60 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ: ಜಂಟಿ ನಿರ್ದೇಶಕಿ ದರ್ಶನಾ ಕೆ.ಟಿ 

ಮಂಗಳೂರು:  ಜೂನ್ 1  ರಿಂದ ಜುಲೈ 31 ರವರೆಗೆ ಮೀನುಗಾರಿಕೆಗೆ ನಿಷೇಧವನ್ನು ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದು, ಈ ವೇಳೆಯಲ್ಲಿ ಮೀನುಗಾರಿಕೆಗೆ ತೆರಳದಂತೆ  ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ದರ್ಶನಾ ಕೆ.ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಜಿಲ್ಲೆಯ ಟೆರಿಟೋರಿಯಲ್ ವಾಟರ್ಸ್ ಭಾಗದಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಮೀನುಗಾರಿಕೆಗೆ ನೀಷೆಧ ಹಾಕಲಾಗಿದೆ. 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು  […]

Continue Reading

ಕಾರವಾರದಲ್ಲಿ ಜಿಲ್ಲಾ ಆಸ್ಪತ್ರೆ ಪ್ರಾರಂಭಕ್ಕೆ ಆಗ್ರಹಿಸಿ ಸಚಿವ ದಿನೇಶ್ ಗುಂಡೂರಾವ್ ಗೆ ಸೂರಜ ಕುರುಮಕರ ಮನವಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಇರುವ ಜಿಲ್ಲಾ ಆಸ್ಪತ್ರೆಯನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಜತೆಗೆ ವಿಲೀನ ಮಾಡಿರುವುದರಿಂದ ಜನರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿದ್ದು, ಸರಕಾರದ ಆರೋಗ್ಯ ಇಲಾಖೆಯ ಯೋಜನೆಗಳಿಂದ ವಂಚಿತರಾಗುವಂತಹ ಸ್ಥಿತಿ ನಿರ್ಮಾಣ ಆಗಿದ್ದು, ಈ ಆದೇಶವನ್ನು ಸರಕಾರ ಕೂಡಲೇ ರದ್ದು ಮಾಡಿ ಕಾರವಾರದಲ್ಲಿ ಜಿಲ್ಲಾ ಆಸ್ಪತ್ರೆ ಅಥವಾ ತಾಲ್ಲೂಕು ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಸೂರಜ ಮಧುಕರ ಕುರುಮಕರ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದ್ದಾರೆ. […]

Continue Reading

ಕಾರವಾರ: ಒಲವಿನ ಗಾನ ’ ಹನಿಗವನ – ಹನಿಮುತ್ತು ಪುಸ್ತಕ ಲೋಕಾರ್ಪಣೆ

ಕಾರವಾರ: ನಗರದ ಸಂತ್ ಜೋಸೆಫ್ ಹೈಸ್ಕೂಲ್ ಶಿಕ್ಷಕ ಆಗಸ್ಟಿನ್ ಪ್ರಕಾಶ ಕುರಿಯನ್ ಅವರ ಕವನ ಸಂಕಲನ – ‘ ಒಲವಿನ ಗಾನ ’ ಹಾಗೂ ಹನಿಗವನ – ‘ ಹನಿಮುತ್ತು ’ ಲೋಕಾರ್ಪಣ ಕಾರ್ಯಕ್ರಮ ನಡೆಯಿತು. ಪುಸ್ತಕಗಳ ಲೋಕಾರ್ಪಣೆಯನ್ನು ಸಂತ್ ಜೋಸೆಫ್ ಚರ್ಚ್ ನ ಧರ್ಮಗುರು ರೆವರೆಂಡ್ ಫಾದರ್ ಜೋನ್ ಫರ್ನಾಂಡಿ ಅವರು ನೆರವೇರಿಸಿ ಶುಭಕೋರಿದರು. ಕಾರ್ಯಕ್ರಮದ ಅಧ್ಯಕ್ಷರಾಗಿ ಸಂತ್ ಮಿಲಾಗ್ರಿಸ್ ಅಧ್ಯಕ್ಷ ಜಾರ್ಜ್ ಫರ್ನಾಂಡಿಸ್ ಹಾಗೂ ಮುಖ್ಯ ಅತಿಥಿಗಳಾಗಿ ಸಾಹಿತಿಗಳು ಹಾಗೂ ವಿಮರ್ಶಕರು ರಾಮಕೃಷ್ಣ ಜಿ. […]

Continue Reading

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕೇಂದ್ರದ ವೈಫಲ್ಯ, ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಚೆಲ್ಲಾಟ: ರಮಾನಾಥ ರೈ ಆಕ್ರೋಶ

ಮಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವೈಫಲ್ಯವನ್ನು ಕೇಂದ್ರ ಸರಕಾರ ಹೊರಬೇಕಾಗಿದೆ. ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವಲ್ಲಿ ವಿಫಲವಾಗಿರುವ ಕೇಂದ್ರದ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. 2020 ರಿಂದಲೂ ಹಲವು ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕಂಡಿರುವ ಬಗ್ಗೆ ಸುದ್ದಿ ಆಗಿತ್ತು. ಈ ವೇಳೆ ಈ ರೀತಿ ಆಗದಂತೆ ಕ್ರಮ ತೆಗೆದುಕೊಳ್ಳುವುದಾಗಿ ಅಗತ್ಯ ತನಿಖೆ ನಡೆಸುವ ಬಗ್ಗೆ ಕೇಂದ್ರ ಸರಕಾರ […]

