ಮುಂಗಾರು ಎಚ್ಚರಿಕೆ: ಉತ್ತರ ಕನ್ನಡ ಸೇರಿ 4 ಸೂಕ್ಷ್ಮ ಜಿಲ್ಲೆಗಳ ಉಸ್ತುವಾರಿ ಯು.ಟಿ. ಖಾದರ್‌ಗೆ, 13 ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಮುಂಗಾರು ಮಳೆ ಹಾಗೂ ಸಂಭವನೀಯ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿವಿಧ ಜಿಲ್ಲೆಗಳಿಗೆ ಸಚಿವರನ್ನು ಪ್ರಕೃತಿ ವಿಕೋಪ ಉಸ್ತುವಾರಿಗಳಾಗಿ ನೇಮಿಸಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅತಿ ಹೆಚ್ಚು ಮಳೆ ಹಾಗೂ ಪ್ರಕೃತಿ ವಿಕೋಪಗಳಿಗೆ ತುತ್ತಾಗುವ ಸೂಕ್ಷ್ಮ ಪ್ರದೇಶಗಳ ಪೈಕಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯನ್ನು ಸಚಿವ ಯು.ಟಿ. ಖಾದರ್ ಫರೀದ್ ಅವರಿಗೆ ವಹಿಸಲಾಗಿದೆ. ಇದರ ಜೊತೆಗೆ ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ […]

Continue Reading

ಎಂಸಿಸಿ ಬ್ಯಾಂಕ್ ನ ದೇರಳಕಟ್ಟೆ, ಕಟಪಾಡಿ ಮತ್ತೇರಡು ಹೊಸ ಶಾಖೆ ಗ್ರಾಹಕರಿಗೆ ಲೋಕಾರ್ಪಣೆ: ಅನಿಲ್ ಲೋಬೊ

ಮಂಗಳೂರು: 114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಹಣಕಾಸು ವರ್ಷದಲ್ಲಿ 1,535 ಕೋಟಿ ರೂ.ಗಳ ಒಟ್ಟು ವ್ಯವಹಾರ ವಹಿವಾಟು ದಾಖಲಿಸಿ ಹೊಸ ಮೈಲುಗಲ್ಲು ಸಾಧಿಸಿದೆ. ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆಯಲ್ಲಿ ಜೂನ್ 28 ರಂದು ಹಾಗೂ 23 ನೇ ಶಾಖೆ ಉಡುಪಿಯ ಕಟಪಾಡಿಯಲ್ಲಿ ಅಗಸ್ಟ್ 2 ರಂದು ಉದ್ಘಾಟನೆಯಾಗಲಿದೆ ಎಂದು ಬುಧವಾರ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅವರು ತಿಳಿಸಿದರು. ಬ್ಯಾಂಕ್ ಒಟ್ಟು ವ್ಯವಹಾರ ವಹಿವಾಟು ಶೇ.22.89ರಷ್ಟು ಏರಿಕೆಯಾಗಿದೆ ಎಂದು […]

Continue Reading

ಮಂಜನಾಡಿ ಗುಡ್ಡ ಕುಸಿತ, ಸಂತ್ರಸ್ತೆಯ ಮನೆಗೆ ಎಂಎಲ್ಸಿ ಕಿಶೋರ್ ಕುಮಾರ್ ಭೇಟಿ, ಸಾಂತ್ವನ

ಮಂಗಳೂರು: ಕಳೆದ ವರ್ಷ ಮಂಗಳೂರು ಸಮೀಪದ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಕುಟುಂಬವನ್ನೇ ಕಳೆದುಕೊಂಡು, ಗಂಭೀರ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ಅಶ್ವಿನಿ ಅವರ ಮನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ದುರಂತದಲ್ಲಿ ತಮ್ಮ ಇಬ್ಬರು ಮಕ್ಕಳು ಮತ್ತು ಅತ್ತೆಯನ್ನು ಕಳೆದುಕೊಂಡಿದ್ದ ಅಶ್ವಿನಿ, ಸ್ವತಃ ಎರಡು ಕಾಲುಗಳನ್ನು ಕಳೆದುಕೊಂಡು, ಅವರ ಮಾವ ಒಂದು ಕಾಲನ್ನು ಕಳೆದುಕೊಂಡು ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಈ ದುರಂತದ ಬಳಿಕ ಮನೆ ಮತ್ತು ಬದುಕು […]

