16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಅಗಸ್ಟ್ 7, 8ಕ್ಕೆ, ಗ್ರಾಮೀಣ ಮಟ್ಟದ ಪ್ರತಿಭೆಗಳಿಗೆ ಉದ್ಯೋಗ ಒದಗಿಸುವ ವೇದಿಕೆ: ಡಾ. ಮೋಹನ್ ಆಳ್ವ

ಮಂಗಳೂರು: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ. ಈ ಬಾರಿ 300ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ಅಭ್ಯರ್ಥಿಗಳಿಗೆ ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ಉದ್ಯೋಗಾವಕಾಶಗಳು ಲಭ್ಯವಾಗಲಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಶನಿವಾರ ಸುದ್ದಿಗೋಷ್ಟಿಯಲ್ಲಿ […]

Continue Reading

ಕಡಬ: ಪತಿ, ಪತ್ನಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ಅನಾಥವಾದ ಮಗು, ಸ್ಥಳಕ್ಕೆ ಪೊಲೀಸರ ದೌಡು

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಆಲಂಕಾರು ಕಜೆ ಎಂಬಲ್ಲಿ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ದಂಪತಿ ಎರಡು ವರ್ಷದ ಹೆಣ್ಣು ಮಗು ಮನೆಯಲ್ಲಿ ಅನಾಥ ಸ್ಥಿತಿಯಲ್ಲಿ ಪತ್ತೆ ಆಗಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಪತ್ನಿ ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಮೃತರನ್ನು ಬಜಗೋಳಿ ದಿನೇಶ್ ಹಾಗೂ ಪತ್ನಿ ಸಂಗೀತಾ ಎಂದು ಗುರುತಿಸಲಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗುವಿನ […]

Continue Reading

ಪ್ರತಿನಿತ್ಯ ಉತ್ತಮ ಆರೋಗ್ಯಕ್ಕೆ ಯೋಗ ಅಗತ್ಯ: ಜಿಪಂ ಉಪ ಕಾರ್ಯದರ್ಶಿ ಅಲ್ಲಾಬಕ್ಷ

ಕಾರವಾರ: ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ವಿಶೇಷವಾಗಿ ಸರ್ಕಾರಿ ಕಚೇರಿಗಳಲ್ಲಿ ನಿರಂತರ ಒತ್ತಡದ ನಡುವೆ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಯೋಗಾಭ್ಯಾಸ ಅಳವಡಿಸಿಕೊಂಡರೆ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ದೈಹಿಕ ಆರೋಗ್ಯವೂ ಉತ್ತಮವಾಗಿರುತ್ತದೆ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಂ.ಎಸ್. ಅಲ್ಲಾಬಕಷ್ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯುಷ್ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಯೋಗ ಪ್ರದರ್ಶನ ಹಾಗೂ ಕರಪತ್ರ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯೋಗವು […]

Continue Reading

ಕಾರವಾರದತ್ತ ವಂದೇ ಭಾರತ್‌ ವೇಗ; ಕರಾವಳಿ ಸಂಸದರ ಒಗ್ಗಟ್ಟಿನ ಪ್ರಯತ್ನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

ಕಾರವಾರ: ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲನ್ನು ಕಾರವಾರದವರೆಗೆ ವಿಸ್ತರಿಸಲು ಕರಾವಳಿಯ ಎಲ್ಲ ಸಂಸದರು ಒಗ್ಗಟ್ಟಿನಿಂದ ಪ್ರಯತ್ನಿಸುತ್ತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಕುಮಟಾ ರೈಲು ನಿಲ್ದಾಣದಲ್ಲಿ ನೂತನ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ ಹಾಗೂ ಕುಮಟಾ–ಕಾಚೇಗುಡ ವಿಸ್ತರಿತ ರೈಲು ಸೇವೆಗೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು. ಕುಮಟಾ, ಗೋಕರ್ಣ, ಭಟ್ಕಳ ಮತ್ತು ಮುರುಡೇಶ್ವರ ರೈಲು ನಿಲ್ದಾಣಗಳಲ್ಲಿ ಒಟ್ಟು ಸುಮಾರು ₹10 ಕೋಟಿ ವೆಚ್ಚದ ವಿವಿಧ ಸಾರ್ವಜನಿಕ ಉಪಯೋಗದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಾಗಿದೆ ಎಂದು ಅವರು […]

