ಜೂನ್ 10 ರಿಂದ ಕರಾವಳಿಯಲ್ಲಿ ಮುಂಗಾರು ಚುರುಕು; ಜಿಲ್ಲೆಯಲ್ಲಿ ಮತ್ತೆ ಮಳೆ ಚಟುವಟಿಕೆ ಆರಂಭ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸೋಮವಾರ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ದಿನವಿಡೀ ಹವಾಮಾನದಲ್ಲಿ ಏರುಪೇರು ಕಂಡುಬಂತು. ಜಿಲ್ಲೆಯ ಹಲವೆಡೆ ಬಿಟ್ಟುಬಿಟ್ಟು ಮಳೆಯಾಗಿದ್ದು, ಸಂಜೆ ವೇಳೆಗೆ ಬೆಳ್ತಂಗಡಿ, ಸುಳ್ಯ ಹಾಗೂ ಪುತ್ತೂರು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮಂಗಳೂರು, ಉಳ್ಳಾಲ, ಬಂಟ್ವಾಳ ಮತ್ತು ಮೂಲ್ಕಿ ತಾಲೂಕಿನ ಕೆಲವೆಡೆ ಸಾಧಾರಣ ಮಳೆಯಾದ ಬಗ್ಗೆ ವರದಿಯಾಗಿದೆ. ಕಳೆದ ಕೆಲವು ದಿನಗಳಿಂದ ಕುಂಠಿತಗೊಂಡಿದ್ದ ಮಳೆ ಚಟುವಟಿಕೆ ಮತ್ತೆ ಚುರುಕುಗೊಳ್ಳುವ ನಿರೀಕ್ಷೆ ಇದೆ. ಜಿಲ್ಲಾಡಳಿತದ ಮಳೆ ಅಂಕಿ-ಅಂಶಗಳ […]

Continue Reading

ಕರಿಕಾಡ ಖ್ಯಾತಿಯ ಕಾಡ ನಟರಾಜ್‌ಗೆ ಡಬಲ್ ಸಂಭ್ರಮ, ಜನ್ಮದಿನದಂದೇ ಅಭಿನಯಕ್ಕೆ ಮೆಚ್ಚುಗೆಯ ಮಳೆ

ಬೆಂಗಳೂರು:‘ ಕರಿಕಾಡ’ ಚಿತ್ರದ ಮೂಲಕ ಸಿನಿಪ್ರಿಯರ ಗಮನ ಸೆಳೆದಿರುವ ನಟ ಕಾಡ ನಟರಾಜ್ ಅವರಿಗೆ ಈ ಬಾರಿಯ ಜನ್ಮದಿನ ಡಬಲ್ ಖುಷಿ ತಂದಿದೆ. ಜೂನ್ 6ರಂದು ಜನ್ಮದಿನ ಆಚರಿಸಿಕೊಂಡ ನಟರಾಜ್, ತಮ್ಮ ಅಭಿನಯಕ್ಕೆ ದೊರೆಯುತ್ತಿರುವ ಮೆಚ್ಚುಗೆಯೇ ಈ ವರ್ಷದ ದೊಡ್ಡ ಉಡುಗೊರೆ ಎಂದು ಸಂತಸ ಹಂಚಿಕೊಂಡಿದ್ದಾರೆ. ಗಿಲ್ಲಿ ವೆಂಕಟೇಶ್ ನಿರ್ದೇಶನದ ‘ಕರಿಕಾಡ’ ಚಿತ್ರದಲ್ಲಿ ಶೀರ್ಷಿಕೆ ಪಾತ್ರದಲ್ಲಿ ನಟಿಸಿದ್ದ ಕಾಡ ನಟರಾಜ್, ಹಳ್ಳಿ ಯುವಕನ ಪಾತ್ರವನ್ನು ಸಹಜವಾಗಿ ನಿರ್ವಹಿಸಿ ಪ್ರೇಕ್ಷಕರ ಮನ ಗೆದ್ದಿದ್ದರು. ಚಿತ್ರ ಬಿಡುಗಡೆಯಾದಾಗಲೇ ಅವರ ಅಭಿನಯಕ್ಕೆ […]

Continue Reading

ಸಿಇಟಿ ಫಲಿತಾಂಶದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಕಾಲೇಜು ಮೇಲುಗೈ, 15 ರ‍್ಯಾಂಕ್‌; ಹೊಸ ದಾಖಲೆ

ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮೆರೆದಿದ್ದಾರೆ. ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಪರೀಕ್ಷೆಯ ಆರು ವಿಭಾಗಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಟಾಪ್-10 ಪಟ್ಟಿಯಲ್ಲಿ ಒಟ್ಟು 15 ರ‍್ಯಾಂಕ್‌ಗಳನ್ನು ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟಾಪ್-10 ರ‍್ಯಾಂಕ್‌ಗಳಲ್ಲಿ ಮೂವರು ವಿದ್ಯಾರ್ಥಿಗಳು 3ನೇ ರ‍್ಯಾಂಕ್, ಮೂವರು 4ನೇ ರ‍್ಯಾಂಕ್, ಒಬ್ಬ ವಿದ್ಯಾರ್ಥಿ 6ನೇ ರ‍್ಯಾಂಕ್ , ಮೂವರು 7ನೇ […]

