ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ, 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಯಶಸ್ವಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ
ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ನಡೆಸಿದ 2026ನೇ ಸಾಲಿನ ಪರೀಕ್ಷೆ ಉತ್ತರ ಕನ್ನಡ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಯಿತು. ಪರೀಕ್ಷೆಯು ಎರಡು ಅವಧಿಗಳಲ್ಲಿ ನಡೆಯಿತು. ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ನಡೆದ ಮೊದಲ ಅವಧಿಯ ಪರೀಕ್ಷೆಗೆ 8,222 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 5,847 ಮಂದಿ ಹಾಜರಾಗಿದ್ದರು. 2,375 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. ಮಧ್ಯಾಹ್ನ 2.30ರಿಂದ […]
Continue Reading