Continue Reading

ನೋಂದಣಿ ಅವಧಿ ಮುಗಿದ ವಾಹನ ಬಳಕೆ ಆರೋಪ: ಕಾರವಾರ ಜೈಲರ್ ವಾಹನ ವಶಕ್ಕೆ, ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲು

ಕಾರವಾರ: ನೋಂದಣಿ ಅವಧಿ ಮುಗಿದಿದ್ದರೂ ಸರ್ಕಾರಿ ವಾಹನವನ್ನು ಬಳಸಿದ ಆರೋಪದ ಹಿನ್ನೆಲೆಯಲ್ಲಿ ಕಾರವಾರ ಕಾರಾಗೃಹದ ಸೂಪರಿಂಟೆಂಡೆಂಟ್ ಹೇಮಾವತಿ ಅವರ ವಾಹನವನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿರುವ ಘಟನೆ ನಡೆದಿದೆ. ಈ ಸಂಬಂಧ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಮಾಧವ ನಾಯಕ್ ಅವರು ಸಂಚಾರ ನಿಯಮ ಉಲ್ಲಂಘನೆ ಕುರಿತು ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕಾಜುಬಾಗ್ ಸರ್ಕಲ್ ಬಳಿ ಕಾರಾಗೃಹ ಸೂಪರಿಂಟೆಂಡೆಂಟ್ ಅವರ ವಾಹನವನ್ನು ತಡೆದು […]

Continue Reading

ಮೂಡುಬಿದಿರೆ ಆಳ್ವಾಸ್‌ನ 8 ಮಂದಿ ಸಿಎ ಅಂತಿಮ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆ, ದೀಪಕ್‌ಗೆ 28 ನೇ ರ‍್ಯಾಂಕ್

ಮೂಡುಬಿದಿರೆ : ಮೇ 2026 ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ದೀಪಕ್ ಹೆಗ್ಡೆ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್‌ಗಳಿಸುವ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಇವರ ಜತೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಒಟ್ಟು 8 ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅಮೋಘ ಸಾಧನೆ ಮೆರೆದಿದ್ದಾರೆ. ಸಿಎ ಅಂತಿಮ ಪರೀಕ್ಷೆಯಲ್ಲಿ ದೀಪಕ್ ಹೆಗ್ಡೆ, ನಿತೇಶ್ ಕಾಮತ್, ವೀಕ್ಷಾ ಶೆಟ್ಟಿ, ನಾಗರಾಜ ಮಂಜಿತ್ತಾಯ, ಪ್ರಣವ್ ಎಸ್ ಭಟ್, ವೈಷ್ಣವಿ ಜವಾರ್ ಅಕ್ಷಯ ಬಿಎಸ್, ಸುದೀಪ್ […]

Continue Reading

ಬಜ್ಪೆ ಠಾಣೆಯ ಪೊಲೀಸರ ಎಡವಟ್ಟು, ಮಾಹಿತಿ ಕಲೆ ಹಾಕದೇ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್, ಇಬ್ಬರ ಅಮಾನತು

ಮಂಗಳೂರು: ಅಸ್ಸಾಂ ಹಾಗೂ ಬಿಹಾರ ಮೂಲದ 30 ಕ್ಕೂ ಹೆಚ್ಚು ಕಾರ್ಮಿಕರಿಗೆ ಸಮರ್ಪಕವಾಗಿ ಮಾಹಿತಿ ಕಲೆ ಹಾಕದೇ, ಪರಿಶೀಲನೆ ನಡೆಸದೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (ಪಿಸಿಸಿ) ನೀಡಿದ ಆರೋಪದ ಹಿನ್ನೆಲೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆ ಇಬ್ಬರು ಸಿಬ್ಬಂದಿಯನ್ನು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರು ಅಮಾನತು ಮಾಡಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಮಾನತುಗೊಂಡವರಲ್ಲಿ ಮಹಿಳಾ ಸಿಬ್ಬಂದಿ ಆಶಾ ಹಾಗೂ ಹೆಡ್ ಕಾನ್‌ಸ್ಟೇಬಲ್ ಮಂಜುನಾಥ್ ಸೇರಿದ್ದಾರೆ. ವರ್ಷದ ಅವಧಿಯಲ್ಲಿ 31 ಮಂದಿಗೆ […]