Continue Reading

ದರ್ಶನ್ – ವಿಜಯಲಕ್ಷ್ಮೀ ದಂಪತಿಗೆ 23 ನೇ ವರ್ಷದ ಮದುವೆ ಸಂಭ್ರಮ, ಜಾಲತಾಣದಲ್ಲಿ ಮದುವೆ ಆಮಂತ್ರಣ ಪತ್ರಿಕೆ ವೈರಲ್

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ – ವಿಜಯಲಕ್ಷ್ಮೀ ದಂಪತಿಗೆ 23 ನೇ ವೈವಾಹಿಕ ವಾರ್ಷಿಕ ದಿನದ ಸಂಭ್ರಮ. ಆದರೆ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ದರ್ಶನ್‌ ಜೈಲಿನಲ್ಲಿದ್ದಾರೆ. ವಿವಾಹ ದಿನವನ್ನು ಸಂಭ್ರಮಿಸಲಾಗದೆ ದರ್ಶನ್‌ ಕುಗ್ಗಿದ್ದಾರೆ. ಅವರ ಪತ್ನಿ ಕೂಡ ನಿರಾಶರಾಗಿದ್ದಾರೆ. ಆದರೆ ತಮ್ಮ ನೆಚ್ಚಿನ ದಂಪತಿಗೆ ಅಭಿಮಾನಿಗಳು ವೈವಾಹಿಕ ದಿನದ ಶುಭಾಶಯ ತಿಳಿಸಿದ್ದಾರೆ. ಎಲ್ಲವೂ ಸರಿ ಆಗಲಿದೆ ಎಂದು ಧೈರ್ಯ ತುಂಬುತ್ತಿದ್ದಾರೆ. ವಿವಾಹದ ದಿನವೇ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಜಾಲತಾಣದಲ್ಲಿ ಪತಿ ಭಾವಚಿತ್ರ […]

Continue Reading

10 ಸಾವಿರ ಡಯಾಲಿಸಿಸ್, ಕಟೀಲು ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯ ಐತಿಹಾಸಿಕ ಮೈಲುಗಲ್ಲು, ರೋಗಿಗಳಿಗೆ ರಿಯಾಯಿತಿ ಚಿಕಿತ್ಸೆ

ಮಂಗಳೂರು(ಕಟೀಲು): ದಕ್ಷಿಣ ಕನ್ನಡ ಜಿಲ್ಲೆಯ ಕಟೀಲಿನಲ್ಲಿ ಇರುವ ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯು ತನ್ನ ಡಯಾಲಿಸಿಸ್ ಘಟಕವು 2022 ರ ಜನವರಿಯಿಂದ ಇಂದಿನವರೆಗೆ ಯಶಸ್ವಿಯಾಗಿ 10,000 ಡಯಾಲಿಸಿಸ್ ಚಿಕಿತ್ಸೆ ಪೂರ್ಣಗೊಳಿಸುವ ಮೂಲಕ ಮಹತ್ವದ ಆರೋಗ್ಯ ಸೇವೆಯಲ್ಲಿ ಸಾಧನೆ ಮಾಡಿದೆ. ಈ ಸಾಧನೆ ಗ್ರಾಮೀಣ ಹಾಗೂ ಹಿಂದುಳಿದ ಸಮುದಾಯಗಳಿಗೆ ಗುಣಮಟ್ಟದ ಮೂತ್ರಪಿಂಡ ಚಿಕಿತ್ಸೆ ಸುಲಭ ಹಾಗೂ ಕೈಗೆಟುಕುವ ದರದಲ್ಲಿ ಒದಗಿಸುವ ಆಸ್ಪತ್ರೆಯ ಬದ್ಧತೆಗೆ ಸಾಕ್ಷಿಯಾಗಿದೆ. ದೇಶದ ಹೆಸರಾಂತ ಧಾರ್ಮಿಕ ಕೇಂದ್ರ ಕಟೀಲು, ಆಧುನಿಕ ಡಯಾಲಿಸಿಸ್ ಸೇವೆಗಳನ್ನು ನೀಡುವ ವಿಶೇಷ […]

