ಗೃಹಲಕ್ಷ್ಮೀ ಹಣ ಪಾವತಿ ಸ್ಥಗಿತ, ರಾಜ್ಯ ಸರಕಾರದಿಂದ ಅನ್ಯಾಯ: ಶಾಸಕ ಭರತ್ ಶೆಟ್ಟಿ ಆರೋಪ

ಮಂಗಳೂರು: ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಸರ್ಕಾರ ಲಕ್ಷಾಂತರ ಮಹಿಳೆಯರಿಗೆ ಅನ್ಯಾಯ ಮಾಡಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಆರೋಪಿಸಿದರು. ಚುನಾವಣೆ ಪೂರ್ವದಲ್ಲಿ ಬಿಪಿಎಲ್ ಅಥವಾ ಎಪಿಎಲ್ ಎಂಬ ಭೇದವಿಲ್ಲದೆ ಮಹಿಳೆಯರ ಖಾತೆಗೆ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ ಇದೀಗ ಬಿಪಿಎಲ್ ನೆಪ ಒಡ್ಡಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಹೊರಗಿಡುವ ಮೂಲಕ ಮಹಿಳೆಯರಿಗೆ ದ್ರೋಹ ಮಾಡಲಾಗಿದೆ ಎಂದು ಅವರು ಟೀಕಿಸಿದರು. ಗೃಹಲಕ್ಷ್ಮೀ ಯೋಜನೆಯಡಿ […]

Continue Reading

ದ.ಕ ಸೇರಿದಂತೆ ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಪರಿಹಾರ ನೀಡುವಂತೆ ಸಂಸದ ಬ್ರಿಜೇಶ್ ಚೌಟ ಮನವಿ

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರನ್ನು ಕಂಗೆಡಿಸಿರುವ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅಡಿಕೆ ಬೆಳೆಯುವ ಪ್ರಮುಖ ಪ್ರದೇಶಗಳಲ್ಲಿ ಹಳದಿ ಎಲೆ ರೋಗವು ವ್ಯಾಪಕವಾಗಿ ಹರಡಿದ್ದು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಸುಮಾರು 16 […]

Continue Reading

ಪ್ರಧಾನಿ ಮೋದಿ ಆಡಳಿತಕ್ಕೆ 12 ವರ್ಷ: ಬಿಜೆಪಿಯಿಂದ ವಿಶೇಷ ರಂಗಪೂಜೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಯಶಸ್ವಿ ಆಡಳಿತದ 12 ವರ್ಷಗಳ ಪೂರೈಕೆ ಹಾಗೂ ದೇಶದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಮೈಲಿಗಲ್ಲು ಸ್ಥಾಪಿಸಿದ ಹಿನ್ನೆಲೆಯಲ್ಲಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ವಿಶೇಷ ರಂಗಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ 12 ವರ್ಷಗಳಿಂದ […]

Continue Reading

ಹನಿಟ್ರ್ಯಾಪ್‌ ಹೆಸರಿನಲ್ಲಿ 2.57 ಕೋಟಿ ವಸೂಲಿ: ಉರ್ವ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರ ಬಂಧನ

ಮಂಗಳೂರು: ಗುತ್ತಿಗೆದಾರರೊಬ್ಬರನ್ನು ಹನಿಟ್ರ್ಯಾಪ್‌ ಮಾಡಿ ಅಶ್ಲೀಲ ವಿಡಿಯೊ ಹಾಗೂ ಫೋಟೊಗಳ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೇರಿ ಇಬ್ಬರನ್ನು ಉರ್ವ ಪೊಲೀಸರು ಬಂಧನ ಮಾಡಿದ್ದಾರೆ. ಗುತ್ತಿಗೆದಾರರ ಜತೆಗೆ ಕೆಲಸ ಮಾಡುತ್ತಿದ್ದ ಜಿತೇಶ್ ಹಾಗೂ ನಿಜಾಮ್ ಯಾನೆ ಇಬ್ರಾಹಿಂ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಿಜಾಮ್ ಅವರನ್ನು ಯುವ ಕಾಂಗ್ರೆಸ್ ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಗುತ್ತಿಗೆದಾರನೊಂದಿಗೆ […]

