ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಜತೆ ತುಂಬೆ ಗ್ರೂಪ್ ಮಹತ್ವದ ಒಪ್ಪಂದ, ಯುಎಇಯಲ್ಲಿ ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ ಶಿಕ್ಷಣ

ಮಂಗಳೂರು: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ (ಲಾಂಗ್‌ಜೆವಿಟಿ ಮೆಡಿಸಿನ್) ಕ್ಷೇತ್ರದಲ್ಲಿ ವ್ಯವಸ್ಥಿತ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆರಂಭಿಸಲು ತುಂಬೇ ಗ್ರೂಪ್ ಹಾಗೂ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಆಫ್ ಲಾಂಗ್‌ಜೆವಿಟಿ ಸಾಯಿನ್ಸ್ (ಜಿಸಿಎಲ್‌ಎಸ್) ಮಹತ್ವದ ತಿಳಿವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿವೆ. ಈ ಒಪ್ಪಂದದಡಿ ಗಲ್ಫ್ ಮೆಡಿಕಲ್ ವಿಶ್ವವಿದ್ಯಾಲಯದ ಅಡಿಯಲ್ಲಿ ‘ತುಂಬೆ ಇನ್‌ಸ್ಟಿಟ್ಯೂಟ್ ಆಫ್ ಲಾಂಗ್‌ಜೆವಿಟಿ ಮೆಡಿಸಿನ್’ಸ್ಥಾಪನೆ ಆಗಲಿದ್ದು, ದೀರ್ಘಾಯುಷ್ಯ ವೈದ್ಯಕೀಯ, ಆರೋಗ್ಯಕರ ವಯೋವೃದ್ಧತೆ, ತಡೆಗಟ್ಟುವ ಆರೋಗ್ಯ ಸೇವೆ ಹಾಗೂ ನಿಖರ ಆರೋಗ್ಯ ಕ್ಷೇತ್ರಗಳಲ್ಲಿ […]

Continue Reading

ಸಹ್ಯಾದ್ರಿಯಲ್ಲಿ ‘ವಿಸ್ತಾರಾ–2026: ನವೋದ್ಯಮಗಳಿಗೆ ಮಾರ್ಗದರ್ಶನ, ಹೂಡಿಕೆ, ಸಹಯೋಗಕ್ಕೆ ವೇದಿಕೆ

ಮಂಗಳೂರು: ಶೈನ್ ಫೌಂಡೇಷನ್ ಕರ್ನಾಟಕ ಆಕ್ಸಿಲರೇಷನ್ ನೆಟ್‌ವರ್ಕ್ (ಕೆಎಎನ್) ಉಪಕ್ರಮದಡಿ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕ್ಯಾಂಪಸ್‌ನಲ್ಲಿ 2 ದಿನಗಳ ಕಾಲ ಆಯೋಜಿಸಿದ್ದ ವಿಸ್ತಾರಾ–2026 ಮುಕ್ತ ಸಂವಾದ ಮತ್ತು ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಎರಡು ದಿನಗಳ ಕಾರ್ಯಕ್ರಮದಲ್ಲಿ 55 ಕ್ಕೂ ಹೆಚ್ಚು ನವೋದ್ಯಮ ಸಂಸ್ಥಾಪಕರು, ಉದ್ಯಮಿಗಳು, ವಿದ್ಯಾರ್ಥಿಗಳು, ಪರಿಸರ ವ್ಯವಸ್ಥೆಯ ಪ್ರತಿನಿಧಿಗಳು ಹಾಗೂ ನಾವೀನ್ಯಕಾರರು ಭಾಗವಹಿಸಿ ಉದ್ಯಮಶೀಲತೆ, ಹೂಡಿಕೆ, ಸಹಯೋಗ ಮತ್ತು ವ್ಯವಹಾರ ಬೆಳವಣಿಗೆಯ ಕುರಿತು ಚರ್ಚಿಸಿದರು. ಕಾರ್ಯಕ್ರಮವನ್ನು ಸಿಎಸ್ ಮನು ಫ್ರಾನ್ಸಿಸ್, ರೋಹಿತ್ […]