Continue Reading

ಚಂಡಮಾರುತ, ಕಡಲ, ನದಿ ತೀರಗಳಲ್ಲಿ ಬೋಟಿಂಗ್, ಜಲ ಸಾಹಸ ಕ್ರೀಡೆಗಳಿಗೆ ನಿರ್ಭಂಧ ವಿಧಿಸಿ ಆದೇಶ

ಕಾರವಾರ: ಚಂಡಮಾರುತ ಹಾಗೂ ಭಾರಿ ಗಾಳಿ ಬೀಸುವ ಕುರಿತು ಭಾರತೀಯ ಹವಾಮಾನ ಇಲಾಖೆಯ ಮೂನ್ಸಚನೆ ನೀಡಿದ್ದು, ಅಲೆಗಳು ಮಳಗಾಲಕ್ಕಿಂತಲೂ ಹೆಚ್ಚು ಅಪ್ಪಳಿಸಲಿರುವ ಹಿನ್ನಲೆಯಲ್ಲಿ ಕಡಲ ತೀರಗಳಲ್ಲಿ ಹಾಗೂ ನದಿ ತೀರಗಳಲ್ಲಿ ನಡೆಸುತ್ತಿರುವ ಬೋಟಿಂಗ್ ಹಾಗೂ ಜಲ ಸಾಹಸ ಕ್ರೀಡೆಗಳನ್ನು ಹಾಗೂ ಅಪ್ಸರಕೊಂಡ ಬೀಚ್ ನಲ್ಲಿ ಪ್ಯಾರಾ ಮೋಟರ್ ಆಳವಡಿಕೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮೇನ್ […]

Continue Reading

ರಕ್ಕಿ ಚಿತ್ರದ ಮೊದಲ ಹಾಡು “ರಗಡೋ ರಕ್ಕಿ ಬಿಡುಗಡೆ, ನಾಯಕನ ಹೆಸರೆ ಸಿನಿಮಾ ಶೀರ್ಷಿಕೆ!

ಬೆಂಗಳೂರು: ಬಹು ನಿರೀಕ್ಷಿತ “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ ಪಿಆರ್ ಕ ಅಡಿಯೊ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಆಗಿದೆ. ಯುವಜನತೆ ಹಾಗೂ ಸಂಗೀತ ಪ್ರೇಮಿಗಳಲ್ಲಿ ಭಾರಿ ಸಂಚಲನ ಮೂಡಿಸಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆ ಆಗುತ್ತಿದೆ. ಇದು “ರಕ್ಕಿ” ಚಿತ್ರದ ಮೊದಲ ಗೀತೆ ಆಗಿದೆ. ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿರುವ ರಕ್ಕಿ ಸುರೇಶ್, ಈ ಹಾಡಿನಲ್ಲಿ ತಮ್ಮ ಎನರ್ಜಿಟಿಕ್ ಸ್ಕ್ರೀನ್ ಪ್ರೆಸೆನ್ಸ್, ಸ್ಟೈಲಿಷ ಲುಕ್ ಹಾಗೂ ಅದ್ಭುತ ಡಾನ್ಸ್ ಮೂಲಕ […]

Continue Reading

ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಮೂರು ವಿಭಾಗಗಳ ಗುಣಮಟ್ಟಕ್ಕೆ ಎನ್‌ಬಿಎ ಮುದ್ರೆ

ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿAಗ್ ಹಾಗೂ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗಗಳಿಗೆ ಈ ಹಿಂದೆ ಲಭಿಸಿದ್ದ ರಾಷ್ಟ್ರೀಯ ಮಾನ್ಯತಾ ಮಂಡಳಿ(ಎನ್‌ಬಿಎ) ಮಾನ್ಯತೆಯನ್ನು ಮುಂದಿನ ಮೂರು ಶೈಕ್ಷಣಿಕ ವರ್ಷಗಳಿಗೆ ವಿಸ್ತರಿಸಲಾಗಿದೆ. ಇದೇ ವೇಳೆ, ಇನ್ಫರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗಕ್ಕೂ ಮೊದಲ ಬಾರಿಗೆ ಮುಂದಿನ ಮೂರು ಶೈಕ್ಷಣಿಕ ವರ್ಷಗಳ ಅವಧಿಗೆ ಎನ್‌ಬಿಎ ಮಾನ್ಯತೆ ಲಭಿಸಿದೆ. ಆಳ್ವಾಸ್ ಸಂಸ್ಥೆಗೆ ಸತತ ಮೂರನೇ ಬಾರಿ ಎನ್‌ಬಿಎ ಮಾನ್ಯತೆ ದೊರೆತಿರುವುದು ಶಿಕ್ಷಣದ ಗುಣಮಟ್ಟ, ಆಧುನಿಕ ಪ್ರಯೋಗಾಲಯ […]

Continue Reading

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಪೀಠಕ್ಕೆ ಗ್ರಿನ್ ಸಿಗ್ನಲ್ : ಎಂಎಲ್ಸಿ ಐವನ್ ಡಿಸೋಜ

ಮಂಗಳೂರು: ಕರಾವಳಿ ಭಾಗದ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಪೀಠ ಸ್ಥಾಪಿಸಬೇಕು ಎಂಬ ಎರಡು ವರ್ಷಗಳ ಬೇಡಿಕೆಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪೀಠಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಸಿದ್ಧ ಇರುವುದಾಗಿ ಮುಖ್ಯ ನ್ಯಾಯಾಧೀಶರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಈ ಮೂಲಕ ಪೀಠ ಸ್ಥಾಪನೆ ಶೇ 80 ರಷ್ಟು ಕಾರ್ಯ ಪೂರ್ಣಗೊಂಡಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ […]

Continue Reading