Continue Reading

ಜೂನ್ 21ರಂದು 12 ನೇ ಅಂತರ ರಾಷ್ಟ್ರೀಯ ಯೋಗ ದಿನ: ಹೆಚ್ಚುವರಿ ಜಿಲ್ಲಾಧಿಕಾರಿ ರಾಜು

ಮಂಗಳೂರು: ಜೂನ್ 21ರಂದು ನಡೆವ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಯೋಜಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ. ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಯೋಗ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗವು ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡುವ ಅತ್ಯುತ್ತಮ ಸಾಧನವಾಗಿದೆ. ಈ ಹಿನ್ನೆಲೆಯಲ್ಲಿ ಯೋಗದ ಮಹತ್ವವನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ನಿಟ್ಟಿನಲ್ಲಿ […]

Continue Reading

ಶಾಲೆ, ಗ್ರಾಮಗಳ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಿ: ಜಿ.ಪಂ ಸಿಇಒ ವಿನಾಯಕ ಸೂಚನೆ

ಮಂಗಳೂರು: ಅಂಗನವಾಡಿ, ಶಾಲೆ-ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ನೀರಿನ ಮೂಲಗಳ ನಿಯಮಿತ ಪರೀಕ್ಷೆ ನಡೆಸಬೇಕು. ಜೊತೆಗೆ ಶಾಲೆಗಳು ಹಾಗೂ ಗ್ರಾಮಗಳಲ್ಲಿನ ನೀರಿನ ಟ್ಯಾಂಕ್‌ಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವ ಮೂಲಕ ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ನರ್ವಾಡೆ ವಿನಾಯಕ ಕಾರ್ಬಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಗುರುವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಾಲೆಗಳಲ್ಲಿನ ನೀರಿನ […]

Continue Reading

ಮಕ್ಕಳ ಹಕ್ಕುಗಳ ಆಯೋಗಕ್ಕೆ ಅನರ್ಹರ ನೇಮಕ: ರೆನ್ನಿ ಡಿಸೋಜ ತೀವ್ರ ಆಕ್ರೋಶ

ಮಂಗಳೂರು: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಾಗಿ ನೇಮಕಗೊಂಡಿರುವ ಕೆಲವರು ನಿಗದಿತ ಅರ್ಹತಾ ಮಾನದಂಡಗಳನ್ನು ಪೂರೈಸಿಲ್ಲ. ಆದ್ದರಿಂದ ಸರ್ಕಾರ ತಕ್ಷಣ ನೇಮಕಾತಿ ಅಧಿಸೂಚನೆ ಹಿಂಪಡೆದು, ಕಾನೂನುಬದ್ಧ ಅರ್ಹತೆ ಹಾಗೂ ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಅನುಭವ ಹೊಂದಿರುವವರನ್ನು ನೇಮಕ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳ ಹಕ್ಕುಗಳ ಕುರಿತು ಕಾರ್ಯನಿರ್ವಹಿಸುವ ಸಮಾನಾಸಕ್ತ ಸಂಘಟನೆಗಳು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿವೆ. ಪಡಿ ಸಂಸ್ಥೆಯ ಸಂಚಾಲಕ ರೆನ್ನಿ ಡಿಸೋಜ ಅವರು ಈ ವೇಳೆ ಮಾತನಾಡಿ, ಮಕ್ಕಳ ಕಲ್ಯಾಣ […]

Continue Reading

ಕುದ್ರೋಳಿ–ಕಟ್ಟೆಮಾರು ರಸ್ತೆ ಅಭಿವೃದ್ಧಿಗೆ ಹೆಜ್ಜೆ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ನಗರದ ಕೊಡಿಯಲ್‌ಬೈಲ್‌ನಲ್ಲಿರುವ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದಿಂದ ಕಟ್ಟೆಮಾರುವರೆಗೆ ರಸ್ತೆ ವಿಸ್ತರಣೆ ಕಾಮಗಾರಿ ಕೈಗೊಳ್ಳುವ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳ ವಿಶೇಷ ಸಭೆಯು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು. ಈ ರಸ್ತೆ ವಿಸ್ತರಣೆಗೆ ಸ್ಥಳೀಯ ನಾಗರಿಕರ ಹಲವು ವರ್ಷಗಳ ಬೇಡಿಕೆ ಆಗಿದ್ದು, ಹಿಂದಿನ ಹಲವು ಜನಪ್ರತಿನಿಧಿಗಳು ಪ್ರಯತ್ನಿಸಿದರೂ, ಯೋಜನೆ ಕಾರ್ಯರೂಪಕ್ಕೆ ಬಂದಿರಲಿಲ್ಲ. ರಸ್ತೆ ವಿಸ್ತರಣೆಯಿಂದ ಸಾರ್ವಜನಿಕ ಸಂಚಾರ ಸುಗಮವಾಗುವುದರ ಜತೆಗೆ ಸುತ್ತಲಿನ ನಿವಾಸಿಗಳು ಹಾಗೂ ಭಕ್ತರಿಗೆ […]