Continue Reading

ಡಿಜಿ-ಐಜಿಪಿ ಶ್ಲಾಘನಾ ಪದಕಕ್ಕೆ ಪಿಎಸ್ಐ ನಾಗಪ್ಪ ಭಾಜನ

ಸಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿರಸಿ, ಕಾರವಾರ ಸೇರಿದಂತೆ ವಿವಿಧ ಕಡೆಗಳಲ್ಲಿ ತಮ್ಮದೇ ಕಾರ್ಯ ವೈಶಿಷ್ಟ್ಯದ ಮೂಲಕ ಜನಸ್ನೇಹಿ ಪೊಲೀಸ್ ಅಧಿಕಾರಿ ಆಗಿ ಗುರುತಿಸಿಕೊಂಡಿರುವ ಪಿಎಸ್ ಐ ನಾಗಪ್ಪ ಬಿ ಅವರಿಗೆ 2025-26ನೇ ಸಾಲಿನ ಪ್ರತಿಷ್ಠಿತ ಡಿಜಿ ಮತ್ತು ಐಜಿಪಿ ಶ್ಲಾಘನಾ ಪದಕಕ್ಕೆ ಭಾಜನ ಆಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ನಾಗಪ್ಪ ಬಿ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ಸಾರ್ವಜನಿಕರ ಜತೆಗೆ ತಮ್ಮದೇ ವಿಶಿಷ್ಟ ಕಾರ್ಯ ಶೈಲಿಯ ಮೂಲಕ ಉತ್ತಮ ಬಾಂಧವ್ಯ […]

Continue Reading

ಅತ್ತಾವರ ಕೆಎಂಸಿ ಆಸ್ಪತ್ರೆಗೆ ಎನ್‌ಎಬಿಎಚ್ 6 ನೇ ಆವೃತ್ತಿಯ ಪ್ರತಿಷ್ಠಿತ ಮಾನ್ಯತೆ

ಮಂಗಳೂರು: ಇಲ್ಲಿನ ಅತ್ತಾವರ ಕೆಎಂಸಿ ಆಸ್ಪತ್ರೆ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಗೆ ಸಂಬಂಧಿಸಿದ ಎನ್‌ಎಬಿಎಚ್ (ನ್ಯಾಷನಲ್ ಅಕ್ರೆಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್‌ಕೇರ್ ಪ್ರೊವೈಡರ್ಸ್) 6 ನೇ ಆವೃತ್ತಿಯ ಮಾನದಂಡಗಳ ಅಡಿಯಲ್ಲಿ ಪ್ರತಿಷ್ಠಿತ ಮಾನ್ಯತೆ ಪಡೆದುಕೊಂಡಿದೆ. ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ ಅಂಗ ಸಂಸ್ಥೆ ಆಗಿರುವ ಎನ್‌ಎಬಿಎಚ್ ಈ ಮಾನ್ಯತೆಯನ್ನು ನೀಡಿದ್ದು, ಆಸ್ಪತ್ರೆ 610 ಮಂಜೂರಾದ ಹಾಸಿಗೆಗಳ ವ್ಯಾಪ್ತಿಯಲ್ಲಿ ರೋಗಿಗಳ ಸುರಕ್ಷತೆ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನಿರಂತರವಾಗಿ ಒದಗಿಸುತ್ತಿರುವುದನ್ನು ಗುರುತಿಸಿ ಗೌರವಿಸಿದೆ. ಕೆಎಂಸಿ ಆಸ್ಪತ್ರೆ […]

Continue Reading

ಕರಾವಳಿಯಲ್ಲಿ ಕಿಂಗ್ ಖಾನ್ ಹವಾ: ಜೂನ್ 25 ಕ್ಕೆ ಮಂಗಳೂರಿನಲ್ಲಿ ಶಾರುಖ್ ಖಾನ್ ವಿಶೇಷ ಕಾರ್ಯಕ್ರಮ, ಪೂರ್ವ ನೋಂದಣಿ ಮಾಡಿದವರಿಗೆ ಮಾತ್ರ ಪ್ರವೇಶ

ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಶಾರುಖ್ ಖಾನ್ ಅವರು ಜೂನ್ 25 ರಂದು ಮಂಗಳೂರಿಗೆ ಆಗಮಿಸಲಿದ್ದು, ಕರಾವಳಿಯ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಶಾರುಖ್ ಖಾನ್ ಅವರೊಂದಿಗೆ ವಿಶೇಷ ಸಂಜೆಯ ಕಾರ್ಯಕ್ರಮ’ದಲ್ಲಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದೆ. ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಜನಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಆಹ್ವಾನಿತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ […]