Continue Reading

20 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡು ಹಾಡಿದ ಸ್ವರದೇವತೆ ಎಸ್ ಜಾನಕಿ

ಬೆಂಗಳೂರು: ಗಾನ ಕೋಗಿಲೆ ಎಸ್. ಜಾನಕಿ ಅವರು ಕನ್ನಡದ ಜತೆಗೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಕ್ಕೂ ಅಧಿಕ ಹಾಡುಗಳನ್ನ ಹಾಡಿರುವ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಕೇವಲ ಗಾಯಕಿಯಷ್ಟೇ ಅಲ್ಲ, ಭಾರತೀಯ ಚಿತ್ರ ಸಂಗೀತದ ದೈತ್ಯ ಶಕ್ತಿ, ಹಾಡು ನಿಲ್ಲಿಸಿದ್ದು ಕೋಟ್ಯಂತರ ಅಭಿಮಾನಿಗಳಲ್ಲಿ ಇನ್ನು ನೆನಪು ಮಾತ್ರ. ಡಾ. ರಾಜ್‌ಕುಮಾರ್ ಮತ್ತು ಎಸ್. ಜಾನಕಿ ಅವರ ಜೋಡಿ ಹಾಡುಗಳು ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಟ್ರೆಂಡ್ ಸೃಷ್ಟಿ ಮಾಡಿತ್ತು. ಎಸ್. ಪಿ. […]

Continue Reading

ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಹೆಚ್ಚುವರಿ ಮೀಸಲಾತಿ, ಕೇಂದ್ರದಿಂದ ಅನ್ಯಾಯ: ಮಾಜಿ ಸಂಸದ ಉಗ್ರಪ್ಪ

ಮಂಗಳೂರು: ರಾಮ ಮಂದಿರದ ಹೆಸರಿನಲ್ಲಿ ಸಂಗ್ರಹಿಸಲಾದ ಹಣದ ದುರ್ಬಳಕೆ ಆರೋಪಗಳ ಕುರಿತು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಥವಾ ಹಾಲಿ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಬೇಕು. ರಾಜ್ಯದಲ್ಲಿ ಎಸ್ಸಿ, ಎಸ್ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ತಿದ್ದುಪಡಿಯನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಿದ್ದರೂ, ಅದನ್ನು ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರಿಸದಿರುವುದರಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ಸಾವಿರಾರು ಅಭ್ಯರ್ಥಿಗಳಿಗೆ ಅನ್ಯಾಯ ಆಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ವಿ.ಎಸ್. […]

Continue Reading

ಮಂಗಳೂರು, ಗೋವಾದ ಕೊಂಕಣಿ ಕವಯತ್ರಿಯರು ಚಾರೊಳಿ ರಾಷ್ಟ್ರೀಯ ಸನ್ಮಾನಕ್ಕೆ ಆಯ್ಕೆ: ರೇಮಂಡ್ ಡಿಕುನಾ ತಾಕೊಡೆ

ಮಂಗಳೂರು: ಇಲ್ಲಿ ನಡೆವ ಕೊಂಕಣಿ 5ನೇ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಖ್ಯಾತ ಹಿರಿಯ ಕವಯತ್ರಿಯರಾದ ಮಂಗಳೂರಿನ ಅರುಂಧತಿ ವಿ. ರಾವ್ ಮತ್ತು ಗೋವಾದ ಆನ್ನಿ ದೆ ಕೊಲ್ವಾಲೆ ಆಯ್ಕೆ ಆಗಿದ್ದಾರೆ ಎಂದು ಸಮ್ಮೇಳನದ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದೇ 19 ರಂದು ಒಂದು ದಿನದ ಕೊಂಕಣಿ 5ನೇ ಚಾರೊಳಿ ಸಾಹಿತ್ಯ ಸಮ್ಮೇಳನಕ್ಕೆ ನವದೆಹಲಿ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕಾರವಾರ, ಕೇರಳ ಮತ್ತು ದುಬೈ ಕವಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕವಿ […]

