ಏರ್‌ಬಿಎನ್‌ಬಿಯಿಂದ ಎಐ ಆ್ಯಪ್ ಅಪ್‌ ಡೇಟ್,ವಿಶೇಷ ಸೇವೆಗಳ ಅನಾವರಣ: ಸಹ-ಸಂಸ್ಥಾಪಕ ಮತ್ತು ಸಿಇಒ ಬ್ರಿಯಾನ್ ಚೆಸ್ಕಿ

ಮಂಗಳೂರು: ಜಾಗತಿಕ ಮಟ್ಟದಲ್ಲಿ ವಸತಿ ಹಾಗೂ ಪ್ರವಾಸೋದ್ಯಮ ಸೇವೆಗಳನ್ನು ಒದಗಿಸುವ ಪ್ರಮುಖ ಜಾಲತಾಣವಾದ ಏರ್‌ಬಿಎನ್‌ಬಿ, ಪ್ರವಾಸಿಗರ ಪ್ರಯಾಣವನ್ನು ಅತ್ಯಂತ ಸುಗಮ ಹಾಗೂ ಆರಾಮದಾಯಕವಾಗಿಸಲು ಹಲವಾರು ವಿಶೇಷ ವಿನೂತನ ಸೇವೆಗಳನ್ನು ಘೋಷಿಸಿದೆ. ಇನ್ಮುಂದೆ ಗ್ರಾಹಕರು ಕೇವಲ ಉಳಿದುಕೊಳ್ಳುವ ರೂಮ್‌ ಗಳನ್ನು ಮಾತ್ರವಲ್ಲದೆ ಕಾರ್ ಬಾಡಿಗೆ, ದಿನಸಿ ವಿತರಣೆ, ಏರ್‌ ಪೋರ್ಟ್ ಪಿಕ್‌ ಅಪ್ ಮತ್ತು ಪ್ರತಿಷ್ಠಿತ ಬೊಟಿಕ್ ಹೋಟೆಲ್‌ ಗಳ ಬುಕ್ಕಿಂಗ್ ಸೌಲಭ್ಯವನ್ನೂ ಒಂದೇ ಸೂರಿನಡಿ ಪಡೆಯಬಹುದು ಏರ್‌ಬಿಎನ್‌ಬಿಯ ಸಹ-ಸಂಸ್ಥಾಪಕ ಮತ್ತು ಸಿಇಒ ಬ್ರಿಯಾನ್ ಚೆಸ್ಕಿ ಹೇಳಿದರು. ಕ್ರೀಡಾಭಿಮಾನಿಗಳಿಗಾಗಿ […]

Continue Reading

ಮಂಗಳೂರು ಪ್ರೆಸ್ ಕ್ಲಬ್ ದಿನ, ಪ್ರಶಸ್ತಿ ಪ್ರದಾನ ಮಾಡಿದ ಎಂಎಲ್ಸಿ ಐವನ್ ಡಿಸೋಜ

ಮಂಗಳೂರು : ಸಮಾಜದ ಸ್ವಾಸ್ಥ್ಯ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಪತ್ರಕರ್ತರು ನಿಭಾಯಿಸುತ್ತಿದ್ದಾರೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವ ಪತ್ರಕರ್ತರನ್ನು ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ಎಂಎಲ್ಸಿ ಐವನ್ ಡಿಸೋಜ ಅವರು ಹೇಳಿದರು. ನಗರದ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ಭಾನುವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿ, ಪೊಲೀಸರಷ್ಟೇ ವೇಗವಾಗಿ ಘಟನಾ ಸ್ಥಳಗಳಿಗೆ ತೆರಳಿ ಸಮಾಜಕ್ಕೆ ತಪ್ಪು ಸಂದೇಶ ಹೋಗದಂತೆ ವಿವೇಚನೆಯಿಂದ ವರದಿ ಮಾಡುವ ಪತ್ರಕರ್ತರ ಬದ್ಧತೆ ಶ್ಲಾಘನೀಯ’ಎಂದರು. ಪ್ರಶಸ್ತಿ […]

Continue Reading

ಭಟ್ಕಳ ದುರಂತ, ಮೃತರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದಾರಾಮಯ್ಯ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಎಂಬ ಕಡಲ ತೀರದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಆಘಾತ ಉಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ. ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ […]

