ಕಲಿಕಾ ತೊಂದರೆ ಇರುವ ಮಕ್ಕಳಿಗೆ ಒಂದೇಸೂರಿನಡಿ ವ್ಯವಸ್ಥೆ, ಅ. 8ಕ್ಕೆ ಉದ್ಘಾಟನೆ: ಅರ್ಜುನ್ ಶೆಟ್ಟಿ ಪ್ರತಿಷ್ಠಾನದ ಸ್ಥಾಪಕ ಸುಧೀರ್ ಶೆಟ್ಟಿ

ಮಂಗಳೂರು: ಸ್ವಲೀನತೆ ಹಾಗೂ ನಿರ್ದಿಷ್ಟ ಕಲಿಕಾ ತೊಂದರೆ ಹೊಂದಿರುವ ಮಕ್ಕಳಿಗೆ ಶಿಕ್ಷಣ, ಚಿಕಿತ್ಸೆ ಮತ್ತು ಕೌಶಲಾಭಿವೃದ್ಧಿಯನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಮಂಗಳೂರಿನ ಶಕ್ತಿನಗರದ ಸಾನಿಧ್ಯ ಸಂಸ್ಥೆಯಲ್ಲಿ ಅರ್ಜುನ್ ಶೆಟ್ಟಿ ಸ್ಮರಣಾರ್ಥ ವಿಶೇಷ ಶಾಲೆ ಆರಂಭಿಸಲಾಗುತ್ತಿದ್ದು, ಶಾಲೆಯ ಉದ್ಘಾಟನಾ ಸಮಾರಂಭ ಇದೇ 8 ರಂದು ನಡೆಯಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅರ್ಜುನ್ ಶೆಟ್ಟಿ ಪ್ರತಿಷ್ಠಾನದ ಸ್ಥಾಪಕ ಸುಧೀರ್ ಶೆಟ್ಟಿ ಅವರು ತಿಳಿಸಿದರು. ತಮ್ಮ ಪುತ್ರ ಅರ್ಜುನ್ ಶೆಟ್ಟಿ ಅವರ ಸ್ಮರಣಾರ್ಥ ಈ ಶಾಲೆ ಆರಂಭಿಸಲಾಗುತ್ತಿದೆ. ಸ್ವಲೀನತೆ ಹಾಗೂ […]

Continue Reading

ಮಂಗಳೂರಿನಲ್ಲಿ ಇದೇ 7 ರಿಂದ ಯುರಾಲಜಿ ಸಮ್ಮೇಳನ, ಎಜೆ, ಯುರಾಲಜಿ ಫೋರಂ ಸಾರಥ್ಯ: ಡಾ. ಪ್ರಶಾಂತ್ ಮಾರ್ಲ

ಮಂಗಳೂರು: ಮೂತ್ರಶಾಸ್ತ್ರ ಕ್ಷೇತ್ರದ ಇತ್ತೀಚಿನ ಸಂಶೋಧನೆ, ಹೊಸ ತಂತ್ರಜ್ಞಾನ ಹಾಗೂ ವೈದ್ಯಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದಕ್ಷಿಣ ಭಾರತದ ಪ್ರತಿಷ್ಠಿತ ‘ಅಸೋಸಿಯೇಷನ್ ಆಫ್ ಸದರ್ನ್ ಯುರಾಲಜಿಸ್ಟ್ಸ್ 37ನೇ ವಾರ್ಷಿಕ ಸಮ್ಮೇಳನ ಇದೇ ಅ. 7 ರಿಂದ 9 ರವರೆಗೆ ಮಂಗಳೂರಿನ ಮೇರಿ ಹಿಲ್‌ನಲ್ಲಿ ಇರುವ ಪಾಲೇಮಾರ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಸಮ್ಮೇಳನಾ ಸಂಘಟನಾ ಸಮಿತಿ ಅಧ್ಯಕ್ಷ ಡಾ. ಪ್ರಶಾಂತ್ ಮಾರ್ಲ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯಿನ್ಸ್ ಹಾಗೂ […]

Continue Reading

ಪ್ರಶ್ನೆ ಪತ್ರಿಕೆ ಸೋರಿಕೆ, ಕೆಇಎ, ಕೆಪಿಎಸ್‌ಸಿ ನೇಮಕಾರಿ ಪರೀಕ್ಷಾ ಅಕ್ರಮ ಸಿಬಿಐ ತನಿಖೆಗೆ ನೀಡಿ: ಶಾಸಕ ಭರತ್ ಶೆಟ್ಟಿ