Continue Reading

ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಸಂಗೀತಶಾರದೆಯ ವರಪುತ್ರಿ, ,ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನದ ಸುದ್ದಿ ನೋವುಂಟು ಮಾಡಿದೆ. ಕನ್ನಡ ಭಾಷೆಯೂ ಸೇರಿದಂತೆ 20 ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದು, 6 ದಶಕಗಳ ಕಾಲ‌ ತಮ್ಮ ಕಂಠಸಿರಿಯ ಮೂಲಕ ಸಂಗೀತ ಸೇವೆಗೈದ ಮೇರು ಪ್ರತಿಭೆಯೊಂದು ನಮ್ಮನ್ನಗಲಿರುವುದು ಕಲಾ ಜಗತ್ತಿಗಾಗಿರುವ ತುಂಬಲಾರದ ನಷ್ಟ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಜಾನಕಿಯಮ್ಮನವರ ಧ್ವನಿಯಿಲ್ಲದ ಚಿತ್ರಗಳೇ ಅಪರೂಪ ಎನ್ನುವ ಕಾಲವೊಂದಿತ್ತು, ಈ ಮಟ್ಟಿನ ಬೇಡಿಕೆಯನ್ನು ತಮ್ಮ ಅನನ್ಯ ಕಂಠದ […]

Continue Reading

ಹಾಡು ನಿಲ್ಲಿಸಿದ ಕೋಗಿಲೆ ಕಂಠದ ಗಾಯಕಿ ಎಸ್ . ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್‌.ಜಾನಕಿ (88) ಅವರು ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಕುವೆಂಪುನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬಹುಭಾಷಾ ಗಾಯಕಿ ಎಸ್. ಜಾನಕಿ ಅವರು ಮೈಸೂರಿನ ಬನ್ನೂರು ರಸ್ತೆಯ ಫಾರ್ಮ್ ಹೌಸ್​ನಲ್ಲಿ ಹಲವು ವರ್ಷಗಳಿಂದ ವಾಸವಾಗಿದ್ದರು. ಈಚೆಗೆ ಬೋಗಾದಿ ನಗರದಲ್ಲಿ ವಾಸವಾಗಿದ್ದರು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಶನಿವಾರ ಮಧ್ಯಾಹ್ನ ಮೈಸೂರಿನ ಅಪೋಲೊ ಆಸ್ಪತ್ರೆಗೆ […]

Continue Reading

ವೆಂಕಟ್ ಭಾರದ್ವಾಜ್ ನಿರ್ದೇಶನದ ರಕ್ಕಿ, ಭೂಗತ ರೌಡಿಗಳ ಕಥೆ ಜತೆಗೆ ಕೌಟುಂಬಿಕ, ಲವ್ ಸ್ಟೋರಿ ಟಚ್

ಬೆಂಗಳೂರು: ಸದಭಿರುಚಿಯ ಚಿತ್ರಗಳಿಂದ ಗಮನ ಸೆಳೆಯುವ ನಿರ್ದೇಶಕ ವೆಂಕಟ್ ಭಾರದ್ವಾಜ್ ಈ ಬಾರಿ ಕೂಡ ಅಂತಹದ್ದೇ ಮತ್ತೊಂದು ಪ್ರಯತ್ನ ಮಾಡಿದ್ದಾರೆ.‌ ಭೂಗತ ರೌಡಿಗಳ ಕಥೆಯನ್ನು ಇಟ್ಟುಕೊಂಡು ಲವ್ ಸ್ಟೋರಿಗಳು ಬಂದಿವೆ. ಆದರೆ ಕೌಟುಂಬಿಕ ಕಥೆಯನ್ನು ಕೂಡ ಇಷ್ಟು ಚೆನ್ನಾಗಿ ಹೇಳಬಹುದು ಎನ್ನವುದನ್ನು ಸಾಬೀತು ಮಾಡಿರುವ ಚಿತ್ರ ರಕ್ಕಿ. ಅಪರಾಧದ ಹಿನ್ನೆಲೆಯ ಚಿತ್ರವಾದರೂ ಎಲ್ಲಿಯೂ ರಕ್ತಪಾತವಿಲ್ಲ. ಕೇಂದ್ರ ಪಾತ್ರ ರಿಕ್ಕಿಯ ವಿಚಾರಕ್ಕೆ ಬರುವುದಾದರೆ ಯುವನಟರ ಸಾಲಿಗೆ ಸೇರಿಸಬಹುದಾದ ಪ್ರತಿಭಾವಂತ ಕಲಾವಿದ ರಿಕ್ಕಿ. ನಟನೆ ಮಾತ್ರವಲ್ಲದೆ ಆ್ಯಕ್ಷನ್ ದೃಶ್ಯಗಳಲ್ಲಿಯೂ ಗಮನ […]