Continue Reading

ಕಾರವಾರ ರೈಲು ನಿಲ್ದಾಣದಲ್ಲಿ ಮಹಿಳೆಯರಿಗಾಗಿ ವಿಶೇಷ ಸೌಲಭ್ಯ, ಪಿಂಕ್ ಬಬಲ್: ಸಂಸದ ಕಾಗೇರಿ ಉದ್ಘಾಟನೆ

ಕಾರವಾರ: ಮಹಿಳಾ ಪ್ರಯಾಣಿಕರ ಸುರಕ್ಷತೆ ಹಾಗೂ ಆರಾಮದಾಯಕ ಪ್ರಯಾಣಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಕಾರವಾರ ರೈಲು ನಿಲ್ದಾಣದಲ್ಲಿ ಮಹಿಳೆಯರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಪಿಂಕ್ ಬಬಲ್’ ವಿಶ್ರಾಂತಿ ಆಸನ ವ್ಯವಸ್ಥೆ ನಿರ್ಮಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಕಾರವಾರ ರೋಟರಿ ಕ್ಲಬ್ ವತಿಯಿಂದ ಸುಮಾರು ₹1 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ‘ಪಿಂಕ್ ಬಬಲ್’ ಸೌಲಭ್ಯವನ್ನು ಗುರುವಾರ ಉದ್ಘಾಟಿಸಿ ಹಾಗೂ ಕಾರವಾರ–ಮಡಗಾಂವ್ ಖಾಯಂ ರೈಲು ಸೇವೆಯನ್ನು ಸ್ವಾಗತಿಸಿ ಅವರು ಮಾತನಾಡಿದರು. ರೈಲು ಬರುವವರೆಗೆ ಮಹಿಳೆಯರು ಸುರಕ್ಷಿತ ಹಾಗೂ […]

Continue Reading

₹4.34 ಕೋಟಿ ವೆಚ್ಚದಲ್ಲಿ ಗಂಗಾವಳಿ ನದಿಯ ಮಣ್ಣಿನ ದಿಬ್ಬ ತೆರವು ಕಾಮಗಾರಿ: ಶಾಸಕ ಸತೀಶ್ ಸೈಲ್ ಚಾಲನೆ

ಅಂಕೋಲಾ: ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ಭೂಕುಸಿತದಿಂದ ಗಂಗಾವಳಿ ನದಿಗೆ ಬಿದ್ದಿರುವ ಮಣ್ಣಿನ ದಿಬ್ಬವನ್ನು ತೆರವುಗೊಳಿಸುವ ಕಾಮಗಾರಿಗೆ ಶಾಸಕ ಹಾಗೂ ಕೆಎಂಸಿಎ ಅಧ್ಯಕ್ಷ ಸತೀಶ್ ಕೆ. ಸೈಲ್ ಗುರುವಾರ ಚಾಲನೆ ನೀಡಿದರು. ₹4.34 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಯಿಂದ ನದಿಯಲ್ಲಿ ನಿರ್ಮಾಣವಾಗಿರುವ ಕೃತಕ ಮಣ್ಣಿನ ದಿಬ್ಬವನ್ನು ತೆರವುಗೊಳಿಸಿ ನೀರಿನ ಹರಿವನ್ನು ಸುಗಮಗೊಳಿಸುವ ಉದ್ದೇಶ ಹೊಂದಲಾಗಿದೆ. ಈ ಹಿಂದೆ ಉಳುವರೆ ಗ್ರಾಮ ಮತ್ತು ರಾಷ್ಟ್ರೀಯ ಹೆದ್ದಾರಿಗೆ ತೊಂದರೆಯಾಗದಂತೆ ಮಣ್ಣಿನ ದಿಬ್ಬ ತೆರವುಗೊಳಿಸಲು ಜಿಲ್ಲಾಡಳಿತದ ಮೂಲಕ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ರಾಷ್ಟ್ರೀಯ […]

Continue Reading