ವಿಧಾನ ಪರಿಷತ್ ಫೈಟ್: ಕಾಂಗ್ರೆಸ್‌ಗೆ 5 ಸ್ಥಾನಗಳ ಭರ್ಜರಿ ಗೆಲುವು, ಅಡ್ಡ ಮತದಾನ ಓಟಿಂಗ್ ಏಟು, ಮೈತ್ರಿ ಸದಸ್ಯರಿಂದಲೇ ಕೈಗೆ ಮತ, ಜೆಡಿಎಸ್ ಗೆ ಹೀನಾಯ ಸೋಲು

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ಐವರು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಚುನಾವಣಾ ಫಲಿತಾಂಶವು ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಅಸಮಾಧಾನಕ್ಕೆ ಕಾರಣ ಆಗಿದೆ. ಚುನಾವಣೆಯಲ್ಲಿ ಮೈತ್ರಿ ಪಕ್ಷದ ಕೆಲವು ಶಾಸಕರು ಅಡ್ಡಮತದಾನ ಮಾಡಿರುವುದು ಫಲಿತಾಂಶದ ಮೇಲೆ ಮಹತ್ವದ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ. ಬಿಜೆಪಿ 3 ರಿಂದ 4 ಮಂದಿ ಹಾಗೂ ಜೆಡಿಎಸ್‌ 6 ರಿಂದ 7 ಮಂದಿ ಶಾಸಕರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ ಎಂಬ ಮಾಹಿತಿ ಲಭ್ಯ […]

Continue Reading

ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಆಯೋಗ ಬದ್ದ: ಯು. ನಿಸಾರ್ ಅಹಮದ್

ಕಾರವಾರ: ರಾಜ್ಯದಲ್ಲಿನ ಅಲ್ಪಸಂಖ್ಯಾತರ ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸದಿದ್ದರೆ ಅವರನ್ನು ಆಯೋಗಕ್ಕೆ ಕರೆಸಿ ನಿರ್ದೇಶನ ನೀಡುವ ಹಾಗೂ ಅಗತ್ಯವಿದ್ದರೆ ಸರ್ಕಾರಕ್ಕೆ ಶಿಫಾರಸು ಮಾಡುವ ಮೂಲಕ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗ ಬದ್ದವಾಗಿದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಅಲ್ಪಸಂಖ್ಯಾತರ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿನ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ, ಸಿಖ್ […]

Continue Reading

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಾರ್ವಜನಿಕರು ಸಹಕರಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ

ಕಾರವಾರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಜೂನ್ 20 ರಿಂದ ಆರಂಭವಾಗಲಿದ್ದು, ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮತಗಟ್ಟೆ ಅಧಿಕಾರಿಗಳು ಜೂನ್ 30 ರಿಂದ ಜುಲೈ 29 ರವರೆಗೆ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಪ್ರಿ-ಫಿಲ್ಡ್ ಎನ್ಯೂಮರೇಷನ್ ಫಾರ್ಮ್‌ಗಳನ್ನು ವಿತರಿಸಲಿದ್ದು, ಭರ್ತಿ ಮಾಡಿದ ಫಾರ್ಮ್‌ಗಳನ್ನು ಕಡ್ಡಾಯವಾಗಿ ಹಿಂದಿರುಗಿಸಬೇಕು ಎಂದು ಅವರು ತಿಳಿಸಿದರು. […]

Continue Reading

ಅಲ್ಪಸಂಖ್ಯಾತರ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಿ: ಯು. ನಿಸಾರ್ ಅಹಮದ್

ಕಾರವಾರ: ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿರುವ ಕಾರ್ಯಕ್ರಮಗಳ ಸಂಪೂರ್ಣ ಪ್ರಯೋಜನವನ್ನು ಸಮುದಾಯದ ಜನತೆಗೆ ಸಮರ್ಪಕವಾಗಿ ತಲುಪಿಸುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳು ಕಡ್ಡಾಯ ಶಿಕ್ಷಣ ಪಡೆಯುವಂತೆ ಹಾಗೂ ಶಾಲೆಯಿಂದ ಹೊರಗುಳಿಯದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ […]

