ಸಹಕಾರಿ ಸಂಘಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿನ ಸಹಕಾರಿ ಸಂಘಗಳ ವ್ಯವಹಾರ ಮತ್ತು ಚಟುವಟಿಕೆಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಯಾವುದೇ ಅವ್ಯವಹಾರಗಳು ನಡೆಯದಂತೆ ಆಗಾಗ್ಗೆ ತಪಾಸಣೆಗಳನ್ನು ನಡೆಸಿ, ಸಾರ್ವಜನಿಕರ ಠೇವಣಿಗಳ ಮೊತ್ತಕ್ಕೆ ಭದ್ರತೆ ನೀಡುವಂತೆ ಜಿಲ್ಲೆಯ ಸಹಕಾರಿ ಸಂಘಗಳ ಉಪ ನಿಬಂಧಕರಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಕೆಲವು ಸಹಕಾರಿ ಸಂಘಗಳಲ್ಲಿನ ಅವ್ಯವಹಾರಗಳಿಂದ ಸಾರ್ವಜನಿಕರು ತಮ್ಮ ಠೇವಣಿಯ ಹಣವನ್ನು ಕಳೆದುಕೊಂಡಿರುವ ಘಟನೆಗಳು ನಡೆದಿದ್ದು, ಇಂತಹ ಘಟನೆಗಳನ್ನು […]

Continue Reading

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಭವ್ಯ ಸ್ವಾಗತ

ಬೆಂಗಳೂರು: ಖ್ಯಾತ ಚಲನಚಿತ್ರ ನಿರ್ದೇಶಕ ಇಮ್ತಿಯಾಜ್ ಅಲಿ ತಮ್ಮ ಹೊಸ ಸಿನಿಮಾ ‘ಮೇನ್ ವಾಪಸ್ ಆವುಂಗಾ’ ಯಶಸ್ಸಿನ ಸಂಭ್ರಮಾಚರಣೆಯ ಭಾಗವಾಗಿ ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಿಲಿಕಾನ್ ಸಿಟಿಯ ಜನತೆ ಅವರಿಗೆ ಅಭೂತಪೂರ್ವ ಸ್ವಾಗತ ನೀಡಿದ್ದಾರೆ. ತಮ್ಮ ನೆಚ್ಚಿನ ನಿರ್ದೇಶಕನ ಕಣ್ಣುಂಬಿಕೊಳ್ಳಲು ಕೋರಮಂಗಲದ ನೆಕ್ಸಸ್ ಮಾಲ್, ಬನ್ನೇರುಘಟ್ಟ ರಸ್ತೆಯ ಪಿವಿಆರ್ ವೇಗಾ ಸಿಟಿ, ಪಿವಿಆರ್ ವಿಆರ್ ಬೆಂಗಳೂರು ಮತ್ತು ಪಿವಿಆರ್ ಫೀನಿಕ್ಸ್ ಮಾರ್ಕೆಟ್‌ಸಿಟಿಗೆ ಅಭಿಮಾನಿಗಳು ಸಾಗರೋಪಾದಿಯಲ್ಲಿ ಹರಿದು ಬಂದಿದ್ದರು. ಚಿತ್ರಮಂದಿರಗಳ ತುಂಬೆಲ್ಲಾ ಹರ್ಷೋದ್ಗಾರ, ಕಿಕ್ಕಿರಿದು […]

Continue Reading

ದೌರ್ಜನ್ಯ ಕುರಿತು ದೂರು: ಸಿದ್ದಾಪುರ ಶಾಲೆಗೆ ಭೇಟಿ ನೀಡಿದ ಪ್ರಭಾರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್

ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಭಾರ ನಿರ್ವಹಿಸುತ್ತಿರುವ ಕುಮಾರ್ ಎನ್ ಅವರು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಿದ್ದಾಪುರ ತಾಲೂಕಿನ ಪ್ರೌಢಶಾಲೆಯೊಂದರಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆದಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾನಸೂರು ವಸತಿ ಶಾಲೆಯಲ್ಲಿ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣಕ್ಕೂ ಸಂಬಂಧಿಸಿದಂತೆ […]

Continue Reading

ಮಂಗಳೂರು: ಮನೆ ಮೇಲೆ ಕುಸಿದು ಬಿದ್ದ ತಡೆಗೋಡೆ, ಮೂರು ಮಂದಿ ಸಾವು, ಸಚಿವ ಖಾದರ್ ದೆಹಲಿ ಪ್ರವಾಸ ರದ್ದು, ಅಧಿಕಾರಿಗಳು ಸ್ಥಳಕ್ಕೆ ದೌಡು