Continue Reading

ಕೆಸಿಇಟಿ ಫಲಿತಾಂಶ, ಶಕ್ತಿ ಕಾಲೇಜಿನ ಬಿಪಿಒ ವಿಭಾಗದಲ್ಲಿ ಲಿಖಿತ್ ಗೌಡಗೆ 221ನೇ ರ‍್ಯಾಂಕ್

ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆಸಿಇಟಿ-2026 ಪರೀಕ್ಷೆಯಲ್ಲಿ ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮೆರೆದಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿ ಲಿಖಿತ್ ಗೌಡ ಎಸ್.ಡಿ. ಅವರು ಬಿಪಿಒ ವಿಭಾಗದಲ್ಲಿ 221ನೇ ರ‍್ಯಾಂಕ್ ಗಳಿಸಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ 2367ನೇ ರ‍್ಯಾಂಕ್ ಪಡೆದಿದ್ದಾರೆ. ಪವನ್ ಮಲಗಿ ನರ್ಸಿಂಗ್ ವಿಭಾಗದಲ್ಲಿ 1428ನೇ ಹಾಗೂ ವೆಟರಿನರಿ ಸೈನ್ಸ್ ವಿಭಾಗದಲ್ಲಿ 1424ನೇ ರ‍್ಯಾಂಕ್ ಗಳಿಸಿದ್ದಾರೆ. ಸುಹಾಸ್ ಅವರು ನರ್ಸಿಂಗ್‌ನಲ್ಲಿ 1661ನೇ, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 1153ನೇ ಹಾಗೂ […]

Continue Reading

ಅಮೃತ 2.0 ಕಾಮಗಾರಿ ಅವೈಜ್ಞಾನಿಕ ಎಂಬ ಪತ್ರಿಕಾ ವರದಿಗೆ ನಗರಸಭೆ ಕಮಿಷನರ್ ಜಗದೀಶ್ ಸ್ಪಷ್ಟನೆ

ಕಾರವಾರ: ಅಮೃತ 2.0 ಯೋಜನೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂಬ ಕುರಿತು ಕೆಲ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳಿಗೆ ನಗರಸಭೆ ಕಮಿಷನರ್ ಜಗದೀಶ್ ಬಿ.ಹುಲಗೆಜ್ಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಕಾರವಾರ ನಗರ ವ್ಯಾಪ್ತಿಯಲ್ಲಿ ಅಮೃತ 2.0 ಯೋಜನೆಯಡಿ ₹35 ಕೋಟಿ ವೆಚ್ಚದ ಕಾಮಗಾರಿ ಮಂಜೂರಾಗಿದ್ದು, ಯೋಜನೆಯಡಿ ಅಗತ್ಯವಿರುವ ಪ್ರದೇಶಗಳಲ್ಲಿ ನೀರಿನ ಪೈಪ್‌ಲೈನ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಯೋಜನೆಯ ಕಾಮಗಾರಿಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅನುಷ್ಠಾನಗೊಳಿಸುತ್ತಿದ್ದು, ನಗರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ […]

Continue Reading

ಕೇರಳಕ್ಕೆ ಮುಂಗಾರು ಪ್ರವೇಶ: ಇನ್ನೆರಡು ದಿನದಲ್ಲಿ ಕರ್ನಾಟಕಕ್ಕೂ ಮಳೆ ಅಬ್ಬರ!ವಾಡಿಕೆಗಿಂತ 3 ದಿನ ತಡ

ಬೆಂಗಳೂರು: ನೈಋತ್ಯ ಮುಂಗಾರು ಗುರುವಾರ ಕೇರಳ ಕರಾವಳಿಯನ್ನು ಪ್ರವೇಶಿಸಿದ್ದು, ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಆರಂಭವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರಡು ದಿನಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಮುಂಗಾರು ಗಾಳಿಯ ಚಲನವಲನ ಮತ್ತು ವಾತಾವರಣದ ಸ್ಥಿತಿಗತಿಗಳನ್ನು ಪರಿಶೀಲಿಸಿದ ಬಳಿಕ ಘೋಷಿಸಲಾಗುವುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಹಲವೆಡೆ ಮಳೆಯ ಚಟುವಟಿಕೆ ಚುರುಕುಗೊಂಡಿದ್ದು, […]