Continue Reading

ಮಣಿಪಾಲ: ತೋಡಿಗೆ ಉರುಳಿ ಬಿದ್ದ ಬಸ್, 7 ಮಂದಿ ವಿದ್ಯಾರ್ಥಿಗಳಿಗೆ ಗಾಯ

ಮಣಿಪಾಲ: ಶಾಲಾ ಬಸ್ ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ ನಡೆದಿದೆ. ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಸ್ಕೂಲ್ ಬಸ್ ತಿರುವಿನಲ್ಲಿ ಹಿಂದಕ್ಕೆ ತೆಗೆಯುವಾಗ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ತೋಡಿಗೆ ಉರುಳಿ ಬಿದ್ದಿದೆ ಎಂದು ತಿಳಿದು ಬಂದಿದೆ. ಈ ಬಸ್ ನಲ್ಲಿ 20 ಮಕ್ಕಳಿದ್ದು, ಇದರಲ್ಲಿ ಏಳು ಮಕ್ಕಳಿಗೆ ಗಾಯಗಳಾಗಿವೆ. ಈ ಪೈಕಿ ಬಾಲಕಿಗೆ ತೀವ್ರ ಗಾಯಗಳಾಗಿವೆ, […]

Continue Reading

ಹೊರ ಜಿಲ್ಲೆಗಳಿಂದ ರೋಗಿಗಳ ಶಿಫಾರಸು ಮಾಡುವಾಗ ಹೆಲ್ಪ್ ಡೆಸ್ಕ್ ಸಂಪರ್ಕಿಸಿ, ನಂತರ ಪರದಾಟ ಬೇಡ, ದ.ಕ. ಜಿಲ್ಲೆಯ ರೋಗಿಗಳಿಗೂ ವೆನ್ಲಾಕ್ ಆಸ್ಪತ್ರೆ ಸೌಲಭ್ಯ ಸಿಗಲಿ: ಅಧೀಕ್ಷಕ ಡಾ. ಶಿವಪ್ರಕಾಶ್

ಮಂಗಳೂರು: ರಾಜ್ಯದ ಹೊರ ಜಿಲ್ಲೆಗಳಿಂದ ತುರ್ತು ಚಿಕಿತ್ಸೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳನ್ನು ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಐಸಿಯು ಹಾಸಿಗೆ ಕೊರತೆ ಕಾಡುತ್ತಿದೆ. ಪರಿಣಾಮ ಒತ್ತಡ ಹೆಚ್ಚಿದ್ದು, ರೋಗಿಗಳನ್ನು ಶಿಫಾರಸು ಮಾಡುವ ಮೊದಲು ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯತೆ ಪರಿಶೀಲಿಸುವ ವ್ಯವಸ್ಥೆ ಕಡ್ಡಾಯಗೊಳಿಸಬೇಕು. ಇದಕ್ಕಾಗಿ ಸಹಾಯವಾಣಿ ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆಗಳ ರೋಗಿಗಳನ್ನು ಏಕಾಏಕಿ ಕರೆತರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಾಕಷ್ಟು ಅರ್ಹ ಬಡ ರೋಗಿಗಳಿಗೆ ವೆನ್ಲಾಕ್ ಆಸ್ಪತ್ರೆಯ ಲಾಭ ಸಿಗದೇ ಇರುವಂತಹ ಸ್ಥಿತಿ ನಿರ್ಮಾಣ ಆಗಿದೆ […]

Continue Reading