ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತರ ರಾಷ್ಟ್ರೀಯ ಪ್ರಶಸ್ತಿ, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು: ಕುಲಾಧಿಪತಿ ಡಾ. ಶ್ರೀನಿವಾಸ ರಾವ್

ಮಂಗಳೂರು: ಸ್ಥಳೀಯ ಪ್ರತಿಭೆಗಳಿಗೆ ಜಾಗತಿಕ ಅವಕಾಶಗಳನ್ನು ಕಲ್ಪಿಸುವುದು” ಎಂಬ ಧ್ಯೇಯದೊಂದಿಗೆ ಶಿಕ್ಷಣ, ಸಂಶೋಧನೆ ಹಾಗೂ ನವೀನತೆಯ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಶ್ರೀನಿವಾಸ ಸಂಸ್ಥೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಹತ್ವದ ಸಾಧನೆ ಮಾಡಿವೆ ಎಂದು ಕುಲಾಧಿಪತಿ ಡಾ. ಶ್ರೀನಿವಾಸ ರಾವ್ ತಿಳಿಸಿದರು. ಶಿಕ್ಷಣ ತಜ್ಞ ಹಾಗೂ ಸಂಸ್ಥಾಪಕ ದಿವಂಗತ ಡಾ. ಸಿ. ಎ. ಎ. ರಾಘವೇಂದ್ರ ರಾವ್ ಅವರ ದೂರದೃಷ್ಟಿಯ ಫಲವಾಗಿ ಬೆಳೆದಿರುವ ಈ ಸಂಸ್ಥೆಗಳು ಇಂದು ದೇಶದ ಪ್ರಮುಖ ಉನ್ನತ ಶಿಕ್ಷಣ ಸಮೂಹಗಳಲ್ಲಿ ಒಂದಾಗಿ ಗುರುತಿಸಿಕೊಂಡಿವೆ. ಸಂಸ್ಥೆಯು […]

Continue Reading

ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಮಸ್ಯೆಗೆ ಬ್ರೇಕ್, ಒತ್ತುವರಿ, ಬೀದಿ ವ್ಯಾಪಾರ, ಅಕ್ರಮ ಪಾರ್ಕಿಂಗ್ ತೆರವಿಗೆ ಜಂಟಿ ಕಾರ್ಯಾಚರಣೆ ಡಿಸಿ ದರ್ಶನ್

ಮಂಗಳೂರು: ನಗರದ ಪ್ರಮುಖ ಜಂಕ್ಷನ್‌ಗಳು ಹಾಗೂ ವೃತ್ತಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಒತ್ತುವರಿ, ಅಕ್ರಮ ಪಾರ್ಕಿಂಗ್ ಮತ್ತು ಬೀದಿ ವ್ಯಾಪಾರ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಹಲವು ಜಂಕ್ಷನ್‌ಗಳು ಮತ್ತು ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಂದ ನಿರಂತರ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಗಳು […]

Continue Reading

ತಾಯಿಯ ನೆನಪು ಚಿರಸ್ಥಾಯಿಗೊಳಿಸಿದ ಪುತ್ರರು, ಬಡ ಕುಟುಂಬಕ್ಕೆ 10 ಲಕ್ಷ ವೆಚ್ಚದ ಮನೆ ನಿರ್ಮಾಣ

ಮಂಗಳೂರು: ತಾಯಿಯ ಸ್ಮರಣೆಯನ್ನು ಅರ್ಥಪೂರ್ಣ ಸಾಮಾಜಿಕ ಸೇವೆಯ ಮೂಲಕ ಆಚರಿಸುವ ಅಪರೂಪದ ಉದಾಹರಣೆಗೆ ಮೂಡುಶೆಡ್ಡೆ ಸಾಕ್ಷಿಯಾಯಿತು. ದಿವಂಗತ ದೇವಕಿ ಸಂಜೀವ ಶೆಟ್ಟಿ ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಅವರ ಪುತ್ರರು ಕೊರಗ ಸಮುದಾಯದ ಬಡ ಕುಟುಂಬಕ್ಕೆ ನೂತನ ಮನೆ ನಿರ್ಮಿಸಿಕೊಟ್ಟು ಮಾನವೀಯತೆ ಮೆರೆದರು. ಮೂಡುಶೆಡ್ಡೆ ಹೊಸಲಕ್ಕೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನೂತನ ಮನೆಯ ಕೀಲಿಯನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ವಕೀಲ ಉಮೇಶ್ ಶೆಟ್ಟಿ ಹೊಸಲಕ್ಕೆ, ತಮ್ಮ ತಾಯಿ […]

