ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಗೆ ಕೆಪಿಸಿಸಿ ಪಟ್ಟ, ಹೈಕಮಾಂಡ್ ಅಧಿಕೃತ ಆದೇಶ

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ. https://www.karavalidailynews.com/wp-content/uploads/2026/06/PR_PCC_Karnataka-1.pdf ಮೂಲ ಕಾಂಗ್ರೆಸಿಗ ಹಾಗೂ ಹೈಕಮಾಂಡ್ ಗೆ ತೀರಾ ಆಪ್ತರಾಗಿರುವ ಹಿಂದುಳಿದ ವರ್ಗದ ಕಾಂಗ್ರೆಸ್ ಪ್ರಮುಖ ಮುಖಂಡ ಬಿ.ಕೆ.ಹರಿಪ್ರಸಾದ್ ಅವರಿಗೆ ಮಣೆ ಹಾಕಿದೆ. ಬಿ.ಕೆ.ಹರಿಪ್ರಸಾದ್ ಈಡಿಗ ಸಮುದಾಯದವರಾಗಿದ್ದು, ಕಾಂಗ್ರೆಸ್ ​ನ ಪ್ರಬಲ ನಾಯಕರಾಗಿದ್ದಾರೆ‌. ಅಹಿಂದ ಸಮುದಾಯದವರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಬಿ.ಕೆ.ಹರಿಪ್ರಸಾದ್ ಅವರಿಗೆ ಮಣೆ ಹಾಕಿದ್ದು, ಮಂತ್ರಿ ಮಂಡಳ ರಚನೆ ಆಗುತ್ತಿದ್ದಂತೆ […]

Continue Reading

ಮುಖ್ಯಮಂತ್ರಿ ಡಿಕೆಶಿ ಆರ್ಥಿಕ ಸಲಹೆಗಾರರಾಗಿ ಎಲ್.ಕೆ. ಅತೀಕ್ ನೇಮಕ

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬುಧವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅತೀಕ್ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರರ ಹುದ್ದೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮನಾದ ವೇತನ ಹಾಗೂ ಇತರ ಭತ್ತೆಗಳನ್ನು […]

Continue Reading

ಯು.ಟಿ. ಖಾದರ್ ಸ್ಪೀಕರ್ ಟು ಮಿನಿಸ್ಟರ್ ಜರ್ನಿ, ಕಾರ್ಯಕರ್ತರಲ್ಲಿ ಸಂಭ್ರಮ

ಮಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯ ನಡುವೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಕರಾವಳಿಯ ಹಿರಿಯ ಕಾಂಗ್ರೆಸ್ ನಾಯಕ ಯು.ಟಿ. ಖಾದರ್ ಅವರು ಸ್ಪೀಕರ್ ಟು ಮಿನಿಸ್ಟರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕರಾವಳಿ ಭಾಗದ ಪ್ರಬಲ ನಾಯಕನಾಗಿರುವ ಖಾದರ್ ಅವರಿಗೆ ಸಚಿವ ಸ್ಥಾನ ದೊರೆತಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ. ಮಂಗಳೂರು […]

Continue Reading

ಸಿಎಂ ಡಿಕೆಶಿ ಸಂಪುಟಕ್ಕೆ ಪರಮೇಶ್ವರ್ ಡಿಸಿಎಂ ಆಗಿ ಎಂಟ್ರಿ

ಬೆಂಗಳೂರು:ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಸಿಎಂ ಡಿಕೆಶಿ ಅವರ ಸಂಪುಟಕ್ಕೆ ಡಿಸಿಎಂ ಆಗಿ ಸೇರ್ಪಡೆಯಾಗಿದ್ದಾರೆ. ರಾಜ್ಯದ ರಾಜಕೀಯ ಬೆಳವಣಿಗೆಗಳ ನಡುವೆ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿ ಪೂರ್ಣಗೊಂಡಿದ್ದು, ಹೊಸ ಸರ್ಕಾರದ ಕಾರ್ಯವೈಖರಿ ಕುರಿತು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ. ಅನುಭವ ಮತ್ತು ಸಂಘಟನಾ ಸಾಮರ್ಥ್ಯದ ಸಮನ್ವಯದೊಂದಿಗೆ ಹೊಸ ತಂಡ ರಾಜ್ಯದ ಆಡಳಿತವನ್ನು ಮುನ್ನಡೆಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Continue Reading

ಡಿಕೆಶಿ ಸಂಪುಟ ಸೇರಿದ ಹಿರಿ ತಲೆಗಳು, ಖಾದರ್, ಯತೀಂದ್ರ ನ್ಯೂ ಎಂಟ್ರಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಅಗಿ ಡಿಕೆಶಿ ಅವರು ಅಧಿಕಾರದ ಗದ್ದುಗೆ ಹಿಡಿದಿದ್ದು, ಅವರ ಸಂಪುಟದಲ್ಲಿ ಡಾ. ಜಿ .ಪರಮೇಶ್ವರ್, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಯು.ಟಿ. ಖಾದರ್, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಕೆ.ಎಚ್.ಮುನಿಯಪ್ಪ, ಈಶ್ವರ್ ಖಂಡ್ರೆ, ಡಾ. ಶರಣ ಪ್ರಕಾಶ ಪಾಟೀಲ್, ಯತೀಂದ್ರ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ಕೃಷ್ಣ ಬೈರೇಗೌಡ್ ಅವರು ಸಂಪುಟ ದರ್ಜೆಯ ಸ್ಥಾನ ಮಾನ ಪಡೆದುಕೊಂಡಿದ್ದು, ನೂತನ ಸಂಪುಟ ಸೇರ್ಪಡೆ ಆಗಿದ್ದಾರೆ.  

