ಮುಂಡಾಲ  ಸಮಾಜವನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗಲಿ: ಸ್ವಾಮೀಜಿ

ಮಂಗಳೂರು: ಅಸೂಯೆ, ದ್ವೇಷ ಹಾಗೂ ಬೇಡವಾದ ವಿಚಾರಗಳು ಮನುಷ್ಯನನ್ನು ಸಣ್ಣವರನ್ನಾಗಿ ಮಾಡುತ್ತವೆ. ಎಲ್ಲ ಧರ್ಮಗಳ ಸಾರವೂ ಮನುಷ್ಯನಿಗೆ ಒಳಿತು ಮಾಡುವುದೇ ಆಗಿದೆ. ಆದ್ದರಿಂದ ಯಾರನ್ನೂ ದ್ವೇಷಿಸದೆ, ಮುಂಡಾಲ ಸಮಾಜದ ಎಲ್ಲರನ್ನೂ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಚಿತ್ರದುರ್ಗದ ಆದಿಜಾಂಬವ ಮಹಾಸಂಸ್ಥಾನ ಮಠದ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಲಾಲ್‌ಬಾಗ್‌ನ ಸ್ಕೌಟ್ಸ್‌ ಅಂಡ್ ಗೈಡ್ಸ್‌ ಸಭಾಂಗಣದಲ್ಲಿ ಭಾನುವಾರ ನಡೆದ ಮುಂಡಾಲ ಮಹಾಸಭಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭ, ಮುಂಡಾಲ ಸಮುದಾಯದ ಸ್ನೇಹ […]

Continue Reading

ಗಣೇಶ ಚತುರ್ಥಿ: ಎನ್ ಡಬ್ಲು ಕೆಎಸ್ ಆರ್ ಟಿಸಿ ಯಿಂದ 312 ಹೆಚ್ಚುವರಿ ವಿಶೇಷ ಬಸ್‌

ಕಾರವಾರ: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ 312 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಹಾಗೂ ಬಾಗಲಕೋಟೆ ವಿಭಾಗಗಳಿಂದ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುವುದು. ವಾರಾಂತ್ಯದ ದಿನಗಳು ಹಾಗೂ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು […]

Continue Reading

ದ.ಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿದ ಸಚಿವ ಯು.ಟಿ. ಖಾದರ್

ಮಂಗಳೂರು: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಣದ ಮೂಲಕ ದೇಶದ ಶಿಲ್ಪಿಗಳನ್ನು ರೂಪಿಸುವ ಶಕ್ತಿ ಶಿಕ್ಷಕರಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಮಂಗಳೂರು ಉತ್ತರ ವಲಯದ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೆತ್ತವರು […]

Continue Reading

ಅಜ್ಞಾನದಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರು ಶಿಕ್ಷಕರು:ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು. ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಮೂಲ್ಯ ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಬ್ರಹ್ಮಾವರ ವಲಯ ಹಾಗೂ ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಮತ್ತು ಗೀತಾನಂದ ಫೌಂಡೇಶನ್ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಚಿಂತನೆಯಂತೆ ಶಿಕ್ಷಕರು […]

Continue Reading

ಶಿಕ್ಷಕರ ಪರಿಶ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡ ಉತ್ತಮ ಸಾಧನೆ:ಸಚಿವ ಲಕ್ಷ್ಮಣ ಸವದಿ

ಅಂಕೋಲಾ: ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಉತ್ತರ ಕನ್ನಡ ಜಿಲ್ಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಮೂರನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು. ಅಂಕೋಲಾದ ನಾಡವರ ಸಭಾಭವನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ಕೇವಲ ಸಂಬಳಕ್ಕಾಗಿ ಕೆಲಸ ಮಾಡುವವರಲ್ಲ. ಸಮಾಜ ನಿರ್ಮಾಣದಲ್ಲಿ […]

