್ ಯೋಧ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ನಿವೃತ್ತ ಯೋಧರು, ಗಣ್ಯರು, ಯೋಗಾಸಕ್ತರು ಹಾಗೂ ಸಾರ್ವಜನಿಕರು […]

Continue Reading

ನೀಟ್ ಮರು ಪರೀಕ್ಷೆ ಜೂನ್ 21: ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಸ್ವರೂಪ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಜೂನ್ 21ರಂದು ನಡೆವ ನೀಟ್ (ಯುಜಿ) ಮರು ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೆ ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಗೊಂದಲವಿಲ್ಲದೆ ನಿರಾಳ ವಾತಾವರಣದಲ್ಲಿ ಪರೀಕ್ಷೆ ನಡೆಯಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 2,970 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಪರೀಕ್ಷೆ ಮಧ್ಯಾಹ್ನ 2 ರಿಂದ […]

Continue Reading

ಪಕ್ಷದ ಸಂಘಟನೆಯನ್ನು ಬೂತ್ ಮಟ್ಟದಲ್ಲಿ; ಮಂಗಳೂರು ದಕ್ಷಿಣ ಜೆಡಿಎಸ್ ಕಾರ್ಯಕರ್ತರ ಸಭೆ

ಮಂಗಳೂರು: ಜೆಡಿಎಸ್ ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಸಂಘಟನಾ ಸಭೆಯು ಕ್ಷೇತ್ರಾಧ್ಯಕ್ಷ ಎನ್.ಪಿ. ಪುಷ್ಪರಾಜನ್ ಅವರ ಅಧ್ಯಕ್ಷತೆಯಲ್ಲಿ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆಯನ್ನು ಬೂತ್ ಮಟ್ಟದಲ್ಲಿ ಮತ್ತಷ್ಟು ಸದೃಢಗೊಳಿಸುವುದು, ಸದಸ್ಯತ್ವ ಅಭಿಯಾನವನ್ನು ತೀವ್ರಗೊಳಿಸುವುದು ಹಾಗೂ ಮುಂಬರುವ ರಾಜಕೀಯ ಮತ್ತು ಸಾಮಾಜಿಕ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಚರ್ಚೆ ನಡೆಸಲಾಯಿತು. ಕ್ಷೇತ್ರ ಕಾರ್ಯಾಧ್ಯಕ್ಷ ವಸಂತ ಪೂಜಾರಿ ಮಾತನಾಡಿ, ಜೆಡಿಎಸ್‌ನ ತತ್ವ-ಸಿದ್ಧಾಂತಗಳು, ರೈತಪರ ಹಾಗೂ ಜನಪರ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ […]

Continue Reading

ಬಜ್ಪೆ ಠಾಣೆಯ ಪೊಲೀಸರ ಎಡವಟ್ಟು, ಮಾಹಿತಿ ಕಲೆ ಹಾಕದೇ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್, ಇಬ್ಬರ ಅಮಾನತು

ಮಂಗಳೂರು: ಅಸ್ಸಾಂ ಹಾಗೂ ಬಿಹಾರ ಮೂಲದ 30 ಕ್ಕೂ ಹೆಚ್ಚು ಕಾರ್ಮಿಕರಿಗೆ ಸಮರ್ಪಕವಾಗಿ ಮಾಹಿತಿ ಕಲೆ ಹಾಕದೇ, ಪರಿಶೀಲನೆ ನಡೆಸದೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (ಪಿಸಿಸಿ) ನೀಡಿದ ಆರೋಪದ ಹಿನ್ನೆಲೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆ ಇಬ್ಬರು ಸಿಬ್ಬಂದಿಯನ್ನು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರು ಅಮಾನತು ಮಾಡಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಮಾನತುಗೊಂಡವರಲ್ಲಿ ಮಹಿಳಾ ಸಿಬ್ಬಂದಿ ಆಶಾ ಹಾಗೂ ಹೆಡ್ ಕಾನ್‌ಸ್ಟೇಬಲ್ ಮಂಜುನಾಥ್ ಸೇರಿದ್ದಾರೆ. ವರ್ಷದ ಅವಧಿಯಲ್ಲಿ 31 ಮಂದಿಗೆ […]

Continue Reading

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ; ಮೊದಲ ಜೆಂಡರ್ ಅಫರ್ಮಿಂಗ್ ಯಶಸ್ವಿ ಶಸ್ತ್ರಚಿಕಿತ್ಸೆ, ವೈದ್ಯರ ಸಾಧನೆ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಟ್ರಾನ್ಸ್ಜೆಂಡರ್ ಮಹಿಳೆಗೆ ಮೊದಲ ಬಾರಿಗೆ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಈಚೆಗೆ ನಡೆದ ಈ ಶಸ್ತ್ರಚಿಕಿತ್ಸೆ ನಂತರ ರೋಗಿ ವೈದ್ಯಕೀಯ ತಂಡದ ಆರೈಕೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಹಾಗೂ ಮೂತ್ರಶಾಸ್ತ್ರ ವಿಭಾಗಗಳ ಸಂಯುಕ್ತ ತಂಡವು ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಎರಡೂ ವಿಭಾಗಗಳ ನಿಕಟ ಸಮನ್ವಯದಲ್ಲಿ ಹಲವು ಗಂಟೆಗಳ ಕಾಲ ಕಾರ್ಯ ನಡೆದಿದೆ. ಪ್ಲಾಸ್ಟಿಕ್ ಸರ್ಜರಿ ವಿಭಾಗವು ಇದಕ್ಕೂ ಮುನ್ನ ಮುಖದ ಸ್ತ್ರೀಕರಣ ಮತ್ತು […]

Continue Reading