ದಾಸನಕೊಪ್ಪ ಕಾಳಂಗಿ ಸೊಸೈಟಿಯಲ್ಲಿ ಭಾರಿ ಭ್ರಷ್ಟಾಚಾರ, ತನಿಖೆಗೆ ಆಗ್ರಹಿಸಿ ರೈತರ ಪ್ರತಿಭಟನೆ, ರೈತರ ಹಣ ಪಂಗನಾಮ, ಭುಗಿಲೆದ್ದ ಆಕ್ರೋಶ

ಸಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿರಸಿ ತಾಲ್ಲೂಕಿನ ದಾಸನಕೊಪ್ಪದ ಕಾಳಂಗಿ ಸೊಸೈಟಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಭಾರಿ ಸಂಖ್ಯೆಯಲ್ಲಿ ರೈತರು ಸೊಸೈಟಿ ಎದರಿನಲ್ಲಿಯೇ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ. ರೈತರ ಹಣವನ್ನು ಲೂಟಿ ಮಾಡಿರುವ ಆಡಳಿತ ಮಂಡಳಿಯ ವಿರುದ್ಧ ಹಣ ಕಳೆದುಕೊಂಡ ನೂರಾರು ಸಂಖ್ಯೆಯ ಠೇವಣಿದಾರರು ಹಾಗೂ ರೈತರು ಬೃಹತ್ ಪ್ರತಿಭಟನೆ ನಡೆಸಿರುವುದು ಕಾಳಂಗಿ ವ್ಯವಸಾಯ ಸೇವಾ ಸಹಕಾರಿ ಸೊಸೈಟಿಯಲ್ಲಿ ಯಾವುದು ಸರಿಯಾಗಿಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಸೊಸೈಟಿಯ ಆಡಳಿತ ಮಂಡಳಿಯು ಠೇವಣಿದಾರರ ಕೋಟ್ಯಂತರ ರೂಪಾಯಿ […]

Continue Reading

ಆಳ್ವಾಸ್ ವಿದ್ಯಾರ್ಥಿಗಳ ಮಾದರಿ ಕಾರ್ಯ: ‘ಚಿಣ್ಣರ ತಂಗುದಾಣ’ಕ್ಕೆ ನೆರವಿನ ಹಸ್ತ

ಮೂಡುಬಿದಿರೆ: ಸಮಾಜಮುಖಿ ಚಿಂತನೆ ಹಾಗೂ ಸಾಂಸ್ಕೃತಿಕ ಸೌಹಾರ್ದತೆಯ ಸಾರ್ಥಕ ಉದಾಹರಣೆಯಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಮಂಗಳೂರಿನ ನಿರಾಶ್ರಿತ ಮಕ್ಕಳ ಆಶ್ರಯತಾಣ ‘ಚಿಣ್ಣರ ತಂಗುದಾಣ’ಕ್ಕೆ ಭೇಟಿ ನೀಡಿ 50,000ಕ್ಕೂ ಅಧಿಕ ಮೊತ್ತದ ದೈನಂದಿನ ಅಗತ್ಯ ವಸ್ತುಗಳು, ಆಹಾರ ಸಾಮಗ್ರಿಗಳು, ಕ್ರೀಡಾ ಉಪಕರಣಗಳು ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಇತ್ತೀಚೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಂಪ್ರದಾಯ ದಿನಾಚರಣೆಯನ್ನು ವೈವಿಧ್ಯತೆಯಲ್ಲಿ ಏಕತೆ ಎಂಬ ಸಂದೇಶದೊಂದಿಗೆ ಅದ್ದೂರಿಯಾಗಿ ಆಚರಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ಪರ್ಧೆಗಳು, ಸಾಂಪ್ರದಾಯಿಕ ಆಹಾರ ಮೇಳ ಹಾಗೂ […]

Continue Reading

ಅಡತಡೆಗಳನ್ನು ಮೀರಿ ಗುರಿ ಮುಟ್ಟುವುದೇ ನಿಜವಾದ ಶೈಕ್ಷಣಿಕ ಸಾಧನೆ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಆತ್ಮಸ್ಥೈರ್ಯ ಮತ್ತು ಸತತ ಪ್ರಯತ್ನದಿಂದ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಪ್ರಾಚಾರ್ಯರ ಸಂಘದ ವತಿಯಿಂದ ಆಯೋಜಿಸಲಾದ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವ ಜನರು ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಇಂತಹ ಅನೇಕ ಅಡೆತಡೆಗಳ […]

