ರಾಜ್ಯದ ಅಭಿವೃದ್ಧಿಯ ತೇರು ಎಳೆಯಲು ಎಲ್ಲರ ಕೈಗಳು ನನ್ನ ಜತೆ ಕೈಜೋಡಿಸಬೇಕು: ಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದ ಅಭಿವೃದ್ಧಿಯ ತೇರನ್ನು ಎಳೆಯಲು ಕೇವಲ ಎರಡು ಕೈಗಳು ಸಾಲುವುದಿಲ್ಲ. ಕನ್ನಡ ಕುಲಕೋಟಿಯ ಕೈಗಳು ನನ್ನ ಜೊತೆ ಕೈಜೋಡಿಸಬೇಕು. ಬನ್ನಿ, ಅಭಿವೃದ್ಧಿಯ ತೇರನ್ನು ಒಟ್ಟಾಗಿ ಎಳೆಯೋಣ ಎಂದು ಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಮಾಣಿಕ್ ಷಾ ಮೈದಾನದಲ್ಲಿ ಶನಿವಾರ ನಡೆದ 80 ನೇ ಸ್ವಾತಂತ್ರ್ಯ ದಿನವನ್ನು ಧ್ವಜಾರೋಹಣ ನೆರವೇರಿಸಿದ ನಂತರ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನನ್ನನ್ನು ನಂಬಿ ಇಲ್ಲಿಯವರೆಗೆ ಕರೆತಂದ ನಾಡಿನ ಜನತೆಗೆ ನಾನು ಸಾಕ್ಷಿಗುಡ್ಡೆ ಉಳಿಸುತ್ತೇನೆ. ಕರ್ನಾಟಕದ ಅಭಿವೃದ್ಧಿ […]

Continue Reading

ಸರ್ಕಾರಿ ಯೋಜನೆಗಳ ಮಾಹಿತಿ ನೀಡುವ ಡಿಜಿಟಲ್ ಫಲಕ ಉದ್ಘಾಟಿಸಿದ ಸಚಿವ ಲಕ್ಷ್ಮಣ ಸವದಿ

ಕಾರವಾರ: ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಒಳಗೊಂಡ ಡಿಜಿಟಲ್ ಫಲಕವನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಶನಿವಾರ ಉದ್ಘಾಟಿಸಿದರು. ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ಮಾಹಿತಿಯನ್ನು ಡಿಜಿಟಲ್ ಫಲಕದ ಮೂಲಕ ಸುಲಭವಾಗಿ ತಿಳಿದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಕೆಎಸ್‌ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, […]

Continue Reading

100 ದಿನಗಳಲ್ಲಿ ಅಭಿವೃದ್ಧಿಯ ಹೊಸ ಹೆಜ್ಜೆ, ಉತ್ತರ ಕನ್ನಡಕ್ಕೆ ಹಲವು ಯೋಜನೆಗಳ ಘೋಷಣೆ: ಸಚಿವ ಸವದಿ

ಕಾರವಾರ: ರೈತರು, ಯುವಜನರು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ರಾಜ್ಯದ ಆಡಳಿತ ವ್ಯವಸ್ಥೆಗೆ ಮತ್ತಷ್ಟು ವೇಗ ನೀಡಲು ಸರ್ಕಾರ ಮುಂದಾಗಿದೆ. ಮುಂದಿನ 100 ದಿನಗಳಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಘೋಷಿಸಿದರು. ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಹೊಸ ಯೋಜನೆಗಳ ಜಾರಿ: ರೈತ ಮಿತ್ರ–ಬಡವರ […]

Continue Reading

ಕೃಷ್ಣೋತ್ಸವ ಪ್ರಶಸ್ತಿಗೆ ಎಕ್ಸಲೆಂಟ್ ಪಿಯು ಕಾಲೇಜಿನ ಅಧ್ಯಕ್ಷ ಯುವರಾಜ್ ಜೈನ್ ಆಯ್ಕೆ

ಮೂಡುಬಿದಿರೆ: ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್ ಆಯೋಜಿಸಿರುವ ‘ಬೆದ್ರದ ಕೃಷ್ಣೋತ್ಸವ 2026’ರಲ್ಲಿ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ ‘ಕೃಷ್ಣೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಸೆಪ್ಟೆಂಬರ್ 5ರಂದು ಮೂಡುಬಿದಿರೆಯ ಕೆ. ಅಮರನಾಥ ಶೆಟ್ಟಿ ವೃತ್ತದ ಬಳಿಯ ವೇಣೂರು ಕೃಷ್ಣಯ್ಯ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜವನೆರ್ ಬೆದ್ರ ಫೌಂಡೇಶನ್ ಸ್ಥಾಪಕ ಅಮರ್ ಕೋಟೆ ತಿಳಿಸಿದ್ದಾರೆ. ಶಿಕ್ಷಣ ಹಾಗೂ ಸಮಾಜಸೇವಾ ಕ್ಷೇತ್ರದ […]

