ಚಿನ್ನಯ್ಯ ಜಾಮೀನು ರದ್ದತಿಗೆ ಮಟ್ಟಣ್ಣವರ್ ತಂಡದಿಂದ ಎಸ್ ಐಟಿಗೆ ಮನವಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೆ, ಜಾಮೀನು ಷರತ್ತು ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ನೇತೃತ್ವದ ತಂಡವು ಬೆಳ್ತಂಗಡಿ ಎಸ್‌ಐಟಿ ದೂರು ಸಲ್ಲಿಸಿದೆ. ಎಸ್‌ಐಟಿ ಕಚೇರಿಗೆ ಭೇಟಿ ನೀಡಿದ ತಂಡ, ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಆಗ್ರಹಿಸಿತು. ಅಲ್ಲದೆ, ಪ್ರಕರಣದ ಸತ್ಯಾಸತ್ಯತೆ ಹೊರಬರಲು ಚಿನ್ನಯ್ಯನನ್ನು ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಮನವಿ ಮಾಡಿತು. ಹೈಕೋರ್ಟ್‌ಗೆ ಸಲ್ಲಿಸಿರುವ ಹೇಳಿಕೆಯನ್ನು […]

Continue Reading

ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕರಿಸಿರುವ ಕ್ರಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಧಕ್ಕೆ: ಐವನ್ ಡಿಸೋಜ

ಮಂಗಳೂರು: ಬಿಜೆಪಿಯು ವೋಟ್ ಚೋರಿ ಜತೆಗೆ ಸೀಟ್ ಚೋರಿಯನ್ನೂ ನಡೆಸುತ್ತಿದ್ದು, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕರಿಸಿರುವ ಕ್ರಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಧಕ್ಕೆ ತಂದಿದೆ ಎಂದರು. ಜಾರ್ಖಂಡ್‌ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ನಾಮಪತ್ರದ ದೋಷ ಸರಿಪಡಿಸಲು ಅವಕಾಶ ನೀಡಿದ್ದರೂ, ಮೀನಾಕ್ಷಿ ನಟರಾಜನ್ ಅವರಿಗೆ ಅದೇ ಅವಕಾಶ […]

Continue Reading

ಬ್ಯಾಂಕ್ ಆಫ್ ಬರೋಡಾದ ಹೊಸ ವಿಶೇಷ ಉಳಿತಾಯ ಖಾತೆ; ಆರೋಗ್ಯ ಸೇವೆ, ಮನೆಬಾಗಿಲು ಬ್ಯಾಂಕಿಂಗ್ ಸೌಲಭ್ಯ

ಮಂಗಳೂರು: ಹಿರಿಯ ನಾಗರಿಕರ ಆರೋಗ್ಯ ಮತ್ತು ಆರ್ಥಿಕ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕ್ ಆಫ್ ಬರೋಡಾ ‘ಬಿಒಬಿ ಹಿರಿಯ ನಾಗರಿಕ ವಿಶೇಷ ಸಮ್ಮಾನ’ ಹೆಸರಿನ ಹೊಸ ವಿಶೇಷ ಉಳಿತಾಯ ಖಾತೆಯನ್ನು ಪರಿಚಯಿಸಿದೆ. 60 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಗ್ರಾಹಕರಿಗಾಗಿ ರೂಪಿಸಲಾದ ಈ ಖಾತೆಯು ಆರೋಗ್ಯ ಸೇವೆಗಳ ಪ್ರಯೋಜನಗಳು, ಉಚಿತ ಮನೆಬಾಗಿಲು ಬ್ಯಾಂಕಿಂಗ್ ಸೇವೆಗಳು ಹಾಗೂ ಹಲವು ಬ್ಯಾಂಕಿಂಗ್ ಮತ್ತು ಜೀವನಶೈಲಿ ಸೌಲಭ್ಯಗಳನ್ನು ಒಂದೇ ಯೋಜನೆಯಡಿ ಒದಗಿಸುತ್ತದೆ. ಈ ಖಾತೆಯ ಮೂಲಕ ಗರಿಷ್ಠ ಆರು ಕುಟುಂಬ ಸದಸ್ಯರು […]