ಮಂಗಳೂರು: ರಾಜ್ಯದಲ್ಲಿ ನಡೆದಿರುವ ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಪರೀಕ್ಷೆಗಳಲ್ಲಿನ ಗೊಂದಲಗಳ ಕುರಿತು ಸಮಗ್ರ ತನಿಖೆ ನಡೆಸಲು ಕೆಇಎ, ಕೆಪಿಎಸ್‌ಸಿ ಸೇರಿದಂತೆ ಎಲ್ಲ ಇಲಾಖೆಗಳ ಪರೀಕ್ಷಾ ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ರಾಜ್ಯ ಸರ್ಕಾರ ಪರೀಕ್ಷಾ ಅಕ್ರಮಗಳ ವಿಚಾರದಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದೆ. ಕೇಂದ್ರದಲ್ಲಿ ನೀಟ್ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಲೋಪ ಕಂಡು ಬಂದರೆ ಪ್ರಧಾನಿ ನರೇಂದ್ರ […]

Continue Reading

ಮತದಾರರ ಪಟ್ಟಿ ಪರಿಷ್ಕರಣೆ, ಶೇ 99.97 ಎನ್ಯುಮರೇಷನ್ ನಮೂನೆಗಳ ಡಿಜಿಟಲೀಕರಣ ಪೂರ್ಣ: ಅನ್ಬುಕುಮಾರ್

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಮನೆಮನೆ ಸಮೀಕ್ಷೆಯಲ್ಲಿ ಸಂಗ್ರಹಿಸಲಾದ ಎನ್ಯುಮರೇಷನ್ ನಮೂನೆಗಳಲ್ಲಿ ಶೇ.99.97ರಷ್ಟು ಡಿಜಿಟಲೀಕರಣ ಪೂರ್ಣಗೊಂಡಿದೆ. ಇದೇ ವೇಳೆ, ಒಟ್ಟು ಮತದಾರರಲ್ಲಿ ಶೇ.20.02ರಷ್ಟು ಮಂದಿ ಗೈರು, ಸ್ಥಳಾಂತರ, ಮೃತರು, ನಕಲಿ ಹಾಗೂ ಇತರೆ (ಎಎಸ್‌ಡಿಡಿಒ) ವಿಭಾಗದಲ್ಲಿ ಗುರುತಿಸಲ್ಪಟ್ಟಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜೂನ್ 16ರ ಅಂಕಿ-ಅಂಶದ ಪ್ರಕಾರ ರಾಜ್ಯದಲ್ಲಿ ಒಟ್ಟು 5,54,32,314 ಮತದಾರರಿದ್ದು, ಈ ಪೈಕಿ 1,10,97,426 ಮಂದಿ […]

Continue Reading

ಉ. ಕ ದಲ್ಲಿ ಶೇ100 ರಷ್ಟು ಎನ್ಯುಮರೇಷನ್ ಫಾರಂ ಗಣಕೀಕರಣ ಪೂರ್ಣ: ಡಿಸಿ ಲಕ್ಷ್ಮಿಪ್ರೀಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ವಿತರಿಸಲಾಗಿದ್ದ ಎಲ್ಲಾ ಎನ್ಯುಮರೇಷನ್ ಫಾರಂಗಳನ್ನು ಯಶಸ್ವಿಯಾಗಿ ಗಣಕೀಕರಣಗೊಳಿಸಲಾಗಿದ್ದು, ಜಿಲ್ಲೆ ಶೇ100 ಸಾಧನೆ ಮಾಡಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರಂ ವಿತರಿಸಲಾಗಿತ್ತು. ಮನೆ ಮನೆ ಭೇಟಿ ವೇಳೆ ಸಂಗ್ರಹಿಸಿದ ಎಲ್ಲಾ ಫಾರಂಗಳನ್ನು ಗಣಕೀಕರಣಗೊಳಿಸುವ ಕಾರ್ಯ ಪೂರ್ಣಗೊಂಡಿದೆ. ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸ್ಥಳಾಂತರ, ಶಾಶ್ವತ ವಲಸೆ, ಮರಣ, ದ್ವಿಪ್ರತಿ ಸೇರಿದಂತೆ ವಿವಿಧ ಕಾರಣಗಳಿಂದ ಒಟ್ಟು […]