Continue Reading

ಉ.ಕ ಜಿಲ್ಲೆಯಲ್ಲಿ ನಡೆದ ದುರಂತ: ಸಚಿವ ಮಂಕಾಳ ವೈದ್ಯ, ದೇಶಪಾಂಡೆ, ಸಂಸದ ಕಾಗೇರಿ, ಹೆಬ್ಬಾರ ಕಂಬನಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಶಿರಾಲಿಯಲ್ಲಿಕಪ್ಪೆಚಿಪ್ಪು ಮೀನುಗಾರಿಕೆಗೆ ತೆರಳಿದಾಗ ಎಂಟು ಮಂದಿ ನೀರಿನ ಸೆಳತಕ್ಕೆ ಸಿಕ್ಕು ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದ್ದು, ದೇವರು ಮೃತರ ಕುಟುಂಬಕ್ಕೆ ದುಃಖವನ್ನು ಎದುರಿಸುವ ಶಕ್ತಿಯನ್ನು ನೀಡಲಿ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರಿಗೆ ಈ ವಿಷಯ ತಿಳಿಸಿದ್ದು , ಉಳಿದ ಮೂರು ಮಂದಿ ಮೃತದೇಹ ನುರಿತ ತಂತ್ರಜ್ಞರಿಂದ ಹುಡುಕಿಸಿ ಹಾಗೂ ಮಾನವೀಯ ನೆಲೆಯಲ್ಲಿ ರಾಜ್ಯ […]

Continue Reading

ಉ. ಕ. ಜಿಲ್ಲೆಯಲ್ಲಿ ಭೀಕರ ದುರಂತ; ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 8 ಮಂದಿ ಸಾವು, ಮೂರು ಮಂದಿ ನಾಪತ್ತೆ, 3 ಮಂದಿ ರಕ್ಷಣೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಶಿರಾಲಿ ಸಮೀಪದ ತಟ್ಟೆಹಕ್ಕಲು ಎಂಬಲ್ಲಿ ಕಡಲ ತೀರದಲ್ಲಿ ಕಪ್ಪೆಚಿಪ್ಪು ತೆಗೆದಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ದುರಂತ ಸಾವು ಕಂಡಿದ್ದಾರೆ. ಮಾಲತಿ ಜಟ್ಟಪ್ಪ ನಾಯ್ಕ, ಲಕ್ಷ್ಮೀ ಶಿವರಾಮ ನಾಯ್ಕ, ಲಕ್ಷ್ಮೀ ಅಣ್ಣಪ್ಪ ನಾಯ್ಕ, ಉಮೇಶ ಮಂಜುನಾಥ ನಾಯ್ಕ, ಲಕ್ಮೀ ಮಾಧೆವ ನಾಯ್ಕ, ಜ್ಯೋತಿ ನಾಗಪ್ಪ ನಾಯ್ಕ, ಮಾಸ್ತಮ್ಮ ಮಂಜುನಾಥ ನಾಯ್ಕ , ಲಕ್ಮೀ ಮಾಧೆವ ನಾಯ್ಕ ಎಂಬಬುವವರು ನೀರಿನ ಸೆಳೆತಕ್ಕೆ ಸಿಕ್ಕು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಶವಗಳನ್ನು […]

Continue Reading

ಹವಾಮಾನದಲ್ಲಿ ವ್ಯಾಪಕ ಏರಿಳಿತ, 19 ಜಿಲ್ಲೆಗಳಲ್ಲಿ ಗಾಳಿ, ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 19 ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಬಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ. ತಾಪಮಾನ ಕುಸಿತದ ಬೆನ್ನಲ್ಲೇ ವ್ಯಾಪಕ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ತಿಳಿಸಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ತಿಳಿದು ಬಂದಿದೆ. ಕೊಪ್ಪಳ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಪ್ರತಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಇದರೊಂದಿಗೆ […]

Continue Reading

ಮಂಗಳೂರಿನಲ್ಲಿ ಶೀಘ್ರವೇ ಮೆಗಾ ಜಾಬ್ ಫೇರ್: ಕೌಶಲ್ಯಾಭಿವೃದ್ಧಿ , ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಮಂಗಳೂರು: ಕರಾವಳಿ ಕರ್ನಾಟಕದ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ಶೀಘ್ರದಲ್ಲೇ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದರು. ನಗರದ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ) ನೂತನ ಕಟ್ಟಡ ಉದ್ಘಾಟಿಸಿ ಶನಿವಾರ ಮಾತನಾಡಿದ ಅವರು, ಕರಾವಳಿ ಭಾಗದ ಮೂರು ಜಿಲ್ಲೆಗಳ ಯುವಕರನ್ನು ಕೇಂದ್ರೀಕರಿಸಿ ಉದ್ಯೋಗ ಮೇಳ ನಡೆಸಲಾಗುವುದು. ರಾಜ್ಯದ ವಿವಿಧೆಡೆ ನಡೆದ ಉದ್ಯೋಗ ಮೇಳಗಳಿಂದ ಇದುವರೆಗೆ 30 ಸಾವಿರಕ್ಕೂ ಅಧಿಕ […]

Continue Reading

ಮುಂಗಾರು ವೇಳೆ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ದ.ಕ. ಬಸ್‌ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿರುವ ಹಿನ್ನೆಲೆ ರಸ್ತೆಗಳಲ್ಲಿ ಗ್ರೀಸ್‌, ಆಯಿಲ್‌, ಡೀಸೆಲ್‌ ಸೇರಿದಂತೆ ಜಾರುವ ಪದಾರ್ಥಗಳು ಬೀಳುತ್ತಿರುವುದರಿಂದ ಅಪಘಾತಗಳ ಸಂಭವ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಬಸ್‌, ಸೇರಿದಂತೆ ಭಾರೀ ವಾಹನ ಚಾಲಕರು ಹಾಗೂ ಬೈಕ್ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದು ದ.ಕ. ಬಸ್‌ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಳೆಯ ಸಂದರ್ಭ ರಸ್ತೆಗಳಲ್ಲಿ ಹೊಂಡಗಳು, ಜಾರಿ ಪ್ರದೇಶಗಳು ಹಾಗೂ ಇತರೆ ಅಡೆತಡೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ […]

Continue Reading

ಎಂಎಲ್ಸಿ ಐವನ್ ಡಿಸೋಜ, ರಾಜ್ಯಪಾಲ, ನಿವೃತ್ತ ನ್ಯಾ. ಅಬ್ದುಲ್ ನಜೀರ್ ಭೇಟಿ: ಹೈಕೋರ್ಟ್ ಸಂಚಾರ ಪೀಠ ಸ್ಥಾಪನೆ ಕುರಿತ ಚರ್ಚೆ

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರೂ ಆಗಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು, ಮಂಗಳೂರಿಗೆ ಭೇಟಿ ನೀಡಿದ್ದ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹಾಗೂ ಆಂಧ್ರ ಪ್ರದೇಶ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಸಂಚಾರಿ ಪೀಠ ಸ್ಥಾಪನೆ ಕುರಿತಾಗಿ ಇದುವರೆಗೆ ನಡೆದ ಬೆಳವಣಿಗೆಗಳು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ನಡೆದ ಚರ್ಚೆಗಳು, ಸರ್ಕಾರದ ಮಟ್ಟದಲ್ಲಿ […]

Continue Reading

ಕೇಂದ್ರ ಸಚಿವ ಸೋಮಣ್ಣಗೆ ಜೆಡಿಎಸ್ ಅಕ್ಷಿತ್ ಸುವರ್ಣ ನೇತೃತ್ವದ ನಿಯೋಗದಿಂದ ಮನವಿ

ಮಂಗಳೂರು: ಕರಾವಳಿ ಭಾಗದ ಬಹುಕಾಲದ ಪ್ರಮುಖ ರೈಲ್ವೆ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಯುವ ಘಟಕದ ನಿಯೋಗವು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿತು. ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದ ನಿಯೋಗವು ಶನಿವಾರ ಮಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿ ಪ್ರತ್ಯೇಕ “ಮಂಗಳೂರು ರೈಲ್ವೆ ವಿಭಾಗ ರಚನೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತು. ಪ್ರಸ್ತುತ ಮಂಗಳೂರು ಪಾಲಕ್ಕಾಡ್ ರೈಲ್ವೆ ವಿಭಾಗದ […]

Continue Reading