Continue Reading

ಮಳೆಗಾಲದಲ್ಲಿ ಹೊಸ ಕಾಮಗಾರಿಗಳಿಗೆ ಬ್ರೇಕ್: ಜಿಲ್ಲಾಧಿಕಾರಿ ದರ್ಶನ್ ಕಠಿಣ ಎಚ್ಚರಿಕೆ

ಮಂಗಳೂರು: ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಅಗತ್ಯ ಕಾಮಗಾರಿಗಳನ್ನು ಹೊರತುಪಡಿಸಿ ಯಾವುದೇ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈಗಾಗಲೇ ವಿವಿಧ ಯೋಜನೆಗಳಿಗಾಗಿ ಅಗೆದಿರುವ ರಸ್ತೆಗಳನ್ನು ಕೂಡಲೇ ಯಥಾಸ್ಥಿತಿಗೆ ತಂದು ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಮಳೆ ನೀರಿನ ಸರಾಗ ಹರಿವಿಗೆ ಅಡ್ಡಿಯಾಗಿರುವ ಒತ್ತುವರಿಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕು. […]

Continue Reading

ಎಸ್‌ಐಆರ್, ಮನೆ ಮನೆಗೆ ಭೇಟಿ ನೀಡಲಿರುವ ಬಿಎಲ್‌ಒಗಳು; ಜುಲೈ 29ರವರೆಗೆ ಪ್ರಕ್ರಿಯೆ:ಜಿಲ್ಲಾಧಿಕಾರಿ ದರ್ಶನ್

ಮಂಗಳೂರು: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಜೂ.30ರಿಂದ ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದರ್ಶನ್ ಎಚ್.ವಿ. ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಲ್ಲಿ ಜೂನ್ 1 ಅನ್ನು ಅರ್ಹತಾ ದಿನಾಂಕ ಎಂದು ಪರಿಗಣಿಸಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳ […]

Continue Reading

ಮಂಗಳೂರಿನಲ್ಲಿ ಪೆಪ್ಸಿಕೋ ಅಡ್ರಿನಾಲಿನ್ ರಶ್ ಎನರ್ಜಿ ಡ್ರಿಂಕ್ ಬಿಡುಗಡೆ,  ಪ್ಯಾಶನ್ ರಶ್ , ಕ್ಲಾಸಿಕ್ ರಶ್ ಫ್ಲೇವರ್‌

ಮಂಗಳೂರು:ಜಾಗತಿಕವಾಗಿ ಜನಪ್ರಿಯವಾಗಿರುವ ತನ್ನ ಪ್ರೀಮಿಯಂ ಎನರ್ಜಿ ಡ್ರಿಂಕ್ ಬ್ರ್ಯಾಂಡ್ ‘ಅಡ್ರಿನಾಲಿನ್ ರಶ್’ ಅನ್ನು ಪೆಪ್ಸಿಕೋ ಇಂಡಿಯಾ ಮಂಗಳೂರಿನಲ್ಲಿ ಬಿಡುಗಡೆ ಮಾಡಿದೆ. ಪ್ಯಾಶನ್ ರಶ್ ಮತ್ತು ಕ್ಲಾಸಿಕ್ ರಶ್ ಎಂಬ ಎರಡು ಫ್ಲೇವರ್‌ಗಳಲ್ಲಿ ಲಭ್ಯವಿರುವ ಈ ಎನರ್ಜಿ ಡ್ರಿಂಕ್‌ಗೆ ರೂ.60 ದರ ನಿಗದಿಪಡಿಸಲಾಗಿದೆ. ಯುವಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಉತ್ಪನ್ನವನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದೆ ಎಂದು ಕಂಪನಿ ತಿಳಿಸಿದೆ. ಭಾರತದಲ್ಲಿ ಎನರ್ಜಿ ಡ್ರಿಂಕ್ ವಿಭಾಗ ವೇಗವಾಗಿ ಬೆಳೆಯುತ್ತಿದ್ದು, ಗ್ರಾಹಕರ ಆಕಾಂಕ್ಷೆಗಳಿಗೆ ತಕ್ಕ ಉತ್ಪನ್ನಗಳನ್ನು ಒದಗಿಸುವ ಉದ್ದೇಶದಿಂದ ಅಡ್ರಿನಾಲಿನ್ ರಶ್ ಪರಿಚಯಿಸಲಾಗಿದೆ […]

Continue Reading

ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ರೋಗಿಗಳಿಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಹೃದಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಅಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಲಭ್ಯವಿದ್ದು, ಬಿಪಿಎಲ್ ಕಾರ್ಡ್ ಹಾಗೂ ಆಯುಷ್ಮಾನ್ ಕಾರ್ಡ್ ಹೊಂದಿರುವವರು ಇದರ ಪ್ರಯೋಜನ ಪಡೆಯಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎದೆನೋವು, ಉಸಿರಾಟದ ತೊಂದರೆ, ಅತಿಯಾದ ದಣಿವು, ಹೃದಯ ಬಡಿತದ ಅಸಮಾನತೆ ಸೇರಿದಂತೆ ಹೃದಯ ಸಂಬಂಧಿತ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ […]

Continue Reading