Continue Reading

ಜೋಯಿಡಾ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಭೀಕರ ಡಿಕ್ಕಿ; 10 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

ಕಾರವಾರ( ಜೋಯಿಡಾ): ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪೋಲಿ ಸಮೀಪ ಗುರುವಾರ ಬೆಳಿಗ್ಗೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣ ಆಗಿದ್ದು, ಕಾರವಾರ–ಜೋಯಿಡಾ ರಸ್ತೆಯ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಉಳವಿ–ಇಚಲಕರಂಜಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೆಳಗಾವಿ–ಕಾರವಾರ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಚಾಪೋಲಿ ಸಮೀಪ ಈ ಅಪಘಾತ ಸಂಭವಿಸಿದೆ. ಡಿಕ್ಕಿ ತೀವ್ರತೆಗೆ ಎರಡೂ ಬಸ್‌ಗಳ ಮುಂಭಾಗ […]

Continue Reading

ಸಾರಿಗೆ ಇಲಾಖೆಯ ಪರಿವಾಹನ್’ ‘ಸಾರಥಿ’ ಸರ್ವರ್‌ ಹಾವು – ಏಣಿ ಆಟ, ನೋಂದಣಿಗಾಗಿ ಜನರ ಪರದಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸೇರಿದಂತೆ ರಾಜ್ಯದಾದ್ಯಂತ ಪರಿವಾಹನ್’ ಮತ್ತು ‘ಸಾರಥಿ’ ಸರ್ವರ್‌ಗಳ ಪದೇ ಪದೇ ಡೌನ್ ಆಗುವುದರಿಂದ ಸಾರಿಗೆ ಇಲಾಖೆಗೆ ಸಂಬಂಧಿಸಿದ ಆರ್‌ಟಿಒ ಕೆಲಸಗಳು ಮತ್ತು ಚಾಲನಾ ಪರವಾನಗಿ ಕಾರ್ಯಗಳಿಗೆ ಸಾರ್ವಜನಿಕರು ಪರದಾಡುವಂತಾಗಿದೆ. ಸಾರಿಗೆ ಇಲಾಖೆಯ ಸರ್ವರ್ ಡೌನ್ ಕಣ್ಣಾಮುಚ್ಚಾಲೆ ಕಳೆದ ಗುರುವಾರದಿಂದಲೇ ಶುರುವಾಗಿದೆ ಎಂಬ ಮಾಹಿತಿ ಇದೆ. ಗಂಟೆಗೊಮ್ಮೆ ಸರ್ವರ್ ಡೌನ್‌ ಆಗುತ್ತಿರುವುದರಿಂದ ಸಾರಿಗೆ ಇಲಾಖೆಯ ಕೆಲಸ ಕಾರ್ಯಗಳಿಗೆ ಬರುವ ಜನರು ಹಿಡಿಶಾಪ ಹಾಕಿ ವಾಪಸ್ ಆಗುವಂತಹ ಸ್ಥಿತಿ ನಿರ್ಮಾಣ ಆಗಿದೆ. ರಾಷ್ಟ್ರಮಟ್ಟದ ಪರಿವಾಹನ್ […]

Continue Reading

ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ಭಾರತೀಯ ಹಡಗು ವಿರಾಟ್-1: 14 ನಾವಿಕರು ಸುರಕ್ಷಿತ ರಕ್ಷಣೆ