Continue Reading

ಹರ್ ಘರ್ ತಿರಂಗಾ’ ರಾಜ್ಯ ಸಂಚಾಲಕಿಯಾಗಿ ರೂಪಾಲಿ ನಾಯ್ಕ ನೇಮಕ

ಕಾರವಾರ: ಬಿಜೆಪಿ ಮಹತ್ವಾಕಾಂಕ್ಷೆಯ ‘ಹರ್ ಘರ್ ತಿರಂಗಾ’ ಅಭಿಯಾನದ ಕರ್ನಾಟಕ ರಾಜ್ಯ ಸಂಚಾಲಕಿಯಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರನ್ನು ನೇಮಕ ಮಾಡಲಾಗಿದೆ. ಸ್ವಾತಂತ್ರ್ಯೋತ್ಸವ ಅಂಗವಾಗಿ ರಾಜ್ಯಾದ್ಯಂತ ನಡೆಯಲಿರುವ ಅಭಿಯಾನದ ನೇತೃತ್ವವನ್ನು ಅವರು ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರೂಪಾಲಿ ನಾಯ್ಕ ಅವರಿಗೆ ಈ ಮಹತ್ವದ ಜವಾಬ್ದಾರಿ ವಹಿಸಲಾಗಿದ್ದು, ಸಮಿತಿಯ ಸಹ ಸಂಚಾಲಕರಾಗಿ ಶಾಸಕರಾದ ಹರೀಶ್ ಪೂಂಜಾ, ಬಸವರಾಜ್ ಹಾಗೂ ಲಿಂಗರಾಜ್ […]

Continue Reading

ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ಜಾಗೃತಿ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಇನ್ ಸ್ಪೆಕ್ಟರ್ ರಾಜೇಂದ್ರ ಕಿವಿಮಾತು

ಮೂಡುಬಿದಿರೆ: ವಿದ್ಯಾರ್ಥಿಗಳು ಮಾದಕ ವ್ಯಸನದಂತಹ ದುಶ್ಚಟಗಳಿಂದ ದೂರವಿದ್ದು, ಉತ್ತಮ ಮೌಲ್ಯಗಳೊಂದಿಗೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಮೂಡುಬಿದಿರೆ ಇನ್ ಸ್ಪೆಕ್ಟರ್ ರಾಜೇಂದ್ರ ಬಿ. ಅವರು ಹೇಳಿದರು. ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಮಾದಕ ವಸ್ತುಗಳ ದುಷ್ಪರಿಣಾಮದಿಂದ ದೂರವಿರಿಸಿ ಆರೋಗ್ಯವಂತ ಹಾಗೂ ಮೌಲ್ಯಾಧಾರಿತ ಬದುಕಿನತ್ತ ಪ್ರೇರೇಪಿಸುವ ಉದ್ದೇಶದಿಂದ ಆಯೋಜಿಸಿದ್ದ ಮಾದಕ ವಸ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಬದುಕು ಮಾತ್ರವಲ್ಲದೆ ಕುಟುಂಬದ ನೆಮ್ಮದಿ ಮತ್ತು ಸಮಾಜದ ಶಾಂತಿಯನ್ನೂ ಹಾಳುಮಾಡುವ ಗಂಭೀರ ಪಿಡುಗಾಗಿದೆ. […]

Continue Reading

ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ 146 ನೇ ಜನ್ಮದಿನ, ಸಹಕಾರಿ ದಿಗ್ಗಜನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ರಾಜೇಂದ್ರ ಕುಮಾರ್