ಮಂಗಳೂರು: ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಸುರಿದ ಮಳೆಗೆ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆಯೊಂದು ಕುಸಿದು ಬಿದ್ದು ಪರಿಣಾಮ ಮಹಿಳೆ ಸೇರಿದಂತೆ ಮೂರು ಮಂದಿ ದುರಂತ ಸಾವು ಕಂಡಿರುವ ಘಟನೆ ನಡೆದಿದೆ. ಹೆಂಚಿನ ಚಾವಣಿಯ ಮನೆ ಕುಸಿದ ಪರಿಣಾಮ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಸಾವು ಕಂಡಿದ್ದಾರೆ. ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಒಟ್ಟು ಆರು ಮಂದಿ ಇದ್ದರು ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು […]

Continue Reading

ತುಮಕೂರು ನಾಡಬಾಂಬ್ ಸ್ಫೋಟ ಪ್ರಕರಣ: ನಾಲ್ಕು ಮಂದಿ ವಶಕ್ಕೆ ಪಡೆದ ಅಂಕೋಲಾ ಪೊಲೀಸರು, ಜಿಲ್ಲೆಯಲ್ಲಿ  ನಾಡಬಾಂಬ್ ಸ್ಪೋಟದ ಕಿಡಿ

ಕಾರವಾರ: ತುಮಕೂರು ಸಮೀಪದಲ್ಲಿ ಕಾರಿನಲ್ಲಿ ನಾಡಬಾಂಬ್ ಸ್ಫೋಟಗೊಂಡು ಅಂಕೋಲಾ ಮೂಲದ ನಾಗೇಂದ್ರ ಗೌಡ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸರು ನಾಲ್ಕು ಮಂದಿಯನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದು, ನಾಡಬಾಂಬ್ ತಯಾರಿಕೆ ಮತ್ತು ಪೂರೈಕೆ ಜಾಲದ ಬಗ್ಗೆ ಮಹತ್ವದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೀಗ ನಾಡಬಾಂಬ್ ಪ್ರಕರಣವೂ ಇಡಿ ಜಿಲ್ಲೆಯಲ್ಲಿಯೇ ಸಂಚಲನಕ್ಕೆ ಕಾರಣ ಆಗಿದೆ. ಪೊಲೀಸ್ ಮೂಲಗಳ ಪ್ರಕಾರ, ವಶಕ್ಕೆ ಪಡೆದಿರುವ ನಾಲ್ಕು […]

Continue Reading

ಉ.ಕ ಜಿ.ಪಂ ಕರಡು ಯೋಜನೆಗೆ ಸುಷ್ಮಾ ಗೋಡಬೋಲೆ ಅನುಮೋದನೆ, 1,34,819.86 ಲಕ್ಷ ಆಯವ್ಯಯಕ್ಕೆ ಹಸಿರು ನಿಶಾನೆ

ಕಾರವಾರ: ಪ್ರಸಕ್ತ ಸಾಲಿನ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್‌ಗಳ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒಟ್ಟು ₹1,34,819.86 ಲಕ್ಷ ಮೊತ್ತದ ಕರಡು ಆಯವ್ಯಯ ಯೋಜನೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಸುಷ್ಮಾ ಗೋಡಬೋಲೆ ಅನುಮೋದನೆ ನೀಡಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಸಾಮಾನ್ಯ ಸಭೆ ಹಾಗೂ ಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಈ ಅನುಮೋದನೆ ನೀಡಿದರು. ಜಿಲ್ಲಾ ಪಂಚಾಯತ್‌ನ ವಿವಿಧ ಕಾರ್ಯಕ್ರಮಗಳಿಗೆ 40,240.75 ಲಕ್ಷ […]

Continue Reading

ಕ್ಷಣಿಕ ಸುಖಕ್ಕೆ ಮಾದಕ ವ್ಯಸನ ಬೇಡ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಕಿವಿಮಾತು

ಕಾರವಾರ: ಕ್ಷಣಿಕ ಸುಖಕ್ಕಾಗಿ ಯುವಜನತೆ ಮಾದಕ ದ್ರವ್ಯ ಹಾಗೂ ಮದ್ಯಪಾನದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ವಿದ್ಯಾರ್ಥಿಗಳು ಇಂತಹ ವ್ಯಸನಗಳಿಂದ ಸಂಪೂರ್ಣ ದೂರವಿರಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಹೇಳಿದರು. ನಗರದ ಬಿಣಗಾದ ಸೋಮನಾಥ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ ನಡೆದ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ಷಣಿಕ ಸಂತೋಷಕ್ಕಾಗಿ ಕೆಲವರು ಮಾದಕ ದ್ರವ್ಯ ಮತ್ತು ಮದ್ಯಪಾನದ ಮೊರೆ ಹೋಗುತ್ತಾರೆ. ಆದರೆ ಅದು ಅವರ ಶಿಕ್ಷಣ ಹಾಗೂ ಭವಿಷ್ಯದ […]