Continue Reading

ಎಂಸಿಸಿ ಬ್ಯಾಂಕ್‌ಗೆ ಐತಿಹಾಸಿಕ ಶೇ 25 ರಷ್ಟು ಸಾಧನೆ, ಸಾಧಕರಿಗೆ ಪ್ರಶಸ್ತಿ ಪ್ರದಾನ

ಮಂಗಳೂರು: ಎಂಸಿಸಿ ಬ್ಯಾಂಕ್‌ನ 2025-26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ವ್ಯವಸ್ಥಾಪಕ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಂಸಿಸಿ ಬ್ಯಾಂಕ್ ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಹಾಗೂ ಅಮೂಲ್ಯ ಸಂಸ್ಥೆ ಆಗಿದೆ. ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ಅವರ ನಾಯಕತ್ವ, ನಿರ್ದೇಶಕರ ಮಂಡಳಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿ ಸಮರ್ಪಿತ ಸೇವೆ ಶ್ಲಾಘಿಸಿದರು. ಅಧ್ಯಕ್ಷ ಅನಿಲ್ ಲೋಬೊ ಅವರು ಮಾತನಾಡಿ, 2025-26ನೇ […]

Continue Reading

ಹೆದ್ದಾರಿ ವಿಸ್ತರಣೆಗೆ ಬಲಿಯಾದ ಸುಂದರರಾಮ್ ಶೆಟ್ಟಿ ಸಮಾಧಿ: ದಿನೇಶ್ ಹೆಗ್ಡೆ ಉಳೆಪಾಡಿ ಆಕ್ರೋಶ

ಮಂಗಳೂರು: ಮೂಲ್ಕಿಯ ಬಪ್ಪನಾಡು ದೇವಸ್ಥಾನದ ಪ್ರವೇಶದ್ವಾರದ ಸಮೀಪವಿದ್ದ ಸಮಾಜ ಸೇವಕ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಹಿರಿಯ ವ್ಯಕ್ತಿತ್ವ ಸುಂದರರಾಮ್ ಶೆಟ್ಟಿ ಅವರ ಸಮಾಧಿಯನ್ನು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯ ವೇಳೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ತೆರವುಗೊಳಿಸಿರುವುದನ್ನು ಖಂಡಿಸಲಾಗುತ್ತದೆ ಎಂದು ಅಭಿಮಾನಿ ಬಳಗದ ಪರ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು. ಸಮಾಧಿ ತೆರವುಗೊಳಿಸುವ ಮುನ್ನ ಕುಟುಂಬಸ್ಥರು, ಅಭಿಮಾನಿಗಳು ಹಾಗೂ ಸ್ಥಳೀಯರೊಂದಿಗೆ ಯಾವುದೇ ಸಮಾಲೋಚನೆ ನಡೆಸದಿರುವುದು ಬೇಸರದ ಸಂಗತಿ. ಸುಂದರರಾಮ್ ಶೆಟ್ಟಿ […]

Continue Reading

ಉ.ಕ. ಜಿಲ್ಲೆಯಲ್ಲಿ 29 ಕಂದಾಯ ಸಿಬ್ಬಂದಿಗೆ ಬಡ್ತಿ; ಡಿಸಿ ಲಕ್ಷ್ಮೀಪ್ರಿಯಾ, ಎಡಿಸಿಗೆ ಸಂಘದ ಸನ್ಮಾನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ದ್ವಿತೀಯ ದರ್ಜೆ ಸಹಾಯಕರಿಗೆ ಮಹತ್ವದ ಪದೋನ್ನತಿ ದೊರೆತಿದ್ದು, ಒಟ್ಟು 29 ಸಿಬ್ಬಂದಿಯನ್ನು ಪ್ರಥಮ ದರ್ಜೆ ಸಹಾಯಕ ಹಾಗೂ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಹುದ್ದೆಗಳಿಗೆ ಬಡ್ತಿ ನೀಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಕಂದಾಯ ಸೇವೆಗಳ (ವೃಂದ ಮತ್ತು ನೇಮಕಾತಿ) ನಿಯಮಗಳು–2026ರ ಅನ್ವಯ ಈ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ. ಜಿಲ್ಲಾ ಕಂದಾಯ ಘಟಕದ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು […]