Continue Reading

ಪ್ರಜಾಸೇವೆ ಆಂದೋಲನ, 15 ದಿನಗಳಲ್ಲಿ ಸಮಸ್ಯೆ ಪರಿಹಾರಕ್ಕೆ ಸಚಿವ ಲಕ್ಷ್ಮಣ ಸವದಿ ಸೂಚನೆ

ಅಂಕೋಲಾ: ನಾಗರಿಕರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಸರ್ಕಾರವೇ ಜನರ ಬಳಿಗೆ ತೆರಳುತ್ತಿದೆ ಎಂದು ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು. ಅಂಕೋಲಾದ ಸ್ವಾತಂತ್ರ್ಯ ಸಂಗ್ರಾಮ ಭವನದಲ್ಲಿ ಶನಿವಾರ ನಡೆದ ‘ಪ್ರಜಾಸೇವಾ ಆಂದೋಲನ’ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಆಂದೋಲನದಲ್ಲಿ ಸ್ವೀಕರಿಸುವ ಅರ್ಜಿಗಳನ್ನು 15 ದಿನಗಳೊಳಗೆ ವಿಲೇವಾರಿ ಮಾಡಬೇಕು. ತಕ್ಷಣ ಪರಿಹರಿಸಬಹುದಾದ ಅಹವಾಲುಗಳಿಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲೂ ಉಸ್ತುವಾರಿ ಸಚಿವರು ಹಾಗೂ […]

Continue Reading

ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಶನಿವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ವಿಧಾನಪರಿಷತ್ ಸದಸ್ಯ ಪಿ.ವಿ. ಮೋಹನ್, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ರಾಷ್ಟ್ರಪತಿಯಾಗುವ ಮೊದಲು ಶ್ರೇಷ್ಠ ಶಿಕ್ಷಕರಾಗಿ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದರು. ಶಿಕ್ಷಣವೇ ದೇಶದ ದೊಡ್ಡ ಸಂಪತ್ತು. ಪ್ರಜಾಪ್ರಭುತ್ವದ ಪಾಠ ತರಗತಿಯ ಕೊಠಡಿಯಲ್ಲಿಯೇ ಆರಂಭವಾಗಬೇಕು. ಶಿಕ್ಷಕರಿಗೆ ಸಲ್ಲಬೇಕಾದ ಗೌರವ ದೊರೆಯಬೇಕು […]

Continue Reading

ಮಂಗಳೂರಿನ ರಿಲಯನ್ಸ್ ಸ್ಮಾರ್ಟ್ ಬಜಾರ್‌ನಲ್ಲಿ ‘ಮುದ್ದು ಕೃಷ್ಣ’ ಸ್ಪರ್ಧೆ, ಮಕ್ಕಳ ಕಲರವ

ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಗರದ ಬಿಜೈ ಭಾರತ್ ಮಾಲ್‌ನಲ್ಲಿರುವ ಸ್ಮಾರ್ಟ್ ಬಜಾರ್ ವತಿಯಿಂದ ಶನಿವಾರ ‘ಮುದ್ದು ಕೃಷ್ಣ’ ಸ್ಪರ್ಧೆಯನ್ನು ಸಂಭ್ರಮದಿಂದ ಆಯೋಜಿಸಲಾಯಿತು. ಮಂಗಳೂರಿನ ವಿವಿಧ ಶಾಲೆಗಳ ಮಕ್ಕಳು ಹಾಗೂ ಪುಟ್ಟ ಕಂದಮ್ಮಗಳು ಶ್ರೀಕೃಷ್ಣನ ವೇಷ ಧರಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದರು. ಮುದ್ದಾದ ನಟನೆ, ವೈವಿಧ್ಯಮಯ ವೇಷಭೂಷಣ ಹಾಗೂ ಪ್ರತಿಭೆಯ ಮೂಲಕ ಮಕ್ಕಳು ನೆರೆದಿದ್ದವರ ಗಮನ ಸೆಳೆದರು. ಮಕ್ಕಳ ಉತ್ಸಾಹ ಮತ್ತು ಸಂಭ್ರಮದಿಂದ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಕದ್ರಿಯ ಯಕ್ಷ ಮಂಜುಳಾ ಮಹಿಳಾ ತಾಳಮದ್ದಳೆ ಅರ್ಥಧಾರಿ ಶೋಭಾ ಸುಧಾಕರ್ […]