Continue Reading

ಬಿಣಗಾದಲ್ಲಿ ಎಸ್ ಐಆರ್ ಕುರಿತು ಜಾಗೃತಿಗೆ ಇಳಿದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಯುಕ್ತ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಮಂಗಳವಾರ ಬಿಣಗಾದಲ್ಲಿ ಮತದಾರರ ಮನೆಗಳಿಗೆ ತೆರಳಿ ಎನ್ಯೂಮರೇಶನ್ ಫಾರ್ಮ್ ಗಳನ್ನು ವಿತರಿಸಿ, ಎಸ್‌ಐಆರ್ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ತಹಶೀಲ್ದಾರ್ ನಿಶ್ಚಲ್ ನರೋನಾ ಸೇರಿದಂತೆ ಹಲವರು ಇದ್ದರು.

Continue Reading

ಉ. ಕ ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗೆ ಡಿಸಿ ಲಕ್ಷ್ಮಿಪ್ರಿಯಾ ಚಾಲನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಮಂಗಳವಾರ ಚಾಲನೆ ದೊರೆತಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ನಮೂನೆಗಳನ್ನು ವಿತರಿಸುವ ಕಾರ್ಯ ಆರಂಭಿಸಿದ್ದಾರೆ. ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ತಮ್ಮ ನಿವಾಸದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ನಮೂನೆಗಳನ್ನು ಸ್ವೀಕರಿಸಿ ಮಾತನಾಡಿ, ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬರೂ ನೀಡಲಾಗುವ ನಮೂನೆಯನ್ನು ಸರಿಯಾದ ಮಾಹಿತಿಯೊಂದಿಗೆ ಭರ್ತಿ ಮಾಡಿ, ಘೋಷಣೆಯನ್ನು ಓದಿ ಸಹಿ ಹಾಗೂ ದಿನಾಂಕ ನಮೂದಿಸಿ ಅಧಿಕಾರಿಗಳಿಗೆ ಹಿಂದಿರುಗಿಸುವಂತೆ ಮನವಿ ಮಾಡಿದರು. ನಮೂನೆಗಳನ್ನು […]

Continue Reading

ಬೈಕಂಪಾಡಿ: ಕೇರಳ ಉದ್ಯಮಿ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ, ಪತ್ನಿ-ಪುತ್ರನ ಅಪಹರಣ, 20 ಲಕ್ಷ ಮೌಲ್ಯದ ಸ್ವತ್ತು ದೋಚಿ ಪರಾರಿ

ಮಂಗಳೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಬೈಕಂಪಾಡಿಯಲ್ಲಿ ಸೋಮವಾರ ಸಿನಿಮೀಯ ರೀತಿಯಲ್ಲಿ ನಡೆದ ದರೋಡೆ ಪ್ರಕರಣ ವ್ಯಾಪಕ ಆತಂಕಕ್ಕೆ ಕಾರಣ ಆಗಿದೆ. ಉದ್ಯಮಿಯೊಬ್ಬರ ಕಾರ ಅನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ಅವರ ಪತ್ನಿ ಹಾಗೂ ಮಗನನ್ನು ಕಾರಿನಲ್ಲೇ ಅಪಹರಿಸಿ, ಚಿನ್ನಾಭರಣ ದೋಚಿದ ಬಳಿಕ ರಸ್ತೆ ಬದಿಯಲ್ಲಿ ಬಿಟ್ಟು ಪರಾರಿ ಆಗಿದೆ. ದರೋಡೆಗೆ ಒಳಗಾದವರು ಕೇರಳ ಮೂಲದವರಾಗಿದ್ದು, ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಉದ್ಯಮ ನಡೆಸುತ್ತಿದ್ದಾರೆ. ಅವರು ಪತ್ನಿ ಹಾಗೂ ಮಗನ ಜತೆಗೆ ಕಾರಿನಲ್ಲಿ ಸಾಂಗ್ಲಿಯಿಂದ ಪಯ್ಯನ್ನೂರಿಗೆ ತೆರಳುತ್ತಿದ್ದ ವೇಳೆ […]

Continue Reading