Continue Reading

ಭಾರತ ಈಗ ಸೂಪರ್ ಎಕಾನಮಿ, 2031ಕ್ಕೆ ವಿಶ್ವದ ಟಾಪ್ 3 ದೇಶಗಳಲ್ಲಿ ಭಾರತ: ರಾಧಾ ಮೋಹನ್ ದಾಸ್ ಅಗರ್ವಾಲ್

ಮಂಗಳೂರು: ಜಾಗತಿಕ ಆರ್ಥಿಕ ಹಿಂಜರಿತ, ಇಂಧನ ಬಿಕ್ಕಟ್ಟು ಹಾಗೂ ವಿವಿಧ ಅಂತರ ರಾಷ್ಟ್ರೀಯ ಸಂಘರ್ಷಗಳ ನಡುವೆಯೂ ಭಾರತಶೇ 7.7 ರ ಆರ್ಥಿಕ ಬೆಳವಣಿಗೆ ದರವನ್ನು ಸಾಧಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಹಾಗೂ ಗೃಹ ಸಚಿವಾಲಯದ ಸ್ಥಾಯಿ ಸಮಿತಿ ಅಧ್ಯಕ್ಷ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 2013–14ರಲ್ಲಿ 1.9 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿದ್ದ ಭಾರತ ಈಗ 4.1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆದಿದೆ. ಭಾರತದ […]

Continue Reading

ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ತಮಿಳುನಾಡು ಸಿಎಂ ಜೋಸೆಫ್ ವಿಜಯ್, ರೇಷ್ಮೆ ಸೀರೆ, ಬೆಳ್ಳಿ ಖಡ್ಗ ಅರ್ಪಣೆ

ಕೊಲ್ಲೂರು (ಉಡುಪಿ ಜಿಲ್ಲೆ): ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಸಿಎಂ ವಿಜಯ್ ಅವರು ದೇವಿಗೆ ವಿಶೇಷ ಕಾಣಿಕೆಗಳನ್ನು ಅರ್ಪಿಸಿ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಶಕ್ತಿ ದೇವತೆ ಮೂಕಾಂಬಿಕೆಗೆ ಸಿಎಂ ವಿಜಯ್ ಅವರು ರೇಷ್ಮೆ ಸೀರೆ, ಫಲ–ತಾಂಬೂಲ ಅರ್ಪಿಸಿದರು. ಸುಮಾರು ಅರ್ಧ ಗಂಟೆಗಳ ಕಾಲ ದೇವಿಯ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ […]

Continue Reading

ಮುಖ್ಯಮಂತ್ರಿ ಡಿಕೆಶಿ ನವದೆಹಲಿಯಲ್ಲಿ ಅಮಿತ್ ಶಾ ಭೇಟಿ; ಪೊಲೀಸ್ ಭದ್ರತಾ ಬಲಪಡಿಸಲು ಕೇಂದ್ರದ ನೆರವು ಕೋರಿಕೆ

ನವದೆಹಲಿ: ಮುಖ್ಯಮಂತ್ರಿ ದಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಕಾನೂನು ಸುವ್ಯವಸ್ಥೆ, ಭದ್ರತಾ ವ್ಯವಸ್ಥೆ ಹಾಗೂ ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ಸಂಬಂಧಿಸಿದ ಮಹತ್ವದ ಚರ್ಚೆ ನಡೆಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಂಡಿರುವ ಅವರು ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರದ ಸಹಕಾರವನ್ನು ಕೋರಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಮತ್ತು ಸೈಬರ್ ಅಪರಾಧಗಳನ್ನು ನಿಯಂತ್ರಿಸುವ ಉದ್ದೇಶದಿಂದ ಸುಮಾರು […]

Continue Reading

ಪೌರಕಾರ್ಮಿಕರಿಗೆ ನೆಪ ಹೇಳದೇ ಆದ್ಯತೆಯಲ್ಲಿ ಎಲ್ಲರಿಗೂ ಮನೆ ನಿರ್ಮಾಣ ಮಾಡಿಕೊಡಿ: ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು

ಕಾರವಾರ: ಜಿಲ್ಲೆಯ ಎಲ್ಲಾ ನಗರಸ್ಥಳಿಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ವ್ಯವಸ್ಥೆಯನ್ನು ಕಲ್ಪಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಕಾರವಾರ ಇವರ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು/ಪೌರಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ಹಾಗೂ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

Continue Reading