Continue Reading

ಸ್ಯಾಂಡಲ್ ವುಡ್ ಗೆ ಹೊಸ ವಿಲನ್ ಅರುಣ್ ಆಚಾರ್ ಎಂಟ್ರಿ

ಬೆಂಗಳೂರು: ಕಿರಣ್ ರಾಜ್ ನಾಯಕನಾಗಿ ನಟಿಸಿರುವ ‘ಜಾಕಿ 42’ ಚಿತ್ರದಲ್ಲಿ ಮುಖ್ಯ ವಿಲನ್ ಪಾತ್ರದಲ್ಲಿ ಅರುಣ್ ಆಚಾರ್ ಗಮನ ಸೆಳೆದಿದ್ದಾರೆ. ಕಲಾವಿದರ ಕುಟುಂಬದಲ್ಲಿ ಜನಿಸಿದ ಅರುಣ್ ಮೈಸೂರಿನವರು. ಅವರ ತಾತ ಚಿನ್ನ ಆಚಾರ್ ಕರ್ನಾಟಕ ಸಂಗೀತದಲ್ಲಿ ವಿದ್ವಾನ ಹಾಗೂ ನಾಟಕಗಳಲ್ಲಿ ಸಂಗೀತಗಾರರಾಗಿದ್ದರು. ತಾತನಂತೆ ಕಲಾ ಆಸಕ್ತಿ ಬೆಳೆಸಿಕೊಂಡ ಅರುಣ್ ಅಚಾರ್ ನಟನಾಗಿ ಜಾಕಿ 42 ಮೂಲಕ ಬರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಗುರುತೇಜ್ ಶೆಟ್ಟಿ ನಿರ್ದೇಶನದ ಗೋಲ್ಡನ್ ಗೇಟ್ ಬ್ಯಾನರ್ ನಡಿಯಲ್ಲಿ ಭಾರತಿ ಸತ್ಯನಾರಾಯಣ ನಿರ್ಮಾಣದ ‘ಜಾಕಿ 42’ […]

Continue Reading

ಜ್ಞಾನಸುಧಾದಲ್ಲಿ ಶಿಕ್ಷಕರ ದಿನಾಚರಣೆ: ನಿವೃತ್ತ ಶಿಕ್ಷಕರಿಗೆ ಸನ್ಮಾನ

ಉಡುಪಿ: ವಿದ್ಯಾರ್ಥಿಗಳ ಬದುಕಿಗೆ ದಾರಿ ತೋರಿಸುವ ಶಿಕ್ಷಕರನ್ನು ಸದಾ ಗೌರವದಿಂದ ಸ್ಮರಿಸಬೇಕು ಎಂದು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಹೇಳಿದರು. ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಜನನಿ ತಾನೆ ಮೊದಲ ಗುರು’ ಎಂಬ ನುಡಿಯಂತೆ ವಿದ್ಯೆ ಕಲಿಸಿದ ಶಿಕ್ಷಕರು ಹಾಗೂ ಜನ್ಮ ನೀಡಿದ ತಂದೆ–ತಾಯಿಯನ್ನು ಗೌರವಿಸುವ ಗುಣವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಶಿಕ್ಷಕರು ತಮ್ಮ ಉಸಿರನ್ನು ವಿದ್ಯಾರ್ಥಿಗಳ ಉಸಿರಿನೊಂದಿಗೆ ಬೆಸೆಯುವ ಮೂಲಕ ಅವರ […]

Continue Reading