Continue Reading

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ; ಮೊದಲ ಜೆಂಡರ್ ಅಫರ್ಮಿಂಗ್ ಯಶಸ್ವಿ ಶಸ್ತ್ರಚಿಕಿತ್ಸೆ, ವೈದ್ಯರ ಸಾಧನೆ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಟ್ರಾನ್ಸ್ಜೆಂಡರ್ ಮಹಿಳೆಗೆ ಮೊದಲ ಬಾರಿಗೆ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಈಚೆಗೆ ನಡೆದ ಈ ಶಸ್ತ್ರಚಿಕಿತ್ಸೆ ನಂತರ ರೋಗಿ ವೈದ್ಯಕೀಯ ತಂಡದ ಆರೈಕೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಹಾಗೂ ಮೂತ್ರಶಾಸ್ತ್ರ ವಿಭಾಗಗಳ ಸಂಯುಕ್ತ ತಂಡವು ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಎರಡೂ ವಿಭಾಗಗಳ ನಿಕಟ ಸಮನ್ವಯದಲ್ಲಿ ಹಲವು ಗಂಟೆಗಳ ಕಾಲ ಕಾರ್ಯ ನಡೆದಿದೆ. ಪ್ಲಾಸ್ಟಿಕ್ ಸರ್ಜರಿ ವಿಭಾಗವು ಇದಕ್ಕೂ ಮುನ್ನ ಮುಖದ ಸ್ತ್ರೀಕರಣ ಮತ್ತು […]

Continue Reading

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಯಶಸ್ಸಿಗೆ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಜೂನ್ 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರಂ ವಿತರಣೆ ಹಾಗೂ ಸಂಗ್ರಹ ಕಾರ್ಯ ನಡೆಸಲಿದ್ದಾರೆ ಎಂದು ಹೇಳಿದರು. ಬಿಎಲ್‌ಓಗಳು ನೀಡುವ ಫಾರಂಗಳನ್ನು ಮತದಾರರು […]

Continue Reading

ಎತ್ತಿನಹೊಳೆ ಯೋಜನೆಯ ವೈಜ್ಞಾನಿಕ ಸಮೀಕ್ಷೆ ನಡೆಸಿ: ವೇಕಾನಂದ ಸಾಲಿನ್ಸ್

ಮಂಗಳೂರು: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನೀರುಣಿಸುವ ಉದ್ದೇಶದಿಂದ ಆರಂಭಿಸಿರುವ ಎತ್ತಿನಹೊಳೆ ಯೋಜನೆ ಕುರಿತು ಸಮಗ್ರ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಹಾಗೂ ಕರಾವಳಿಯ ಪರಿಸರ ವ್ಯವಸ್ಥೆ ರಕ್ಷಿಸಲು ಸರ್ಕಾರ ಖಚಿತ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಉಡುಪಿ ವಾರಾಹಿ ನೀರಾವರಿ ಯೋಜನೆ, ಎಡದಂಡೆ ಕಾಲುವೆ ಹಾಗೂ ಅಕ್ವಿಡಕ್ಟ್ ಯೋಜನೆಗಳಿಗೆ ಸಾವಿರಾರು ಕೋಟಿ ರೂಪಾಯಿ ವೆಚ್ಚವಾಗಿದ್ದರೂ ನಾಲ್ಕು ದಶಕಗಳ ಬಳಿಕವೂ ಪೂರ್ಣಗೊಂಡಿಲ್ಲ. ಇದೇ ರೀತಿಯಾಗಿ […]

Continue Reading