Continue Reading

ಭಟ್ಕಳ ವಿವಿಧ ಕಾಮಗಾರಿ ಸ್ಥಳಕ್ಕೆ ಸಚಿವ ಮಂಕಾಳ ವೈದ್ಯ, ಡಿಸಿ ಲಕ್ಷ್ಮಿಪ್ರಿಯಾ ಭೇಟಿ

ಭಟ್ಕಳ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯಿಂದ ನೀರು ನಿಲ್ಲುವ ಹಾಗೂ ತಾತ್ಕಾಲಿಕ ಪ್ರವಾಹ ಪರಿಸ್ಥಿತಿ ಉಂಟಾಗುವ ಭಟ್ಕಳ ನಗರದ ವಿವಿಧ ಕಾಮಗಾರಿ ಸ್ಥಳಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಪರಿಶೀಲಿಸಿದರು. ಬಸ್ತಿಯ ಸೇತುವೆ ಹಾಗೂ ಕೆಳ ಸೇತುವೆ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು. ವೆಂಕಟಾಪುರ ಸೇತುವೆಯನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ಭಟ್ಕಳ ವೃತ್ತದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗೆ ವೇಗ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು […]

Continue Reading

ಮಂಗಳೂರಿನಲ್ಲಿ ಎರಡು ದಿನ ರಾಜ್ಯ ಮಟ್ಟದ ಗೇರು ಮೇಳ, ಸಾಧಕರಿಗೆ ಸನ್ಮಾನ, ರೈತರಿಗೆ ಉಚಿತ ಕಣ್ಣಿನ ತಪಾಸಣೆ: ಮಮತಾ ಗಟ್ಟಿ

ಮಂಗಳೂರು: ಇದೇ 17, 18,ರಂದು ಮಂಗಳೂರು ಕದ್ರಿ ಉದ್ಯಾನದಲ್ಲಿ ನಡೆಯಲಿರುವ ಎರಡು ದಿನಗಳ ಗೇರು ಮೇಳದ ಉದ್ಘಾಟನೆ ಮೇ17ರಂದು ಬೆಳಿಗ್ಗೆ 11ಗಂಟೆಗೆ ಸ್ಪೀಕರ್ ಯು. ಟಿ. ಖಾದರ್ ಫರೀದ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಚಿವ ಈಶ್ವರ್ ಬಿ. ಖಂಡ್ರೆ ಉದ್ಘಾಟಿಸಲಿದ್ದಾರೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆಯನ್ನು […]

Continue Reading

ಕಾರವಾರ: ಸಮುದ್ರ ಪಾಲಾಗುತ್ತಿದ್ದ ಮಂಗಳೂರು ಮೂಲದ ಇಬ್ಬರ ರಕ್ಷಣೆ: ಭಜರಂಗಿ ಮಿತ್ರರ ಕಾರ್ಯಕ್ಕೆ ಶ್ಲಾಘನೆ

ಕಾರವಾರ: ಕಡಲ ಅಲೆಗಳ ಅಬ್ಬರಕ್ಕೆ ಸಿಕ್ಕು ಹಾಕಿಕೊಂಡು ನೀರಿನಲ್ಲಿ ಮುಳುಗುತ್ತಿದ್ದ ಪ್ರವಾಸಿಗರನ್ನು ನಗರದ ಟ್ಯಾಗೋರ ಕಡಲ ತೀರದಲ್ಲಿ ಕ್ರಿಕೆಟ್ ಆಡುತ್ತಿದ್ದ ಕೊಂಕಣಿ ಖಾರ್ವಿ ವಾಡಾದ ಭಜರಂಗಿ ಮಿತ್ರರು ರಕ್ಷಣೆ ಮಾಡಿದ ಘಟನೆ ನಡೆದಿದೆ. ಮಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬದವರು ಟ್ಯಾಗೋರ ಕಡಲತೀರದಲ್ಲಿ ಈಜಲು ತೆರಳಿದ್ದ ವೇಳೆ ಕಡಲ ಅಲೆಗಳ ಅಬ್ಬರಕ್ಕೆ ಸುಳಿಗೆ ಸಿಕ್ಕು ಹಾಕಿಕೊಂಡು ಪ್ರಾಣಾಪಾಯದಲ್ಲಿ ಇದ್ದರು. ಈ ವೇಳೆ ಅಲ್ಲಿಯೇ ಇದ್ದ ಕುಟುಂಬದ ಸದಸ್ಯರು ನೆರವಿಗೆ ಕೂಗುತ್ತಿದ್ದರು, ಈ ವೇಳೆ ಅಲ್ಲಿಯೇ ಕ್ರಿಕೆಟ್ ಆಟುತ್ತಿದ್ದ ಭಜರಂಗಿ […]