Continue Reading

ಕಾರವಾರ: ಮೊದಲ ಮಳೆಗೆ ಕಡವಾಡ ಹಳೆಯ ಸೇತುವೆ ಕುಸಿತ; ತಪ್ಪಿದ ಭಾರಿ ಅನಾಹುತ

ಕಾರವಾರ: ಮುಂಗಾರು ಮಳೆಯ ಆರಂಭದಲ್ಲೇ ಕಾರವಾರ ತಾಲ್ಲೂಕಿನ ಕಡವಾಡದಲ್ಲಿರುವ ಹಳೆಯ ಸೇತುವೆ ಮಂಗಳವಾರ ಏಕಾಏಕಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಸುಂಕೇರಿ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ಈ ಸೇತುವೆ ಹಲವು ವರ್ಷಗಳಷ್ಟು ಹಳೆಯದಾಗಿದ್ದು, ಮಳೆಯಿಂದಾಗಿ ದುರ್ಬಲಗೊಂಡಿದ್ದ ಸೇತುವೆ ಎರಡು-ಮೂರು ತುಂಡುಗಳಾಗಿ ಕುಸಿದಿದೆ. ಸ್ಥಳೀಯರು ಹಾಗೂ ಮೀನುಗಾರರು ಈ ಪ್ರದೇಶದಲ್ಲಿ ಹೆಚ್ಚಾಗಿ ಓಡಾಡುತ್ತಿದ್ದು, ಘಟನೆ ವೇಳೆ ಯಾರೂ ಸೇತುವೆ ಮೇಲೆ ಇಲ್ಲದ ಕಾರಣ ಸಂಭವನೀಯ ದುರಂತ ತಪ್ಪಿದಂತಾಗಿದೆ. ಕಡವಾಡ ಸೇತುವೆಯ ಪಕ್ಕದಲ್ಲೇ ಈಗಾಗಲೇ ಹೊಸ ಸೇತುವೆ […]

Continue Reading

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸಚಿವ ಖಾದರ್ ಖಡಕ್ ಎಚ್ಚರಿಕೆ

ಮಂಗಳೂರು: ಮಳೆಗಾಲದಲ್ಲಿ ರಸ್ತೆ ಹೊಂಡಗಳಲ್ಲಿ ನೀರು ನಿಂತು ಅಪಘಾತ ಸಂಭವಿಸಿ ಸಾರ್ವಜನಿಕರ ಪ್ರಾಣಹಾನಿಯಾದರೆ ಸಂಬಂಧಿಸಿದ ಇಲಾಖೆಯ ಇಂಜಿನಿಯರ್‌ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ನಿರ್ವಹಿಸಬೇಕು ಎಂದು ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆಯಲ್ಲಿ […]

Continue Reading

ಮಂಗಳೂರಿನ ವೆನ್ಲಾಕ್‌, ಲೇಡಿಗೋಷನ್‌ಗೆ ಸ್ಟಾಫ್ ನರ್ಸ್ ನೇಮಕ ಶೀಘ್ರ: ಸಚಿವ ಯು. ಟಿ. ಖಾದರ್

ಮಂಗಳೂರು: ನಗರದ ವೆನ್ಲಾಕ್ ಹಾಗೂ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆಗಳಲ್ಲಿ ಉಂಟಾಗಿರುವ ಸ್ಟಾಫ್ ನರ್ಸ್ ಕೊರತೆಯನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಲೇಡಿಗೋಷನ್ ಹೆರಿಗೆ ಆಸ್ಪತ್ರೆಗೆ 22 ಹಾಗೂ ವೆನ್ಲಾಕ್ ಆಸ್ಪತ್ರೆಗೆ 10 ಸ್ಟಾಫ್ ನರ್ಸ್‌ಗಳ ತುರ್ತು ಅಗತ್ಯವಿದೆ. ತಲಾ17 ಸಾವಿರ ವೇತನದ ಆಧಾರದಲ್ಲಿ ತಕ್ಷಣ ನೇಮಕಾತಿ ಆದೇಶ […]