Continue Reading

ಸ್ನೇಹಾಲಯದಲ್ಲಿ ದೇಶಭಕ್ತಿಯ ಸಂಭ್ರಮ: 80 ನೇ ಸ್ವಾತಂತ್ರ್ಯೋತ್ಸವ ಆಚರಣೆಯ ಸಂಭ್ರಮ

ಮಂಜೇಶ್ವರ: ಸ್ನೇಹಾಲಯ ಮನೋಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ, ಉತ್ಸಾಹ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಸ್ನೇಹಾಲಯದ ನಿವಾಸಿಗಳು, ಸಿಬ್ಬಂದಿ, ಆಡಳಿತ ಮಂಡಳಿ, ಟ್ರಸ್ಟಿಗಳು ಹಾಗೂ ಹಿತೈಷಿಗಳು ಒಟ್ಟಾಗಿ ಭಾಗವಹಿಸಿದ ಕಾರ್ಯಕ್ರಮವು ಏಕತೆ, ದೇಶಪ್ರೇಮ, ಸಹಬಾಳ್ವೆ ಮತ್ತು ಮಾನವೀಯತೆಯ ಸಂದೇಶ ಸಾರಿತು. ಭಾರತೀಯ ವಾಯುಪಡೆಯ ಸಾರ್ಜೆಂಟ್ ರೇಮಂಡ್ ಎ. ಡಿಸೋಜ ಹಾಗೂ ಸ್ನೇಹಾಲಯದ ಧರ್ಮಗುರು ರೆವರೆಂಡ್ ಫಾ. ಸಿರಿಲ್ ಡಿಸೋಜ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು. ಅವರ ಉಪಸ್ಥಿತಿಯಲ್ಲಿ ದೇಶಸೇವೆ, ಕರ್ತವ್ಯನಿಷ್ಠೆ, ತ್ಯಾಗ ಮತ್ತು ಸಮರ್ಪಣೆಯ ಮಹತ್ವವನ್ನು […]

Continue Reading

ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉ. ಕ ಸೇರ್ಪಡೆಗೆ ವಿರೋಧಿಸಿ ಪ್ರತಿಭಟನೆ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾಗೆ ಮನವಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯನ್ನು ಪ್ರಸ್ತಾಪಿತ ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಸೇರ್ಪಡೆಗೊಳಿಸುವ ಪ್ರಸ್ತಾವ ವಿರೋಧಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ವಕೀಲರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡು, ಉತ್ತರ ಕನ್ನಡ ಜಿಲ್ಲೆಯನ್ನು ಸದ್ಯ ಇರುವ ಧಾರವಾಡ ಹೈಕೋರ್ಟ್ ಪೀಠದ ವ್ಯಾಪ್ತಿಯಲ್ಲೇ ಮುಂದುವರೆಸಬೇಕು ಎಂದು ಆಗ್ರಹಿಸಿದರು. ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸುವುದರಿಂದ ಜಿಲ್ಲೆಯ ಜನರಿಗೆ […]

Continue Reading

ಅಂಬುಲೆನ್ಸ್‌ಗೆ ದಾರಿ ಬಿಡಿ, ಜೀವ ಉಳಿಸಲು ಸಹಕರಿಸಿ, ಕೆಎಂಸಿ ಆಸ್ಪತ್ರೆ ಜಾಗೃತಿ ಜಾಥಾಕ್ಕೆ ಚಾಲನೆ