Continue Reading

ಮತದಾರರ ಪಟ್ಟಿ ಪರಿಷ್ಕರಣೆ,ಮನೆಮಟ್ಟದ ಜಾಗೃತಿಗೆ ಒತ್ತು ನೀಡಲು ಸಿಇಒ ಡಾ. ದಿಲೀಷ್ ಶಶಿ ಸೂಚನೆ

ಕಾರವಾರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಯಶಸ್ವಿಗಾಗಿ ಜಿಲ್ಲೆಯಾದ್ಯಂತ ಮನೆಮಟ್ಟದ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಬಲಪಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂನ್ 30 ರಿಂದ ಜುಲೈ 29 ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಎನ್ಯೂಮರೇಷನ್ ಫಾರ್ಮ್ ವಿತರಣೆ ಹಾಗೂ ಸಂಗ್ರಹ ಕಾರ್ಯ ನಡೆಸಲಿದ್ದಾರೆ ಎಂದು […]

Continue Reading

ಯೋಗದಿಂದ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡಲಿವೆ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ವೃದ್ಧಿಯೊಂದಿಗೆ ದೈಹಿಕ ಶ್ರಮ ಕಡಿಮೆಯಾಗಿದ್ದು, ಆರೋಗ್ಯದ ಕಡೆ ನಿರ್ಲಕ್ಷ್ಯ ಹೆಚ್ಚಾಗಿದೆ. ಆಧುನಿಕ ಜೀವನಶೈಲಿಯಿಂದ ಮಕ್ಕಳಲ್ಲಿಯೂ ಒತ್ತಡ, ಖಿನ್ನತೆ ಹಾಗೂ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆಯಂತಹ ನಕಾರಾತ್ಮಕ ಪ್ರವೃತ್ತಿಗಳು ಕಂಡುಬರುತ್ತಿವೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು. ಪೊಲೀಸ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯೋಗ ಮತ್ತು ಕ್ರೀಡೆಯಿಂದ ಒತ್ತಡರಹಿತ, ಆರೋಗ್ಯಪೂರ್ಣ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. […]

Continue Reading

ಉಕ ಜಿಲ್ಲೆಯಲ್ಲಿ 873 ಲಸಿಕಾ ಕೇಂದ್ರ, 28ಕ್ಕೆ ಪಲ್ಸ್ ಪೊಲಿಯೋ ಅಭಿಯಾನ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಉ.ಕ ಜಿಲ್ಲೆಯಾದ್ಯಂತ ಇದೇ 28 ರಂದು ನಡೆವ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಯಶಸ್ವಿಗೊಳಿವುದಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ತಲುಪಬೇಕು ಹಾಗೂ ಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಒಟ್ಟು 873 ಲಸಿಕಾ […]

Continue Reading

ಸಹ್ಯಾದ್ರಿ ಕಾಲೇಜು–ಕ್ರಿಸ್ತು ಜಯಂತಿ ವಿವಿ ನಡುವೆ ಶೈಕ್ಷಣಿಕ ಸಹಕಾರ ಒಪ್ಪಂದಕ್ಕೆ ಸಹಿ

ಮಂಗಳೂರು: ಇಲ್ಲಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಬೆಂಗಳೂರಿನ ಕ್ರಿಸ್ತು ಜಯಂತಿ ಡೀಮ್ಡ್ ಟು ಬಿ ವಿವಿ ನಡುವೆ ಶೈಕ್ಷಣಿಕ ಸಹಕಾರ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆದ ಸಮಾರಂಭದಲ್ಲಿ ಒಪ್ಪಂದ ಕಾರ್ಯಕ್ರಮ ನೆರವೇರಿತು. ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಕುಲಪತಿ ರೆವ್. ಡಾ. ಅಗಸ್ಟಿನ್ ಜಾರ್ಜ್ ಸಿ.ಎಂ.ಐ ಹಾಗೂ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ರೆವ್. ಫಾ. ಜೋಶಿ ಮ್ಯಾಥ್ಯೂ ಸಿ.ಎಂ.ಐ ಇದ್ದರು. ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಸಂಸ್ಥಾಪಕ ಡಾ. ಮಂಜುನಾಥ […]

Continue Reading