Continue Reading

ಯೋಗ ಅಧಿವೇಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಅಗತ್ಯ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ

ಕಾರವಾರ: ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ, ಆಯುಷ್ ಸಚಿವಾಲಯವು ಇದೇ 14 ರಂದು ಗಿನ್ನೆಸ್ ವಿಶ್ವ ದಾಖಲೆಯ ಅತಿದೊಡ್ಡ ಆನ್‌ಲೈನ್ ಯೋಗ ಅಧಿವೇಶನವನ್ನು ಆಯೋಜಿಸುತ್ತಿದ್ದು, ಈ ಸಾಮೂಹಿಕ ಆಚರಣೆಗೆ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಅವರು ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಅಂತಾರಾಷ್ಟ್ರೀಯ ಯೋಗ ದಿಚಾರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೋಗ ಅಧಿವೇಶನವು ದೇಶಾದ್ಯಂತ ಯೋಗ ಸಾಧಕರು ಮತ್ತು ನಾಗರಿಕರನ್ನು ಒಟ್ಟುಗೂಡಿಸುವ […]

Continue Reading

ಉ.ಕ ಜಿಲ್ಲೆಯಲ್ಲಿ ರೆಟ್ ಆಲರ್ಟ್, ಮುಂಗಾರು ಎದುರಿಸಲು ಸಿದ್ದತೆ, ಎಚ್ಚರಿಕೆ ವಹಿಸಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 8 ರಂದು ಮಧ್ಯಾಹ್ನ 1 ಗಂಟೆಯಿಂದ 10 ರಂದು ಬೆಳಿಗ್ಗೆ 8.30 ರ ವರೆಗೆ ರೆಡ್ ಅಲರ್ಟ್ ಇದ್ದು, ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಜನರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾಡಳಿತವು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಸಿದ್ಧತೆ ಈಗಾಗಲೇ ಕೈಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ […]

Continue Reading

ಅಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಅಖಿಲ ಭಾರತ ಫುಟ್‌ಬಾಲ್ ಟೂರ್ನಿ

ಬೆಂಗಳೂರು: 15 ವರ್ಷ ವಯೋಮಿತಿಯೊಳಗಿನ ಬಾಲಕರಿಗಾಗಿ 14 ನೇ ಅಖಿಲ ಭಾರತ ಫುಟ್‌ಬಾಲ್ (5–ಎ–ಸೈಡ್) ಟೂರ್ನಿಯು ಆಗಸ್ಟ್ 23 ಮತ್ತು 24ರಂದು ಇಲ್ಲಿನ ಕುಕ್‌ಟೌನ್‌ ರಶ್ ಅರೆನಾ ಫುಟ್‌ಬಾಲ್ ಮೈದಾನದಲ್ಲಿ ನಡೆಯಲಿದೆ ಎಂದು ಆಯೋಜಕರಾದ ಡೆಂಜಿಲ್ ಫರ್ನಾಂಡಿಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಲೆಗಳು, ಕ್ಲಬ್‌ಗಳು, ಕ್ರೀಡಾ ಅಕಾಡೆಮಿಗಳು, ಸಂಘಗಳು ಹಾಗೂ ವಿವಿಧ ಕ್ರೀಡಾ ಗುಂಪುಗಳಿಗೆ ಟೂರ್ನಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. 2011ರ ಜನವರಿ 1 ಅಥವಾ ನಂತರ ಜನಿಸಿದ ಆಟಗಾರರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ. […]

Continue Reading

ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲಿ: ಡಾ. ಎಂ.ಬಿ. ಪುರಾಣಿಕ್

ತಲಪಾಡಿ: ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಆಯೋಜಿಸಿದ್ದ ಓರಿಯೆಂಟೇಶನ್ ಕಾರ್ಯಕ್ರಮ ಭಾನುವಾರ ಶಾರದಾ ವಿದ್ಯಾನಿಕೇತನ ಕ್ಯಾಂಪಸ್‌ನ ಭೂವರಾಹ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ವಿದ್ಯಾರ್ಥಿಗಳು ಸಂಸ್ಥೆಯು ಒದಗಿಸುವ ವಿವಿಧ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡ ಅವರು, ಪೋಷಕರಿಗೆ ಗೌರವ […]

Continue Reading