ಮಂಗಳೂರು: ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್‌ಗಳಿಗೆ ದಾರಿ ಮಾಡಿಕೊಡುವುದು, ಸಂಚಾರ ನಿಯಮಗಳನ್ನು ಪಾಲಿಸುವುದು ಹಾಗೂ ರೋಗಿಗಳಿಗೆ ತ್ವರಿತ ವೈದ್ಯಕೀಯ ನೆರವು ದೊರೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೆಎಂಸಿ ಆಸ್ಪತ್ರೆ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಹಾಗೂ ಮಂಗಳೂರು ನಗರ ಸಂಚಾರ ಪೊಲೀಸರ ಸಹಯೋಗದಲ್ಲಿ ಗುರುವಾರ ಅಂಬುಲೆನ್ಸ್ ಜಾಗೃತಿ ಜಾಥಾ ನಡೆಯಿತು. ಕೆಎಂಸಿ ಆಸ್ಪತ್ರೆಯಿಂದ ಆರಂಭವಾದ ಜಾಥಾಕ್ಕೆ ಮಂಗಳೂರು ನಗರ ಪೊಲೀಸ್ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಿಥುನ್ ಎಚ್.ಎನ್. ಚಾಲನೆ ನೀಡಿದರು. ಸಂಚಾರ ಉಪವಿಭಾಗದ ಪಿಎಸ್‌ಐ […]

Continue Reading

ಉ.ಕ ಜಿಲ್ಲೆಗೆ ಸಿಗದ ಮಂತ್ರಿ ಪದವಿ: ಮುನಿಸಿಕೊಂಡ ಮಂಕಾಳ ವೈದ್ಯಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ?

ಕಾರವಾರ: ಮಂತ್ರಿ ಸ್ಥಾನ ಸಿಗದೇ ಮುನಿಸಿಕೊಂಡಿದ್ದ ಶಾಸಕ ಮಂಕಾಳ ವೈದ್ಯ ಅವರಿಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ ನೀಡುವುದಕ್ಕೆ ಮುಂದಾಗಿದ್ದು, ಅವರ ಮುನಿಸಿಗೆ ತುಪ್ಪ ಸವರಲು ಸಿಎಂ ಡಿಕೆಶಿ ಮುಂದಾಗಿದ್ದಾರೆ. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮಂಕಾಳ ವೈದ್ಯರಿಗೆ ಡಿಕೆಶಿ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ಉತ್ಸಾಹದಲ್ಲಿ ಇದ್ದವರಿಗೆ ಕೊನೆ ಗಳಿಗೆಯಲ್ಲಿ ಮಂತ್ರಿ ಮಂಡಳದ ಪಟ್ಟಿಯಿಂದಲೇ ಅವರ ಹೆಸರನ್ನು ತೆಗೆದು ಹಾಕಲಾಗಿತ್ತು. ಇದರಿಂದಾಗಿ ಮುನಿಸಿಕೊಂಡು ಜಿಲ್ಲೆ ಉಸ್ತುವಾರಿ ಲಕ್ಷ್ಮಣ ಸವದಿ […]

Continue Reading

ತಿಕ್ಕಾಟದ ಬಳಿಕ ಸಚಿವರಿಗೆ ಖಾತೆಯ ಹೊಣೆ, ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ

ಬೆಂಗಳೂರು: ರಾಜಕೀಯ ಪ್ರತಿಷ್ಠೆಯ ತಿಕ್ಕಾಟದ ಬಳಿಕ ಸಚಿವ ಸಂಪುಟ ವಿಸ್ತರಣೆ ನಂತರ ಬುಧವಾರ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಕೆಲ ಸಚಿವರ ಖಾತೆಗಳನ್ನು ಸಹ ಬದಲಾವಣೆ ಮಾಡಲಾಗಿದೆ. ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಆಹಾರ ಇಲಾಖೆ ಸಚಿವರಾಗಿದ್ದ ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ. ಯು.ಟಿ.ಖಾದರ್​​ಗೆ ಆರೋಗ್ಯ ಇಲಾಖೆ ಜತೆಗೆ ಅಲ್ಪಸಂಖ್ಯಾತ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ನೀಡಲಾಗಿದೆ. ಚಲುವರಾಯಸ್ವಾಮಿಗೆ ಬೃಹತ್ ಮತ್ತು ಮಾಧ್ಯಮ ನೀರಾವರಿ […]

Continue Reading

ಉ. ಕದಲ್ಲಿ 11.23 ಲಕ್ಷ ಎನ್ಯುಮರೇಷನ್‌ ಫಾರ್ಮ್ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯ 12,30,037 ಮತದಾರರಿಗೆ ಎನ್ಯುಮರೇಷನ್‌ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಈ ಪೈಕಿ ಇದುವರೆಗೆ 11,23,024 ಫಾರ್ಮ್‌ಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ. ಮನೆಮನೆಗೆ ಭೇಟಿ ನೀಡಿ ನಡೆಸಿದ ಪರಿಶೀಲನೆ ವೇಳೆ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 1,07,013 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 45,558 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿರುವವರು, 44,006 ಮಂದಿ […]

Continue Reading