ಮಸ್ಕತ್: ತಾಂತ್ರಿಕ ವೈಫಲ್ಯದಿಂದ ಒಮಾನ್ ಕರಾವಳಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮುಳುಗುವ ಸ್ಥಿತಿಗೆ ತಲುಪಿದ್ದ ಭಾರತೀಯ ವ್ಯಾಪಾರಿ ಹಡಗು ವಿರಾಟ್-1ನಲ್ಲಿದ್ದ 14 ನಾವಿಕರನ್ನು ಅಮೆರಿಕ ನೌಕಾಪಡೆ ಯಶಸ್ವಿಯಾಗಿ ರಕ್ಷಿಸಿದ ಘಟನೆ ನಡೆದಿದೆ. ರಕ್ಷಿಸಲ್ಪಟ್ಟ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತವಾಗಿದ್ದು ಉತ್ತಮ ಆರೋಗ್ಯದಲ್ಲಿದ್ದಾರೆ ಎಂದು ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ನಂತರ ಅವರನ್ನು ಮುಂಬೈಗೆ ತೆರಳುತ್ತಿದ್ದ ಮತ್ತೊಂದು ಹಡಗಿಗೆ ಸ್ಥಳಾಂತರಿಸಲಾಗಿದೆ. ಮಧ್ಯಪ್ರಾಚ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಜೂನ್ 14ರಂದು ಅರಬ್ಬಿ ಸಮುದ್ರದಲ್ಲಿ ಅತಂತ್ರ ಸ್ಥಿತಿಯಲ್ಲಿ ಸಿಲುಕಿದ್ದ […]

Continue Reading

ರೋಗಿಗಳ ಸುರಕ್ಷತೆಗಾಗಿ ಪರಿಣಾಮಕಾರಿ ಕ್ರಮಗಳ ಅನುಷ್ಠಾನ ಮುಖ್ಯ: ಡೀನ್ ಡಾ. ಪೂರ್ಣಿಮಾ

ಕಾರವಾರ: ಆರೋಗ್ಯ ಸಂಸ್ಥೆಗಳಲ್ಲಿ ರೋಗಿಗಳ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೋಂಕು ತಡೆ ಹಾಗೂ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕಿ ಡಾ. ಪೂರ್ಣಿಮಾ ಆರ್.ಟಿ. ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಗುಣಮಟ್ಟ ಭರವಸೆ ಘಟಕ ಹಾಗೂ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಕ್ಷ್ಮಜೀವಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಆಸ್ಪತ್ರೆ ಸೋಂಕು ನಿಯಂತ್ರಣ […]

Continue Reading

ಬಾಲ ಕಾರ್ಮಿಕರು ಕಂಡು ಬಂದರೆ 1098 ಕ್ಕೆ ಕರೆ ಮಾಡಿ: ನ್ಯಾಯಾಧೀಶೆ ದಿವ್ಯಶ್ರೀ

ಕಾರವಾರ: ಬಾಲ ಕಾರ್ಮಿಕ ಪದ್ಧತಿ ಮಕ್ಕಳ ಭೌತಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಕುಂಠಿತಗೊಳಿಸುವ ಗಂಭೀರ ಸಾಮಾಜಿಕ ಸಮಸ್ಯೆಯಾಗಿದ್ದು, ಮಕ್ಕಳಿಗೆ ಉತ್ತಮ ಆರೋಗ್ಯ, ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯ ದೊರಕುವಂತೆ ಮಾಡಲು ಬಾಲ ಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನೆ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ. ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಬಾಲ […]

Continue Reading

ಚಿನ್ನಯ್ಯ ಜಾಮೀನು ರದ್ದತಿಗೆ ಮಟ್ಟಣ್ಣವರ್ ತಂಡದಿಂದ ಎಸ್ ಐಟಿಗೆ ಮನವಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೆ, ಜಾಮೀನು ಷರತ್ತು ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ನೇತೃತ್ವದ ತಂಡವು ಬೆಳ್ತಂಗಡಿ ಎಸ್‌ಐಟಿ ದೂರು ಸಲ್ಲಿಸಿದೆ. ಎಸ್‌ಐಟಿ ಕಚೇರಿಗೆ ಭೇಟಿ ನೀಡಿದ ತಂಡ, ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಆಗ್ರಹಿಸಿತು. ಅಲ್ಲದೆ, ಪ್ರಕರಣದ ಸತ್ಯಾಸತ್ಯತೆ ಹೊರಬರಲು ಚಿನ್ನಯ್ಯನನ್ನು ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಮನವಿ ಮಾಡಿತು. ಹೈಕೋರ್ಟ್‌ಗೆ ಸಲ್ಲಿಸಿರುವ ಹೇಳಿಕೆಯನ್ನು […]

Continue Reading