ಮಂಗಳೂರು: ಮೊಳಹಳ್ಳಿ ಶಿವರಾವ್ ಅವರು ತಮ್ಮ ಇಡೀ ಜೀವನವನ್ನು ಸಹಕಾರಿ ಚಳವಳಿಯ ಅಭಿವೃದ್ಧಿಗೆ ಮುಡಿಪಾಗಿಟ್ಟ ಮಹಾನ್ ವ್ಯಕ್ತಿ. ಅವರು ಹಾಕಿಕೊಟ್ಟ ಮಾರ್ಗದರ್ಶನ ಮತ್ತು ಮೌಲ್ಯಗಳನ್ನು ಅನುಸರಿಸುತ್ತಲೇ ಸಹಕಾರಿ ಕ್ಷೇತ್ರ ಮತ್ತಷ್ಟು ಬಲಿಷ್ಠವಾಗಿ ಬೆಳೆಯುತ್ತಿದೆ, ಸಹಕಾರಿ ಕ್ಷೇತ್ರಕ್ಕೆ ದಿಕ್ಸೂಚಿ ಹಾಕಿಕೊಟ್ಟ ಮಹಾನ್ ವ್ಯಕ್ತಿ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೇಳಿದರು. ಸಹಕಾರಿ ಪಿತಾಮಹ’ ಮೊಳಹಳ್ಳಿ ಶಿವರಾವ್ ಅವರ 146 ನೇ ಜನ್ಮದಿನದ ಅಂಗವಾಗಿ ಮಂಗಳವಾರ ನಡೆದ ಕಾರ್ಯಕ್ರಮಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ […]

Continue Reading

ವಿಶೇಷ ಪ್ರದರ್ಶನಗಳಲ್ಲೇ ಪ್ರೇಕ್ಷಕರ ಮನ ಗೆದ್ದ ‘ಓಹ್ ಮೈ ಡಾಗ್’; ಅ. 7 ರಂದು ವಿಶ್ವಾದ್ಯಂತ ತೆರೆಗೆ

ಬೆಂಗಳೂರು: ಬಿಡುಗಡೆಯಾಗುವ ಮುನ್ನವೇ ದೇಶದಾದ್ಯಂತ ನಡೆದ ವಿಶೇಷ ಪ್ರದರ್ಶನಗಳ ಮೂಲಕ ಸಿನಿಪ್ರಿಯರ ಮೆಚ್ಚುಗೆ ಗಳಿಸಿರುವ ‘ಓಹ್ ಮೈ ಡಾಗ್’ ಚಿತ್ರವು ಆಗಸ್ಟ್ 7ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ನಿರ್ಮಾಪಕ-ನಿರ್ದೇಶಕ ಅಮಿತ್ ರೈ ಅವರ ಈ ಕೌಟುಂಬಿಕ ಮನರಂಜನಾ ಚಿತ್ರವು ಭಾವನಾತ್ಮಕ ಕಥಾಹಂದರ, ಮನುಷ್ಯ ಮತ್ತು ಶ್ವಾನಗಳ ನಡುವಿನ ಆತ್ಮೀಯ ಸಂಬಂಧ ಹಾಗೂ ಪ್ರಾಣಿ ದಯೆಯ ಸಂದೇಶದ ಮೂಲಕ ಪ್ರೇಕ್ಷಕರ ಮನಸ್ಸನ್ನು ಗೆದ್ದಿದೆ. ಸಾಮಾನ್ಯವಾಗಿ ಬಿಡುಗಡೆಯ ಮುನ್ನ ಭಾರೀ ಪ್ರಮಾಣದ ಜಾಹೀರಾತು ಮತ್ತು ಪ್ರಚಾರಕ್ಕೆ ಒತ್ತು ನೀಡುವ […]

Continue Reading

ಲೇಖಕ ಜಗದೀಶ್ ಅಂಚನ್ ಅವರ ’ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆಗೊಳಿಸಿದ ಡಾ. ರಾಜೇಂದ್ರಕುಮಾರ್

ಮಂಗಳೂರು: ಸಹಕಾರ ಚಳವಳಿಗೆ ಜೀವನವನ್ನೇ ಸಮರ್ಪಿಸಿದ ದಾರ್ಶನಿಕ ನಾಯಕ ಮೊಳಹಳ್ಳಿ ಶಿವರಾವ್ ಅವರ ಜೀವನ ಸಾಧನೆ, ಸಮಾಜಮುಖಿ ಚಿಂತನೆ ಹಾಗೂ ಸಹಕಾರ ಕ್ಷೇತ್ರಕ್ಕೆ ನೀಡಿದ ಅಪೂರ್ವ ಕೊಡುಗೆಯನ್ನು ದಾಖಲಿಸುವ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಬಿಡುಗಡೆಗೊಳಿಸಿದರು. ಬ್ಯಾಂಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ರಚಿಸಿರುವ ಈ ಕೃತಿ ಲೋಕಾರ್ಪಣೆಗೊಂಡಿತು. ಬಳಿಕ ಮಾತನಾಡಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಸಹಕಾರ […]

Continue Reading