Continue Reading

ಸಂವಿಧಾನ ಪುಸ್ತಕ ಹಿಡಿದು ಡಿಕೆಶಿ ಸಿಎಂ ಪ್ರಮಾಣ: ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರತಿಜ್ಞೆ

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಬಹುನಿರೀಕ್ಷಿತ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಬುಧವಾರ ಅಧಿಕೃತ ತೆರೆ ಬಿದ್ದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ‘ಟ್ರಬಲ್ ಶೂಟರ್’ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ವಿಶೇಷವೆಂದರೆ, ಡಿ.ಕೆ. ಶಿವಕುಮಾರ್ ಅವರು ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವ ವೇಳೆ ಅವರು […]

Continue Reading

ಭಟ್ಕಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ, ಮುರಿನಕಟ್ಟೆಗೆ ಪರ್ಯಾಯ ಸ್ಥಳ ಗುರುತು: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ರಾಷ್ಟ್ರೀಯ ಹೆದ್ದಾರಿ 66 ರ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕರ ಓಡಾಟಕ್ಕೆ ಅಡಚಣೆ ಉಂಟಾಗದಂತೆ ಅಮ್ಮನವರ ಹೊರೆಯನ್ನಿಡುವ ಮುರಿನಕಟ್ಟೆಗೆ ಪರ್ಯಾಯ ಸೂಕ್ತ ಸ್ಥಳವನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. ಭಟ್ಕಳ ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಮುರಿನಕಟ್ಟೆಗಾಗಿ ಸೂಕ್ತ ಪರ್ಯಾಯ ಸ್ಥಳದ ಅಗತ್ಯತೆ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ನಗರದ […]

Continue Reading

ಶಿಶುಗಳ ಚರ್ಮದ ಆರೈಕೆ ಕುರಿತು ಜಾಗೃತಿ ಅಭಿಯಾನ ಆರಂಭಿಸಿದ ಹಿಮಾಲಯ ಬೇಬಿಕೇರ್: ಚಕ್ರವರ್ತಿ ಎನ್.ವಿ.

ಮಂಗಳೂರು: ನವಜಾತ ಶಿಶುಗಳ ಸೂಕ್ಷ್ಮ ಚರ್ಮದ ಆರೈಕೆ ಹಾಗೂ ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಚರ್ಮದ ಸಮಸ್ಯೆಗಳ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಹಿಮಾಲಯ ಬೇಬಿಕೇರ್ ವಿಶೇಷ ಜಾಗೃತಿ ಅಭಿಯಾನ ಆರಂಭಿಸಿದೆ. ಅಭಿಯಾನದ ಅಂಗವಾಗಿ ಸಂಸ್ಥೆಯ ಜನಪ್ರಿಯ ಉತ್ಪನ್ನಗಳಾದ ಹಿಮಾಲಯ ಜೆಂಟಲ್ ಬೇಬಿ ಸೋಪ್ ಹಾಗೂ ಹಿಮಾಲಯ ರಿಫ್ರೆಷಿಂಗ್ ಬೇಬಿ ಸೋಪ್ ಕುರಿತು ಹೊಸ ಜಾಹೀರಾತು ಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಜಾಹೀರಾತುಗಳು ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸಾರವಾಗುತ್ತಿವೆ. ಈ ಕುರಿತು ಹಿಮಾಲಯ ವೆಲ್‌ನೆಸ್ […]

Continue Reading

ಉ.ಕ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ತಡೆಗೆ ಈಗಿನಿಂದಲೇ ಸಜ್ಜಾಗಿರಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಖಡಕ್ ಸೂಚನೆ

ಕಾರವಾರ: ಮಳೆಗಾಲದಲ್ಲಿ ಸಂಭವಿಸಬಹುದಾದ ನೆರೆ, ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಪ್ರಕೃತಿ ವಿಕೋಪಗಳನ್ನು ಎದುರಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳು ಈಗಿನಿಂದಲೇ ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿ ಹಾಗೂ ನೌಕಾನೆಲೆ ಸಮೀಪದ ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮಳೆಯ ನೀರು ಸರಾಗವಾಗಿ ಹರಿದು […]

Continue Reading

ಸಚಿವ ಸಂಪುಟದಲ್ಲಿ ಎಂಎಲ್ಸಿ ಐವನ್ ಡಿಸೋಜಗೆ ಸಚಿವ ಸ್ಥಾನ ನೀಡುವಂತೆ ಜಾರ್ಜ್ ಫರ್ನಾಂಡಿಸ್ ಆಗ್ರಹ

ಕಾರವಾರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಕ್ಯಾಥೊಲಿಕ್ ಅಸೋಸಿಯೇಶನ್ ಅಧ್ಯಕ್ಷ ಜಾರ್ಜ್ ಫರ್ನಾಂಡಿಸ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು, ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ಐವಾನ್ ಡಿಸೋಜಾ ದೀರ್ಘಕಾಲದಿಂದ ಹೋರಾಟ ನಡೆಸುತ್ತಿದ್ದಾರೆ. ಕಾನೂನು ತಜ್ಞರಾಗಿರುವ ಅವರು ಹಲವು ದಶಕಗಳ ರಾಜಕೀಯ ಅನುಭವ ಹೊಂದಿದ್ದು, ಶಿಕ್ಷಣ, ಆರೋಗ್ಯ, ನಿರುದ್ಯೋಗ ನಿವಾರಣೆ ಸೇರಿದಂತೆ ವಿವಿಧ […]

Continue Reading