Continue Reading

ಸಿದ್ದಾ‍ಪುರ ಪೊಲೀಸರಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಜಾಗೃತಿ ಅಭಿಯಾನ

ಸಿದ್ದಾಪುರ: ಬೀಗ ಹಾಕಿದ ಮನೆಗಳ ಕಳವು ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಯು ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಎನ್ನುವ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು ಉತ್ತರ ಕನ್ನಡ ಜಿಲ್ಲಾ ಪೊಲೀಸರು “ರಕ್ಷಾ ಕಾರ್ಯಕ್ರಮವನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತರುತ್ತಿದ್ದಾರೆ. ಸಾರ್ವಜನಿಕರು ಪ್ರವಾಸ, ಮದುವೆ, ಇತರೆ ಕಾರ್ಯಗಳ ಅಂಗವಾಗಿ ತಮ್ಮ ಮನೆಗಳ ಬೀಗ ಹಾಕಿಕೊಂಡು ಹೊದಲ್ಲಿ ಪೊಲೀಸ್ ಕಂಟ್ರೋಲ್ ರೂಂ ಮೊಬೈಲ್ ಸಂಖ್ಯೆ 8277988303 ಗೆ ವ್ಯಾಟ್ಸ ಆಪ್ ಬರ್ ಗೆ ಮಾಹಿತಿ‌ ನೀಡಿದಲ್ಲಿ ವಾಪಸ್ಸು ಬರುವವರೆಗೆ ಸ್ಥಳಿಯ […]

Continue Reading

ಗುಡ್ಡ ಕುಸಿತ, ನೆರೆಯಿಂದ ಆಗುವ ಅನಾಹುತಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ

ಕಾರವಾರ: ಮುಂಗಾರು ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತ ಮತ್ತು ನೆರೆಯಿಂದ ಯಾವುದೇ ಅನಾಹುತಗಳಾಗದಂತೆ ಅಗತ್ಯ ಇರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಈ ಅವಧಿಯಲ್ಲಿ ಕಂಡು ಬರುವ ಸಮಸ್ಯೆಗಳನ್ನು ಎದುರಿಸಲು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸನ್ನದ್ದರಾಗಿರುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಸಿದ್ದತೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

Continue Reading

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಕೇಂದ್ರ ಸರಕಾರದ ವೈಫಲ್ಯ: ಮಾಜಿ ಎಂಎಲ್ಸಿ ಹರೀಶ್ ಕುಮಾರ್

ಮಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ನೀಟ್ ಪರೀಕ್ಷೆ ರದ್ದುಗೊಂಡಿರುವ ಘಟನೆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದ್ದು, ಇದು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಆಗಿದೆ ಎಂದು ಮಾಜಿ ಎಂಎಲ್ ಸಿ ಹಾಗೂ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದರು. 22.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕನಸುಗಳನ್ನು ಹೊತ್ತು ಅಪಾರ ಪರಿಶ್ರಮದೊಂದಿಗೆ ಪರೀಕ್ಷೆ ಬರೆದಿದ್ದರು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯವೇ ಅತಂತ್ರ ಸ್ಥಿತಿಗೆ ತಳ್ಳಲ್ಪಟ್ಟಿದ್ದು, […]

Continue Reading

ಉ.ಕ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ, ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಿ: ಸಂಸದ ಕಾಗೇರಿ ಅಧಿಕಾರಿಗಳಿಗೆ ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕುಡಿವ ನೀರಿನ ಅಭಾವ ಮರುಕಳಿಸುವ ನಿಶ್ಚಿತ ಗ್ರಾಮಗಳನ್ನು ಗುರುತಿಸಿ, ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲು ಜೆಜೆಎಂ 2 ಹಂತದಲ್ಲಿ ಶಾಶ್ವತ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಲ ಜೀವನ ಮಿಷನ್ ಅಡಿ ಮಂಜೂರಾದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಬೇಸಿಗೆ ಅವಧಿಯಲ್ಲಿ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುತ್ತಿದ್ದು, […]

Continue Reading